ಕರಾವಳಿ

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ

(ನ್ಯೂಸ್‌ ಕಡಬ) newskadaba.com,  ಸೆ.20 ಕುಂದಾಪುರ: ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು ಬೆಳಗ್ಗೆ ಕೋಡಿ ಬೆಂಗ್ರೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಧ್ಯಾಹ್ನ ಹಂಗಾರಕಟ್ಟೆ ಬಂದರು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತಗೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಇಂಜಿನ್ ಪುನಃ ಆರಂಭಗೊಂಡಿಲ್ಲ. ಈ ನಡುವೆ, ಬಿರುಗಾಳಿ ಮತ್ತು ಅಲೆಗಳ ರಭಸಕ್ಕೆ ಬೋಟ್ ಸಮುದ್ರ ತೀರಕ್ಕೆ ಬಂದು ಕೋಡಿ ಕನ್ಯಾನ ಗ್ರಾಮದ ಕೋಡಿ ಸಮೀಪ […]

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಸೆ.20  ಬೆಳ್ತಂಗಡಿ: ಕೊಯ್ಯೂರು ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 3 ವರ್ಷಗಳ ಕಠಿಣ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 2024ರ ಡಿಸೆಂಬರ್ 9 ರಂದು ಕೊಯ್ಯೂರು ಗ್ರಾಮದಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಉಮೇಶ್ ಗೌಡ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದನು. ಈ ಸಂಬಂಧ ಆರೋಪಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಅದೇ ದಿನ

ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ : ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು

(ನ್ಯೂಸ್‌ ಕಡಬ) newskadaba.com,  ಸೆ.20  ಕಾರ್ಕಳ : ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳ ತಾಲ್ಲೂಕು ತಂಡವನ್ನು ಪ್ರತಿನಿಧಿಸಿದ್ದ ಕಾರ್ಕಳದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸೈಂಟ್ ಮೇರಿ ಪಿ.ಯು. ಕಾಲೇಜು, ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯು ನಡೆಯಿತು. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ರವಿನಾ ಕನ್ವರ್ ಮತ್ತು ಪ್ರಥಮ ವಾಣಿಜ್ಯ ವಿಭಾಗದ ಸುಪ್ರಭಾ ರನ್ನರ್-ಅಪ್ ಸ್ಥಾನ ಪಡೆದಿದ್ದಾರೆ.

ಕಾರ್ಕಳ : ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.20 ಬೆಳ್ತಂಗಡಿ : ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್‌ಸಿ ರಸ್ತೆಯ ಬಳಿ, ಕೆಎಸ್‌ಆರ್‌ಟಿಸಿ  ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಮೃತಪಟ್ಟದ್ದಾನೆ.. ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಸೆ.20 ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೆರ್ಪೆಯಲ್ಲಿ ಅಸಮರ್ಪಕವಾಗಿ ನಡೆಯುತ್ತಿರುವ ನಗರ ಪಂಚಾಯತಿ ಕಸ ವಿಲೇವಾರಿ ಘಟಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಕಲ್ಚೆರ್ಪೆ ಸಮೀಪದ ಜನರು ಒತ್ತಾಯಿಸಿದ್ದಾರೆ. ಒಂದು ವೇಳೆ ತಪ್ಪಿದಲ್ಲಿ ಸುಳ್ಯ ನಗರ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಸ್ಥಳೀಯರು ಎಚ್ಚರಿ ನೀಡಿದ್ದಾರೆ. ಸುಮಾರು 6 ತಿಂಗಳ ಹಿಂದೆ ಶಾಸಕರ ಮತ್ತು ನಗರ ಪಂಚಾಯತ್ ಆಡಳಿತ ಮಂಡಳಿಯವರ

ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಸೆ.19 ಮಂಗಳೂರು : ನಗರದ ಸ್ಟೇಟ್‌ಬ್ಯಾಂಕ್ ಹತ್ತಿರ ವ್ಯಕ್ತಿಯೊಬ್ಬ ಟ್ರಾಫಿಕ್‌ನಲ್ಲಿ ಕರ್ತವ್ಯನಿರತ ಹೆಡ್‌ಕಾನ್‌ ಸ್ಟೇಬಲ್‌ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಟೇಟ್‌ಬ್ಯಾಂಕ್ ವೃತ್ತದ ಬಳಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಟ್ರಾಫಿಕ್ ಎಚ್‌ಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಸ್ಕೂಟರ್ ಸವಾರ ನಾಟೆಕಲ್‌ನ ಆಸಿಫ್ ಬಾವ ಎಂಬಾತ ಅದನ್ನು ಲೆಕ್ಕಿಸದೆ ಸ್ಕೂಟರ್ ಚಲಾಯಿಸಿದ್ದು, ಈ ಸಂದರ್ಭ ಎಚ್‌ಸಿ ಸ್ಕೂಟರ್ ಸವಾರನಿಗೆ ಏಯ್ ಅಂತ ಹೇಳಿ ಕೈಯಿಂದ

ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಳ್ತಂಗಡಿ :  ಚಿಕ್ಕಮಗಳೂರು ಮತ್ತು ಕರಾವಳಿಯನ್ನು ಸಂಪರ್ಕಿಸುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ವಿಭಾಗದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ವಾಹನಗಳಿಗೆ ಹೊಸ ಸಂಚಾರ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ, ರಾತ್ರಿ ಪ್ರಯಾಣಿಸುವ ವಾಹನಗಳನ್ನು ಇನ್ನು ಮುಂದೆ ಪ್ರತ್ಯೇಕವಾಗಿ ಅಥವಾ ಜೋಡಿಯಾಗಿ ಸಾಗಲು ಬಿಡುವುದಿಲ್ಲ. ಕನಿಷ್ಠ 5 ವಾಹನಗಳು ಗುಂಪಾಗಿ ಬಂದ ನಂತರವೇ ಅವುಗಳಿಗೆ ಮುಂದುವರಿಯಲು ಅನುಮತಿ ನೀಡಲಾಗುತ್ತದೆ. ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ, ರಾತ್ರಿ ಸಮಯದಲ್ಲಿ

ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ – ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸೆರೆ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು :  ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಅಲಿ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ

ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ – ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು : ಮುಲ್ಕಿ ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ, ನಿವೃತ್ತ ಉಪನ್ಯಾಸಕ ಡಾ.. ವಸಂತ ಮಾಧವ (88) ಅವರು ಬುಧವಾರ ರಾತ್ರಿ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಪ್ರೊ. ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ)ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ :

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು: ಕಂಬಳದ ಹಿರಿಯ ಓಟಗಾರರಾದ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು ಪಡೆದಿದ್ದರು. ಬಾಲ್ಯದಿಂದಲೂ ಇವರು ಕಂಬಳ ಕ್ಶೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದರು. ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಗೊಂಡಿದ್ದು, ಕಂಬಳ ಓಟಗಾರರಾಗಿ ಹಲವಾರು ಪ್ರಶಸ್ತಿಯನ್ನು ಶೆಟ್ಟಿಯವರು ಪಡೆದಿದ್ದಾರೆ. ಇತ್ತೀಚೆಗೆ ನಡೆದ ಕಂಬಳದಲ್ಲಿ ಹಿರಿಯ ಕಂಬಳ ಓಟಗಾರ ಎಂಬ ಗೌರವಕ್ಕೂ ಪಾತ್ರದಾಗಿದ್ದರು. ಭಾಸ್ಕರ ಶೆಟ್ಟಿಯವರು ಇದೀಗ

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top