ಕರಾವಳಿ

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.13. ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಅಂತಾ ಹಿರಿಯರು ಹೇಳುತ್ತಾರೆ. ಆದರೆ ಇಲ್ಲೊಂದು  ಅಚ್ಚರಿ ಎಂಬಂತೆ ಬೆಕ್ಕು ಸುಮಾರು 6 ನಾಯಿ ಮರಿಗಳಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ ನಿವಾಸಿ ಮೋಹನ್ ನಾಯ್ಕ್ ಎಂಬವರ ಮನೆಯ ಬೆಕ್ಕು ಪ್ರತಿದಿನ ಬೆಳಿಗ್ಗೆ ನಾಯಿಮರಿಗಳಿಗೆ ಹಾಲು ನೀಡುತ್ತಿದೆ. ಈ ಬೆಕ್ಕು ಸುಮಾರು 5 ರಿಂದ 6 ನಾಯಿಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ನಾಯಿ ಮರಿಗಳಿಗೆ […]

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!! Read More »

ಕರಾವಳಿ

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.13. ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಬೇರಿಕೆ ಕೊಪ್ಪ ನಿವಾಸಿ ಹೊನ್ನಮ್ಮ(59) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯಿಂದ ನಡೆದುಕೊಂಡು ರಸ್ತೆ ಬದಿಯಲ್ಲಿ ತೆರಳುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ

ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಿಧನರಾದ, ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ ಶನಿವಾರ ಕಡಬ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಐತ್ತಪ್ಪ ನಾಯ್ಕ್ ಮಾತನಾಡಿ ಗೋಪಾಲ್ ರಾವ್ ಹಾಗೂ ತನ್ನ ಸುಧೀರ್ಘ ಒಡನಾಟದಲ್ಲಿ ನಡೆದ ಸಾಹಿತ್ಯ ಕೃಷಿಯ ಬಗ್ಗೆ ಮೆಲಕು ಹಾಕಿದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಿವಾಸ ರಾವ್, ಜಿಲ್ಲಾ

ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ Read More »

ಕರಾವಳಿ

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ

(ನ್ಯೂಸ್ ಕಡಬ) newskadaba.com ಕಡಬ, ನ.12. ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿ ದಿನೇ ದಿನೇ ಜನ ಸಂಚಾರ ಹೆಚ್ಚಾಗುತ್ತಿದ್ದು, ಪ್ರಸ್ತಾವಿತ ಸುಮಾರು 35 ಗ್ರಾಮಗಳಿಂದ ಕಛೇರಿ ಕೆಲಸಗಳಿಗಾಗಿ ಕಡಬಕ್ಕೆ ಬರುವುದು ಅನಿವಾರ್ಯ. ಕಡಬ ಪೇಟೆಯಿಂದ ಕೇವಲ ಮೂರು ಕಿಮೀ ದೂರದಲ್ಲಿರುವ ಕಾಯರಡ್ಕದಿಂದ ಪೇರಡ್ಕದ ವರೆಗಿನ ಎರಡು ಕಿಮೀ ರಸ್ತೆಯು ಇಲ್ಲಿನ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜಾಣ ಕುರುಡುತನದಿಂದಾಗಿ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದೆ. ಈ ರಸ್ತೆಯು ಕಡಬದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದು, ಈ ರಸ್ತೆಯ ಮೂಲಕ

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ Read More »

ಕರಾವಳಿ

ಒಂಟಿ ಮಹಿಳೆಯರ ಕುತ್ತಿಗೆಯಿಂದ ಚಿನ್ನಾಭರಣ ದೋಚುವ ತಂಡ ► ಮೂವರು ಆರೋಪಿಗಳು ಮಂಗಳೂರು ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.12. ನಗರದಲ್ಲಿ ಒಂದೆರಡು ವರ್ಷಗಳಿಂದ ಜನರಹಿತ ಪ್ರದೇಶಗಳಲ್ಲಿ ನಡೆದುಕೊಂಡು ಹೋಗುವ ಒಂಟಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಮೂವರು ಯುವಕರನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದ ದಳದ ಪೊಲೀಸ್ ತಂಡ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ಆಕಾಶಭವನ ನಿವಾಸಿ ಅಲ್ವಿನ್, ಅಶೋಕ ನಗರ ನಿವಾಸಿ ಮನೀಷ್, ದೇರಳಕಟ್ಟೆ ನಿವಾಸಿ ಅಶ್ವಿನ್ ಎಂದು ಗುರುತಿಸಲಾಗಿದೆ. ಇವರು ಜನ/ವಸತಿ ರಹಿತ ಪ್ರದೇಶಗಳಲ್ಲಿ ನಡೆದುಕೊಂಡು ಹೋಗುವ ಒಂಟಿ ಮಹಿಳೆಯರನ್ನು ಕೇಂದ್ರವಾಗಿರಿಸಿಕೊಂಡು, ಮೋಟಾರ್‌ ಸೈಕಲ್‌ಗಳಲ್ಲಿ ದಾರಿ

ಒಂಟಿ ಮಹಿಳೆಯರ ಕುತ್ತಿಗೆಯಿಂದ ಚಿನ್ನಾಭರಣ ದೋಚುವ ತಂಡ ► ಮೂವರು ಆರೋಪಿಗಳು ಮಂಗಳೂರು ಪೊಲೀಸರ ಬಲೆಗೆ Read More »

ಕರಾವಳಿ

ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.11. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಬಂಟ್ವಾಳದಲ್ಲಿ ಬೃಹತ್ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಸಚಿವ ರಮಾನಾಥ ರೈ ವಿರುದ್ದ ಹರಿಹಾಯ್ದ ಶೋಭಾ ಕರಂದ್ಲಾಜೆ, ಬಂಟ್ವಾಳದಲ್ಲಿ ರಮಾನಾಥ ರೈಯವರು ಹಿಂದೂಗಳ ವಿರುದ್ಧ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಬಂಧನಕ್ಕೆ ರಮಾನಾಥ ರೈಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಲು

ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ Read More »

ಕರಾವಳಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11. ಇಲ್ಲಿನ ಕೊಯಿಲ ಗ್ರಾಮದ ಏಣಿತಡ್ಕದಲ್ಲಿ ಶಾಸಕರ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಸುಳ್ಯ ಶಾಸಕ ಎಸ್.ಅಂಗಾರ ವೀಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಏಣಿತಡ್ಕದ ನೂತನ ಸೇತುವೆ ಬಳಿಯಿಂದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ತನಕ ಸುಮಾರು 97 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಡಾಮಾರೀಕರಣ ನಡೆಯುತ್ತಿದೆ. ಇತ್ತೀಚೆಗೆ ಇದರ ಗುದ್ದಲಿ ಪೂಜೆ ನೇರವೇರಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಯಲ್ಲಿ ಶಾಸಕರು ಕಾಮಗಾರಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ Read More »

ಕರಾವಳಿ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »

ಕರಾವಳಿ

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.11. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲೆಂದು ಬರುತ್ತಿದ್ದ 108 ಆಂಬುಲೆನ್ಸ್ ಪಲ್ಟಿಯಾದ ಘಟನೆ  ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಮತ್ತು ಅರಟಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆಂಬುಲೆನ್ಸ್ ಅರಟಾಳ ಗ್ರಾಮದ ಗರ್ಭಿಣಿ ಮಹಿಳೆಯನ್ನು ಕರೆತರಲು ಬರುತ್ತಿದ್ದ ಸಂದರ್ಭದಲ್ಲಿ ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಮಧ್ಯೆ ಆಂಬುಲೆನ್ಸ್ ಪಲ್ಟಿಯಾಗಿದೆ. ಗರ್ಭಿಣಿಯನ್ನು ಕರೆತರಲು ಬರುತ್ತಿದ್ದಾಗ ಈ ಘಟನೆ ನಡೆದದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆಂಬುಲೆನ್ಸ್

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ನ.11. ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರುನಗರದಲ್ಲಿ ಇತ್ತೀಚೆಗೆ ನಡೆದ ಕನಸುಗಳು ಎಂಬ ಕಾರ್ಯಕ್ರಮದಲ್ಲಿ ಸರಸ್ವತೀ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ದೀಪಕ್.ಕೆ ಇವರು ಭಾಗವಹಿಸಿ ವರ್ಣ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಇವರು ಕಲ್ಲುಗುಡ್ಡೆ ನಿವಾಸಿ ಕಿಟ್ಟು ಅಜಿಲ ಮತ್ತು ವೆಂಕಮ್ಮ ದಂಪತಿಯ ಸುಪುತ್ರ.

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ Read More »

ಕರಾವಳಿ
Scroll to Top