ಕರಾವಳಿ

ತೆರೆದ ಬಾವಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.10. ನಗರ ಠಾಣಾ ಸರಹದ್ದಿನ ಪುತ್ತೂರು ಕಸಬಾ ಗ್ರಾಮದ ನೆಲ್ಲಿಕಟ್ಟೆ ಖಾಸಗಿ ಬಸ್ಸು ನಿಲ್ದಾಣದ ಹಿಂಬದಿಇರುವ ಮನೆ ನಿವೇಶದ ತೆರೆದ ಬಾವಿಯಲ್ಲಿ ಅಪರಿಚಿತ ಶವವೊಂದು ಶನಿವಾರದಂದು ಕಂಡುಬಂದಿದೆ. ಬುಧವಾರ ಸಂಜೆಯ ನಂತರ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಈ ಬಗ್ಗೆ ಸಾಮೆತ್ತಡ್ಕ  ನಿವಾಸಿ ಪರವೀಣ್ ಕುಮಾರ್ ರೈಯವರು ನೀಡಿರುವ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆರೆದ ಬಾವಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ನೂಜಿಬಾಳ್ತಿಲ ಬೆಥನಿ ಪ.ಪು ಕಾಲೇಜಿನ ಜೋಸ್ ವಾಳಕುಝಿ ಸ್ಮಾರಕ ಸಭಾಭವನದಲ್ಲಿ ಪರಿಸರ ದಿನಾಚರಣೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿ ಮಾತನಾಡಿ, ನಮಗೆ ಪರಿಸರದ ಬಗ್ಗೆ ಕಾಳಜಿ ಕಡಿಮೆಯಾಗಿದೆ. ಆದರೆ ಸ್ವಚ್ಚ ಪರಿಸರ, ಗಾಳಿ, ನೀರು, ಪ್ರಕೃತಿ ರಮಣೀಯವಾದ ಕಾಡಿನೊಂದಿಗೆ ಉತ್ತಮ ಪರಿಸರ ಹೊಂದಿಕೊಳ್ಳಬೇಕಾದರೆ ನಾವು ನಮ್ಮ ಪರಿಸರದತ್ತ ಗಮನ ಹರಿಸಬೇಕಾಗಿದೆ . ಮುಂದಿನ ಪ್ರಜೆಗಳಾಗುವ ವಿದ್ಯಾರ್ಥಿಗಳಾದ ತಾವುಗಳು ಪ್ರತಿಯೊಬ್ಬರ ಮನೆ ಪರಿಸರದಲ್ಲಿ 10-10 ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ

ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಪದವಿ ಶಿಕ್ಷಣಕ್ಕೆ ಹಣದ ಕೊರತೆಯೇ…? ಕಡಬ ಏಮ್ಸ್‌ ಕಾಲೇಜಿನಲ್ಲಿ ಉಚಿತ ಶಿಕ್ಷಣ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಮಂಗಳೂರು ವಿಶ್ವವಿದ್ಯಾಲಯದಿಂದ ಅನುಮತಿ ಪಡೆದ ಕಡಬದ ಏಮ್ಸ್‌ ಕಾಲೇಜು ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೆ ಆದ ಕೊಡುಗೆ ನೀಡುತ್ತಿದೆ. ಹೀಗಾಗಿ ಹಲವಾರು ಪ್ರಶಸ್ತಿಗಳು ಲಭಿಸಿದೆ. ಪ್ರಸಕ್ತ ಸಾಲಿನಲ್ಲಿ 100 ವಿದ್ಯಾರ್ಥಿಗಳಿಗೆ ಶುಲ್ಕ ಉಚಿವಾಗಿ ಶಿಕ್ಷಣ ನೀಡಲಾಗುವದು ಎಂದು ಸಂಸ್ಥೆಯ ಅಧ್ಯಕ್ಷೆ ಪೌಝೀಯ ಬಿ.ಎಸ್.ಹೇಳಿದರು. ಅವರು ಕಡಬದ ಪ್ರೆಸ್ ಕ್ಲಬ್ ನಲ್ಲಿ ಇತ್ತೀಚೆಗೆ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿ, ಸಂಸ್ಥೆಯು 2012-13 ಸಾಲಿನಲ್ಲಿ 7 ವಿದ್ಯಾರ್ಥಿಗಳ ಮೂಲಕ ಆರಂಭಗೊಂಡು ಬಳಿಕದ ಬೆಳವಣಿಗೆಯಲ್ಲಿ 2015-16 ನೇ ಸಾಲಿನಲ್ಲಿ ಕಾಲೇಜಿನ ಪ್ರಥಮ

ಪದವಿ ಶಿಕ್ಷಣಕ್ಕೆ ಹಣದ ಕೊರತೆಯೇ…? ಕಡಬ ಏಮ್ಸ್‌ ಕಾಲೇಜಿನಲ್ಲಿ ಉಚಿತ ಶಿಕ್ಷಣ Read More »

ಕರಾವಳಿ

ಎಲ್ಲಾ ಸೌಲಭ್ಯ ನೀಡಿದರೂ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖ: ಶಾಸಕ ಅಂಗಾರ ಆತಂಕ

(ನ್ಯೂಸ್ ಕಡಬ) newskadaba.com ಕಡಬ, ಜೂ.10. ಸರಕಾರಿ ಶಾಲೆಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಿದರೂ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಶುಕ್ರವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಕ್ಷರ ದಾಸೋಹ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯ ಸರಕಾರ ಸರಕಾರಿ ಶಾಲೆಗಳಿಗೆ ಉತ್ತಮ ಶಿಕ್ಷಕರು, ಸದೃಢ ಕಟ್ಟಡಗಳು, ಮಧ್ಯಾಹ್ನದ ಊಟದ ವ್ಯವಸ್ಥೆ, ಉಚಿತ ಪಠ್ಯಪುಸ್ತಕ, ಸಮವಸ್ತ್ರ ಮುಂತಾದ ಎಲ್ಲಾ ಸೌಲಭ್ಯಗಳನ್ನು ನೀಡಿ

ಎಲ್ಲಾ ಸೌಲಭ್ಯ ನೀಡಿದರೂ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖ: ಶಾಸಕ ಅಂಗಾರ ಆತಂಕ Read More »

ಕರಾವಳಿ

ಮರ್ಧಾಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಇಲ್ಲಿನ ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಬೆಳ್ಳಾರೆ ಪೊಲೀಸ್ ಠಾಣೆಯ ಎಎಸ್ಸೈ ಬಾಲಚಂದ್ರ ಎಂಬವರ ಪತ್ನಿ ಜಾನಕಿ(51) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕೌಟುಂಬಿಕ ಕಾರಣಗಳಿಂದಾಗಿ ಮನನೊಂದು ತೋಟದಲ್ಲಿನ ಕೃಷಿಗೆ ಸಿಂಪಡಿಸಲೆಂದು ತಂದಿರಿಸಲಾಗಿದ್ದ ವಿಷವನ್ನು ಸೇವಿಸಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಶವವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರ್ಧಾಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ರಾಮಕುಂಜ: ರಸ್ತೆ ಕಾಂಕ್ರಿಟೀಕರಣಕ್ಕೆ ಶಾಸಕ ಅಂಗಾರರಿಂದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಲೋಕೋಪಯೋಗಿ ಬಂದರು ಒಳನಾಡು ಜಲಸಾರಿಗೆ ಇಲಾಖೆಯ 10 ಲಕ್ಷ ರೂ. ಅನುದಾನದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ರಾಮಕುಂಜ ಗ್ರಾಮದ ಅಂಬೇಡ್ಕರ್ ನಗರ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಶಿಲಾನ್ಯಾಸ ನಡೆಯಿತು. ಸುಳ್ಯ ಶಾಸಕ ಎಸ್. ಅಂಗಾರರವರು ಶಿಲಾನ್ಯಾಸ ನೆರವೇರಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ಬಿಜೆಪಿ ನೆಲ್ಯಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ, ತಾ.ಪಂ. ಸದಸ್ಯೆಯರಾದ ಜಯಂತಿ ಆರ್. ಗೌಡ, ತೇಜಸ್ವಿನಿ ಶೇಖರ ಗೌಡ, ರಾಮಕುಂಜ

ರಾಮಕುಂಜ: ರಸ್ತೆ ಕಾಂಕ್ರಿಟೀಕರಣಕ್ಕೆ ಶಾಸಕ ಅಂಗಾರರಿಂದ ಶಿಲಾನ್ಯಾಸ Read More »

ಕರಾವಳಿ

ಇಂದಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.09. ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗವು 2017-18ನೇ ಸಾಲಿಗಾಗಿ ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸುಗಳನ್ನು ವಿತರಿಸಲು ಸಿದ್ಧವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಪ್ರಸ್ತುತ ವರ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ಪಾಸು ನೀಡಲಾಗುವುದು. (ಸಂಸ್ಕರಣ ಶುಲ್ಕ+ ಅಪಘಾತ ಪರಿಹಾರ ಶುಲ್ಕ ಪಾವತಿಸಬೇಕು) ಮೊದಲನೇ ಹಂತವಾಗಿ ಪ್ರಾಥಮಿಕ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಬಸ್ಸು ಪಾಸುಗಳನ್ನು ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲಾಗುವುದು. ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ಫಾರಂಗಳನ್ನು ನಿಗದಿತ ಶುಲ್ಕದೊಂದಿಗೆ

ಇಂದಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ Read More »

ಕರಾವಳಿ

ಕುಂಡಾಜೆ ಶಾಲಾ ಮಂತ್ರಿಮಂಡಲ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಕುಂಡಾಜೆ ದ.ಕ.ಜಿ.ಪಂ.ಕಿ.ಪ್ರಾ. ಶಾಲೆಯ 2017-18ನೇ ಸಾಲಿನ ಶಾಲಾ ಮಂತ್ರಿಮಂಡಲವನ್ನು ರಚಿಸಲಾಯಿತು. ಮುಖ್ಯಮಂತ್ರಿಯಾಗಿ 5ನೇ ತರಗತಿಯ ಮಹಮ್ಮದ್ ಇರ್ಫಾನ್, ವಿರೋಧ ಪಕ್ಷದ ನಾಯಕಿಯಾಗಿ 5ನೇ ತರಗತಿಯ ಮಮತಾ ಆಯ್ಕೆಗೊಂಡರು. ಗೃಹಮಂತ್ರಿಗಳಾಗಿ ರಕ್ಷಿತ್, ರಂಜಿತಾ, ಕ್ರೀಡಾಮಂತ್ರಿಗಳಾಗಿ ಅಫ್ಸಲ್ ಹುಸೈನ್, ರಕ್ಷಿತಾ, ನೀರಾವರಿ ಮಂತ್ರಿಯಾಗಿ ನೀತೇಶ್, ಯಶ್ಚಿತ, ಕೃಷಿ ಮಂತ್ರಿಯಾಗಿ ಇರ್ಫಾನ್, ಕೀರ್ತನ್, ಶಿಕ್ಷಣ ಮಂತ್ರಿಗಳಾಗಿ ಪೌರ್ಣಮಿ, ನಿಶಾಂತ್, ಆರೋಗ್ಯಮಂತ್ರಿಗಳಾಗಿ ಪ್ರಿಯಶ್ರೀ, ಹೇಮಂತ್, ಸ್ವಚ್ಛತಾ ಮಂತ್ರಿಗಳಾಗಿ ಮೋಹನ, ನಾಗೇಂದ್ರ ಪ್ರಸಾದ್, ಲಿಖಿತ, ಆಹಾರ ಮಂತ್ರಿಗಳಾಗಿ ಯೋಗಿತಾ,

ಕುಂಡಾಜೆ ಶಾಲಾ ಮಂತ್ರಿಮಂಡಲ ರಚನೆ Read More »

ಕರಾವಳಿ

ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು ಜೂ.08. ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಬಾಲಕರ ವಿದ್ಯಾರ್ಥಿನಿಲಯ ಪಡೀಲ್, ಬಾಲಕಿಯರ ವಿದ್ಯಾರ್ಥಿ ನಿಲಯ ಚಿಲಿಂಬಿ, ಬೆಂಜನಪದವು, ಕಡಬ ಮತ್ತು ಸ್ನಾತಕೋತರ ವಿದ್ಯಾರ್ಥಿ ನಿಲಯ ದೇರಳಕಟ್ಟೆ ಮತ್ತು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಗುರುಕಂಬಳದಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಅಥವಾ ಆಯಾಯ

ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಪುಣ್ಚಪ್ಪಾಡಿ : ಹಿರಿಯ ವಿದ್ಯಾರ್ಥಿ ಸಂಘದಿಂದ ಪುಸ್ತಕ ವಿತರಣೆ

(ನ್ಯೂಸ್ ಕಡಬ) newskadaba.com ಸವಣೂರು, ಜೂ.08. ಪುಣ್ಚಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಸುಮತಿ ವಹಿಸಿದ್ದರು. ಶಾಲಾ ನೂತನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ,ಸವಣೂರು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಪಿ.ಡಿ ಗಂಗಾಧರ್ ರೈ ವಿದ್ಯಾಥಿಗಳಿಗೆ ಪುಸ್ತಕವನ್ನು ವಿತರಿಸಿದರು. ವೇದಿಕೆಯಲ್ಲಿ ಸವಣೂರು ಗ್ರಾ.ಪಂ ಸದಸ್ಯರಾದ ಗಿರಿಶಂಕರ್ ಸುಲಾಯ, ನಾಗೇಶ್ ಓಡಂತರ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿತ್ ಕುಮಾರ್

ಪುಣ್ಚಪ್ಪಾಡಿ : ಹಿರಿಯ ವಿದ್ಯಾರ್ಥಿ ಸಂಘದಿಂದ ಪುಸ್ತಕ ವಿತರಣೆ Read More »

ಕರಾವಳಿ
Scroll to Top