ಕರಾವಳಿ

ವರ್ಕಾಡಿಯಲ್ಲಿ ಮನೆಯೊಂದಕ್ಕೆ ಗುಂಡಿನ ದಾಳಿ..!

(ನ್ಯೂಸ್ ಕಡಬ) newskadaba.com ಜು. 03. ಅಪರಿಚಿತರು ಮನೆಯೊಂದಕ್ಕೆ ಗುಂಡಿನ ದಾಳಿ ನಡೆಸಿದ ಘಟನೆ ವರ್ಕಾಡಿಯಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಮನೆಯ ಕಿಟಿಕಿ ಗಾಜುಗಳು ಒಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ವರ್ಕಾಡಿ ಜಂಕ್ಷನ್ ಸಮೀಪದ ನಲ್ಲೆಂಗಿಪದವಿನ ಬಿ. ಎಂ ಹರೀಶ್ ಎಂಬವರ ಮನೆಯ ಮೇಲೆ ಮುಂಜಾನೆ ಎರಡೂವರೆ ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಶಬ್ದ ಕೇಳಿ ಹರೀಶ್ ಹಾಗೂ ಕುಟುಂಬ ಗಮನಿಸಿದಾಗ ದುಷ್ಕರ್ಮಿಗಳು ಕಾರು ಮತ್ತು ಬೈಕ್ ನಲ್ಲಿ ಪರಾರಿಯಾಗಿರುವುದಾಗಿ ಹರೀಶ್ ಮಂಜೇಶ್ವರ […]

ವರ್ಕಾಡಿಯಲ್ಲಿ ಮನೆಯೊಂದಕ್ಕೆ ಗುಂಡಿನ ದಾಳಿ..! Read More »

ಕರಾವಳಿ
crime, arrest, suspected

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ.   ಮನೆ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ – ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ- ಆರೋಪಿಯ ಬಂಧಿಸದಿದ್ದಲ್ಲಿ ರಾಮಸೇನೆಯ ವತಿಯಿಂದ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು.03. ಪುತ್ತೂರಿನಲ್ಲಿ ರಾಜಕೀಯ ವ್ಯಕ್ತಿಯ ಪುತ್ರನೋರ್ವ ತನ್ನ ಸಹಪಾಠಿಯನ್ನು ಅತ್ಯಾಚಾರಗೈದು ಮದುವೆಯಾಗಲು ನಿರಾಕರಿಸಿರುವುದನ್ನು ಖಂಡಿಸಿರುವ ರಾಮಸೇನಾ ಪುತ್ತೂರು ಸಂಘಟನೆಯು ಆರೋಪಿಯನ್ನು ಬಂಧಿಸದಿದ್ದಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಗುರುವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಮಸೇನಾ ಪುತ್ತೂರು ಜಿಲ್ಲಾಧ್ಯಕ್ಷ ಗೋಪಾಲ ನಾಯ್ಕ್ ಮೇಲಿನಮನೆ ಮಾತನಾಡಿ, ಪುತ್ತೂರು ನಗರಸಭಾ ಸದಸ್ಯ, ವಾಸ್ತುತಜ್ಞ ಪಿ.ಜಿ. ಜಗನ್ನಿವಾಸ ರಾವ್ ಅವರ ಮಗ ತನ್ನ ಸ್ನೇಹಿತೆಯನ್ನು ಅತ್ಯಾಚಾರಗೈದು ಮದುವೆಯಾಗುವುದಾಗಿ ನಂಬಿಸಿ ಮೋಸ

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ- ಆರೋಪಿಯ ಬಂಧಿಸದಿದ್ದಲ್ಲಿ ರಾಮಸೇನೆಯ ವತಿಯಿಂದ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ

ಎಸ್ಎಎಫ್ ಘಟಕದ ಅಧಿಕಾರಿ, ಸಿಬ್ಬಂದಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ಸ್ಪೆಷಲ್ ಆಯಕ್ಷನ್ ಫೋರ್ಸ್ ನ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ಬುಧವಾರ ತರಬೇತಿ ನೀಡಲಾಯಿತು.   ಉತ್ತಮ ಕಾರ್ಯಕ್ಷಮತೆಗಾಗಿ ಕೋಮುಗಲಭೆಯ ಸಂದರ್ಭ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ ಗಲಭೆ ಪ್ರತಿರೋಧ ಗನ್ ಮತ್ತು ಸ್ಟನ್ ಶೆಲ್‌ಗಳ ಉಪಯೋಗದ ಬಗ್ಗೆ ನಡೆಸಲಾದ ಈ ತರಬೇತಿ

ಎಸ್ಎಎಫ್ ಘಟಕದ ಅಧಿಕಾರಿ, ಸಿಬ್ಬಂದಿಗೆ ತರಬೇತಿ Read More »

ಕರಾವಳಿ

ಇಂದಿನಿಂದ ಮಂಗಳೂರು – ಧರ್ಮಸ್ಥಳ ನಡುವೆ ರಾಜಹಂಸ ಬಸ್ ಆರಂಭ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಇಂದಿನಿಂದ ಮಂಗಳೂರು ವಿಭಾಗದ ಎರಡನೇ ಘಟಕದಿಂದ ಮಂಗಳೂರು- ಧರ್ಮಸ್ಥಳ ಮಾರ್ಗವಾಗಿ ಕೆಎಸ್ಸಾರ್ಟಿಸಿಯ ರಾಜಹಂಸ ಬಸ್ ಸಾರಿಗೆಯನ್ನು ಪರಿಚಯಿಸಲಾಗುತ್ತಿದೆ. ಈ ಬಸ್ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಬೆಳಗ್ಗೆ 6.30, 7, 8.30, 9 11.15 ಗಂಟೆಗೆ ಮಧ್ಯಾಹ್ನ 12.15, 2.30, 3.30, 5.30, 6.30ಕ್ಕೆ ಸಂಚರಿಸಲಿದೆ. ಅದೇರೀತಿ ಧರ್ಮಸ್ಥಳದಿಂದ ಮಂಗಳೂರಿಗೆ ಬೆಳಗ್ಗೆ 6.30, 7, 9, 9.15, 11.30 ಮತ್ತು ಮಧ್ಯಾಹ್ನ 12 ಗಂಟೆ, 2.45 ಗಂಟೆ, 3.30 ಗಂಟೆ, 4.30

ಇಂದಿನಿಂದ ಮಂಗಳೂರು – ಧರ್ಮಸ್ಥಳ ನಡುವೆ ರಾಜಹಂಸ ಬಸ್ ಆರಂಭ..! Read More »

ಕರಾವಳಿ

ಪುತ್ತೂರು: ಸಂತ್ರಸ್ತೆಯ ಮನೆಗೆ ಮಹಿಳಾ ಸಂಘಟನೆಗಳ ನಿಯೋಗ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 03. ಬಿಜೆಪಿ ಮುಖಂಡನ ಪುತ್ರನಿಂದ ವಂಚನೆಗೊಳಗಾಗಿರುವ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ನಂತರ ತಲೆ ಮರೆಸಿಕೊಂಡಿರುವ ಕೃಷ್ಣ ರಾವ್ ನನ್ನು ತಕ್ಷಣ ಬಂಧಿಸಬೇಕು. ಗರ್ಭಪಾತಕ್ಕೆ ಒತ್ತಾಯಿಸಿ ಹಣದ ಆಮಿಷ ಒಡ್ಡಿದ ಸಂಘಟನೆಗಳ ಪ್ರಮುಖರನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಅವರು, ನ್ಯಾಯ ಒದಗಿಸದಿದ್ದಲ್ಲಿ

ಪುತ್ತೂರು: ಸಂತ್ರಸ್ತೆಯ ಮನೆಗೆ ಮಹಿಳಾ ಸಂಘಟನೆಗಳ ನಿಯೋಗ ಭೇಟಿ Read More »

ಕರಾವಳಿ

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ – ಉಪವಿಭಾಗಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯು ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ ಇದ್ದಾಗ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯತ್ ಸಮನ್ವಯದೊಂದಿಗೆ ಐ.ಇ. ಸಿ ಚಟುವಟಿಕೆಗಳನ್ನು   ಹಮ್ಮಿಕೊಂಡು ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ – ಉಪವಿಭಾಗಾಧಿಕಾರಿ ಸೂಚನೆ Read More »

ಕರಾವಳಿ

ಜುಲೈ 8 ರಂದು ದಿಶಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸುವ ಸಂಬಂಧ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ಘನ ಅಧ್ಯಕ್ಷತೆಯಲ್ಲಿ ಜುಲೈ 8 ರಂದು ಬೆಳಿಗ್ಗೆ 10.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜುಲೈ 8 ರಂದು ದಿಶಾ ಸಭೆ Read More »

ಕರಾವಳಿ

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಆದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ Read More »

ಕರಾವಳಿ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಇತರೆ ಕೋರ್ಸ್‍ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ ರೂ.20000,  ಬಿ.ಎ/ಬಿ.ಕಾಂ/ಬಿ.ಎಸ್ಸಿ/ ಬಿ.ಎಡ್/ಬಿ.ಪಿ.ಎಡ್ ರೂ.25,000, ಸ್ನಾತ್ತಕೋತರ ಪದವಿಗಳಿಗೆ ರೂ.30000, ಅಗ್ರಿಕಲ್ಚರ್/ಇಂಜಿನಿಯರಿಂಗ್/ವೆಟರ್ನರಿ/ ವೈದ್ಯಕೀಯ ಕೋರ್ಸ್‍ ಗಳಿಗೆ ರೂ.35000 ಪ್ರೋತಾಹಧನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ https://swd.karnataka.gov.in/ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top