ಕರಾವಳಿ

ಉಡುಪಿ: ಭಾರೀ ಮಳೆಯಿಂದಾಗಿ ಪ್ರವಾಹ- 24 ಜನರ ರಕ್ಷಣೆ

(ನ್ಯೂಸ್ ಕಡಬ) newskadaba.com,ಜು .17. ಜುಲೈ 15 ರಂದು ಮುಂಜಾನೆಯಿಂದ ಉಡುಪಿ ಜಿಲ್ಲೆಯಲ್ಲಿ ನಿರಂತರ ಮತ್ತು ವ್ಯಾಪಕ ಮಳೆಯಾಗುತ್ತಿದೆ. ಕಾಪು ತಾಲ್ಲೂಕಿನ ಪಡುಬಿದ್ರಿಯ ಪಾದೆಬೆಟ್ಟು ಪ್ರದೇಶದಲ್ಲಿ ನೀರಿನ ಮಟ್ಟ ವೇಗವಾಗಿ ಏರಿದ್ದು, ಹಲವಾರು ವಸತಿ ಮನೆಗಳು ಜಲಾವೃತಗೊಂಡಿವೆ. ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಅವರ ನೇತೃತ್ವದಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಐದು ಮನೆಗಳ 24 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ನೀರು ನುಗ್ಗಿ ಪ್ರವಾಹ ಉಂಟಾಗಿದೆ. ಉಡುಪಿ, ಬ್ರಹ್ಮಾವರ, ಬೈಂದೂರು, […]

ಉಡುಪಿ: ಭಾರೀ ಮಳೆಯಿಂದಾಗಿ ಪ್ರವಾಹ- 24 ಜನರ ರಕ್ಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಪೊಲೀಸರಿಂದ ಗೌಪ್ಯ ಸಾಕ್ಷಿಗಳ ಹೇಳಿಕೆ ಸೋರಿಕೆ; ಸುಪ್ರೀಂ ಕೋರ್ಟ್ ಗೆ ಅರ್ಜಿ

(ನ್ಯೂಸ್ ಕಡಬ) newskadaba.com,ಜು .17. ಧರ್ಮಸ್ಥಳ ದೇವಸ್ಥಾನದ ಮಾಜಿ ಪೌರ ಕಾರ್ಮಿಕರ ಪರವಾಗಿ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ ಪ್ರಕರಣದ ತನಿಖೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ರಾಜಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸೂಕ್ಷ್ಮ ಮತ್ತು ನಿರ್ಣಾಯಕ ಪ್ರಕರಣದ ದೂರುದಾರ-ಸಾಕ್ಷಿಯಾಗಿರುವ ತಮ್ಮ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಪೊಲೀಸರಿಂದ ಗೌಪ್ಯ ಸಾಕ್ಷಿಗಳ ಹೇಳಿಕೆ ಸೋರಿಕೆ; ಸುಪ್ರೀಂ ಕೋರ್ಟ್ ಗೆ ಅರ್ಜಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 17. ಕಾಡಾನೆ ದಾಳಿಯಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ನಡೆದಿದೆ.   ಮೃತರನ್ನು ಸೌತಡ್ಕ ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ನಡೆದುಕೊಂಡು ಹೋಗುತ್ತಿದ್ದ ಬಾಲಕೃಷ್ಣರನ್ನು ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿದ್ದು, ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು

ಕಾಡಾನೆ ದಾಳಿ- ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಕುಸಿದುಬಿದ್ದ ತಡೆಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com,ಜು .17.ಮಂಗಳೂರು ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ಭಾರೀ ಮಳೆಗೆ ಮೇರಿಹಿಲ್ ಬಳಿ ತಡೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಇನ್ನು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ

ಮಂಗಳೂರು : ಕುಸಿದುಬಿದ್ದ ತಡೆಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ Read More »

ಕರಾವಳಿ, ಕರ್ನಾಟಕ

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಂಗಳೂರು- ಬೆಂಗಳೂರು ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ಜು. 17. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುರುವಾರದಂದು ಬೆಳಗ್ಗೆ ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಸಂಪೂರ್ಣವಾಗಿ ಬಂದ್ ಆಗಿದೆ.   ಸ್ಥಳದಲ್ಲಿ ಮಣ್ಣು ತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.   ಮಣ್ಣು ತೆಗೆಯುವ ಕಾರ್ಯವು ಮಧ್ಯಾಹ್ನದವರೆಗೆ ಮುಂದುವರಿಯಲಿದ್ದು, ಹೀಗಾಗಿ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಉಪ್ಪಿನಂಗಡಿ- ಕಡಬ

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಂಗಳೂರು- ಬೆಂಗಳೂರು ಹೆದ್ದಾರಿ ಬಂದ್ Read More »

ಕರಾವಳಿ

ನಾಳೆ‌(ಜು.17) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 16. ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 17.07.2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಾಳೆ‌(ಜು.17) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ: ರಮಾನಾಥ ರೈ ಆರೋಪ

(ನ್ಯೂಸ್ ಕಡಬ) newskadaba.com, ಜು.16. ಮಂಗಳೂರು, ಜು.16: ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪು ಕಲ್ಲು, ಮರಳು ಸಿಗುತ್ತಿಲ್ಲವೆಂದು ರಸ್ತೆಯಲ್ಲಿ ನಿಂತು ಮಾತನಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಲ್ಲ. ಆದರೆ ದ.ಕ. ಜಿಲ್ಲೆಯ ಬಿಜೆಪಿ ಶಾಸಕರು ಅದನ್ನೇ ಮಾಡುತ್ತಿದ್ದಾರೆ. ಅವರು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ ಎಂದು ಹೇಳಿದರು.

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ: ರಮಾನಾಥ ರೈ ಆರೋಪ Read More »

ಕರಾವಳಿ

ಮಂಗಳೂರು: ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ಪ್ರವಾಹ -ಸಂಚಾರಕ್ಕೆ ಅಡ್ಡಿ

(ನ್ಯೂಸ್ ಕಡಬ) newskadaba.com, ಜು.15. ತೊಕ್ಕೊಟ್ಟು ಪ್ರದೇಶದಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದಾಗಿ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ಪ್ರವಾಹದಿಂದ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಗಮನಾರ್ಹ ತೊಂದರೆ ಉಂಟಾಗಿದೆ. ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ನಿರ್ಮಾಣದಿಂದಾಗಿ, ಮಳೆನೀರು ಕಾಲುವೆಗಳಿಗೆ ಸರಿಯಾಗಿ ಹರಿಯದೆ ರಸ್ತೆಯ ಮೇಲೆ ಉಕ್ಕಿ ಹರಿದಿದೆ. ಜಂಕ್ಷನ್‌ನಲ್ಲಿ ನಿಯಮಿತವಾಗಿ ಹೂಳು ತೆಗೆಯದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ. ತೊಕ್ಕೊಟ್ಟು ಜಂಕ್ಷನ್‌ನಿಂದ ಚೆಂಬುಗುಡ್ಡೆವರೆಗೆ ಸುಮಾರು 14 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣವಾಗಿದ್ದರೂ, ಜಂಕ್ಷನ್‌ನಲ್ಲಿ

ಮಂಗಳೂರು: ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ಪ್ರವಾಹ -ಸಂಚಾರಕ್ಕೆ ಅಡ್ಡಿ Read More »

ಕರಾವಳಿ, ಕರ್ನಾಟಕ
Crime

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜು.15. ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್ ಅಹ್ಮದ್, ಯಾಸರ್ ಅರಫತ್ ವಿ.ಪಿ., ಮುಹಮ್ಮದ್ ಸಾಹಿರ್ ಎಂಬವರು ದುಬೈಯಲ್ಲಿ ವ್ಯವಹಾರ ಮತ್ತು ಲ್ಯಾಂಡ್ ಪ್ರೋಕರಿಂಗ್ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿನಿಂದ ತನ್ನೂರಾದ ಕೋಝಿಕೋಡ್‌ನಲ್ಲಿ ಪ್ರೋಕರಿಂಗ್ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನಾಫ್‌ರ ಪರಿಚಯದ ಮಂಗಳೂರಿನಲ್ಲಿರುವ

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ʼಧರ್ಮಸ್ಥಳʼ ಸಾವಿನ ಪ್ರಕರಣಗಳ ಬಗ್ಗೆ ವಿಸ್ತೃತ ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ

(ನ್ಯೂಸ್ ಕಡಬ) newskadaba.com, ಜು. 14. ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ ಬಳಿಕವೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣಿಸಿರಲಿಲ್ಲ. ಇದೀಗ ಮಹಿಳಾ ಆಯೋಗ ಈ ವಿಚಾರವನ್ನು ಗಂಭೀರವಾಗಿ

ʼಧರ್ಮಸ್ಥಳʼ ಸಾವಿನ ಪ್ರಕರಣಗಳ ಬಗ್ಗೆ ವಿಸ್ತೃತ ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top