ಕರಾವಳಿ

ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ

(ನ್ಯೂಸ್‌ ಕಡಬ) newskadaba.com,  ನ.14:   ಕಬ್ಬಿಗೆ ಸೂಕ್ತ ಬೆಂಬಲ ಬೆಲೆಗೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕಬ್ಬು ತುಂಬಿದ್ದ ಟ್ರಾಕ್ಟರ್‌ ಟ್ರ್ಯಾಲಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಮಹಲಿಂಗಪುರ ಪೊಲೀಸ್‌‍ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಹಿಂಸಾಚಾರಕ್ಕೆ ಕಾರಣವಾಗಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸರು ಶೋಧ ನಡೆಸುತ್ತಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ.ಮುಧೋಳ ತಾಲ್ಲೂಕಿನಾದ್ಯಂತ ಮೂರು ದಿನ ನಿಷೇದಾಜ್ಞೆ […]

ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ Read More »

ಕರಾವಳಿ

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ನ.14:   ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಗುರುವಾರ ರಾತ್ರಿ ನಡೆದಿದೆ. ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದಾರೆ. ಕೋಜಿಕ್ಕೋಡ್ ನಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಲಾರಿ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಲಾರಿ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ

ಕಾಸರಗೋಡು: ಟಯರ್ ಸ್ಪೋಟಗೊಂಡು ರಸ್ತೆ ಮಗುಚಿ ಬಿದ್ದ ಲಾರಿ; ಚಾಲಕ ಪಾರು Read More »

ಕರಾವಳಿ

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ನ.14:  ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ. ಮೂಡಬಿದಿರೆಯ ಕಾಲೇಜೊಂದರ ಕ್ಯಾಂಟೀನ್‌ನಲ್ಲಿ ಜೊತೆಗೆ ಕೆಲಸ ಮಾಡಿಕೊಂಡಿರುವ ಚೇತನ್ (22) ಮತ್ತು ಚಿದಾನಂದ ಎಂಬವರಿಗೆ ಗೆ ಕ್ಯಾಂಟೀನ್ ನಲ್ಲಿ ಕೆಲಸದ ವಿಚಾರದಲ್ಲಿ ಮತ್ತು ವೈಯುಕ್ತಿಕ ವಿಚಾರದಲ್ಲಿ ಪರಸ್ಪರ ತಕರಾರು ನಡೆದಿತ್ತು. ಆರೋಪಿ

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ

ಕಾರ್ಕಳದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕರಾಟೆಯಲ್ಲಿ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆ

(ನ್ಯೂಸ್‌ ಕಡಬ) newskadaba.com,  ನ.13 ಕಾರ್ಕಳ: ಕಾರ್ಕಳದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಸುಧೀಕ್ಷಾ ಅವರು ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆಯುವ ಮೂಲಕ ತಮ್ಮ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ಸ್ಪರ್ಧೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಉಪನಿರ್ದೇಶಕರ ಕಚೇರಿ, ದಾವಣಗೆರೆಯ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ದಾವಣಗೆರೆಯ ಮಾಗನಹಳ್ಳಿ ಫಾತಃ ಕನ್ನಡ ಮತ್ತು ಉರ್ದು ಪ್ರಾಥಮಿಕ ಶಾಲೆಯಲ್ಲಿ 14 ವರ್ಷದೊಳಗಿನ ಬಾಲಕಿಯರ 50

ಕಾರ್ಕಳದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕರಾಟೆಯಲ್ಲಿ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗೆ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕುತ್ಲೂರು ಚಿನ್ನಾಭರಣ ಕಳವು ಪ್ರಕರಣ; ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

(ನ್ಯೂಸ್‌ ಕಡಬ) newskadaba.com,  ನ.13: ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಮಂಜುಶ್ರೀ ನಗರದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಮುಂಬಾಗಿಲ ಬೀಗ ಮುರಿದು ಸುಮಾರು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕುಖ್ಯಾತ ಅಂತಾರಾಜ್ಯ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ (71) ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 11ರ ರಾತ್ರಿ ಪಿಎಸ್‌ಐ ಓಮನ ಮತ್ತು ಅವರ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ಅನುಮಾನಾಸ್ಪದವಾಗಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯನ್ನು ತಡೆದು ನಿಲ್ಲಿಸಿದ್ದರು. ಆತನ ದಾಖಲೆಗಳನ್ನು

ಬೆಳ್ತಂಗಡಿ: ಕುತ್ಲೂರು ಚಿನ್ನಾಭರಣ ಕಳವು ಪ್ರಕರಣ; ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ

(ನ್ಯೂಸ್‌ ಕಡಬ) newskadaba.com,  ನ.13 ಬೆಳ್ತಂಗಡಿ: ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ.ನಾರವಿ ಗ್ರಾಮದ ಕುತ್ತೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ ಅ.2 ರಿಂದ ಅ.6ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಗೆ ಸಬ್ ಇನ್ಸೆಕ್ಟರ್ ಓಮನ ಮತ್ತು

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

(ನ್ಯೂಸ್‌ ಕಡಬ) newskadaba.com,  ನ.13: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಬಾಲಕಿಯೊಬ್ಬಳು ನವೆಂಬರ್ 12ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಮಗಳು ಹರ್ಷಿತಾ (15) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತಾ ಅವರು, ನವೆಂಬರ್ 4ರಂದು ತಲೆನೋವು ಎಂದು ಶಾಲೆಗೆ ರಜೆ ಹಾಕಿ ಮನೆಯಲ್ಲಿದ್ದಳು. ಈ ವೇಳೆ ಮನೆಯಲ್ಲಿ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದ ಅವಳನ್ನು ತಕ್ಷಣವೇ ತಾಯಿ

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು Read More »

ಕರಾವಳಿ

ಉಪ್ಪಿನಂಗಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.13 ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಬಾಲಕಿಯೊಬ್ಬಳು ನವೆಂಬರ್ 12ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.ಮೃತ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಮಗಳು ಹರ್ಷಿತಾ (15) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತಾ ಅವರು, ನವೆಂಬರ್ 4ರಂದು ತಲೆನೋವು ಎಂದು ಶಾಲೆಗೆ ರಜೆ ಹಾಕಿ ಮನೆಯಲ್ಲಿದ್ದಳು. ಆ ಸಂಧರ್ಭದಲ್ಲಿ ಮನೆಯಲ್ಲಿ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದ ಅವಳನ್ನು ತಕ್ಷಣವೇ

ಉಪ್ಪಿನಂಗಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: 21 ವರ್ಷದ ವಿದ್ಯಾರ್ಥಿ ಕಣ್ಮರೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.13 ಮಂಗಳೂರು : ಕಾಸರಗೋಡು ನಿವಾಸಿ ಸಲೀಂ ಕೆ.ಎಂ ಅವರ ಪುತ್ರ ಮೊಹಮ್ಮದ್ ಶಮೀಲ್ (21) ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಳ್ಳಾಲದ ಖಾಸಗಿ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಷರೀಫ್ (58) ಏಪ್ರಿಲ್ 18, 2018 ರಂದು ಸಲ್ಲಿಸಿದ ದೂರಿನ ಪ್ರಕಾರ, ಶಮೀಲ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ನಾಪತ್ತೆಗೂ ಮುಂಚಿತವಾಗಿ ಕೊನೆಯ ಬಾರಿಗೆ ಏಪ್ರಿಲ್ 17, 2018 ರಂದು ಬೆಳಿಗ್ಗೆ 11:34 ರ ಸುಮಾರಿಗೆ ಕಾಲೇಜು ಆವರಣಕ್ಕೆ ಭೇಟಿ

ಮಂಗಳೂರು: 21 ವರ್ಷದ ವಿದ್ಯಾರ್ಥಿ ಕಣ್ಮರೆ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ

(ನ್ಯೂಸ್‌ ಕಡಬ) newskadaba.com,  ನ.12 :NEEPCO ಕಾರ್ಯನಿರ್ವಾಹಕ ತರಬೇತಿ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್ 17 ರವರೆಗೆ ಅರ್ಜಿ ಸಲ್ಲಿಸಬಹುದು. ಎಂಜಿನಿಯರಿಂಗ್, ಸಿವಿಲ್ ಮತ್ತು ಐಟಿ ಮುಂತಾದ ತಾಂತ್ರಿಕ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಈ ನೇಮಕಾತಿ ಒಂದು ಸುವರ್ಣಾವಕಾಶವಾಗಿದೆ.. ಈ ನೇಮಕಾತಿಗಾಗಿ ಒಟ್ಟು 30 ಹುದ್ದೆಗಳನ್ನು ಘೋಷಿಸಲಾಗಿದ್ದು, ಇದರಲ್ಲಿ ಎಲೆಕ್ಟ್ರಿಕಲ್/ಮೆಕ್ಯಾನಿಕಲ್‌ಗೆ 18, ಸಿವಿಲ್‌ಗೆ 10 ಮತ್ತು ಐಟಿಗೆ 2 ಹುದ್ದೆಗಳು ಸೇರಿವೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣ

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top