ಕರಾವಳಿ

ಪ್ರಾಮಾಣಿಕತೆ ಮೆರೆದ CISF: ಮಂಗಳೂರಿನಲ್ಲಿ ಪ್ರಯಾಣಿಕನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳಿದ್ದ ಪೌಚ್ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,  ಜು.26: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ LGF ಪಾರ್ಕಿಂಗ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ವಿಠ್ಠಲ್ ಹೊಸಮನಿ ಅವರಿಗೆ ಅನಾಥವಾಗಿ ಬಿದ್ದಿದ್ದ ಕಪ್ಪು ಬಣ್ಣದ ಪೌಚ್ ಪತ್ತೆಯಾಗಿತ್ತು. ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದಿಂದ ತಪಾಸಣೆ ನಡೆಸಿದ ಬಳಿಕ ಪೌಚ್ ತೆರೆಯಲಾಯಿತು. ಅದರಲ್ಲಿ ಐಫೋನ್, ಚಿನ್ನದ ಉಂಗುರ, $10,000 (ಸುಮಾರು ₹9 ಲಕ್ಷ), 500 ದಿರ್ಹಾಮ್, ಪಾಸ್‌ಪೋರ್ಟ್, ಬೋರ್ಡಿಂಗ್ ಪಾಸ್ ಹಾಗೂ ಬ್ಯಾಂಕ್ ಕಾರ್ಡ್‌ಗಳು ಇದ್ದವು. ಪೌಚ್ ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ […]

ಪ್ರಾಮಾಣಿಕತೆ ಮೆರೆದ CISF: ಮಂಗಳೂರಿನಲ್ಲಿ ಪ್ರಯಾಣಿಕನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳಿದ್ದ ಪೌಚ್ ಹಸ್ತಾಂತರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಾಹತ್ ಸಿಂಗ್ ಹೊಸ ಇತಿಹಾಸ: ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್ ಪಟ್ಟ ಗೆದ್ದ ಮೊದಲ ಭಾರತೀಯ ಆಟಗಾರ್ತಿ!

(ನ್ಯೂಸ್‌ ಕಡಬ) newskadaba.com,  ಜು.26: ಕೆನಡಾದ ನಿಯಾಗ್ರಾ-ಆನ್-ದಿ-ಲೆಕ್‌ನಲ್ಲಿ ನಡೆದ 2026ರ ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್‌ಶಿಪ್‌ನ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ 18 ವರ್ಷದ ಅನಾಹತ್ ಸಿಂಗ್ ಪ್ರಶಸ್ತಿ ಗೆದ್ದು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜುಲೈ 25 ರಂದು ನಡೆದ ಫೈನಲ್‌ನಲ್ಲಿ ಅಗ್ರ ಶ್ರೇಯಾಂಕದ ಅನಾಹತ್, ಈಜಿಪ್ಟ್‌ನ ರುಕಯ್ಯಾ ಸಲೇಮ್ (2ನೇ ಶ್ರೇಯಾಂಕ) ವಿರುದ್ಧ 11-3, 11-7, 11-9 ನೇರ

ಅನಾಹತ್ ಸಿಂಗ್ ಹೊಸ ಇತಿಹಾಸ: ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್ ಪಟ್ಟ ಗೆದ್ದ ಮೊದಲ ಭಾರತೀಯ ಆಟಗಾರ್ತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ಜು.26: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಭಾವ ಉಂಟಾಗಿ ನದಿಯಲ್ಲಿ ನೀರಿನ ಹರಿವು ತೀವ್ರ ಕಡಿಮೆಯಾದ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿರುವ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಶಿವನಸಮುದ್ರ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ನಿತ್ಯ 42 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು 1,450 ಕ್ಯೂಸೆಕ್ ನೀರಿನ ಅಗತ್ಯವಿತ್ತು. ನದಿಯಲ್ಲಿ ಸಮರ್ಪಕ ಹರಿವಿಲ್ಲದೆ ಕಳೆದ ಒಂದೂವರೆ ತಿಂಗಳಿಂದ ಉತ್ಪಾದನೆ ಬಂದ್ ಆಗಿದೆ. ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ ನೀರು ಹರಿಯದ ಹಿನ್ನೆಲೆಯಲ್ಲಿ,

ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ ಎಷ್ಟು?

(ನ್ಯೂಸ್‌ ಕಡಬ) newskadaba.com,  ಜು.26:  22 ಕ್ಯಾರಟ್ ಆಭರಣ ಚಿನ್ನದ ಬೆಲೆ: 1 ಗ್ರಾಂ  ₹13,285, 8 ಗ್ರಾಂ: ₹1,06,280, 10 ಗ್ರಾಂ: ₹1,32,850, 100 ಗ್ರಾಂ: ₹13,28,500.. 24 ಕ್ಯಾರಟ್ ಅಪರಂಜಿ (ಶುದ್ಧ) ಚಿನ್ನದ ಬೆಲೆ: 1 ಗ್ರಾಂ: ₹14,493,  8 ಗ್ರಾಂ: ₹1,15,944 , 10 ಗ್ರಾಂ: ₹1,44,930 ,100 ಗ್ರಾಂ: ₹14,49,300

ಇಂದಿನ ಚಿನ್ನದ ದರ ಎಷ್ಟು? Read More »

ಕರಾವಳಿ

ಬೆಂಗಳೂರಿನಲ್ಲಿ 4 ಮಂದಿಗೆ ಕೋವಿಡ್-19 ಪಾಸಿಟಿವ್: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

(ನ್ಯೂಸ್‌ ಕಡಬ) newskadaba.com,  ಜು.26 ಬೆಂಗಳೂರಿನಲ್ಲಿ ನಾಲ್ವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಂಧ್ರಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನೆರೆ ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಕಾರಣ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ಪಾವಗಡ ಸೇರಿದಂತೆ ಆಂಧ್ರ ಗಡಿಯ 8 ಪ್ರಮುಖ ಮಾರ್ಗಗಳಲ್ಲಿ ಕೋವಿಡ್ ತಪಾಸಣೆ ಆರಂಭಿಸಿದ್ದು, ಅಗತ್ಯ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಿದೆ.

ಬೆಂಗಳೂರಿನಲ್ಲಿ 4 ಮಂದಿಗೆ ಕೋವಿಡ್-19 ಪಾಸಿಟಿವ್: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

ಕರಾವಳಿ

ಬಿ.ಸಿ. ರೋಡ್ ಜಂಕ್ಷನ್‌ ಬಳಿ ಲಾರಿಯ ಚಕ್ರ ಕಳಚಿಬಿದ್ದು ಮಹಿಳೆಗೆ ಗಾಯ: ಮಂಗಳೂರಿನ ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಜು.26 :ಬಿ.ಸಿ. ರೋಡ್ ಜಂಕ್ಷನ್‌ ಬಳಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಹೊರರಾಜ್ಯ ನೋಂದಣಿಯ ಕಂಟೇನರ್ ಲಾರಿಯೊಂದರ ಹಿಂಬದಿಯ ಚಕ್ರ ಏಕಾಏಕಿ ಕಳಚಿ ಬಿದ್ದಿದೆ.ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೆಸಿಲ್ಲ ಎಂಬ ಮಹಿಳೆಗೆ ಕಳಚಿದ ಚಕ್ರ ಡಿಕ್ಕಿ ಹೊಡೆದಿದ್ದು, ಅವರಿಗೆ ಗಾಯಗಳಾಗಿವೆ. ಗಾಯಾಳು ಮಹಿಳೆಯನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿ.ಸಿ. ರೋಡ್ ಜಂಕ್ಷನ್‌ ಬಳಿ ಲಾರಿಯ ಚಕ್ರ ಕಳಚಿಬಿದ್ದು ಮಹಿಳೆಗೆ ಗಾಯ: ಮಂಗಳೂರಿನ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಪ್ರಾಪ್ತ ಚಾಲಕನಿಂದ ಭೀಕರ ಅಪಘಾತ — ಬೈಕ್ ಮಾಲೀಕ ಸಹೋದರನಿಗೆ ಜೈಲು, ₹35,000 ದಂಡ

(ನ್ಯೂಸ್‌ ಕಡಬ) newskadaba.com,  ಜು.26 : ಅಪ್ರಾಪ್ತ ಬಾಲಕನಿಗೆ ಬೈಕ್ ಚಲಾಯಿಸಲು ನೀಡಿದ್ದಕ್ಕಾಗಿ, ಬೈಕ್ ಮಾಲೀಕ ತಣ್ಣೀರುಪಂಥ ನಿವಾಸಿ ಅಬ್ದುಲ್ ಹಕೀಮ್‌ಗೆ ಬೆಳ್ತಂಗಡಿ ನ್ಯಾಯಾಲಯವು 1 ದಿನದ ಜೈಲು ಶಿಕ್ಷೆ ಮತ್ತು ₹35,000 ದಂಡ ವಿಧಿಸಿದೆ. ಅಪಘಾತ ಎಸಗಿದ ಅಪ್ರಾಪ್ತನಿಗೆ 25 ವರ್ಷ ವಯಸ್ಸಿನವರೆಗೆ ಚಾಲನಾ ಪರವಾನಗಿ ನೀಡಬಾರದು ಎಂದು ಪ್ರಾದೇಶಿಕ ಸಾರಿಗೆ ಕಚೇರಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ.ಅಪಘಾತಕ್ಕೀಡಾದ ಬೈಕ್‌ನ ನೋಂದಣಿ ಪ್ರಮಾಣಪತ್ರವನ್ನು (RC) 1 ವರ್ಷದ ಅವಧಿಗೆ ಅಮಾನತುಗೊಳಿಸಲಾಗಿದೆ. ಜುಲೈ 20, 2024 ರ ರಾತ್ರಿ ಕರಾಯದ

ಬೆಳ್ತಂಗಡಿ: ಅಪ್ರಾಪ್ತ ಚಾಲಕನಿಂದ ಭೀಕರ ಅಪಘಾತ — ಬೈಕ್ ಮಾಲೀಕ ಸಹೋದರನಿಗೆ ಜೈಲು, ₹35,000 ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ಜು.25: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್‌!ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಹೆಚ್ಚುತ್ತಿರುವ ರಾಜಕೀಯ ಒತ್ತಡದ ನಡುವೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆಂದು ವರದಿಯಾಗಿದೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಆರಂಭಗೊಂಡಿರುವ ಸಿಜೆಪಿ ನೇತೃತ್ವದ ಪ್ರತಿಭಟನೆಯು,

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಶಾಲಾ ಬಸ್ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ – ಅಪಾಯಕಾರಿ ಮರಗಳ ಕೊಂಬೆ ತೆರವು

(ನ್ಯೂಸ್‌ ಕಡಬ) newskadaba.com,  ಜು.25:ಬರಿಮಾರು ಗ್ರಾಮದ ಕಲ್ಲೆಟ್ಟಿ ಬಳಿ ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ಮೃತಪಟ್ಟ ಭೀಕರ ದುರಂತದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಬಂಟ್ವಾಳ ಪಟ್ಟಣ ಹಾಗೂ ಬಿ.ಸಿ.ರೋಡ್ ಸುತ್ತಮುತ್ತಲಿನ ರಸ್ತೆಬದಿಯ ಅಪಾಯಕಾರಿ ಮರಗಳು ಮತ್ತು ಚಾಚಿಕೊಂಡಿದ್ದ ಬೃಹತ್ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಆರಂಭಗೊಂಡಿದೆ. ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಆವರಣ ಹಾಗೂ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಕೊಂಬೆಗಳನ್ನು ಕತ್ತರಿಸಿ ತೆರವುಗೊಳಿಸಲಾಗಿದೆ.ಕಾರ್ಯಾಚರಣೆಯ ವೇಳೆಯಲ್ಲಿ

ಬಂಟ್ವಾಳ: ಶಾಲಾ ಬಸ್ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ – ಅಪಾಯಕಾರಿ ಮರಗಳ ಕೊಂಬೆ ತೆರವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Crime

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ

(ನ್ಯೂಸ್ ಕಡಬ) newskadaba.com ಜು. 25. ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ. ದಾಳಿಗೊಳಗಾದವರನ್ನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಆಗಿದ್ದ ಈತ, ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top