ಕರಾವಳಿ

ಮುನ್ನೂರು: ಜುಲೈ 1 ರಂದು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಉಳ್ಳಾಲ ತಾಲೂಕು ಮುನ್ನೂರು ಗ್ರಾಮ ಪಂಚಾಯತ್‍ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಜುಲೈ 1ರಂದು ಬೆಳಿಗ್ಗೆ 10.30 ಗಂಟೆಗೆ ಮುನ್ನೂರು ಸುಭಾಸ್ ನಗರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು  ಮುನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುನ್ನೂರು: ಜುಲೈ 1 ರಂದು ಗ್ರಾಮ ಸಭೆ Read More »

ಕರಾವಳಿ

ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು ಸಹಕಾರದೊಂದಿಗೆ ನಾಡಪ್ರಭು ಕೆಂಪೇಗೌಡ ಜಯಂತಿ  ಜೂನ್ 27ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  

ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ Read More »

ಕರಾವಳಿ

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಿರ್ಮಾಣಗೊಂಡ 2.1 ಕಿ.ಮೀ. ಉದ್ದದ ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿಯು ಇದೀಗ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಜೂ. 02ರಂದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಾರಂಭದಲ್ಲಿ ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಧಿಕೃತ ಅವಕಾಶ ನೀಡಲಾಗಿತ್ತು, ಆದರೆ ಎರಡೂ ಭಾಗಕ್ಕೂ ಸಂಚರಿಸುವ ವಾಹನಗಳು ಒಂದೇ ಬದಿಯಿಂದ ಸಂಚರಿಸುತ್ತಿದ್ದವು. ಇದೀಗ ಫ್ಲೈಓವರ್‌

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..! Read More »

ಕರಾವಳಿ, ಕರ್ನಾಟಕ

ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 26. ಪುತ್ತೂರು ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ  ಉಮಾನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಜೂನ್ 30ರಂದು ಬೆಳಿಗ್ಗೆ 10 ರಿಂದ ಅಪರಾಹ್ನ ಗಂಟೆ 2ರ ವರೆಗೆ ಯುವನಿಧಿ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಪುತ್ತೂರು ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಯುವನಿಧಿ ಯೋಜನೆಯಡಿ 2023 ಹಾಗೂ 2024ನೇ ಸಾಲಿನಲ್ಲಿ ಯಾವುದೇ

ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ Read More »

ಕರಾವಳಿ

ಬೆಳೆ ವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ.   ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಣಿಯಾಗಬಹುದು. ಬೆಳೆಸಾಲ ಪಡೆದ ರೈತರು

ಬೆಳೆ ವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ Read More »

ಕರಾವಳಿ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. 2025-26 ನೇ ಸಾಲಿನ ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ ಡಿಪ್ಲೋಮಾ ಕೋರ್ಸ್‍ ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸು ಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್ ವಿಭಾಗದಲ್ಲಿ  ಬಾಕಿ ಉಳಿದಿರುವ ಸೀಟುಗಳಿಗೆ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಅವರು ಜೂನ್ 30 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55 ಕ್ಕೆ- ಮಂಗಳೂರು ವಿಮಾನ ನಿಲ್ದಾಣ ಆಗಮನ, 9 ಗಂಟೆಗೆ ಸರ್ಕ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  2025-26 ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ, ರಾತ್ರಿ 7:15ಕ್ಕೆ – ಮಂಗಳೂರು

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ Read More »

ಕರಾವಳಿ

ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಳ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 26. ನದಿ ಪಾತ್ರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ಕುಮಾರಧಾರ ನದಿಗಿಂತಲೂ ಹೆಚ್ಚಿನ ನೀರಿನ ಹರಿವು ನೇತ್ರಾವತಿ ನದಿಯಲ್ಲಿ ಕಂಡು ಬಂದಿದ್ದು, ದ.ಕ. ಜಿಲ್ಲೆಯ ಜೀವನದಿಯಾದ ನೇತ್ರಾವತಿ ನದಿಯು ಉಪ್ಪಿನಂಗಡಿಯಲ್ಲಿ ಸಮುದ್ರಮಟ್ಟಕ್ಕಿಂತ 28.05 ಮೀ. ಎತ್ತರದಲ್ಲಿ ಹರಿಯುತ್ತಿದೆ. ಇಲ್ಲಿ ನದಿಯ ಅಪಾಯದ ಮಟ್ಟ 31.೦ ಆಗಿದೆ.   ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ನದಿಗಿಳಿಯಲು ಒಟ್ಟು 36 ಮೆಟ್ಟಿಲುಗಳಿದ್ದು, ಅದರಲ್ಲಿ ಜೂ.25ರ ರಾತ್ರಿ ವೇಳೆ 27 ಮೆಟ್ಟಿಲುಗಳು ಮುಳುಗಿದ್ದು,

ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಳ..! Read More »

ಕರಾವಳಿ

ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿ- ಚಾಲಕ ಪಾರು

(ನ್ಯೂಸ್ ಕಡಬ) newskadaba.com ಜೂ. 26. ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ನಡೆದಿದೆ.   ಬೆಂಗಳೂರಿನಿಂದ ಮಂಗಳೂರಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳನ್ನು ಸಾಗಿಸುತ್ತಿದ್ದ ಈ ಲಾರಿಯು ದಾರಿ ಮಧ್ಯದ ಕೊಡ್ಯಕಲ್ಲು ಎಂಬಲ್ಲಿ ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದ ಲಾರಿಯು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.   ಘಟನಾ ಸ್ಥಳಕ್ಕೆ ಉಪ್ಪಿನಂಗಡಿ

ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿ- ಚಾಲಕ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಣ್ಣು ತೆರವು- ಸಂಚಾರ ಪುನರಾರಂಭ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 26. ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುರುವಾರದಂದು ಬೆಳಗ್ಗೆ ಮತ್ತೆ ಗುಡ್ಡ ಕುಸಿತಗೊಂಡು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.   ಇದೀಗ ಮಣ್ಣು ತೆರವುಗೊಳಿಸಿದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ಮತ್ತೆ ಪುನರಾರಂಭಗೊಂಡಿದೆ.   ಇದೇ ಸ್ಥಳದಲ್ಲಿ ಎರಡು ದಿನಗಳ ಹಿಂದೆ ಕೂಡ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿತ್ತು. ಇದೀಗ ಜೂ.26ರಂದು ಬೆಳಿಗ್ಗೆ ಮತ್ತೆ ಮಣ್ಣು ಕುಸಿತಗೊಂಡು

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಣ್ಣು ತೆರವು- ಸಂಚಾರ ಪುನರಾರಂಭ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top