ಕರಾವಳಿ

ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ

(ನ್ಯೂಸ್ ಕಡಬ) newskadaba.com, ಜು. 14. 2024- 25 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ವಾರ್ಷಿಕ ಪರೀಕ್ಷೆಯ ಪ್ರಥಮ ಮತ್ತು ದ್ವಿತೀಯ ಭಾಷೆ ಕನ್ನಡದಲ್ಲಿ ಪೂರ್ಣ ಅಂಕಗಳಿಸಿದ ಹಾಗೂ ಅತ್ಯುತ್ತಮ ಸಾಧನೆಗೈದ ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜುಲೈ 12 2025 ಶನಿವಾರದಂದು  ರಾಮಕುಂಜ ವಸತಿ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ […]

ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ಕಡಬ, ಜು.14. ಇತ್ತೀಚೆಗೆ ನಿಧನರಾದ ನವೋದಯ ಕಾಲದ ಖ್ಯಾತ ಕವಿ,ಬರಹಗಾರರಾದ ಎಚ್ಎಸ್ ವೆಂಕಟೇಶ್ ಮೂರ್ತಿಯವರಿಗೆ ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ವತಿಯಿಂದ ರಾಮಕುಂಜದಲ್ಲಿ ನಡೆದ ಕಸಾಪ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಅಧ್ಯಕ್ಷ ಶ್ರೀ ಕೆ.ಶೇಷಪ್ಪ ರೈ ಅವರು ನುಡಿ ನಮನ ಸಲ್ಲಿಸಿ ಎಚ್ಎಸ್ ವೆಂಕಟೇಶ್ ಮೂರ್ತಿಯವರು ಕನ್ನಡ ಸಾಹಿತ್ಯ ಕ್ಷೇತ್ರವನ್ನು ಹಳೆಯ ಸಂಪ್ರದಾಯದಲ್ಲಿ ಕೃಷಿ ಮಾಡಿ ಆಧುನಿಕ ಸಾಹಿತ್ಯದ

ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ Read More »

ಕರಾವಳಿ, ಕರ್ನಾಟಕ

ನೂಜಿಬಾಳ್ತಿಲ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com, ಜು. 10. ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ ಆಗು-ಹೋಗುಗಳನ್ನು ತಿಳಿಸುವ ಜೊತೆಗೆ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಭರಪೂರ ಮಾಹಿತಿಗಳನ್ನು ಒದಗಿಸುತ್ತದೆ. ಪತ್ರಿಕೆಗಳನ್ನು ಮೊಬೈಲ್ ನಲ್ಲಿ ಪತ್ರಿಕೆಗಳನ್ನು ಓದುವ

ನೂಜಿಬಾಳ್ತಿಲ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ Read More »

ಕರಾವಳಿ

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com, ಜು. 10. ಮಂಗಳೂರು: ಎಂಆರ್‌ಪಿಎಲ್‌ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್‌ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ Read More »

ಕರಾವಳಿ

ಧರ್ಮಸ್ಥಳ ಪ್ರಕರಣ: ಸಾಕ್ಷಿಗಳ ರಕ್ಷಣೆಗೆ ಅನುಮೋದನೆ- ಗುರುತಿನ ಉಲ್ಲಂಘನೆ ಬಗ್ಗೆ ಪ್ರತ್ಯೇಕ ತನಿಖೆ

(ನ್ಯೂಸ್ ಕಡಬ) newskadaba.com, ಜು. 10. ಧರ್ಮಸ್ಥಳ ಅಪರಾಧ ಸಂಖ್ಯೆ 39/2025 ರ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ, ದೂರುದಾರ ಸಾಕ್ಷಿಗೆ ಸಾಕ್ಷಿ ರಕ್ಷಣೆ ನೀಡಲು ಜಿಲ್ಲಾ ಅಧಿಕಾರಿಗಳು ಅನುಮೋದನೆ ನೀಡಿದ್ದು, ಶುಕ್ರವಾರ ಸಂಜೆಯಿಂದ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೂರುದಾರ ಸಾಕ್ಷಿಯ ಗುರುತಿನ ಉಲ್ಲಂಘನೆಯ ಬಗ್ಗೆ ಕಳವಳಗಳು ಹುಟ್ಟಿಕೊಂಡಿವೆ. ವ್ಯಕ್ತಿಯ ಅನಾಮಧೇಯತೆಯನ್ನು ಕಾಪಾಡುವ ಪ್ರಯತ್ನಗಳ ಹೊರತಾಗಿಯೂ, ದೂರುದಾರ ಸಾಕ್ಷಿಯ ಪ್ರತಿನಿಧಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಂಚಿಕೊಂಡ ಪ್ರತಿಕಾ ಪ್ರಕಟಣೆ ಮತ್ತುಎಫ್‌.ಐ.ಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ

ಧರ್ಮಸ್ಥಳ ಪ್ರಕರಣ: ಸಾಕ್ಷಿಗಳ ರಕ್ಷಣೆಗೆ ಅನುಮೋದನೆ- ಗುರುತಿನ ಉಲ್ಲಂಘನೆ ಬಗ್ಗೆ ಪ್ರತ್ಯೇಕ ತನಿಖೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ

(ನ್ಯೂಸ್ ಕಡಬ) newskadaba.com, ಜು. 10. ತುಳು ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಶತಮಾನಗಳಿಂದ ಶ್ರಮಿಸುತ್ತಿರುವ ತುಳು ಮಹಾಸಭೆಯು ತನ್ನ ನವದೆಹಲಿ ಘಟಕದ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ಅವರನ್ನು ನಾಮನಿರ್ದೇಶನ ಮಾಡಿದೆ. ಈ ಹೊಸ ನೇಮಕಾತಿಯು ತುಳು ಭಾಷೆಯನ್ನು ಭಾರತೀಯ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಹೋರಾಟಕ್ಕೆ ಶಕ್ತಿ ತುಂಬುವ ನಿರೀಕ್ಷೆಯಿದೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತುಳು ಸಂಘಟನೆಗಳು ಈ ನೇಮಕಾತಿಯನ್ನು ಸ್ವಾಗತಿಸಿವೆ. 1928 ರಲ್ಲಿ ಹಿರಿಯ ಎಸ್.ಯು. ಪಣಿಯಾಡಿ

ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com, ಜು. 10. ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾ‌ರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ. ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಂಚ‌ಕ್ಕೆ ಬೇಡಿಕೆ ಆರೋಪ: ಟ್ರಾಫಿಕ್ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com, ಜು. 10. ಮಂಗಳೂರು: ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲೀಂ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.‌ನಂತೂರು ಸರ್ಕಲ್‌ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲಿಂ, ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ

ಮಂಗಳೂರು: ಲಂಚ‌ಕ್ಕೆ ಬೇಡಿಕೆ ಆರೋಪ: ಟ್ರಾಫಿಕ್ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕರ್ನಾಟಕ

ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು!

(ನ್ಯೂಸ್ ಕಡಬ) newskadaba.com, ಜು. 10. ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿನಿಮಾ ನಟ-ನಟಿಯರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್ ಸೇರಿ 29 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣದ ದಾಖಲಿಸಿದೆ. ನಟ, ನಟಿಯರ ಜೊತೆಗೆ ಸಾಮಾಜಿಕ ಮಾಧ್ಯಮ ಇನ್‌ಫ್ಲುಯನ್ಸರ್‌, ಯುಟ್ಯೂಬರ್‌ಗಳು ಈ ಪಟ್ಟಿಯಲ್ಲಿದ್ದಾರೆ ಎಂದು ಇಡಿ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ. ಸೆಲೆಬ್ರಿಟಿಗಳು ಮತ್ತು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್​ಗಳು ಅಕ್ರಮ ಬೆಟ್ಟಿಂಗ್​

ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು! Read More »

ಕರಾವಳಿ, ಕರ್ನಾಟಕ, ಸಿನಿಮಾ

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 10. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಶಾಕ್‍ಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ. ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂಬವರು ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತಾಗಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್ ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top