ಕರಾವಳಿ

ಮಂಗಳೂರು : ಜೈಲಿನಲ್ಲಿ ದಿಢೀರ್ ತಪಾಸಣೆ – 2 ಮೊಬೈಲ್, ಸಿಮ್ ಕಾರ್ಡ್ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.29:  ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜ ರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇವು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಇದೇ ದಿನ ಇಲಾಖೆಯ ಮುಖ್ಯಸ್ಥರಾದ ಮಾನ್ಯ ಅಲೋಕ್ ಕುಮಾರ್ ಐ.ಪಿ.ಎಸ್. ಮಹಾನಿರ್ದೇಶಕರು ಕರ್ನಾಟಕ ಕಾರಾಗೃಹ ಮತ್ತು […]

ಮಂಗಳೂರು : ಜೈಲಿನಲ್ಲಿ ದಿಢೀರ್ ತಪಾಸಣೆ – 2 ಮೊಬೈಲ್, ಸಿಮ್ ಕಾರ್ಡ್ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,ಡಿ.30  ಬಂಟ್ವಾಳ: ಕಡು ಬಡವರಿಗೆ ಆಶಾದೀಪವಾಗಿರುವ ಯುವ ಉದ್ಯಮಿ ರೊನಾಲ್ಡ್ ಮಾರ್ಟೀಸ್ ನೇತೃತ್ವದಲ್ಲಿ ಸಜೀಪ ದಸರಾ ಶತಮಾನೋತ್ಸವ ಸಮಿತಿಯ ವತಿಯಿಂದ ಹಾಗೂ ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಶ್ರೀ ಶಾರದಾ ಪೂಜಾ ಮಹೋತ್ಸವ ಸುಭಾಷ್ ಯುವಕ ಮಂಡಲ (ರಿ.) ಸುಭಾಷ್ ನಗರ ಹಾಗೂ ಶಾರದಾ ಪೂಜಾ ಮಹೋತ್ಸವದ 100ನೇ ವರ್ಷದ ಸಜೀಪ ದಸರಾ ಮಹೋತ್ಸವದ ಅಂಗವಾಗಿ ಅಸಹಾಯಕರಿಗೆ “ಆಸರೆ ಯೋಜನೆ” ಅಡಿಯಲ್ಲಿ ಬಂಟ್ವಾಳ ತಾಲೂಕಿನ ಸಜೀಪಮೂಡ

ಬಂಟ್ವಾಳ : ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುಷ್ಪರಥವಾಗಿ ರೂಪಾಂತರಗೊಂಡು ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಬಂದ ಹಳೆರಥ

(ನ್ಯೂಸ್‌ ಕಡಬ) newskadaba.com,ಡಿ.30 :ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಕಳೆದ ವರ್ಷ ಡಾ.ಕೆ.ವಿ.ಚಿದಾನಂದರು ನೂತನ ಬ್ರಹ್ಮರಥ ಕೊಡುವವರೆಗೆ ಚಿನ್ನಕೇಶವ ದೇವರ ರಥವಾಗಿ ಜಾತ್ರೆಯ ಸಮಯದಲ್ಲಿ ಎಳೆಯಲ್ಪಡುತ್ತಿದ್ದ ಹಳೆಯ ರಥವು ಈಗ ಪುಷ್ಪರಥವಾಗಿ ರೂಪಾಂತರಗೊಂಡು ಮತ್ತೆ ಚೆನ್ನಕೇಶವ ದೇವಸ್ಥಾನಕ್ಕೆ ಬಂದಿದೆ. ಕಳೆದ ವರ್ಷ ನೂತನ ಬ್ರಹ್ಮರಥ ಸುಳ್ಯಕ್ಕೆ ಬರುವ ಮೊದಲು ಹಳಿರಥವನ್ನು ಕುಂದಾಪುರಕ್ಕೆ ಕೊಂಡೊಯ್ದು ಕೋಟೇಶ್ವರದಲ್ಲಿರುವ ರಥ ಶಿಲ್ಪಿ ರಾಜಗೋಪಾಲಾಚಾರ್ಯರ ಪಕ ನೀಡಲಾಗಿತ್ತು. ಅದನ್ನು ಕಿರಿದುಗೊಳಿಸಿ. ದೇವಸ್ಥಾನದ ಒಳಭಾಗದಲ್ಲಿ ಭಕ್ತರ ಪುಸ್ತರದ ಸೇವೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿತ್ತು. ಅದನ್ನು ಕಿರಿದುಗೊಳಿಸಿ

ಪುಷ್ಪರಥವಾಗಿ ರೂಪಾಂತರಗೊಂಡು ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಬಂದ ಹಳೆರಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರ್ಷಾಂತ್ಯದ ಕೊಡುಗೆಗಳು

(ನ್ಯೂಸ್‌ ಕಡಬ) newskadaba.com,ಡಿ.30 :ಸುಳ್ಯ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಲ್ ಆಚಾರ್ಯ ಜ್ಯುವೆಲ್ಲರ್ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ. ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ.25 ರಿಂದ ಪ್ರಾರಂಭವಾಗಿದ್ದು, ಡಿ.31ರ ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 9482383606 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಸಂಸ್ಥೆಯಲ್ಲಿ ಗೊ ಫೆಸ್ಟ್

ಸುಳ್ಯ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರ್ಷಾಂತ್ಯದ ಕೊಡುಗೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.30:  ಮುಂದಿನ 3 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಕಂಬಳದಲ್ಲಿ ದಾಖಲೆ ಸೃಷ್ಟಿಸಿದ ಕೋಣಗಳು: ಓಡಿಸಿದ ಮಾಸ್ತಿಕಟ್ಟೆ ಸ್ವರೂಪ್‌ ಕೂಡಾ ಸಾರ್ವತ್ರಿಕ ದಾಖಲೆ

(ನ್ಯೂಸ್‌ ಕಡಬ) newskadaba.com,ಡಿ.29 ಮಂಗಳೂರು: ಬಂಗ್ರ ಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿಯಲ್ಲಿ ನಡೆದ ರಾಮ – ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳ ಕೂಟ ಭಾನುವಾರ ಸಮಾರೋಪಗೊಂಡಿದ್ದು, ನೇಗಿಲು ಹಿರಿಯ ವಿಭಾಗದ ಫೈನಲ್‌ ಸ್ಪರ್ಧೆಯಲ್ಲಿ 80 ಬಡಗಬೆಟ್ಟು ಶ್ರೀಕ ಸಂದೀಪ್‌ ಶೆಟ್ಟಿ ಅವರ ಕೋಣಗಳು 125 ಮೀ. ಉದ್ದದ ಕಂಬಳ ಕರೆಯನ್ನು ಕೇವಲ 10.87 ಸೆಕೆಂಡ್‌ನಲ್ಲಿ ತಲುಪಿ ನೂತನ ದಾಖಲೆ ನಿರ್ಮಿಸಿದವು. ಈ ದಾಖಲೆಯನ್ನು 100 ಮೀ.ಗೆ ಪರಿಗಣಿಸಿದಾಗ 8.69 ಸೆಕೆಂಡ್‌ಗಳ ದಾಖಲೆ ಎಂದು ಪರಿಗಣಿಸಲಾಗುತ್ತದೆ. ‘ಗಾಂಧಿ ಮೈದಾನ

ಮಂಗಳೂರು ಕಂಬಳದಲ್ಲಿ ದಾಖಲೆ ಸೃಷ್ಟಿಸಿದ ಕೋಣಗಳು: ಓಡಿಸಿದ ಮಾಸ್ತಿಕಟ್ಟೆ ಸ್ವರೂಪ್‌ ಕೂಡಾ ಸಾರ್ವತ್ರಿಕ ದಾಖಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ

(ನ್ಯೂಸ್‌ ಕಡಬ) newskadaba.com,ಡಿ.29 ಮಂಗಳೂರು: ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ರೈಲ್ವೆ ಮಾರ್ಗವಾಗಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನು ರೈಲ್ವೆ ಇಲಾಖೆ ಪೂರ್ಣಗೊಳಿಸಿದ್ದು, ಪ್ರಯೋಗಾತ್ಮಕವಾಗಿ ವಿದ್ಯುತ್ ಲೋಕೊಮೋಟಿವ್ ಚಾಲನೆಯನ್ನು ಭಾನುವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ಕೆಲಸವಾಗಿರುವ ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಲೋ ಮೀಟರ್​ ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ

(ನ್ಯೂಸ್‌ ಕಡಬ) newskadaba.com,ಡಿ.29 ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ  ವಿವಿಧ ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಟಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 501 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 12 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ iocl.com ಅಥವಾ ಅಪ್ರೆಂಟಿಸ್‌ಶಿಪ್ ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಡಿ.29 ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ದೂರು ದಾಖಲಾಗಿದೆ… ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್ಕೇಸ್ ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ ಹತ್ತಿರ ಇರಿಸಿ ರಾತ್ರಿ ಮಲಗಿದ್ದರು. ಡಿ.27ರಂದು ಬೆಳಗ್ಗೆ 6.10ರ ಸುಮಾರಿಗೆ ಮುರ್ಡೇಶ್ವರ

ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪಥ ಸಮಾರೋಪ

(ನ್ಯೂಸ್‌ ಕಡಬ) newskadaba.com,ಡಿ.29:  ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಣ ಮಕ್ಕಳಲ್ಲಿ ವ್ಯಕ್ತಿತ್ವವನ್ನು ರೂಪಿಸುತ್ತವೆ. ಅಂದಿನ ದಿನ ಈ ಶಾಲೆಯ ನಿರ್ಮಾಣದಲ್ಲಿ ಅನೇಕರ ಬೆವರ ಹನಿಯಿದೆ. ಇಲ್ಲಿ ಕಲಿತವರು ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದ್ದಾರೆ. ಅನೇಕ ಉನ್ನತ ಉದ್ಯೋಗ, ಹುದ್ದೆಗಳಲ್ಲಿದ್ದಾರೆ. ಅದ್ಭುತ ಪಥ ಅಭಿವೃದ್ಧಿ ಪಥವಾಗಲಿ ಎಂದು ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಬ್ರಾಯ ಚೊಕ್ಕಾಡಿ ಹೇಳಿದರು. ಅವರು ಡಿ.28 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕರ್ನಾಟಕ ಸರಕಾರದ ಕನಿಷ್ಠ

ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪಥ ಸಮಾರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top