ಕರಾವಳಿ

“ಹಸಿರೇ ಉಸಿರು”- ಡಾ ಚೂಂತಾರು ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 13. ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುರುವಾರದಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.   ಈ ಸಂದರ್ಭ ಸುಮಾರು 55 ಮಂದಿಗೆ ಮಾವು, ಹಲಸು, ಸಫೋಟ, ಪೇರಳೆ, ನೇರಳೆ ಮುಂತಾದ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಶ್ರೀ ಅಬ್ದುಲ್ ನೌಷಾದ್ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ.ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ರಾಜಶ್ರೀ ಮೋಹನ್, ಡಾ ಪ್ರಜ್ವಲ್, ದಂತ ಪರಿಚಾರಕಿಯರಾದ […]

“ಹಸಿರೇ ಉಸಿರು”- ಡಾ ಚೂಂತಾರು ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಪರಿಸರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ- ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 12. ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಗುರುವಾರ ಪಡುಬಿದ್ರಿ ಕಾಂಜರಕಟ್ಟೆಯಲ್ಲಿ‌ ನಡೆದಿದೆ. ಗಾಯಗೊಂಡವರನ್ನು ಅಟೊ ಚಾಲಕ ಕಂಚಿನಡ್ಕ ನಿವಾಸಿ‌ ಹಂಝ ಎಂದು ಗುರುತಿಸಲಾಗಿದೆ. ಬಸ್ ಢಿಕ್ಕಿ ಹೊಡೆದ ಪರಿಣಾಮ‌ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಪಡುಬಿದ್ರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ- ಪ್ರಯಾಣಿಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚನೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕೋಮುಗಲಭೆಯನ್ನು ಪ್ರಚೋದಿಸುವ ಸರಣಿ ಹತ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರವು ರಚಿಸಿದ್ದ ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯನ್ನು ಮುಖ್ಯಸ್ಥರನ್ನಾಗಿ ನೇಮಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ. ಜೂ.13ರಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಕಾರ್ಯಪಡೆಯನ್ನು ಉದ್ಘಾಟಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಈ ಕಾರ್ಯಪಡೆಯಲ್ಲಿ ಒಟ್ಟು 248 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಇವು

ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚನೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ Read More »

ಕರಾವಳಿ

ಪೊಲೀಸ್ ನಿರೀಕ್ಷಕರಾಗಿ ನಂದಕುಮಾರ್ ಪದೋನ್ನತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಪುಂಜಾಲಕಟ್ಟೆ ಪೊಲೀಸ್ ಉಪನಿರೀಕ್ಷಕ ನಂದಕುಮಾರ್ ಅವರಿಗೆ ಪದೋನ್ನತಿ ನೀಡಿ ಮಂಗಳೂರು ಡಿ.ಎಸ್.ಬಿ. ಕಚೇರಿಗೆ ವರ್ಗಾವಣೆ ಮಾಡಿ ಪೋಲೀಸ್ ಇಲಾಖೆ ಅದೇಶ ಹೊರಡಿಸಿದೆ.. ಮಡಿಕೇರಿ, ಬಂಟ್ವಾಳ ನಗರ, ಪುತ್ತೂರು ನಗರ ಹಾಗೂ ಬೆಳ್ತಂಗಡಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅವರು ಪ್ರಸ್ತುತ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ‌ಕರ್ತವ್ಯದಲ್ಲಿದ್ದಾರೆ.

ಪೊಲೀಸ್ ನಿರೀಕ್ಷಕರಾಗಿ ನಂದಕುಮಾರ್ ಪದೋನ್ನತಿ Read More »

ಕರಾವಳಿ

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. 2025-26ನೇ ಸಾಲಿನ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆ.

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12.  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಜನರಿಗೆ 90 ದಿನಗಳ ಹಾಸ್ಟೆಲ್ ಸೌಲಭ್ಯದೊಂದಿಗೆ ಪೋಲಿಸ್ ಸಬ್ ಇನ್ಸ್‍ ಪೆಕ್ಟರ್(ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ ಸೈಟ್ https://sevasindhuservices.karnataka.gov.in/  ಅಥವಾ www.dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15ರವರೆಗೆ

ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಎಲ್ಲರೂ ಒಟ್ಟಾಗಿ ಧೈರ್ಯದಿಂದ ಮುಂದುವರಿಯೋಣ: ಸ್ಪೀಕರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಕೆಲವು ಘಟನೆಗಳು ಎಲ್ಲರನ್ನೂ ನೋಯಿಸಿವೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಆತಂಕವು ನಮ್ಮನ್ನು ಆಂತರಿಕವಾಗಿ ತೀವ್ರವಾಗಿ ತೊಂದರೆಗೊಳಿಸಿದ್ದು ಆತಂಕಕ್ಕೆ ಕಾರಣವಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿನ ಜನರ ಪರಸ್ಪರ ನಂಬಿಕೆ ಮತ್ತು ಒಗ್ಗಟ್ಟಿನ ಮೇಲೆ ನಿರ್ಮಿಸಲ್ಪಟ್ಟಿದೆ. ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು – ಎಲ್ಲರೂ ತಲೆಮಾರುಗಳಿಂದ ಪ್ರೀತಿ ಮತ್ತು ನಂಬಿಕೆಯೊಂದಿಗೆ

ಎಲ್ಲರೂ ಒಟ್ಟಾಗಿ ಧೈರ್ಯದಿಂದ ಮುಂದುವರಿಯೋಣ: ಸ್ಪೀಕರ್ Read More »

ಕರಾವಳಿ, ಕರ್ನಾಟಕ

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ

(ನ್ಯೂಸ್ ಕಡಬ) newskadaba.com ಜೂ. 12.  ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳರಾಮ ಕೇಂದ್ರದ ರಾಮನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ್ದ ಒಟ್ಟು 1,77,777 ರೂ.ವನ್ನು ದೇಣಿಗೆಯಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ನಗರದ ರಥಬೀದಿಯ ಶಾಖಾ ಮಠದಲ್ಲಿ ಹಸ್ತಾಂತರಿಸಿದ್ದಾರೆ. ದೇಣಿಗೆ ಸ್ವೀಕರಿಸಿ ಮಾತನಾಡಿದ ಸಂಸದ ಕ್ಯಾ. ಚೌಟ, “ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಸೈನಿಕರ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯ. ಯೋಧರ ಕುಟುಂಬಗಳ

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ Read More »

ಕರಾವಳಿ, ಕರ್ನಾಟಕ

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 12.  ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಗಣಿತದ ಪರಿಕರಗಳನ್ನು ಒಳಗೊಂಡ ಕಿಟ್ಟನ್ನು ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ.ಎಸ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ವಿತರಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ-ಶಿಕ್ಷಕರೇತರ ವೃಂದದವರು ಉಪಸ್ಥಿತರಿದ್ದರು.

ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ Read More »

ಕರಾವಳಿ
Scroll to Top