ಕರಾವಳಿ

ಜರ್ಮನಿಯ ಮನೆಯಲ್ಲಿ ಅಗ್ನಿ ಅನಾಹುತ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಸಾವು

(ನ್ಯೂಸ್‌ ಕಡಬ) newskadaba.com,ಜ.02 ಬರ್ಲಿನ್:    ಜರ್ಮನಿಯಲ್ಲಿರುವ ನಿವಾಸದಲ್ಲಿ ಅಗ್ನಿ ಅವಘಡ ಉಂಟಾಗಿ ಹೊಸ ವರ್ಷದ ದಿನವೇ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದು, ಕುಟುಂಬಸ್ಥರಿಗೆ ಆಘಾತ ಉಂಟಾಗಿದೆ.ತಡರಾತ್ರಿ ಸಂಭವಿಸಿದ ಬೆಂಕಿ ಅಪಘಡದಲ್ಲಿ ತೆಲಂಗಾಣದ ಹೃತಿಕ್ ರೆಡ್ಡಿ(25) ಸಾವನ್ನಪ್ಪಿದ್ದಾರೆ. ವೇಗವಾಗಿ ಹರಡುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಬರ್ಲಿನ್‌ನ ಅಪಾರ್ಟ್ಮೆಂಟ್‌ನ ಮೇಲಿನ ಮಹಡಿಯಿಂದ ಹಾರಿದ್ದ. ಪರಿಣಾಮ ಆತನ ತಲೆಗೆ ತೀವ್ರ ಪೆಟ್ಟಾಗಿತ್ತು. ಹೃತಿಕ್ ನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹೊಸ ವರ್ಷದ ದಿನದಂದೇ ಈ […]

ಜರ್ಮನಿಯ ಮನೆಯಲ್ಲಿ ಅಗ್ನಿ ಅನಾಹುತ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,ಜ.02 ಕಾಪು: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸವಾರ ಯುವರಾಜ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ:ತಪಸ್ಯಾಗೆ ರಾಷ್ಟç ಮಟ್ಟದಲ್ಲಿ ಚಿನ್ನದ ಪದಕ

(ನ್ಯೂಸ್‌ ಕಡಬ) newskadaba.com,ಜ.02: ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತಪಸ್ಯಾ.ಎಸ್.ನಾಯಕ್ ರಾಷ್ಟç ಮಟ್ಟದ 69ನೇ ನೆಟ್ ಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟç ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.ಇದು ಗ್ರಾಮೀಣ ಪ್ರದೇಶ ಕುಕ್ಕೆಗೆ ಹೆಮ್ಮೆಯ ಗರಿಯಾಗಿದೆ. 69ನೇ ರಾಷ್ಟç ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವು ಕೇರಳವನ್ನು 4 ಅಂಕಗಳಿAದ ಸೋಲಿಸಿ

ಕುಕ್ಕೆ:ತಪಸ್ಯಾಗೆ ರಾಷ್ಟç ಮಟ್ಟದಲ್ಲಿ ಚಿನ್ನದ ಪದಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.02: ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಬೆಂಗಳೂರಿನಲ್ಲಿ ಜ.3ರವರೆಗೂ ಚಳಿ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಮಂಗಳೂರು : ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ

(ನ್ಯೂಸ್‌ ಕಡಬ) newskadaba.com,ಜ.01: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ.‌ ಅಪರಿಚಿತ ವ್ಯಕ್ತಿ ಸುಮಾರು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ ಮತ್ತು ನೀಲಿ ಬಣ್ಣದ ದಪ್ಪಗೆರೆಗಳ ಟೀ ಶರ್ಟ್, ಬಳಿ ಬಣ್ಣದ ಬರಹಗಳಿರುವ ಕಪ್ಪು ಬಣ್ಣದ ಸ್ಪೋರ್ಟ್ಸ್ ಪ್ಯಾಂಟ್ ಧರಿಸಿದ್ದಾರೆ. ಸದ್ಯ ಮೃತದೇಹವನ್ನು ಮೇಲೆತ್ತಿರುವ ಪಣಂಬೂರು ಪೊಲೀಸರು ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಚಹರೆಯ

ಮಂಗಳೂರು : ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತ; 10 ಸಾವು, ಹಲವರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,ಜ.01: ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತವೊಂದು ನಡೆದಿದೆ. ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್ ಮೊಂಟಾನಾದ ಬಾರ್‌ನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಹೊಸ ವರ್ಷದ ಆಚರಣೆಯ ಸಮಯದಲ್ಲಿ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಎಂಬ ಬಾರ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ವಿಸ್ ಪೊಲೀಸರು ಗುರುವಾರ ಮುಂಜಾನೆ ತಿಳಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ವರದಿಗಳ ಪ್ರಕಾರ ಹಲವಾರು

ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತ; 10 ಸಾವು, ಹಲವರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷದ ಆರಂಭದಲ್ಲೇ ತುಸು ಹೆಚ್ಚಳ ಕಂಡ ಆಭರಣದ ದರ

(ನ್ಯೂಸ್‌ ಕಡಬ) newskadaba.com,ಜ.01 ಬೆಂಗಳೂರು: ಡಿಸೆಂಬರ್ ಕೊನೆ ವಾರದಲ್ಲಿ ಇಳಿಕೆಯಾದ ಚಿನ್ನದ ಬೆಲೆ, 2026 ರ ವರ್ಷಾರಂಭದಲ್ಲೇ ಇಂದು ಮತ್ತೆ ಹೆಚ್ಚಳ ಕಂಡಿದೆ. ಶುದ್ಧ ಚಿನ್ನದ ಇಂದಿನ ದರ ಜನವರಿ 1 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13,506 ರೂಪಾಯಿ ಇದ್ದು, ಇಂದು 17 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,35,060 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 170 ರೂಪಾಯಿ

ಹೊಸ ವರ್ಷದ ಆರಂಭದಲ್ಲೇ ತುಸು ಹೆಚ್ಚಳ ಕಂಡ ಆಭರಣದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಜ ಬಾಡಿಗೆ ಮನೆಯಲ್ಲಿದ್ದ ದಂಪತಿಗಳ ಬಂಧನ:ಪುತ್ತೂರಿನಲ್ಲಿ ದರೋಡೆ ಯತ್ನ ಪ್ರಕರಣ ಸಿ.ಸಿ ಕ್ಯಾಮೆರಾ ದಾಖಲೆ ಆಧರಿಸಿ ಆರೆಸ್ಟ್ ಮುಂಡೂರು ಮೂಲದ ಆರೋಪಿಗಳು

(ನ್ಯೂಸ್‌ ಕಡಬ) newskadaba.com,ಜ.01 ಮಂಗಳೂರು: ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ ಪ್ರಕರಣ ಸಂಬಂಧಿಸಿ ಪುರೋಹಿತ ಕೆಲಸ ಮಾಡುವ ಅರ್ಚಕ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು

ಪಂಜ ಬಾಡಿಗೆ ಮನೆಯಲ್ಲಿದ್ದ ದಂಪತಿಗಳ ಬಂಧನ:ಪುತ್ತೂರಿನಲ್ಲಿ ದರೋಡೆ ಯತ್ನ ಪ್ರಕರಣ ಸಿ.ಸಿ ಕ್ಯಾಮೆರಾ ದಾಖಲೆ ಆಧರಿಸಿ ಆರೆಸ್ಟ್ ಮುಂಡೂರು ಮೂಲದ ಆರೋಪಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ

(ನ್ಯೂಸ್‌ ಕಡಬ) newskadaba.com, ಜ.01  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ ಹೆಗ್ಡೆ ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷದ ಆರಂಭದಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ

(ನ್ಯೂಸ್‌ ಕಡಬ) newskadaba.com, ಜ.01 : ಹೊಸ ವರ್ಷದ ಮೊದಲ ದಿನವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಗೃಹ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ನವೀಕರಿಸಲಾಗಿದೆ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1580.50 ರೂ.ಗಳ ಬದಲಿಗೆ 1691.50 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಈಗ 1795 ರೂ.ಗಳಿಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿಯೂ 111

ಹೊಸ ವರ್ಷದ ಆರಂಭದಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top