ಕರಾವಳಿ

ಆನ್ ಲೈನ್ ನಲ್ಲಿ ಮೀನಿನ ಬಲೆ ಖರೀದಿಸಿದ ಮಹಿಳೆಗೆ ವಂಚನೆ

(ನ್ಯೂಸ್ ಕಡಬ) newskadaba.com ಜು. 07. ಆನ್‌ ಲೈನ್ ಮೂಲಕ ಮೀನಿನ ಬಲೆ ಖರೀದಿಸಿದ ಮಹಿಳೆಯೋರ್ವರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ರೇಷ್ಮಾ ಎಂಬವರು ನೀಡಿದ ದೂರಿನ ಪ್ರಕಾರ, ಅವರು ಆನ್‌ ಲೈನ್‌ನಲ್ಲಿ ಮೀನಿನ ಬಲೆಯನ್ನು ಬುಕ್ ಮಾಡಿದ್ದು, ಈ ಬಗ್ಗೆ ಒಬ್ಬ ಅಪರಿಚಿತ ವ್ಯಕ್ತಿ ಕರೆ ಮಾಡಿ ಮೀನಿನ ಬಲೆಯನ್ನು ಡೆಲಿವರಿ ಕೊಡಲು ಹಣ ಪಾವತಿ ಮಾಡುವಂತೆ ತಿಳಿಸಿದ್ದನು. ಅದರಂತೆ ರೇಷ್ಮಾ ಜು. 02ರಿಂದ 4ರ ನಡುವೆ […]

ಆನ್ ಲೈನ್ ನಲ್ಲಿ ಮೀನಿನ ಬಲೆ ಖರೀದಿಸಿದ ಮಹಿಳೆಗೆ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖ್ಯಾತ ಹಾಲಿವುಡ್ ನಟ ಮೈಕಲ್ ಮ್ಯಾಡ್ಸನ್ ಹೃದಯಾಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com ಜು.06: ‘ಕಿಲ್ ಬಿಲ್’, ‘ರಿಸವರ್ಯರ್ ಡಾಗ್ಸ್’, ‘ಡೈ ಅನದರ್ ಡೇ’, ‘ಸ್ಕೇರಿ ಮೂವಿ’ ಸೇರಿದಂತೆ ಹಲವಾರು ಸೂಪರ್ ಹಿಟ್ ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟ ಮೈಕಲ್ ಮ್ಯಾಡ್ಸನ್ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೈಕಲ್ ಮ್ಯಾಡ್ಸನ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎನ್ನಲಾಗುತ್ತಿದೆ. ಮೈಕಲ್ ಅವರು ಅಮೆರಿಕದ ಕ್ಯಾಲಿಫೋರ್ನಿಯಾದ ಮ್ಯಾಡ್ಸನ್ ನಗರದಲ್ಲಿ ನೆಲೆಸಿದ್ದರು. ಮನೆಯಲ್ಲಿಯೇ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 1957ರಲ್ಲಿ ಶಿಕಾಗೊನಲ್ಲಿ ಜನಿಸಿದ ಮೈಕಲ್ ಅವರ ತಾಯಿ

ಖ್ಯಾತ ಹಾಲಿವುಡ್ ನಟ ಮೈಕಲ್ ಮ್ಯಾಡ್ಸನ್ ಹೃದಯಾಘಾತದಿಂದ ಸಾವು Read More »

ಕರಾವಳಿ

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ 

(ನ್ಯೂಸ್ ಕಡಬ) newskadaba.comಸುಳ್ಯ, ಜು. 05. ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರತಿಸಲಾಗಿದೆ. ಮನೆಯೊಂದರಲ್ಲಿ 150000 ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಸುಳ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ ಎಂದು ವರದಿ ತಿಳಿಸಿದೆ.    

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜು. 05. ಮೂರು ವರ್ಷದ ಹಿಂದೆ ಸುಳ್ಯ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರುತಿಸಲಾಗಿದೆ.   ಆರೋಪಿಯು 2022ರ ಮಾರ್ಚ್ 20ರಂದು ಸುಳ್ಯ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ 1,50,000ರೂ. ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿ ಅರೆಸ್ಟ್..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಸುಲ್ಕೆರಿ ಯಲ್ಲಿ ಸಂಭವಿಸಿದೆ.   ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೆರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ.   ಅವರು ಗಾರೆ ಕೆಲಸ ಮತ್ತು ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದು, ಮನೆಗೆ ಬಾರದೇ ಇದ್ದಾಗ ಸ್ಥಳೀಯರು ಸೇರಿ ಹುಡುಕಲು ಪ್ರಾರಂಭಿಸಿದಾಗ ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋ‌ರ್ ಅವರ ಮೃತದೇಹ

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

5 ಬಸ್ ಗಳ ನಡುವೆ ಸರಣಿ ಅಪಘಾತ 36 ಯಾತ್ರಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಂಬನ್, ಜು05. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರಿದ್ದ ಐದು ಬಸ್ ಗಳು ಪರಸ್ಪರ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಕನಿಷ್ಠ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಸ್‌ ಗಳು ಜಮ್ಮುವಿನ ಭಗವತಿ ನಗರದಿಂದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್‌ ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.  

5 ಬಸ್ ಗಳ ನಡುವೆ ಸರಣಿ ಅಪಘಾತ 36 ಯಾತ್ರಿಕರಿಗೆ ಗಾಯ Read More »

ಕರಾವಳಿ

ಕಡಬ: ತುಷಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜು.05. ಕಳೆದ ಕೆಲವು ಸಮಯಗಳಿಂದ ಮರ್ಧಾಳದಲ್ಲಿ‌ ಕಾರ್ಯಾಚರಿಸುತ್ತಿದ್ದ ತುಷಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಕಡಬದ ಝೂಬಿ ಗೋಲ್ಡ್ ಹಿಂಭಾಗದ ಜ್ಞಾನೇಶ್ ಟವರ್ ನಲ್ಲಿ‌ ಶುಕ್ರವಾರದಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಜ್ಞಾನೇಶ್ ಟವರ್ ನ ಮಾಲಕರಾದ ದಯಾನಂದ ನಾಯ್ಕ್ ಮೇಲಿನಮನೆ ದೀಪ ಬೆಳಗಿಸಿ ಉದ್ಘಾಟಿಸಿದರು. ಪ್ರಮುಖರಾದ ಮಹಾಬಲ‌ ನಾಯ್ಕ್ ಮೇಲಿನಮನೆ, ಸತೀಶ್ ನಾಯ್ಕ್ ಮೇಲಿನ ಮನೆ, ಅಭಿಲಾಷ್ ಪಿ.ಕೆ., ಹಿರಿಯರಾದ ಲಕ್ಷ್ಮಣ ಗೌಡ ಪಡೆಜ್ಜಾರು, ಶೋಭಾ ಶ್ರೀಧರ್ ಪದವು, ಚಂದ್ರಶೇಖರ್ ಸಾರಕೆರೆ

ಕಡಬ: ತುಷಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ Read More »

ಕರಾವಳಿ

ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಉಡುಪಿ, ಜು.05. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ನ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಂಡರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಸೌಮ್ಯ ರೆಡ್ಡಿ, “ಕಾಂಗ್ರೆಸ್ ಮಹಿಳೆಯರಿಗೆ ಸಬಲೀಕರಣ ನೀಡಿದೆ. ಇಡೀ ದೇಶಕ್ಕೆ ಮಾದರಿಯಾಗಬಹುದಾದ ಪಕ್ಷದ ಸಂಘಟನೆಯನ್ನು ನಿರ್ಮಿಸುವುದು ಅವಶ್ಯಕ. ಪ್ರತಿ ಮನೆ ಬಾಗಿಲಿಗೂ ಹೋಗಿ

ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು

(ನ್ಯೂಸ್ ಕಡಬ) newskadaba.com ಜು.05. ಹಿಂದೂ ಜಾಗರಣಾ ವೇದಿಕೆಯ ಮುಖಂಡನ ಮೊಬೈಲ್​ ನಲ್ಲಿ ಅಶ್ಲೀಲ ವಿಡಿಯೋ ಪತ್ತೆಯಾಗಿರುವ ಕುರಿತು ವರದಿಯಾಗಿದೆ.   ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಎಂಬವರ ಮೊಬೈಲ್ ​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.          

ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ

((ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 05. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top