ಕರಾವಳಿ

ಅಡಿಕೆಗೆ ಔಷಧಿ ಸಿಂಪಡನೆ ವೇಳೆ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 28. ವಿದ್ಯುತ್ ತಗುಲಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಅರಸಿನಮಕ್ಕಿಯ ಎಂಜೀರ ಎಂಬಲ್ಲಿ ನಡೆದಿದೆ.   ಮೃತಪಟ್ಟವರನ್ನು ಉಡೈರೆ ಕೃಷ್ಣಪ್ಪ ಕುಲಾಲ್(49) ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ರವರು ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುತ್ತಿದ್ದ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ವಿದ್ಯುತ್‌ ತಗುಲಿ ಈ ದುರ್ಘಟನೆ ನಡೆದಿದೆನ್ನಲಾಗಿದೆ.   ಕೂಡಲೇ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಡಿಕೆಗೆ ಔಷಧಿ ಸಿಂಪಡನೆ ವೇಳೆ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಕಲಿ ದಾಖಲೆ ಸೃಷ್ಟಿ ಆರೋಪ ಮೂವರು ಆರ್.ಟಿಒ ಅಧಿಕಾರಿಗಳ ಅಮಾನತು

(ನ್ಯೂಸ್ ಕಡಬ) newskadaba.com ಜೂ. 28. ಬೆಲೆಬಾಳುವ ಕಾರೊಂದರ ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ಆರ್‌ಟಿಒ ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಕುರಿತು ವರದಿಯಾಗಿದೆ.   ಆರ್‌ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕ, ಕಚೇರಿಯ ಅಧೀಕ್ಷಕಿ ಹಾಗೂ ಸ್ಥಾನೀಯ ಸಹಾಯಕಿಯನ್ನು ಅಮಾನತುಗೊಳಿಸಲಾಗಿದೆ. ಮಂಗಳೂರು ಆರ್‌ಟಿಒ ಕಚೇರಿಯಲ್ಲಿ 1,96,95,000 ರೂ.ಗಳ ಐಷಾರಾಮಿ ಕಾರನ್ನು 32,15,000 ರೂ. ಮೌಲ್ಯಕ್ಕೆ ನಕಲಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಆರ್‌ಟಿಒ

ನಕಲಿ ದಾಖಲೆ ಸೃಷ್ಟಿ ಆರೋಪ ಮೂವರು ಆರ್.ಟಿಒ ಅಧಿಕಾರಿಗಳ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್
Swetcha Votarkar

ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು !

(ನ್ಯೂಸ್‌ ಕಡಬ) newskadaba.com ಜೂ.28: ಹೈದರಾಬಾದ್‌ನಲ್ಲಿ ಪ್ರಸಿದ್ಧ ಸುದ್ದಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಸ್ತುತ ಟಿ ನ್ಯೂಸ್(T News) ಚಾನೆಲ್‌ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಸುದ್ದಿ ನಿರೂಪಕಿಯ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಗಾಂಧಿ

ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು ! Read More »

ಕರಾವಳಿ

ಮನಪಾ: ಲೋಕಾಯುಕ್ತ ಅಧಿಕಾರಿಗಳಿಂದ ಮುಂದುವರಿದ ಕಡತ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜೂ. 28. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ನಗರ ಯೋಜನೆ ವಿಭಾಗದಲ್ಲಿ ಕಡತಗಳನ್ನು ಪರಿಶೀಲಿಸಿದರು. ಕಡತ ಪರಿಶೀಲನೆ ವೇಳೆ ಟಿ.ಡಿ.ಆರ್.ನಲ್ಲಿ ಕೆಲವು ಅವ್ಯಹಾರ ನಡೆದಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಜೂ. 21ರಂದು ಮೊದಲ ಬಾರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಡರಾತ್ರಿವರೆಗೆ ಪಾಲಿಕೆಯ ವಿವಿಧ ವಿಭಾಗಗಳಲ್ಲಿ ಕಡತಗಳನ್ನು ಪರಿಶೀಲಿಸಿದ್ದರು. ಈ ವೇಳೆ ಹಲವು ಅವ್ಯವಹಾರ, ಅಧಿಕಾರ ದುರುಪಯೋಗ ನಡೆದಿರುವುದು ಕಂಡು ಬಂದಿತ್ತು. ನಂತರ,

ಮನಪಾ: ಲೋಕಾಯುಕ್ತ ಅಧಿಕಾರಿಗಳಿಂದ ಮುಂದುವರಿದ ಕಡತ ಪರಿಶೀಲನೆ Read More »

ಕರಾವಳಿ

ತಾಯಿಯ ಕೊಲೆ ಪ್ರಕರಣ ವಿಚಾರಣೆ ವೇಳೆ ಸತ್ಯ ಬಹಿರಂಗ

(ನ್ಯೂಸ್ ಕಡಬ) newskadaba.com ಜೂ. 28. ವರ್ಕಾಡಿ ನಲ್ಲೆಂಗಿಯ ಹಿಲ್ಡಾ ಮೊಂತೇರೋರವರ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಆರೋಪಿ ಪುತ್ರ ಮೆಲ್ವಿನ್ ವಿಚಾರಣೆ ವೇಳೆ ಆಸ್ತಿ ಹಾಗೂ ಹಣಕ್ಕಾಗಿ ಈ ಕೃತ್ಯ ನಡೆಸಿದ್ದಾನೆ ಎಂದು ಬೆಚ್ಚಿ ಬೀಳಿಸುವ ಹೇಳಿಕೆಗಳನ್ನು ನೀಡಿದ್ದಾನೆ.   ಈ ವಿಚಾರವಾಗಿ ಕೆಲ ದಿನಗಳಿಂದ ಈತ ತಾಯಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಮಾತ್ರವಲ್ಲದೇ ಒತ್ತಡ ಹೇರುತ್ತಿದ್ದನು ಎನ್ನಲಾಗಿದೆ. ತನಗೆ ವಿವಾಹ ಮಾಡಿಕೊಡಬೇಕು ಇದಕ್ಕಾಗಿ ಹಣ ನೀಡುವಂತೆ ಮೆಲ್ವಿನ್ ತಾಯಿಯಲ್ಲಿ ಒತ್ತಡ ಹಾಕುತ್ತಿದ್ದನು. . ಇದಲ್ಲದೇ ಆಸ್ತಿಯನ್ನು

ತಾಯಿಯ ಕೊಲೆ ಪ್ರಕರಣ ವಿಚಾರಣೆ ವೇಳೆ ಸತ್ಯ ಬಹಿರಂಗ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ !

(ನ್ಯೂಸ್‌ ಕಡಬ) newskadaba.com ಜೂ.28: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಜುಲೈ 3ರ ವರೆಗೂ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಮತ್ತು ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ ! Read More »

ಕರಾವಳಿ, ಕರ್ನಾಟಕ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 28. ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ) ಕಡಬ ತಾಲೂಕು ಸಮಿತಿ ದ.ಕ ಹಾಗೂ ಸರಸ್ವತೀ ವಿದ್ಯಾಲಯದ ಸಾಹಿತ್ಯ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಸಾಹಿತ್ಯ ಪರಂಪರೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 27ರಂದು ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ವಿಶೇಷ ಉಪನ್ಯಾಸಕರಾಗಿ ಶ್ರೀ ಗಣರಾಜ ಕುಂಬ್ಳೆ, ಪ್ರಾಚಾರ್ಯರು ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯ ರಾಮಕುಂಜ ಆಗಮಿಸಿ ಪ್ರಾಚೀನ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ

“ದಲಿತ ಸಾಹಿತ್ಯ ಅರ್ಧಶತಮಾನ’” ಶಿಬಿರ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು, ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ.   ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್‍ ಸೈಟ್ https://sahithyaacademy.karnataka.gov.in

“ದಲಿತ ಸಾಹಿತ್ಯ ಅರ್ಧಶತಮಾನ’” ಶಿಬಿರ: ಅರ್ಜಿ ಆಹ್ವಾನ Read More »

ಕರಾವಳಿ

ರಸ್ತೆ ನಾಮಕರಣ: ಆಕ್ಷೇಪಣೆ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 28. ಉಳ್ಳಾಲ ತಾಲೂಕಿನ ಸೋಮೇಶ್ವರದಿಂದ ಬಟಪಾಡಿ ರಸ್ತೆಗೆ “ಅಮೃತ ಸೋಮೇಶ್ವರ ರಸ್ತೆ” ಎಂದು ನಾಮಕರಣ ಮಾಡಲು ನಿರ್ಣಯಿಸಲಾಗಿದೆ. ಆದುದರಿಂದ ಈ ಪ್ರಕಟಣೆ ಪ್ರಕಟಿಸಿದ 30 ದಿನಗಳೊಳಗೆ ಈ ಬಗ್ಗೆ ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆ ನೀಡಬಹುದು ಎಂದು ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ರಸ್ತೆ ನಾಮಕರಣ: ಆಕ್ಷೇಪಣೆ ಆಹ್ವಾನ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜೂ. 28. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನಗೊಂಡಿರುವ ಮಂಗಳೂರು ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆ ಗ್ರೇಡ್ 2 ತಹಶೀಲ್ದಾರ್ ರಫೀಕ್ ಚೌಧರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ತಾಲೂಕು ಕಚೇರಿಯಲ್ಲಿ ನಡೆಯಿತು. ವಿಕಲಚೇತನರ ವಿಶೇಷ ಗುರುತಿನ ಚೀಟಿ ನೊಂದಣಿಗೆ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಅವರು ಸೂಚಿಸಿದರು. ಮಹಿಳೆಯರ ಮತ್ತು ಮಕ್ಕಳ ಮಾರಾಟ ಸಾಗಾಟ, ವರದಕ್ಷಿಣೆ, ಬಾಲ್ಯವಿವಾಹ,

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ Read More »

ಕರಾವಳಿ
Scroll to Top