ಕರಾವಳಿ

ಮಂಗಳೂರು : ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗಲಿದೆ ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್!

(ನ್ಯೂಸ್ ಕಡಬ) newskadaba.com, ಜು. 10. ಕರಾವಳಿ ಮೀನುಗಾರಿಕಾ ಸಮುದಾಯದ ಬಹುದಿನಗಳ ಕನಸು ನನಸಾಗುವ ಹಂತಕ್ಕೆ ತಲುಪಿದ್ದು, ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್ 2026 ರ ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಿದೆ. ಮೀನುಗಾರಿಕೆ ಇಲಾಖೆಯು ಶೀಘ್ರದಲ್ಲೇ ಬಹುಕೋಟಿ ವೆಚ್ಚದ ತುರ್ತು ಹಡಗಿನ ನಿರ್ಮಾಣವನ್ನು ಪ್ರಾರಂಭಿಸಲಿದ್ದು, ಇದರ ಬೆಲೆ ಸುಮಾರು 7.85 ಕೋಟಿ ರೂ.ಗಳಷ್ಟಾಗುತ್ತದೆ. ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಲ್ಲರ್ ಅವರ ಪ್ರಕಾರ, ಸಮುದ್ರ ಆಂಬ್ಯುಲೆನ್ಸ್‌ಗಾಗಿ ಕೆಲಸದ ಆದೇಶವನ್ನು ಮುಂದಿನ ವಾರ ನೀಡಲಾಗುವುದು. […]

ಮಂಗಳೂರು : ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗಲಿದೆ ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್! Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ/ ಉಡುಪಿ : ಜು.10 ರಿಂದ 15 ರವರೆಗೆ ಕರಾವಳಿ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್

(ನ್ಯೂಸ್ ಕಡಬ) newskadaba.com, ಜು. 10. ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಜುಲೈ 10 ರಿಂದ 15 ರವರೆಗೆ ಕರಾವಳಿ ಪ್ರದೇಶಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರಾವಳಿ ಪ್ರದೇಶದಾದ್ಯಂತ ಬುಧವಾರ ಸಾಧಾರಣ ಮಳೆ ಸುರಿದಿದೆ, ಜಿಲ್ಲೆಯ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ ಎನ್ನಲಾಗಿದೆ. ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣವಿದೆ. ಉಡುಪಿ ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ

ದಕ್ಷಿಣ ಕನ್ನಡ/ ಉಡುಪಿ : ಜು.10 ರಿಂದ 15 ರವರೆಗೆ ಕರಾವಳಿ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 10. ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರು. ಜು.7ರಂದು ಬೆಳಗ್ಗೆ ವಿಟ್ಲ – ಮುಡಿಪು- ಮಂಗಳೂರು ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಸಿಗೆ ಕೊಡಂಗಾಯಿ ಎಂಬಲ್ಲಿ ಏರಿದ್ದ ಚಿದಾನಂದ ಅವರು ಕುಡ್ತಮುಗೇರು ನಿಲ್ದಾಣ ತಲುಪುತ್ತಿದ್ದಂತೆ ಮೆಟ್ಟಿಲಿನಲ್ಲಿ ನಿಂತಿದ್ದು ಅವರು ಆಯತಪ್ಪಿ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ದರು. ಬಳಿಕ ಬಸ್ಸಿನ

ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ

ಸುಳ್ಯ: ಅರಂತೋಡು ಗ್ರಾ.ಪಂ. ಘನತ್ಯಾಜ್ಯ ಘಟಕಕ್ಕೆ ಬೆಂಕಿ

(ನ್ಯೂಸ್ ಕಡಬ) newskadaba.com, ಜು. 10. ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದಿದೆ.   ಬುಧವಾರ ಸಂಜೆ ಘಟನೆ ನಡೆದಿದ್ದು ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದರು. ಘಟನೆಯಲ್ಲಿ ಘನತ್ಯಾಜ್ಯ ಸಂಪೂರ್ಣ ಹೊತ್ತಿ

ಸುಳ್ಯ: ಅರಂತೋಡು ಗ್ರಾ.ಪಂ. ಘನತ್ಯಾಜ್ಯ ಘಟಕಕ್ಕೆ ಬೆಂಕಿ Read More »

ಕರಾವಳಿ

ಮಂಗಳೂರು: ಅಂಗಡಿಯಿಂದ 3.3 ಲಕ್ಷ ರೂ. ನಗದು ಕಳವು- ಇಬ್ಬರು ಆರೋಪಿಗಳು ಅರೆಸ್ಟ್‌

(ನ್ಯೂಸ್ ಕಡಬ) newskadaba.com, ಜು. 09. ಕೊಡಿಯಾಲ್‌ಬೈಲ್‌ನಲ್ಲಿರುವ ಪೌಷ್ಟಿಕಾಂಶ ಉತ್ಪನ್ನಗಳ ಅಂಗಡಿಯಿಂದ 3.30 ಲಕ್ಷ ರೂ. ನಗದು ಇದ್ದ ಲಾಕರ್ ಕಳ್ಳತನಕ್ಕೆ ಸಂಬಂಧಿಸಿದಂತೆ, ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಮಗಳೂರಿನ ಕಡೂರಿನ ಯಶವಂತ ನಾಯಕ್ (19) ಮತ್ತು ಪ್ರಸ್ತುತ ಮಲ್ಲಿಕಟ್ಟೆಯಲ್ಲಿ ವಾಸಿಸುತ್ತಿರುವ ಶಕ್ತಿನಗರದ ಲೇಬರ್ ಕಾಲೋನಿಯ ನಿವಾಸಿ ನಿರೂಪ್ ಅಲಿಯಾಸ್ ಶ್ರವಣ್ (19) ಎಂದು ಗುರುತಿಸಲಾಗಿದೆ. ಯಶವಂತ್ ಅಂಗಡಿಯಲ್ಲಿ ಹಗಲಿನ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು, ಆದರೆ ಈ ಹಿಂದೆ ಅದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿ

ಮಂಗಳೂರು: ಅಂಗಡಿಯಿಂದ 3.3 ಲಕ್ಷ ರೂ. ನಗದು ಕಳವು- ಇಬ್ಬರು ಆರೋಪಿಗಳು ಅರೆಸ್ಟ್‌ Read More »

ಕರಾವಳಿ
crime, arrest, suspected

ಉಳ್ಳಾಲ: ಬಾಲಕಿಯ ಅಪಹರಣ-ದಂಪತಿ ಸೇರಿದಂತೆ ಮೂವರ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜು. 08. ಅಪ್ರಾಪ್ತ ವಯಸ್ಸಿನ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಮತ್ತು ಆಕೆಯನ್ನು ಅಪಹರಿಸಲು ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ದಂಪತಿಯನ್ನು ಪೊಲೀಸರು ಬಂಧಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪತ್ತೆ ಹಚ್ಚಿ ಪೋಷಕರಿಗೆ ನೀಡಿದ್ದು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪಹರಿತ ಬಾಲಕಿಯ ತಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ತನ್ನ ಮಗಳನ್ನು ಅಮಿಷ ತೋರಿಸಿ ಅಪಹರಿಸಿದ್ದಾರೆ ಎಂದು

ಉಳ್ಳಾಲ: ಬಾಲಕಿಯ ಅಪಹರಣ-ದಂಪತಿ ಸೇರಿದಂತೆ ಮೂವರ ವಿರುದ್ಧ ಫೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ(ಜುಲೈ 9) ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11:15- ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ

ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ Read More »

ಕರಾವಳಿ

ಜುಲೈ 9 ರಂದು ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಮಂಗಳೂರು, ಲಿಂಕ್ ವ್ಯಸನ ಮುಕ್ತ ಪುನರ್ವಸತಿ ಕೇಂದ್ರ ಹಾಗೂ ಸಂತ ಅಲೋಶಿಯಸ್ ಪರಿಣಿತ ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ನಾಳೆ ಜುಲೈ 9ರಂದು ಬೆಳಗ್ಗೆ 11 ಗಂಟೆಗೆ ನಗರದ ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಎರಿಕ್ ಮಾಥಯಾಸ್

ಜುಲೈ 9 ರಂದು ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ Read More »

ಕರಾವಳಿ

‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಪ್ರತಿಯೊಬ್ಬ ರೋಗಿಯಲ್ಲಿಯೂ ಸಂತೃಪ್ತಿ ಮೂಡಿಸಿ ಆತನ ಬಾಳನ್ನು ನೆಮ್ಮದಿಗೊಳಿಸುವುದು ವೈದ್ಯರ ದೊಡ್ಡ ಆಸ್ತಿಯಾಗಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಹೇಳಿದರು. ಅವರು ಸೋಮವಾರದಮದು ಜಿಲ್ಲಾ ಆಯುಷ್ ಆಸ್ಪತ್ರೆ ಆವರಣದಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರೋಗಿಯ ಬೇಡಿಕೆ ಮತ್ತು ವರ್ತನೆಗಳು ಯಾವ ರೀತಿ ಇದ್ದರೂ ಅದನ್ನು ನಿಭಾಯಿಸಿ ಉತ್ತಮ ಚಿಕಿತ್ಸೆ ನೀಡುವುದು ಕರ್ತವ್ಯವಾಗಿದೆ. ಆರೋಗ್ಯ ಎಂಬ ಸಂಪತ್ತನ್ನು ಕಾಪಾಡುವಲ್ಲಿ

‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್ Read More »

ಕರಾವಳಿ

ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3 ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷದವರು ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ  ಜುಲೈ 25. ಆಸಕ್ತ

ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಶಿಬಿರ Read More »

ಕರಾವಳಿ
Scroll to Top