ಕರಾವಳಿ

50 ಅಡಿ ಆಳದ ಬಾವಿಯಿಂದ ಅಪರೂಪದ ಚಿಪ್ಪು ಹಂದಿ ರಕ್ಷಣೆ

(ನ್ಯೂಸ್ ಕಡಬ) newskadaba.com ಜೂ. 21. 50 ಅಡಿ ಆಳದ ಬಾವಿಗೆ ಬಿದ್ದಿದ್ದ ಅಪರೂಪದ ಚಿಪ್ಪು ಹಂದಿಯನ್ನು ಅರಣ್ಯ ಇಲಾಖೆ ಹಾಗೂ ಸ್ಥಳೀಯರ ಸಹಕಾರದಿಂದ ರಕ್ಷಿಸಿದ ಘಟನೆ ಹಿರಿಯಡ್ಕ ಸಮೀಪದ ಬೊಮ್ಮರಬೆಟ್ಟು ಗ್ರಾಮದ ಗುಡ್ಡಿಯಂಗಡಿಯಲ್ಲಿ ನಡೆದಿದೆ.   ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿಥಿನ್ ಹಿರೇಹಡ್ಕ ಅವರು ತಕ್ಷಣವೇ ವಲಯ ಅರಣ್ಯ ಅಧಿಕಾರಿ ಪ್ರಭಾಕರ್ ಕುಲಾಲ್ ಅವರಿಗೆ ಚಿಪ್ಪುಹಂದಿಯ ಬಗ್ಗೆ ಮಾಹಿತಿ ನೀಡಿದರು. ಕೂಡಲೇ ಸ್ಪಂದಿಸಿದ ಕುಲಾಲ್ ನೇತೃತ್ವದ ಅರಣ್ಯ ಇಲಾಖೆ ತಂಡ ಸ್ಥಳಕ್ಕೆ ಧಾವಿಸಿತ್ತು. ಸ್ಥಳೀಯರು ಮತ್ತು […]

50 ಅಡಿ ಆಳದ ಬಾವಿಯಿಂದ ಅಪರೂಪದ ಚಿಪ್ಪು ಹಂದಿ ರಕ್ಷಣೆ Read More »

ಕರಾವಳಿ

SCS ಆಸ್ಪತ್ರೆ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 21.  ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಸ್.ಸಿ.ಎಸ್. ಆಸ್ಪತ್ರೆಯ ಸಭಾಂಗಣದಲ್ಲಿ ಇಂದು ಆಯೋಜಿಸಲಾಯಿತು. ಯುವ ಪೀಳಿಗೆಯು ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುವುದು ಹಾಗೂ ತಮ್ಮ ಜೀವನಶೈಲಿಯನ್ನು ಯೋಗಾಭ್ಯಾಸದ ಮೂಲಕ ಸುಧಾರಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಅತ್ಯಂತ ಉತ್ಸಾಹಭರಿತರಾಗಿ ಭಾಗವಹಿಸಿದರು.   ಅಂತರಾಷ್ಟ್ರೀಯ ಯೋಗ ಗುರು ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರ ನೇತೃತ್ವದಲ್ಲಿ ಯೋಗ ತರಬೇತಿಯನ್ನು ಆಯೋಜಿಸಲಾಯಿತು. ಕಳೆದ 47 ವರ್ಷಗಳಿಂದ ಮೂರುವರೆ ಲಕ್ಷಕ್ಕೂ ಅಧಿಕ ಜನರಿಗೆ ಉಚಿತ ಯೋಗ ತರಬೇತಿ ನೀಡಿ ಅತ್ಯುತ್ತಮ ಸೇವೆಯನ್ನು ನೀಡಿದ್ದಾರೆ.

SCS ಆಸ್ಪತ್ರೆ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 21. ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆಯನ್ನು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಎಕ್ಸ್ ಪರ್ಟ್ ಸಮೂಹ ಸಂಸ್ಥೆಗಳ ಐಟಿ ನಿರ್ದೇಶಕರಾಗಿರುವ ಅಂಕುಶ್ ಎನ್ ನಾಯಕ್ ಅವರು ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಕ್ಕಳನ್ನುದ್ದೇಶಿಸಿ ಮಾತನಾಡಿದ ಅವರು, ಶಕ್ತಿ ಶಾಲೆಯಲ್ಲಿ ಸಂಗೀತ ದಿನಾಚರಣೆಯನ್ನು ಆಚರಿಸುತ್ತಿರುವುದಕ್ಕೆ ಅಭಿನಂದನೆಯನ್ನು ತಿಳಿಸುತ್ತೇನೆ. ದಿನದಲ್ಲಿ ಕನಿಷ್ಠ ಒಂದು ಗಂಟೆಯಾದರೂ ನಾವು ನಮ್ಮ

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ Read More »

ಕರಾವಳಿ

ಯೋಗ ದಿನ ನಿತ್ಯ ಮಾಡಬೇಕು – ಯೋಗ ಶಿಬಿರ ಕಾರ್ಯಕ್ರಮದಲ್ಲಿ ಸುಮಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಜೂ. 21. ಆರೋಗ್ಯ ಭಾರತಿ ಮಂಗಳೂರು, ರುದ್ರ ಸಮಿತಿ ಶ್ರೀ ಭಾರತೀ ಕಾಲೇಜು ಮಂಗಳೂರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ(ರಿ) ಮಂಗಳೂರು ಜಿಲ್ಲಾ ಇದರ ಜಂಟಿ ಆಶ್ರಯದಲ್ಲಿ ಜೂನ್  21 ವಿಶ್ವಯೋಗ ದಿನದಂದು ಯೋಗ ಶಿಬಿರ ಕಾರ್ಯಕ್ರಮವು ಶ್ರೀಭಾರತಿ ಕಾಲೇಜು ನಂತೂರುಪದವಿನಲ್ಲಿ ನಡೆಯಿತು. ಯೋಗ ಗುರುಗಳಾದ ಶ್ರೀಮತಿ ಸುಮಾ ಶೆಟ್ಟಿ ಮತ್ತು ಶ್ರೀ ಕಾಟಿಪಳ್ಳ ಸುಬ್ರಮಣ್ಯ ಭಟ್ ಯೋಗ ತರಬೇತಿ ನೀಡಿದರು. ಸುಮಾರು 25 ಮಂದಿ ಈ ಶಿಬಿರದ ಪ್ರಯೋಜನ ಪಡೆದರು.   ಕಾರ್ಯದರ್ಶಿ ಆರೋಗ್ಯ ಭಾರತಿ

ಯೋಗ ದಿನ ನಿತ್ಯ ಮಾಡಬೇಕು – ಯೋಗ ಶಿಬಿರ ಕಾರ್ಯಕ್ರಮದಲ್ಲಿ ಸುಮಾ ಶೆಟ್ಟಿ Read More »

ಕರಾವಳಿ

ಜೂನ್ 25ರಂದು ಬಾಳ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಜೂ. 21. ಬಾಳ ಗ್ರಾಮ ಪಂಚಾಯತ್‍ನ ಗ್ರಾಮ ಸಭೆಯು ಜೂನ್ 25ರಂದು ಬೆಳಿಗ್ಗೆ 11 ಗಂಟೆಗೆ ಬಾಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 25ರಂದು ಬಾಳ ಗ್ರಾಮ ಸಭೆ Read More »

ಕರಾವಳಿ

ಜೂನ್ 30 ರಂದು ತ್ರೈಮಾಸಿಕ ಕೆಡಿಪಿ ಸಭೆ

(ನ್ಯೂಸ್ ಕಡಬ) newskadaba.com ಜೂ. 21. ಜೂನ್ 23 ರಂದು ನಿಗದಿಯಾಗಿದ್ದ 2025-26ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆ ಮುಂದೂಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 10.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜೂನ್ 30 ರಂದು ತ್ರೈಮಾಸಿಕ ಕೆಡಿಪಿ ಸಭೆ Read More »

ಕರಾವಳಿ

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 21. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಅನ್‍ಲೈನ್ ಅರ್ಜಿ ಅಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ Read More »

ಕರಾವಳಿ

ವಿಕಲಚೇತನರ ಸಬಲೀಕರಣ: ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಜೂ. 21. 2025-26ನೇ ಸಾಲಿಗೆ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಸಹ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ. ಆಸಕ್ತರು www.depwd.gov.in ಅಥವಾ www.depwd.gov.in ನಲ್ಲಿ ಅರ್ಜಿಗಳನ್ನು ಇಂಗ್ಲಿಷ್ ಭಾಷೆಯಲ್ಲಿ ಭರ್ತಿ ಮಾಡಿ ಜುಲೈ 15 ರ ಒಳಗೆ ಆನ್‍ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿಯನ್ನು ಸಂಪರ್ಕಿಸಬಹುದು

ವಿಕಲಚೇತನರ ಸಬಲೀಕರಣ: ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ Read More »

ಕರಾವಳಿ

ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 21. ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫಲಾನುಭವಿಗಳ ದಾಖಲೆ ಪರಿಶೀಲನೆ, ಸ್ಥಳ ಪರಿಶೀಲನೆ, ಮತ್ತಿತರ ಪ್ರಕ್ರಿಯೆಗಳನ್ನು ವಿಳಂಬವಾಗಿ ನಡೆಸುವುದು ಸರಿಯಲ್ಲ. ಇದರಿಂದ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯಗಳು ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಅಗತ್ಯವಿದ್ದರೆ ಮಾತ್ರ

ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಕಪೋತಾಸನ ಭಂಗಿಯಲ್ಲಿ ಬುಕ್ ಆಫ್ ರೆಕಾರ್ಡ್ ಬರೆದ ಮಂಗಳೂರಿನ ಶರಣ್ಯ ಶರತ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ನಗರದ ಫಲ್ನೀರ್ ನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ಯೋಗಾಸನದಲ್ಲಿ ದಾಖಲೆ ಬರೆದಿದ್ದಾಳೆ.   ಶರಣ್ಯ ತನ್ನ ಎಂಟನೇ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದಾಳೆ. ಇದರೊಂದಿಗೆ ಸದ್ಯ ತಮಿಳುನಾಡಿನ ಹರಿಣಿತ ಬಿ.ಎಸ್. ಇವರ ಹೆಸರಿನಲ್ಲಿದ್ದ 15 ನಿಮಿಷದ ಕಪೋತಾಸನದ ದಾಖಲೆಯನ್ನು ಮುರಿದು

ಕಪೋತಾಸನ ಭಂಗಿಯಲ್ಲಿ ಬುಕ್ ಆಫ್ ರೆಕಾರ್ಡ್ ಬರೆದ ಮಂಗಳೂರಿನ ಶರಣ್ಯ ಶರತ್..! Read More »

ಕರಾವಳಿ, ಕರ್ನಾಟಕ
Scroll to Top