ಕರಾವಳಿ

ಪ್ರತಿಭಾವಂತ ನಟ, ಕಲಾನಿರ್ದೇಶಕ ದಿನೇಶ್ ಮಂಗಳೂರು ನಿಧನ

(ನ್ಯೂಸ್‌ ಕಡಬ) newskadaba.com, ಆ.25: ಕೆ.ಜಿ.ಎಫ್ ಸಹಿತ ಅನೇಕ‌ ಸಿನಿಮಾಗಳ ಪ್ರತಿಭಾನ್ವಿತ ನಟ, ಸುಪ್ರಸಿದ್ಧ ಕಲಾನಿರ್ದೇಶಕ ಹಾಗೂ ಹೃದಯವಂತರಾದ ದಿನೇಶ್ ಮಂಗಳೂರು ಭಾನುವಾರದಂದು ಬೆಳಗಿನ ಜಾವ ಮೂರೂವರೆ ಗಂಟೆಗೆ ವಿಧಿವಶರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು. ದಿನೇಶ್ ಮಂಗಳೂರು ಅವರು ಕಳೆದ ಐದು ದಿನಗಳಿಂದ ಬ್ರೇನ್ ಹ್ಯಾಮರೇಜ್‌ನಿಂದ ಕುಂದಾಪುರದ ಸರ್ಜನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಅಸ್ತಮಿಸಿದ್ದಾರೆ. ಅವರ ಅಕಾಲಿಕ ನಿಧನದಿಂದ ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ದುಃಖದ ಛಾಯೆ ಆವರಿಸಿದೆ. ಹಳೆಯ-ಹೊಸ […]

ಪ್ರತಿಭಾವಂತ ನಟ, ಕಲಾನಿರ್ದೇಶಕ ದಿನೇಶ್ ಮಂಗಳೂರು ನಿಧನ Read More »

ಕರಾವಳಿ

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ.25 ಬಂಟ್ವಾಳ : ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ನಗರ ಪೊಲೀಸರು ದಾಳಿ ನಡೆಸಿ ಸುಮಾರು 80 ಸಾವಿರ ರೂ. ಮೌಲ್ಯದ 25 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಕಲ್ಲಡ್ಕ ಸಮೀಪದ ಪಟ್ಟೆಕೋಡಿಯಲ್ಲಿ ಶನಿವಾರ ನಡೆದಿರುತ್ತದೆ. ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಆರೋಪಿಗಳಾದ ಕಲ್ಲಡ್ಕ ನಿವಾಸಿಗಳಾದ ಉಗ್ರಾಣ ವ್ಯವಸ್ಥಾಪಕ ಉಮ್ಮರಬ್ಬ ಅಲಿಯಾಸ್ ಪುಟ್ಟುಮೋನು (47) ಮತ್ತು ಕಾರ್ಮಿಕ ರಫೀಕ್

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕರ್ನಾಟಕ ಗೃಹ ಸಚಿವ ಪರಮೇಶ್ವರ್ ರಿಂದ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸಾಧಕ ಯಶವಂತ್ ಎಂ.ಜಿ ಗೆ ಅಭಿನಂದನೆ

(ನ್ಯೂಸ್‌ ಕಡಬ) newskadaba.com, ಆ.25 ಉಡುಪಿ: ನಿರಂತರ 24 ಗಂಟೆಗಳ ಕಾಲ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ 270 ಕ್ಕೂ ಅಧಿಕ ಹಾಡುಗಳನ್ನು ಹಾಡಿ “ಗೋಲ್ಡನ್ ಬುಕ್ ಆಫ್ ರೆಕಾರ್ಡ್” ನಲ್ಲಿ ದಾಖಲೆ ರಚಿಸಿದ ವಿದ್ವಾನ್ ಯಶವಂತ್ ಎಂಜಿ ಇವರಿಗೆ ಕರ್ನಾಟಕ ಗೃಹ ಸಚಿವ ಡಾ ಪರಮೇಶ್ವರ್ ಅಭಿನಂದಿಸಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ವಿದುಷಿ ದೀಕ್ಷಾ ವಿ ಇವರ ನಿರಂತರ 216 ಗಂಟೆಗಳ ಭರತನಾಟ್ಯದ ವಿಶ್ವ ದಾಖಲೆಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯಶವಂತ್ ಎಂ.ಜಿ ಯವರನ್ನು ಭೇಟಿ ಮಾಡಿದ ಗೃಹ ಸಚಿವರು

ಉಡುಪಿ: ಕರ್ನಾಟಕ ಗೃಹ ಸಚಿವ ಪರಮೇಶ್ವರ್ ರಿಂದ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸಾಧಕ ಯಶವಂತ್ ಎಂ.ಜಿ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ!

(ನ್ಯೂಸ್‌ ಕಡಬ) newskadaba.com,ಆ.23 ಕಲಬುರಗಿ: ನಿರಂತರ ಮಳೆಗೆ ಸರ್ಕಾರಿ ಶಾಲೆಯ ಸೀಲಿಂಗ್ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೇಡಂ ತಾಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಕ್ಷಣವೇ ಗುರುಮಿಠಕಲ್ ತಾಲೂಕು ಆಸ್ಪತ್ರೆಗೆ ಗಾಯಗೊಂಡ ಮಕ್ಕಳನ್ನ ರವಾನಿಸಿದ್ದು, ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದ್ದಾರೆ. ನಿರಂತರ ಮಳೆಯಿಂದಾಗಿ ಶಾಲೆಯ ಸೀಲಿಂಗ್ ಕುಸಿದು ಬಿದ್ದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಇಬ್ಬರನ್ನು ಹೊರೋಗಿಗಳಾಗಿ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ. ಓರ್ವ ಬಾಲಕನ ತಲೆಗೆ ಗಾಯವಾಗಿದ್ದು, ಸ್ಕ್ಯಾನಿಂಗ್’ಗೆ ಒಳಪಡಿಸಲಾಗಿದೆ. 2

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ! Read More »

ಕರಾವಳಿ

ಮಂಗಳೂರು ವಿ.ವಿ: ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. 2025-26ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ವಿವಿಧ ಸ್ನಾತಕೋತ್ತರ/ಪಿ.ಜಿ ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಸಂಬಂಧಿಸಿದಂತೆ, ಸ್ನಾತಕೋತ್ತರ ವಿಭಾಗಗಳಲ್ಲಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳು ಇಲ್ಲಿ ಭರ್ತಿಯಾಗದೇ ಖಾಲಿ ಇರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿಯನ್ನು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ಮಾಡಲಾಗುತ್ತದೆ. UUCMS ಗೆ

ಮಂಗಳೂರು ವಿ.ವಿ: ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ ಪುತ್ತೂರು ಮತ್ತು ಮಂಜನಾಡಿ ಇಲ್ಲಿಗೆ ದೈಹಿಕ ಶಿಕ್ಷಕರ ಹುದ್ದೆಗೆ ಮತ್ತು ಮೌಲಾನ ಆಜಾದ್ ಪದವಿ ಪೂರ್ವ ಕಾಲೇಜು ಮಂಜನಾಡಿ ಇಲ್ಲಿಗೆ ಭೌತಶಾಸ್ತ್ರ, ಗಣಿತಶಾಸ್ತ್ರ ವಿಷಯದಲ್ಲಿ ಬೋಧಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ದೂ.ಸಂ :8660948731, 9686445399, 9844634539 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ  ಕಲ್ಯಾಣ  ಇಲಾಖೆ ಜಿಲ್ಲಾಧಿಕಾರಿ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ Read More »

ಕರಾವಳಿ

ಮೀನುಗಾರಿಕೆ ದೋಣಿ ನಿರ್ಮಾಣ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರಿಗೆ ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ ಪತ್ರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವೆಬ್‍ಸೈಟ್ ಮೂಲಕ URL:frims.karnataka.gov.in/BCC ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಫ್ರೂಟ್ಸ್ ಐಡಿ (FRUITS ID) ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿದವರಾಗಿರಬೇಕು ಅಥವಾ ಮೀನುಗಾರಿಕೆ ಸಹಕಾರಿ ಸಂಘದ ಸದಸ್ಯರಾಗಿರಬೇಕು. ಅರ್ಜಿಯಲ್ಲಿ ತಿಳಿಸಲಾಗಿರುವ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿದಾರರು ಆನ್‍ ಲೈನ್‍ ನಲ್ಲಿ

ಮೀನುಗಾರಿಕೆ ದೋಣಿ ನಿರ್ಮಾಣ: ಅರ್ಜಿ ಆಹ್ವಾನ Read More »

ಕರಾವಳಿ

ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ.50ರಷ್ಟು ಅಥವಾ ಗರಿಷ್ಟ

ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ Read More »

ಕರಾವಳಿ

ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನಗಳ ಬಳಕೆ ಪರಿಶೀಲಿಸಿ- ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಯಡಿ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಬಳಕೆಯಾಗಿರುವ ಬಗ್ಗೆ ಮತ್ತು ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನಗೊಂಡಿರುವ ಬಗ್ಗೆ ನಿಖರವಾಗಿ ಪರಿಶೀಲಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ರಾಜು ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಹಾಗೂ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲ್ಪಸಂಖ್ಯಾತರ ಶೈಕ್ಷಣಿಕ ಹಾಗೂ ಉದ್ಯೋಗ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಹಾಗೂ ವಿವಿಧ

ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನಗಳ ಬಳಕೆ ಪರಿಶೀಲಿಸಿ- ಅಪರ ಜಿಲ್ಲಾಧಿಕಾರಿ Read More »

ಕರಾವಳಿ

ಬಂಟ್ವಾಳ: ಬೀದಿ ನಾಯಿಗಳ ಹಾವಳಿ ತಡೆಗಟ್ಟಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 23. ಬಂಟ್ವಾಳ ತಾಲ್ಲೂಕಿನೆಲ್ಲೆಡೆ ಬೀದಿ ನಾಯಿಗಳಿಂದ ಸಾರ್ವಜನಿಕರು ದಾಳಿಗೊಳಗಾಗುತ್ತಿದ್ದು, ಈ ಕುರಿತಂತೆ ತಾಲೂಕಿನ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆ ತುರ್ತು ಪರಿಹಾರ ಕ್ರಮ ಅಗತ್ಯವಾಗಿದೆ. ಶಾಲೆಗೆ ಹಾಗೂ ಮದರಸಕ್ಕೆ ಹೋಗುವ ಮಕ್ಕಳು ಹಾಗೂ ಹಿರಿಯ ನಾಗರಿಕರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆಯೂ, ಸಾರ್ವಜನಿಕರಿಗೆ ಗರಿಷ್ಟ ಭದ್ರತೆ ಒದಗಿಸುವಂತೆಯೂ ತಕ್ಷಣ ಕ್ರಮ ಕೈಗೊಳ್ಳುವಂತೆ

ಬಂಟ್ವಾಳ: ಬೀದಿ ನಾಯಿಗಳ ಹಾವಳಿ ತಡೆಗಟ್ಟಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ Read More »

ಕರಾವಳಿ
Scroll to Top