ಕರಾವಳಿ

ಸುಳ್ಯ: ರಸ್ತೆ ಬದಿ ಕಸ ಎಸೆದ ವಿದ್ಯಾರ್ಥಿಗಳು; ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಕರು

(ನ್ಯೂಸ್‌ ಕಡಬ) newskadaba.com,  ಡಿ.15:  ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಕಸ ಎಸೆದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆ ಶಾಲೆಯ ಶಿಕ್ಷಕರು ಸ್ಥಳೀಯ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ, ತಾವೇ ಖುದ್ದಾಗಿ ಬಂದು ತ್ಯಾಜ್ಯವನ್ನು ತೆರವುಗೊಳಿಸಿ ದಂಡ ಪಾವತಿಸುವುದಾಗಿ ಭರವಸೆ ನೀಡಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಡಿಸೆಂಬರ್ 12 ರಂದು ಬೆಳಿಗ್ಗೆ, ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿ ತಾಲೂಕಿನ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳು ಊಟದ ನಂತರ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುವ ಬದಲು ರಸ್ತೆ ಬದಿಯಲ್ಲಿ […]

ಸುಳ್ಯ: ರಸ್ತೆ ಬದಿ ಕಸ ಎಸೆದ ವಿದ್ಯಾರ್ಥಿಗಳು; ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಕರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!…

(ನ್ಯೂಸ್‌ ಕಡಬ) newskadaba.com,  ಡಿ.15 : ರಾಜ್ಯದಲ್ಲಿ ಬೆಂಗಳೂರಿನಿಂದಾಚೆಗೆ ಮಾದಕ ದ್ರವ್ಯದ ಮಾರಕ ಜಾಲ ದೊಡ್ಡಮಟ್ಟದಲ್ಲಿ ವಿಸ್ತರಿಸಿರುವುದು ಮಂಗಳೂರಿನಲ್ಲಿ. ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!. ಆದರೆ, ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯ ಇಡೀ ಪೊಲೀಸ್‌ ಇಲಾಖೆ ಡ್ರಗ್ಸ್‌ ವಿರುದ್ಧ ಆಖಾಡಕ್ಕಿಳಿದು ನೇರ ಸಮರಕ್ಕೆ ಧುಮುಕಿದ್ದು, ಡ್ರಗ್ಸ್‌ ಪೆಡ್ಲರ್‌ಗಳಲ್ಲಿ ನಡುಕ ಹುಟ್ಟಿಸಿದೆ. ಈ ಕಾರಣದಿಂದ ದೊಡ್ಡಮಟ್ಟದ ಧನಾತ್ಮಕ ಬದಲಾವಣೆ ಜಿಲ್ಲೆಯಲ್ಲಿ ಕಂಡು ಬಂದಿದೆ.ಆದರೆ, ಕಳೆದೊಂದು ದಶಕದಿಂದ ವಿಸ್ತಾರವಾಗಿ ಚಾಚಿಕೊಂಡಿರುವ ಮಾದಕ ದ್ರವ್ಯದ

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!… Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಡಿ.15 ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ-ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಜಪೆ ಠಾಣಾ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.ಮಂಗಳೂರು, ಉಳಾಯಿಬೆಟ್ಟು, ಕೊಟ್ಟಾನ ಹೌಸ್ ನ ಪ್ರಸ್ತುತ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು, ಸಜಿಪಮುನ್ನೂರು ಗ್ರಾಮದ ಸೌದಿ ಅರೆಬಿಯಾದಲ್ಲಿರುವ ಅಬ್ದುಲ್ ಖಾದರ್ ನೇಹಾದ್ (27) ಆರೋಪಿಯಾಗಿರುತ್ತಾನೆ. ಇದೇ ಅಕ್ಟೋಬರ್ 11ರಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ  _sdpi_2025_ID ಎಂಬ ಖಾತೆಯಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜಪೆ ಪೊಲೀಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು

(ನ್ಯೂಸ್‌ ಕಡಬ) newskadaba.com,  ಡಿ.13: ಕೇರಳ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ರಾಜಧಾನಿ ತಿರುವನಂತಪುರಂ ಕಾರ್ಪೋರೇಶನ್‌ನಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದೆ. ಸುಮಾರು 45 ವರ್ಷಗಳಿಂದ ಎಲ್‌ಡಿಎಫ್ (ಕಮ್ಯೂನಿಸ್ಟ್) ಹಿಡಿತದಲ್ಲಿದ್ದ ಕಾರ್ಪೋರೇಶನ್‌ನ್ನು ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ ನಿರ್ಮಿಸಿದೆ. ತಿರುವನಂತಪುರಂ ಕಾರ್ಪೋರೇಶನ್‌ನ 101 ಸ್ಥಾನಗಳ ಪೈಕಿ 100 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಒಂದು ಸ್ಥಾನದಲ್ಲಿ ಅಭ್ಯರ್ಥಿ ನಿಧನರಾದ ಹಿನ್ನೆಲೆಯಲ್ಲಿ ಮತದಾನ ಮುಂದೂಡಲಾಗಿತ್ತು. ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 50 ಸ್ಥಾನಗಳನ್ನು

ಕೇರಳ ರಾಜಧಾನಿಯಲ್ಲಿ ಬಿಜೆಪಿ ಗೆಲುವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಡಿ.13 ಉಪ್ಪಿನಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಜ್ಯೋತಿಷಿಯೊಬ್ಬ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ.ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಶೇಷಗಿರಿ ಭಟ್ ಆರೋಪಿ ಜ್ಯೋತಿಷಿ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ತೆಕ್ಕಾರಿನ ಯುವತಿಯೊಬ್ಬಳ ಜಾತಕ ಪರಿಶೀಲಿಸಲು ಆಕೆಯ ಮನೆಯವರು ಶೇಷಗಿರಿ ಭಟ್ ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವಿಚಾರವಾಗಿ

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13 ಉಡುಪಿ: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

10th ಪಾಸಾದವರಿಗೆ 946 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.13 ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ 946 ಅಂಗನವಾಡಿ ಗೌರವಧನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಸಮಾಜದ ಕಲ್ಯಾಣಕ್ಕೆ ಮಹತ್ವದ ಪಾತ್ರ ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ತುಮಕೂರು ಜಿಲ್ಲೆಯಲ್ಲಿ ಸಿಹಿಸುದ್ದಿ ಪ್ರಕಟಗೊಂಡಿದೆ. ಮುಖ್ಯವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಒಟ್ಟು 946 ಗೌರವಧನ ಆಧಾರಿತ ಸೇವಾ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಈ ನೇಮಕಾತಿಯಲ್ಲಿ 117 ಅಂಗನವಾಡಿ

10th ಪಾಸಾದವರಿಗೆ 946 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಪ್ರೆಸ್ ಕ್ಲಬ್ ವರ್ಷದ ಸಾಧಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.13 ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‍ನಿಂದ ದ.ಕ. ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್‍ನ 2025ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಸಾಮಾಜಿಕ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪರೂಪದ, ಅನುಪಮ ಸಾಧನೆಗೈದ ದ.ಕ. ಜಿಲ್ಲೆಯ ಸಾಧಕರನ್ನು ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಶಿಫಾರಸು ಮಾಡಬಹುದಾಗಿದೆ. ಈವರೆಗೂ ಪ್ರಶಸ್ತಿ ಪಡೆಯದ ಎಲೆಮರೆಯ ಕಾಯಿಯಂತಿರುವ ಹಿರಿಯ ಸಾಧಕರಿಗೆ ಆದ್ಯತೆ ನೀಡಲಾಗುತ್ತದೆ.ಶಿಫಾರಸಿನಲ್ಲಿ ಸಾಧಕರ ಹೆಸರು, ಫೆÇೀಟೋ , ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ

ಮಂಗಳೂರು : ಪ್ರೆಸ್ ಕ್ಲಬ್ ವರ್ಷದ ಸಾಧಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ತರುಣ ಸಾವು

(ನ್ಯೂಸ್‌ ಕಡಬ) newskadaba.com,  ಡಿ.13 : ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟ ವರು.ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಸ್ಥಳೀಯರು

ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ತರುಣ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ; ಶನಿವಾರ ಫಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com ಡಿ.12: ಕೇರಳದಲ್ಲಿ ನಡೆದಿರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣಾ ಫಲಿತಾಂಶ ಶನಿವಾರ ಹೊರ ಬೀಳಲಿದೆ. ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನದ ವೇಳೆಗೆ ಪೂರ್ಣ ಫಲಿತಾಂಶ ಹೊರ ಬೀಳಲಿದೆ. ಮತ ಎಣಿಕೆಗೆ 9 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಗುರುವಾರ ಕಾಸರಗೋಡು ಜಿಲ್ಲೆಯ 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. 74.89 ಶೇಕಡಾ ಮತದಾನವಾಗಿತ್ತು. 11,12,190 ಮತದಾರರಲ್ಲಿ 8,32,894 ಮಂದಿ ಹಕ್ಕು ಚಲಾಯಿಸಿದ್ದರು. ಈ ಪೈಕಿ 3,75,959 ಮಂದಿ ಪುರುಷರು, 4,56,933 ಮಹಿಳೆಯರು

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ; ಶನಿವಾರ ಫಲಿತಾಂಶ ಪ್ರಕಟ Read More »

ಕರಾವಳಿ
Scroll to Top