ಕರಾವಳಿ

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್

(ನ್ಯೂಸ್‌ ಕಡಬ) newskadaba.com,  ಸೆ.02  ಮಂಗಳೂರು : ಒಂದು ಕಾಲದಲ್ಲಿ ಪ್ರಮುಖ ಪ್ರವಾಸಿ ತಾಣವಾಗಲಿದೆ ಎಂದು ನಿರೀಕ್ಷಿಸಲಾಗಿದ್ದ ಕದ್ರಿ ಜಿಂಕೆ ಉದ್ಯಾನವನದ ಮ್ಯೂಸಿಕಲ್ ಫೌಂಟೇನ್, ಕಳೆದ ನಾಲ್ಕು ವರ್ಷಗಳಿಂದ ನಿಷ್ಕ್ರಿಯವಾಗಿದೆ. ತಾಂತ್ರಿಕ ದೋಷಗಳು, ನಿರ್ವಹಣೆಯ ಕೊರತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕ್ಷೀಣಿಸುತ್ತಿರುವುದರಿಂದ, ಈ ಕಾರಂಜಿ ಇದೀಗ ತುಕ್ಕು ಹಿಡಿದು ಹಾಳಾಗಿ ಹೋಗಿದೆ. ಹಳೆಯ ಮೃಗಾಲಯದ ಆವರಣದಲ್ಲಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಐದು  ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಕಾರಂಜಿಯನ್ನು, ಅಂದಿನ ಸಿಎಂ ಸಿದ್ದರಾಮಯ್ಯ ಅವರು 2018ರ […]

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,  ಸೆ.02 ಉಡುಪಿ : ಕಂಟೇನರ್ ಲಾರಿಯ ಕೆಳಗೆ ಸಿಲುಕಿ 38 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆ ಸೆಪ್ಟೆಂಬರ್ 1 ರ ಸೋಮವಾರ ತಡರಾತ್ರಿ ಅಂಬಲಪಾಡಿಯಲ್ಲಿ ಸಂಭವಿಸಿದೆ ದೊಂದೂರುಕಟ್ಟೆ ಮೂಲದ ಬೈಕ್ ಸವಾರ ಪ್ರದೀಪ್ (38) ಅಂಬಲಪಾಡಿಯಲ್ಲಿರುವ ಆಟೋಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಂಟೇನರ್ ಲಾರಿಯ ಕೆಳಗೆ ಸಿಲುಕಿ ತಲೆ ಸಂಪೂರ್ಣವಾಗಿ ಛಿದ್ರವಾಗಿತ್ತು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. ಉಡುಪಿ

ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು :   ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ 4 ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರು ವಿಮಾನ‌ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ. ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು

ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ

(ನ್ಯೂಸ್‌ ಕಡಬ) newskadaba.com,  ಸೆ .01 : ತುಳುನಾಡಿನಲ್ಲಿ ರಿಲೀಸ್ ಆಗಿರುವ ‘ನೆತ್ತರುಕೆರೆ’ ಸಿನಿಮಾ 150 ನೇ  ತುಳು ಸಿನಿಮಾ ಆಗಿದೆ.  ಕಳೆದ ತಿಂಗಳು ಆಗಸ್ಟ್ 29ರಂದು  ತುಳುನಾಡಿನಲ್ಲಿ ಬಿಡುಗಡೆ ಕಂಡು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ‘ಕಾಂತಾ’ರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ‘ನೆತ್ತರಕೆರೆ’ ಚಿತ್ರವು ಇದೀಗ ತುಳುನಾಡಿನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದಲ್ಲಿ ಬಹುಭಾಷಾ ನಟ ಸುಮನ್ ತಲ್ವಾರ್ ಪ್ರಥಮ ಬಾರಿಗೆ ತುಳು ಸಿನಿಮಾದಲ್ಲಿ ಅಭಿನಯಿಸಿ, ತಮ್ಮ ವಿಶಿಷ್ಠ ಪಾತ್ರದ ಮೂಲಕ ಇಡೀ

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ

(ನ್ಯೂಸ್‌ ಕಡಬ) newskadaba.com, ಸೆ.01 ಬಂಟ್ವಾಳ :  ಅಮೃತ ಭಾರತ್ ಯೋಜನೆಯಡಿ ದ.ಕ. ಜಿಲ್ಲೆಯ ಬಂಟ್ವಾಳ ರೈಲು ನಿಲ್ದಾಣ ಅಭಿವೃದ್ಧಿ ಹೊಂದುತ್ತಿದ್ದು, ಕಳೆದ ಜನವರಿಯಿಂದೀಚೆಗೆ ಕಾಮಗಾರಿ ವೇಗ ಪಡೆದಿದೆ. 28.49 ಕೋಟಿ ರೂ. ವೆಚ್ಚದಲ್ಲಿ ನವವಿನ್ಯಾಸದೊಂದಿಗೆ ಕಾಮಗಾರಿ ನಡೆಯುತ್ತಿದ್ದು, ನಿಲ್ದಾಣಕ್ಕೆ ಹೊಸ ರೂಪ ನೀಡಲಾಗುತ್ತಿದೆ 2024ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದು, ಆಗಿನ ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕ ರಾಜೇಶ್ ನಾಯ್ಕ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಸೆ.01 : ಸುಳ್ಯ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ತೋಟಗಳಿಗೆ ಕಾಡಾನೆಗಳ ದಾಳಿ ಮುಂದುವರಿದಿದ್ದು, ಬೆಳೆ ನಾಶವಾದ ಘಟನೆ ನಡೆದಿದೆ. ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸಿದೆ. ಅಡ್ತಲೆ ಯಲ್ಲಿ ದಿನಕೊಂದು ಕಡೆ ಸತತವಾಗಿ 3- 4 ತಿಂಗಳುಗಳಿಂದ ಆನೆ ದಾಳಿ ಮಾಡಿ ಕೃಷಿ ನಾಶ ಮಾಡುತ್ತಿವೆ. ಅಡ್ತಲೆ ಯ ಕಿನಾಲ ಮೋಹನ್ ಅವರ ಆನೆ ಓಡಿಸುವ ಯಂತ್ರದ ಹತ್ತಿರ ಮಾತ್ರ ಬಾರದೆ , ತೋಟದ ಎಲ್ಲಾ ಕಡೆ

* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಸೆ. 01. ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ ಹೊಟ್ಟೆಗೆ ಇರಿದು ಗಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ಗಾಯಾಳು ಆಟೋ ಚಾಲಕನಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರವಿವಾರದಂದು ವರದಿಯಾಗಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮ ದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯೊಂದರಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿಶ್ವನಾಥ (16) ಎಂಬವರು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆಸಿದ್ದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top