ಕರಾವಳಿ

250 ನಿವೇಶನ ರಹಿತ ಬಡಕುಟುಂಬಗಳಿಗೆ ಶೀಘ್ರವೇ ಮನೆ ನಿರ್ಮಾಣ- ಅಶೋಕ್ ರೈ

(ನ್ಯೂಸ್ ಕಡಬ) newskadaba.com ಜೂ. 20. ಚುನಾವಣೆಗೂ ಮೊದಲೇ ತನ್ನ ರೈ ಎಸ್ಟೇಟ್ ಆ್ಯಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ನಿವೇಶನಕ್ಕೆ ನೋಂದಣಿ ಮಾಡಿಸಿಕೊಂಡ 250 ಮಂದಿ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ವಿಟ್ಲ ಮುಡ್ನೂರು ಗ್ರಾಮದ ಕಟ್ಟತ್ತಿಲದಲ್ಲಿ ಮನೆ ನಿರ್ಮಾಣವಾಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈಗಾಗಲೇ ಮನೆ ನಿರ್ಮಾಣಕ್ಕೆ ಜಾಗ ಖರೀದಿ ಮಾಡಿದ್ದು, ಆ ಜಾಗದಲ್ಲೇ ಮನೆ ನಿರ್ಮಾಣ […]

250 ನಿವೇಶನ ರಹಿತ ಬಡಕುಟುಂಬಗಳಿಗೆ ಶೀಘ್ರವೇ ಮನೆ ನಿರ್ಮಾಣ- ಅಶೋಕ್ ರೈ Read More »

ಕರಾವಳಿ

ಪ್ರಚೋದನಾಕಾರಿ ಪೋಸ್ಟ್- ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಜೂ. 20. ವಾಟ್ಸಪ್‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ಶಾಂತಿ ಭಂಗ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪಿಗೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಕಾಸರಗೋಡು ನಿವಾಸಿ ಸತ್ಯನಾರಾಯಣ ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದರು.   ಆರೋಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಚೋದನಾಕಾರಿ ಪೋಸ್ಟ್- ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ಕರಾವಳಿ

ಮಧ್ಯರಾತ್ರಿ ಕಾರ್ಯಾಚರಣೆ ವಿರುದ್ದ ದೂರು ಸಲ್ಲಿಕೆ – ಯುಜಿ ರಾಧಾ ಅವರಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ

(ನ್ಯೂಸ್ ಕಡಬ) newskadaba.com ಜೂ. 20. ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ, ಕಿರುಕುಳ ವಿರುದ್ಧ ಉಪ್ಪಿನಂಗಡಿ ಹಿರಿಯ ನಾಗರಿಕ ಯು.ಜಿ.ರಾಧಾ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡಿರುವ ಹೈಕೋರ್ಟ್, ಕಾನೂನಿನಿಂದ ಸ್ಥಾಪಿಸಲಾದ ಕಾರ್ಯವಿಧಾನದ ಹೊರತುಪಡಿಸಿ ಅರ್ಜಿದಾರರಿಗೆ ಯಾವುದೇ ತೊಂದರೆ ನೀಡದಂತೆ ನಿರ್ಬಂಧಿಸಿ ಮಧ್ಯಂತರ ಆದೇಶ ನೀಡಿದೆ. ಪೊಲೀಸರು ಮಧ್ಯರಾತ್ರಿಯಲ್ಲಿ ಮನೆಗೆ ಬಂದು ಆರೋಪಿ ರೀತಿಯಲ್ಲಿ ಫೋಟೋ ತೆಗೆಸಿ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆಂದು ಆರೋಪಿಸಿ ಯು.ಜಿ.ರಾಧಾ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿ, ಈ ಸಂಬಂಧ ಪ್ರತಿವಾದಿಗಳಿಗೆ

ಮಧ್ಯರಾತ್ರಿ ಕಾರ್ಯಾಚರಣೆ ವಿರುದ್ದ ದೂರು ಸಲ್ಲಿಕೆ – ಯುಜಿ ರಾಧಾ ಅವರಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ Read More »

ಕರಾವಳಿ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ 7 ಪಿಎಸ್ಐ, 31 ಹೆಚ್.ಸಿ, 78 ಪಿಸಿಗಳ ಸಹಿತ ಜಿಲ್ಲೆಯ 116 ಸಿಬ್ಬಂದಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಜೂ. 20. ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಗುರಿಯನ್ನು ಹೊಂದಿರುವ ಮಹತ್ವದ ಆಡಳಿತಾತ್ಮಕ ಸುಧಾರಣೆಯಲ್ಲಿ ಮಂಗಳೂರು ನಗರ ಕಮಿಷನರೇಟ್ ಮತ್ತು ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಕಡಬ, ವಿಟ್ಲ, ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿನ 7 ಮಂದಿ ಎ.ಎಸ್.ಐ, 31 ಮಂದಿ ಹೆಡ್‌ಕಾನ್‌ಸ್ಟೇಬಲ್ ಮತ್ತು 78 ಮಂದಿ ಕಾನ್‌ಸ್ಟೇಬಲ್‌ಗಳನ್ನು ವರ್ಗಾವಣೆಗೊಳಿಸಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ 7 ಪಿಎಸ್ಐ, 31 ಹೆಚ್.ಸಿ, 78 ಪಿಸಿಗಳ ಸಹಿತ ಜಿಲ್ಲೆಯ 116 ಸಿಬ್ಬಂದಿಗಳ ವರ್ಗಾವಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆಯ ಡಾ. ತಾರಿಕಾ ಎಸ್. ಬಂಗೇರ ಅವರಿಗೆ ಪಿಹೆಚ್ ಡಿ ಪದವಿ

(ನ್ಯೂಸ್ ಕಡಬ) newskadaba.com ಜೂ. 20. ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ತಾರಿಕಾ ಎಸ್. ಬಂಗೇರ ಅವರ “ಕಂಪಾರೇಟಿವ್ ಫಾರ್ಮಾಸ್ಸಿಟಿಕೋ ಅನಾಲಿಟಿಕಲ್ ಮತ್ತು ಟೊಕ್ಸಿಕೊಲಾಜಿ ಕಲ್ ಸ್ಟಡೀ ಆಫ್ ರಜತ ಚಂದ್ರೋದಯ ಮತ್ತು ರಜತ ಸಿಂಧೂರ ವಿದ್ ಇಮ್ಯೂನೋಮೊಡ್ಯು ಲೇಟರೀ ಇಪೊಕ್ಟ್” ಅನ್ನುವ ಸಂಶೋಧನಾ ಪ್ರಬಂಧಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಡಾ. ಬಿ

ಮೂಡಬಿದಿರೆಯ ಡಾ. ತಾರಿಕಾ ಎಸ್. ಬಂಗೇರ ಅವರಿಗೆ ಪಿಹೆಚ್ ಡಿ ಪದವಿ Read More »

ಕರಾವಳಿ

ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಇಬ್ರಾಹಿಂಪುರ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಜೂ.19. ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಚುರುಕು‌ಮುಟ್ಟಿಸುವ ಉದ್ದೇಶದಿಂದ ವರ್ಗಾವಣೆ ಪರ್ವ ಜೋರಾಗಿದ್ದು, ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕೆಲವು ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ. ಅದರಂತೆ ಕಡಬ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಹುದ್ದೆಗೆ ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಇಬ್ರಾಹಿಂಪುರ ಎಂಬವರನ್ನು ವರ್ಗಾಯಿಸಿ ಆದೇಶಿಸಲಾಗಿದೆ. ಉಡುಪಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀಮತಿ ವಿಜಯ ರವರನ್ನು ಮುಲ್ಕಿ ತಾಲೂಕು ಪಂಚಾಯತ್ ಗೆ ವರ್ಗಾಯಿಸಿ ಆದೇಶಿಸಲಾಗಿದೆ.

ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಇಬ್ರಾಹಿಂಪುರ ನೇಮಕ Read More »

ಕರಾವಳಿ

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ(SSP) 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷ ಒಳಗಿರಬೇಕು. ಎಸ್.ಎಸ್.ಪಿಪೋರ್ಟಲ್ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಎಸ್.ಎಸ್.ಪಿಯಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ- ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಶಾಲಾ ವಾಹನಗಳ ಮೇಲೆ ವಿಶೇಷ ತಪಾಸಣಾ ಡ್ರೈವ್ 1.58 ಲಕ್ಷ ರೂ. ದಂಡ ವಸೂಲು

(ನ್ಯೂಸ್ ಕಡಬ) newskadaba.com ಜೂ. 19. ಇತ್ತೀಚಿನ ದಿನಗಳಲ್ಲಿ ಶಾಲಾ ವಾಹನಗಳು ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆ, ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದರಿಂದ ಉಡುಪಿ ಜಿಲ್ಲಾ ಪೊಲೀಸರು ಗುರುವಾರದಂದು ಬೆಳಗ್ಗೆ 7 ಗಂಟೆಯಿಂದ 12 ಗಂಟೆಯವರೆಗೆ ಶಾಲೆಗಳ ಮುಂದೆ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು

ಶಾಲಾ ವಾಹನಗಳ ಮೇಲೆ ವಿಶೇಷ ತಪಾಸಣಾ ಡ್ರೈವ್ 1.58 ಲಕ್ಷ ರೂ. ದಂಡ ವಸೂಲು Read More »

ಕರಾವಳಿ

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಜೂ. 19. ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top