ಕರಾವಳಿ

ಮುಂಬೈನಲ್ಲಿ ರೈಲಿನಿಂದ ಬಿದ್ದು ಮಂಗಳೂರಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.28. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಂಗಳೂರಿನ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಮುಂಬಯಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಕೋಡಿಜಾಲು ನಿವಾಸಿ ಮುಹಮ್ಮದ್ ಹನೀಫ್ ಕೋಡಿಜಾಲ್(42) ಎಂದು ಗುರುತಿಸಲಾಗಿದೆ. ಹನೀಫ್ ಕಳೆದ ಹಲವು ವರ್ಷಗಳಿಂದ ಮುಂಬೈಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದು, ಇತ್ತೀಚೆಗೆ ತನ್ನ ಕುಟುಂಬಸ್ಥರನ್ನು ಮುಂಬೈಗೆ ಕರೆಸಿಕೊಂಡಿದ್ದರು. ತನ್ನ ಕುಟುಂಬಸ್ಶರ ಜೊತೆ ಸುತ್ತಾಡಿದ ನಂತರ ತನ್ನ ರೂಂನಲ್ಲಿ ಬಿಟ್ಟು ಇನ್ನೊಂದು ಕಡೆಗೆ ರೈಲಿನಲ್ಲಿ ಸಂಚರಿಸುತ್ತಿದ್ದ ವೇಳೆ ಬಾಗಿಲ ಬಳಿ […]

ಮುಂಬೈನಲ್ಲಿ ರೈಲಿನಿಂದ ಬಿದ್ದು ಮಂಗಳೂರಿನ ವ್ಯಕ್ತಿ ಮೃತ್ಯು Read More »

ಕರಾವಳಿ

ಪೆರಾಬೆ: ಕಾಂಗ್ರೆಸ್ ಕಾರ್ಯಕರ್ತರ ಸಭೆ ► “ಈ ಬಾರಿ ನನಗೊಂದು ಅವಕಾಶ ಮಾಡಿಕೊಡಿ”- ಡಾ. ರಘು

(ನ್ಯೂಸ್ ಕಡಬ) newskadaba.com ಕಡಬ, ಎ.28. ಕಾಂಗ್ರೆಸ್ ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿ ನನಗೆ ಮತ್ತೊಂದು ಅವಕಾಶ ನೀಡಿದೆ, ಜನರ ಸೇವೆ ಮಾಡಲು ಕ್ಷೇತ್ರದ ಮತದಾರರು ಈ ಬಾರಿ ನನಗೊಂದು ಅವಕಾಶ ಮಾಡಿಕೊಡಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ಬೆಳ್ಳಿಪ್ಪಾಡಿ ಹೇಳಿದರು. ಗುರುವಾರ ಪೆರಾಬೆ ಗ್ರಾಮದ ಅಗತ್ತಾಡಿ ಕಡೀರಡ್ಕದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಳೆದ ಬಾರಿ ಅತೀ ಕಡಿಮೆ ಅಂತರದಲ್ಲಿ ಸೋಲು ಅನುಭವಿಸಿದ್ದೆ, ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್

ಪೆರಾಬೆ: ಕಾಂಗ್ರೆಸ್ ಕಾರ್ಯಕರ್ತರ ಸಭೆ ► “ಈ ಬಾರಿ ನನಗೊಂದು ಅವಕಾಶ ಮಾಡಿಕೊಡಿ”- ಡಾ. ರಘು Read More »

ಕರಾವಳಿ

ಜಿಲ್ಲೆಯಲ್ಲಿ 8 ಕ್ಷೇತ್ರಗಳಿಗೆ 58 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

(ನ್ಯೂಸ್ ಕಡಬ) newskadaba.com ಮಂಗಳೂರು ಎ.27. ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿಗೆ ಅಂತಿಮವಾಗಿ 58 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದು, ಅಭ್ಯರ್ಥಿಗಳ ವಿವರ ಇಂತಿವೆ. ಬೆಳ್ತಂಗಡಿ ಕ್ಷೇತ್ರ (6 ಅಭ್ಯರ್ಥಿಗಳು): ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ), ಜಗನ್ನಾಥ(ಎಂಇಪಿ), ಸೈಯದ್ ಹಸನ್(ಪಕ್ಷೇತರ) ಮೂಡಬಿದ್ರ್ರೆ ಕ್ಷೇತ್ರ (7 ಅಭ್ಯರ್ಥಿಗಳು): ಕೆ. ಅಭಯಚಂದ್ರ(ಕಾಂಗ್ರೆಸ್), ಉಮಾನಾಥ ಎ.ಕೋಟ್ಯಾನ್ (ಬಿ.ಜೆ.ಪಿ), ಜೀವನ್ ಕೃಷ್ಣ ಶೆಟ್ಟಿ (ಜಾತ್ಯಾತೀತ ಜನತಾದಳ), ಕೆ.ಯಾದವ ಶೆಟ್ಟಿ (ಸಿ.ಪಿ.ಐ.ಎಂ), ಅಶ್ವಿನ್ ಜೊಸ್ಸಿ ಪಿರೇರ (ಪಕ್ಷೇತರ),

ಜಿಲ್ಲೆಯಲ್ಲಿ 8 ಕ್ಷೇತ್ರಗಳಿಗೆ 58 ಅಭ್ಯರ್ಥಿಗಳು ಅಂತಿಮ ಕಣದಲ್ಲಿ Read More »

ಕರಾವಳಿ

ನೆಲ್ಯಾಡಿ: ಮನೆಗೆ ನುಗ್ಗಿದ ಕಳ್ಳರು ► ಒಂದು ಲಕ್ಷ ರೂ. ಹಣದೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.27. ಯಾರೂ ಇಲ್ಲದ ವೇಳೆ ಮನೆಯ ಒಳನುಗ್ಗಿರುವ ಕಳ್ಳರು ಮನೆಯಲ್ಲಿಟ್ಟಿದ್ದ ಒಂದು ಲಕ್ಷ ಹಣವನ್ನು ಲಪಟಾಯಿಸಿರುವ ಘಟನೆ ಠಾಣಾ ವ್ಯಾಪ್ತಿಯ ನೆಲ್ಯಾಡಿಯಲ್ಲಿ ಶುಕ್ರವಾರ ಸಂಜೆ ಬೆಳಕಿಗೆ ಬಂದಿದೆ. ನೆಲ್ಯಾಡಿ ಬಸ್ ನಿಲ್ದಾಣ ಬಳಿಯ ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಶೇಖ್ ಇಮಾಂ ಸಾಹೇಬ್ ಎಂಬವರು ಕುಟುಂಬ ಸಮೇತ ಬುಧವಾರದಂದು ಪುತ್ತೂರಿನ ಸಂಬಂಧಿಕರ ಮನೆಗೆ ಹೋಗಿದ್ದರು. ಶುಕ್ರವಾರ ಸಂಜೆ ಮನೆಗೆ ಬಂದಾಗ ಮನೆಯಲ್ಲಿಟ್ಟಿದ್ದ ಒಂದು ಲಕ್ಷ ರೂ.ಗಳನ್ನು ಕಳ್ಳರು ದೋಚಿರುವುದು ಬೆಳಕಿಗೆ ಬಂದಿದೆ.

ನೆಲ್ಯಾಡಿ: ಮನೆಗೆ ನುಗ್ಗಿದ ಕಳ್ಳರು ► ಒಂದು ಲಕ್ಷ ರೂ. ಹಣದೊಂದಿಗೆ ಪರಾರಿ Read More »

ಕರಾವಳಿ

ಮರಳು ಸಾಗಾಟದ ಲಾರಿ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.27. ಮರಳು ಸಾಗಾಟದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಶುಕ್ರವಾರದಂದು ನಡೆದಿದೆ. ಮೃತ ಸವಾರನನ್ನು ಕುಂಪಲ ಆಶ್ರಯ ಕಾಲನಿ ನಿವಾಸಿ ವಿನೀತ್ ರಾಜ್(25) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟುವಿನಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಹೆಚ್ಚಿನ ಘನ ವಾಹನಗಳು ಇಲ್ಲಿನ ಬಸ್ ನಿಲ್ದಾಣದ ರಸ್ತೆಯಲ್ಲೇ ಸಂಚರಿಸುತ್ತಿದ್ದು, ಇದರಿಂದಾಗಿ ಟಿಪ್ಪರ್ ಬೈಕಿಗೆ ಢಿಕ್ಕಿ ಹೊಡೆದಿದೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ

ಮರಳು ಸಾಗಾಟದ ಲಾರಿ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

“ಪ್ರಗತಿಯ ಪಕ್ಷ ಕರ್ನಾಟಕ” ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ► ಮತ್ತೆ ಜನಾರ್ದನ ಪೂಜಾರಿ ಕಣಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.27. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ “ಪ್ರಗತಿಯ ಪಕ್ಷ ಕರ್ನಾಟಕ” 2018 – 2023 ನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳೂರಿನ ಟಿಎಂಎ ಪೈ ಕನ್ವೆನ್‌ಶನ್ ಹಾಲ್‌ನಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು. ಪ್ರಣಾಳಿಕೆಯ ಮೊದಲ ಪ್ರತಿಯನ್ನು ಹಿರಿಯ ಮುಖಂಡ ಜನಾರ್ದನ ಪೂಜಾರಿಯವರಿಗೆ ಹಸ್ತಾಂತರಿಸುವ ಮೂಲಕ ರಾಹುಲ್ ವಿದ್ಯುಕ್ತವಾಗಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಮುಖಂಡರಾದ ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪ್ರದೇಶ ಕಾಂಗ್ರೆಸ್

“ಪ್ರಗತಿಯ ಪಕ್ಷ ಕರ್ನಾಟಕ” ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ► ಮತ್ತೆ ಜನಾರ್ದನ ಪೂಜಾರಿ ಕಣಕ್ಕೆ Read More »

ಕರಾವಳಿ

ಪುತ್ತೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಪ್ರಕರಣ ► ಕಟ್ಟಡ ಮಾಲಕ, ಇಂಜಿನಿಯರ್, ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಎ.27. ಮೂರು ದಿನಗಳ ಹಿಂದೆ ಪುತ್ತೂರಿನ ಅನಿತಾ ಆಯಿಲ್ ಮಿಲ್ ಸಮೀಪ ನೂತನ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಧರೆ‌ಕುಸಿದು ಉಂಟಾದ ದುರಂತದಲ್ಲಿ ಕಟ್ಟಡ ಮಾಲಕ, ಗುತ್ತಿಗೆದಾರ ಮತ್ತು ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲಾಗಿದೆ. ವರ್ಷದ ಹಿಂದೆ ಕಟ್ಟಡ ಕಾಮಗಾರಿಗಾಗಿ ಪರವಾನಿಗೆ ಪಡೆದುಕೊಳ್ಳಲಾಗಿತ್ತು. ಇದರ ಅವಧಿ 2018 ರ ಎಪ್ರಿಲ್‌ 14ಕ್ಕೆ ಕೊನೆಗೊಂಡಿದ್ದು, ಎಪ್ರಿಲ್ 17 ರಂದು ಪರವಾನಿಗೆ ನವೀಕರಣಕ್ಕೆ ಅರ್ಜಿ ನೀಡಿದ್ದು, ಇನ್ನೂ ಪರವಾನಿಗೆ ನೀಡಿರಲಿಲ್ಲ. ಅವಧಿ ಮೀರುವ ದಿನಾಂಕದ ಒಂದು

ಪುತ್ತೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಪ್ರಕರಣ ► ಕಟ್ಟಡ ಮಾಲಕ, ಇಂಜಿನಿಯರ್, ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಇಗರ್ಜಿ ► ಮೇ 02 ರಂದು ಸಂಭ್ರಮಾಚರಣೆ, ಧ್ಯಾನ ಗುಹೆ ಅನಾವರಣ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.27. ಅಗ್ರಹಾರ ಧರ್ಮಕ್ಷೇತ್ರದಿಂದ ಬಿಡುಗಡೆಗೊಂಡು 1889 ರಲ್ಲಿ ಸ್ವತಂತ್ರ ಧರ್ಮಕ್ಷೇತ್ರವಾಗಿ ಅಸ್ತಿತ್ವಕ್ಕೆ ಬಂದ ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಇಗರ್ಜಿಯ ಶತಮಾನೋತ್ತರ ಬೆಳ್ಳಿಹಬ್ಬವು ಮೇ 02 ರಂದು ನಡೆಯಲಿದೆ. ಮೇ 01 ರಂದು ಸಂಜೆ 4 ಗಂಟೆಗೆ ಮಡಂತ್ಯಾರು ಪೇಟೆಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಬಳಿಕ ವಿಶೇಷ ಬಲಿಪೂಜೆಯನ್ನು ಮಂಗಳೂರು ಧರ್ಮ ಪ್ರಾಂತ್ಯದ ಕಾನೂನು ಮತ್ತು ನ್ಯಾಯ ವಿಭಾಗದ ಮುಖ್ಯಸ್ಥ ವಂ| ವಾಲ್ಟರ್‌ ಡಿ’ಮೆಲ್ಲೊ ನೆರವೇರಿಸಲಿದ್ದಾರೆ‌. ಮೇ 2 ರಂದು ಬೆಳಗ್ಗೆ 9

ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಇಗರ್ಜಿ ► ಮೇ 02 ರಂದು ಸಂಭ್ರಮಾಚರಣೆ, ಧ್ಯಾನ ಗುಹೆ ಅನಾವರಣ Read More »

ಕರಾವಳಿ

ಬಿಡುಗಡೆಗೆ ಸಿದ್ದವಾಗಿದೆ ಧರ್ಮಸ್ಥಳದ ಕಥೆಯಾಧಾರಿತ ‘ಕಾನೂರಾಯಣ’ ಚಲನಚಿತ್ರ ► ಕನ್ನಡ ಚಿತ್ರರಂಗದ ಇತಿಹಾಸದಲ್ಲೇ 20 ಲಕ್ಷ ಮಂದಿ ಹಣ ಹಾಕಿರುವ ಏಕೈಕ ಚಿತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಡಾ| ಡಿ. ವೀರೇಂದ್ರ ಹೆಗ್ಡೆಯವರ 50 ನೇ ಪಟ್ಟಾಭಿಷೇಕದ ಸವಿನೆನಪಿಗಾಗಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳು ಸೇರಿ ನಿರ್ಮಾಣ ಮಾಡಿರುವ ಚಲನಚಿತ್ರ ‘ಕಾನೂರಾಯಣ’ ಬಿಡುಗಡೆಗೆ ಸಿದ್ಧವಾಗಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ 20 ಲಕ್ಷ ಮಂದಿ ಹಣ ಹಾಕಿ ನಿರ್ಮಿಸುತ್ತಿರುವ ಚಿತ್ರ ಇದಾಗಿದ್ದು ದಾಖಲೆ ನಿರ್ಮಿಸಲು ಸಜ್ಜಾಗಿದೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ 20 ಲಕ್ಷ

ಬಿಡುಗಡೆಗೆ ಸಿದ್ದವಾಗಿದೆ ಧರ್ಮಸ್ಥಳದ ಕಥೆಯಾಧಾರಿತ ‘ಕಾನೂರಾಯಣ’ ಚಲನಚಿತ್ರ ► ಕನ್ನಡ ಚಿತ್ರರಂಗದ ಇತಿಹಾಸದಲ್ಲೇ 20 ಲಕ್ಷ ಮಂದಿ ಹಣ ಹಾಕಿರುವ ಏಕೈಕ ಚಿತ್ರ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ನಾಮಪತ್ರ ಹಿಂತೆಗೆದ ಇಬ್ಬರು ಅಭ್ಯರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ರಾಜ್ಯ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಇಬ್ಬರು ಅಭ್ಯರ್ಥಿಗಳು ಗುರುವಾರದಂದು ನಾಮಪತ್ರಗಳನ್ನು ವಾಪಸ್ ಪಡೆದಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಪ್ಯಾಟ್ರಿಕ್ ಲೋಬೊ ಹಾಗೂ ಬಂಟ್ವಾಳ ಕ್ಷೇತ್ರದಿಂದ ಎಸ್ಡಿಪಿಐ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ಮಜೀದ್ ಖಾನ್ ಅವರು ನಾಮಪತ್ರವನ್ನು ಹಿಂಪಡೆದಿದ್ದಾರೆ. ನಾಮಪತ್ರವನ್ನು ಹಿಂದೆಗೆಯಲು ಶುಕ್ರವಾರದಂದು ಕೊನೆಯ ದಿನವಾಗಿದ್ದು, ಇನ್ನೂ ಹಲವರು ಹಿಂತೆಗೆಯುವ ಸಂಭವವಿದೆ.

ದಕ್ಷಿಣ ಕನ್ನಡದಲ್ಲಿ ನಾಮಪತ್ರ ಹಿಂತೆಗೆದ ಇಬ್ಬರು ಅಭ್ಯರ್ಥಿಗಳು Read More »

ಕರಾವಳಿ
Scroll to Top