ಕರಾವಳಿ

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ಕೆಲ ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವೈದ್ಯರೋರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಮನೆಗೆ ಹೋಗುವ ಸಂಧರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಆದೇಶ!

(ನ್ಯೂಸ್ ಕಡಬ) newskadaba.com ಜು. 05.  ಪ್ರಸ್ತುತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ, ಪುತ್ತೂರಿನ 18 ಶಾಲೆಗಳು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರುವಾಗಲಿದ್ದು, ಅದರಂತೆ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.   ಇದರೊಂದಿಗೆ ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಆದೇಶ! Read More »

ಕರಾವಳಿ

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜು. 05. ಟ್ರೇಡಿಂಗ್‌ ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭವನ್ನು ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಮಾರ್ಚ್ 1ರಂದು ಶಿವಶಂಕರ ಎಂಬವರಿಗೆ ಅಪರಿಚಿತ ವ್ಯಕ್ತಿಯು ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣವನ್ನು ಗಳಿಸಬಹುದೆಂದು ನಂಬಿಸಿದ್ದು, ಅದರಂತೆ ದೂರುದಾರ ಆರೋಪಿತರ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 7 ಲಕ್ಷ ರೂ. ಹಣವನ್ನು ಮೇ 19ರಿಂದ ಮೇ

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಯುವತಿಗೆ ವಂಚನೆ ಪ್ರಕರಣ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಆರೋಪಿ ಪುತ್ತೂರಿನ ಕೃಷ್ಣ ಜೆ ರಾವ್ ನನ್ನು ಬಂಧಿಸಿದ್ದಾರೆ. ತನಿಖೆ ಚುರುಕುಗೊಳಿಸಿದ ಮಂಗಳೂರಿನ ಎಸ್ಪಿ, ಪೊಲೀಸರ ಶೀಘ್ರ ಕಾರ್ಯಚರಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರಿನಿಂದ ತೆರಳಿರುವ ಪೊಲೀಸರ ತಂಡವೊಂದು ಆರೋಪಿಯನ್ನು ಪತ್ತೆ ಮಾಡಿ ಅಲ್ಲಿಂದ ವಶಕ್ಕೆ ಪಡೆದುಕೊಂಡು ಆಗಮಿಸುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಪುತ್ತೂರು: ಯುವತಿಗೆ ವಂಚನೆ ಪ್ರಕರಣ- ಆರೋಪಿ ಅರೆಸ್ಟ್..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು. 05. ಇಲ್ಲಿನ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ವರ್ಷದ ರಕ್ಷಕ- ಶಿಕ್ಷಕ ಸಂಘದ ಪ್ರಥಮ ಸಭೆಯು ಸಂಸ್ಥೆಯ ಸಭಾಭವನದಲ್ಲಿ ನೆರವೇರಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಪ್ರಕಾಶ್ ಪಾವ್ಲ್ ಡಿಸೋಜ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಂಸ್ಥೆಯ ಪ್ರತಿ ಕಾರ್ಯ ಚಟುವಟಿಕೆಗಳಿಗೆ ಪೋಷಕರು ಸಹಕಾರ ನೀಡಬೇಕು ಎಂದು ಹೇಳಿದರು. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು

ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ Read More »

ಕರಾವಳಿ

ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು- ಎಸ್ಪಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ. ವರದಿಯ ಪ್ರಕಾರ ಈ ಹಿಂದೆಯೇ ಧರ್ಮಸ್ಥಳದಲ್ಲಿ ಹಲವು ಅಪರಾಧ ಕೃತ್ಯಗಳು ನಡೆದಿದೆ. ತನಗೆ ಜೀವ ಬೆದರಿಕೆ ಒಡ್ಡಿ ಈ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದಾರೆ. ಪ್ರಸಕ್ತ ತನಗೆ ಪಾಪಪ್ರಜ್ಞೆ ಕಾಡುತ್ತಿದೆ. ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ

ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು- ಎಸ್ಪಿ ಸ್ಪಷ್ಟನೆ Read More »

ಕರಾವಳಿ

ಅಲ್ಪಸಂಖ್ಯಾತರಿಂದ ವಿವಿಧ ಕೋರ್ಸ್‍ ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ/ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್‍ ಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ.

ಅಲ್ಪಸಂಖ್ಯಾತರಿಂದ ವಿವಿಧ ಕೋರ್ಸ್‍ ಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜುಲೈ 8ರಂದು ಬೋಳಿಯಾರು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04 ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮ ಪಂಚಾಯತ್‍ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ 8 ರಂದು ಬೆಳಿಗ್ಗೆ 10:30 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 8ರಂದು ಬೋಳಿಯಾರು ಗ್ರಾಮ ಸಭೆ Read More »

ಕರಾವಳಿ

ಜುಲೈ 7ರಂದು ಮೂಡುಶೆಡ್ಡೆ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮೂಡುಶೆಡ್ಡೆ ಗ್ರಾಮ ಪಂಚಾಯತ್‍ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ 7 ರಂದು ಬೆಳಿಗ್ಗೆ 10:30 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 7ರಂದು ಮೂಡುಶೆಡ್ಡೆ ಗ್ರಾಮ ಸಭೆ Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ-3 : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಜು. 04. ಎಸ್.ಎಸ್.ಎಲ್.ಸಿ. ಪರೀಕ್ಷೆ-3  ಜುಲೈ 5 ರಿಂದ  ಜುಲೈ 12 ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ  ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನ  4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ನಿಟ್ಟಿನಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ನಿಷೇಧಾಜ್ಞೆ ಜಾರಿಗೊಳಿಸಿ

ಎಸ್.ಎಸ್.ಎಲ್.ಸಿ. ಪರೀಕ್ಷೆ-3 : ನಿಷೇಧಾಜ್ಞೆ ಜಾರಿ Read More »

ಕರಾವಳಿ
Scroll to Top