ಕರಾವಳಿ

ಮಂಗಳೂರು: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಇರಿದು ಕೊಲೆ ► ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.30. ಮಹಿಳೆಯೋರ್ವರಿಗೆ ಚೂರಿಯಿಂದ ಇರಿದು ಕೊಲೆಗೈದು ಚಿನ್ನಾಭರಣ ದೋಚಿದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮದಲ್ಲಿ ಶನಿವಾರದಂದು ನಡೆದಿದೆ. ಕೊಲೆಗೀಡಾದ ಮಹಿಳೆಯನ್ನು ಐಕಳ ಬಿರ್ಕಿಲ್ ಮನೆ ನಿವಾಸಿ ಸುಧಾಮ ಶೆಟ್ಟಿಯ ಎಂಬವರ ಪತ್ನಿ ವಸಂತಿ ಶೆಟ್ಟಿ (58) ಎಂದು ಗುರುತಿಸಲಾಗಿದೆ. ವಸಂತಿ ಶೆಟ್ಟಿ ಅವರ ಕುತ್ತಿಗೆ ಮತ್ತು ಕೈಯಲ್ಲಿರುವ ಬಂಗಾರದ ಅಭರಣಗಳನ್ನು ಕೊಲೆಗಡುಕರು ದೋಚಿದ್ದಾರೆ. ಇನ್ನೊಂದು ಕೊಣೆಯಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ, ಮೃತ ದೇಹದ ಕುತ್ತಿಗೆ ಭಾಗದಲ್ಲಿ ಆಳವಾದ ಗಾಯವಾಗಿದ್ದು ಮನೆಯ ಮುಂಭಾಗದ ಕೋಣೆ […]

ಮಂಗಳೂರು: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಇರಿದು ಕೊಲೆ ► ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು Read More »

ಕರಾವಳಿ

ಮತೀಯ ಗಲಭೆಗೆ ಕುಮ್ಮಕ್ಕು ಆರೋಪ ► ದಕ್ಷಿಣ ಕನ್ನಡ ಜಿಲ್ಲೆಯಿಂದ ಇಬ್ಬರ ಗಡೀಪಾರಿಗೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಮತೀಯ ಗಲಭೆಗಳಿಗೆ ಕಾರಣವಾಗುತ್ತಿರುವ ಆರೋಪದಲ್ಲಿ ಇಬ್ಬರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿರುವ ಕಲ್ಲಡ್ಕ ನಿವಾಸಿಗಳಾದ ರತ್ನಾಕರ ಶೆಟ್ಟಿ ಮತ್ತು ಖಲೀಲ್ ಎಂಬವರು ಜೂನ್ ತಿಂಗಳಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡು ಮತೀಯ ಗಲಭೆಗೆ ಕಾರಣರಾಗಿದ್ದರು. ಈ ಹಿನ್ನೆಲೆಯಲ್ಲಿ

ಮತೀಯ ಗಲಭೆಗೆ ಕುಮ್ಮಕ್ಕು ಆರೋಪ ► ದಕ್ಷಿಣ ಕನ್ನಡ ಜಿಲ್ಲೆಯಿಂದ ಇಬ್ಬರ ಗಡೀಪಾರಿಗೆ ಆದೇಶ Read More »

ಕರಾವಳಿ

ಇಚಿಲಂಪಾಡಿ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.30. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದುದರ ಪರಿಣಾಮ ಸವಾರ ಗಾಯಗೊಂಡ ಘಟನೆ ಶನಿವಾರದಂದು ನಡೆದಿದೆ. ಗಾಯಾಳು ಬೈಕ್ ಸವಾರನನ್ನು ಕಡಬ ಸಮೀಪದ ಪಿಜಕ್ಕಳ ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಇವರನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ.

ಇಚಿಲಂಪಾಡಿ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ Read More »

ಕರಾವಳಿ

ಅನಾರೋಗ್ಯ ಪೀಡಿತ ಜಯರಾಮ ಆಚಾರ್ಯರಿಗೆ ► ಬೇಕಾಗಿದೆ ದಾನಿಗಳ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.30. ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಜನತಾ ಕಾಲನಿ ನಿವಾಸಿ ಜಯರಾಮ ಆಚಾರ್ಯ ಶ್ವಾಸಕೋಶದ ಅರ್ಬುದ ರೋಗದಿಂದ ಬಳಲುತ್ತಿದ್ದು, ಬಡ ಕುಟುಂಬದವರಾದ ಇವರು ಚಿಕಿತ್ಸೆಗೆ ಹಣವಿಲ್ಲದೆ ಕಂಗಾಲಾಗಿದ್ದು, ಸಹೃದಯರ ನೆರವು ಯಾಚಿಸಿದ್ದಾರೆ. 55ರ ಹರೆಯದ ಜಯರಾಮ ಆಚಾರ್ಯ ಅವರು ಮರದ ಕೆಲಸ ಮಾಡುತ್ತಾ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೆಮ್ಮದಿಯ ಜೀವನ ಸಾಗಿಸುತ್ತಿದ್ದರು. ಆದರೆ ಅವರಿಗೆ ಅರ್ಬುದ ರೋಗ ಕಾಣಿಸಿಕೊಂಡ ಬಳಿಕ ಇವರ ಕುಟುಂಬದ ಆಧಾರ ಸ್ತಂಭವೇ ಕುಸಿದು ಬಿದ್ದಿದ್ದು,

ಅನಾರೋಗ್ಯ ಪೀಡಿತ ಜಯರಾಮ ಆಚಾರ್ಯರಿಗೆ ► ಬೇಕಾಗಿದೆ ದಾನಿಗಳ ಸಹಾಯ ಹಸ್ತ Read More »

ಕರಾವಳಿ

ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ವಂಚನೆ ► ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ಮಿದುಳು ನಿಷ್ಕ್ರಿಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.30. ಯುವಕನೋರ್ವ ಪ್ರೀತಿಸುವ ನಾಟಕವಾಡಿ 9 ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ವಂಚಿಸಿ ಇದೀಗ ಬೇರೆ ಹುಡುಗಿಯೊಂದಿಗೆ ಮದುವೆ ನಿಶ್ಚಯಿಸಲು ಸಿದ್ಧತೆ ನಡೆಸಿದ್ದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಟ್ಲದ ಮಂಗಳಪದವು ಎಂಬಲ್ಲಿ ನಡೆದಿದೆ. ವಂಚಿಸಿದ ಯುವಕನನ್ನು ಮಂಗಳಪದವು ದರ್ಖಾಸ್ ನಿವಾಸಿ ರಶೀದ್ ಎಂದು ಗುರುತಿಸಲಾಗಿದ್ದು, ಈತ ಅಪ್ರಾಪ್ತ ಬಾಲಕಿಯನ್ನು ವಂಚಿಸಿ ತಿಂಗಳ ಹಿಂದೆ ವಿದೇಶಕ್ಕೆ ಪಲಾಯನಗೈದಿದ್ದಾನೆ ಎನ್ನಲಾಗಿದೆ. ಇದೀಗ ಬೇರೆ ಹುಡುಗಿಯೊಂದಿಗೆ ನಿಶ್ಚಿತಾರ್ಥಕ್ಕೆ ಸಿದ್ಧತೆ ನಡೆಸಿದ್ದರಿಂದ ಮನನೊಂದ ಬಾಲಕಿ

ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ವಂಚನೆ ► ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ಮಿದುಳು ನಿಷ್ಕ್ರಿಯ Read More »

ಕರಾವಳಿ

ಉಪ್ಪಿನಂಗಡಿ: ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಶಾಲಾ ವಿದ್ಯಾರ್ಥಿ ► ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಯೋರ್ವ ಬಸ್‌ನಿಂದ‌ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಂಡ್ಯ ಜಿಲ್ಲೆಯ ನೇತ್ರ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ, ಮಂಡ್ಯದ ಭೂತನವಸೂರು ಗ್ರಾಮದ ನಿವಾಸಿ ಚಂದ್ರು(12) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆಂದು ಆಗಮಿಸಿದ್ದ ಇವರು ಪ್ರಯಾಣಿಸುತ್ತಿದ್ದ ಬಸ್‌ನ ಬಾಗಿಲು ತೆರೆಯಲ್ಪಟ್ಟಿದ್ದು ಬಾಗಿಲ ಬಳಿ ಕುಳಿತಿದ್ದ ಚಂದ್ರ

ಉಪ್ಪಿನಂಗಡಿ: ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಶಾಲಾ ವಿದ್ಯಾರ್ಥಿ ► ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಬಿಳಿನೆಲೆ: ಬೈಕ್-ಕಾರು ಢಿಕ್ಕಿ ► ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.29. ಬೈಕ್ ಹಾಗೂ ಝೈಲೋ ಕಾರು ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ CPCRI ಬಳಿ ಶುಕ್ರವಾರದಂದು ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸುಬ್ರಹ್ಮಣ್ಯ ಕಾಲೇಜು ವಿದ್ಯಾರ್ಥಿ ಮರ್ಧಾಳ ನಿವಾಸಿ ನವೀನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿಳಿನೆಲೆ: ಬೈಕ್-ಕಾರು ಢಿಕ್ಕಿ ► ಬೈಕ್ ಸವಾರ ಗಂಭೀರ Read More »

ಕರಾವಳಿ

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಅಪ್ರಾಪ್ತೆ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಿದ ಆರೋಪದಲ್ಲಿ  ಯುವಕನೋರ್ವನನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮಚ್ಚಿನ ಕುದ್ರಡ್ಕ ನಿವಾಸಿ ನಾರಾಯಣ (30) ಎಂದು ಗುರುತಿಸಲಾಗಿದೆ. ಈತ ಇಳಂತಿಲದ ಅಪ್ರಾಪ್ತೆ ಬಾಲಕಿಯೋರ್ವಳ ಮೇಲೆ ಕಳೆದ ಆರು ತಿಂಗಳಿನಿಂದ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ► ಆರೋಪಿಯ ಬಂಧನ Read More »

ಕರಾವಳಿ

ಮಂಗಳೂರು: ಶೂಟೌಟ್ ಪ್ರಕರಣ ಭೇದಿಸಿದ ಸಿಸಿಬಿ ಪೊಲೀಸರು ► ಪಿಸ್ತೂಲ್, ಮದ್ದುಗುಂಡುಗಳ‌ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.29. ನಗರದಲ್ಲಿ ನಡೆದ ಸರಣಿ ಶೂಟೌಟ್ ಪ್ರಕರಣವನ್ನು ಭೇದಿಸಿರುಬ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾದ ಮುಲ್ಕಿ ನಿವಾಸಿ ಮನೋಜ್ ಕುಂದರ್(35) ಹಾಗೂ ಕಾಪಿಕಾಡ್ ನಿವಾಸಿ ಚಂದ್ರಶೇಖರ(32) ಎಂದು ಗುರುತಿಸಲಾಗಿದೆ. ಡಿಸೆಂಬರ್ 07 ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಶ್ರೀ ರಾಜಶ್ರೀ ಜ್ಯುವೆಲರ್ಸ್ ಶೂಟೌಟ್, ಡಿಸೆಂಬರ್ 08 ರಂದು ಕಾರ್ ಸ್ಟ್ರೀಟ್ ಎಂಬಲ್ಲಿರುವ ಎಂ.

ಮಂಗಳೂರು: ಶೂಟೌಟ್ ಪ್ರಕರಣ ಭೇದಿಸಿದ ಸಿಸಿಬಿ ಪೊಲೀಸರು ► ಪಿಸ್ತೂಲ್, ಮದ್ದುಗುಂಡುಗಳ‌ ಸಹಿತ ಇಬ್ಬರ ಬಂಧನ Read More »

ಕರಾವಳಿ

ನಾಟಿವೈದ್ಯ ಮಿತ್ತೋಡಿ ಬಾಬು ಪೂಜಾರಿ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಡಿ.28. ಇಲ್ಲಿನ ಮರ್ಧಾಳ ನಿವಾಸಿ ಖ್ಯಾತ ನಾಟಿ ವೈದ್ಯ ಮಿತ್ತೋಡಿ ಬಾಬು ಪೂಜಾರಿ (ಕೊರಗಪ್ಪ ಪೂಜಾರಿ) ಅಲ್ಪಕಾಲದ ಅಸೌಖ್ಯದಿಂದ ಗುರುವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು10 ದಿನಗಳ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾದರು. ಹಳ್ಳಿ ಮದ್ದು ನೀಡುತ್ತಿದ್ದ ಅವರಿಗೆ 85 ವರ್ಷ ವಯಸ್ಸಾಗಿತ್ತು.

ನಾಟಿವೈದ್ಯ ಮಿತ್ತೋಡಿ ಬಾಬು ಪೂಜಾರಿ ವಿಧಿವಶ Read More »

ಕರಾವಳಿ
Scroll to Top