ಕರಾವಳಿ

ಕಡಬ: ಇಬ್ಬರು ಹೆಡ್ ಕಾನ್ಸ್ಟೇಬಲ್ ಹಾಗೂ ನಾಲ್ವರು ಕಾನ್ಸ್ಟೇಬಲ್ ಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಜೂ. 12. ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಡಬ ಠಾಣೆಯಿಂದ ಇಬ್ಬರು ಹೆಡ್ ಕಾನ್ಸ್ಟೇಬಲ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ಟೇಬಲ್ ಗಳನ್ನು ವರ್ಗಾವಣೆ ಮಾಡಲಾಗಿದೆ. ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹರೀಶ್ ಪುಂಚಪ್ಪಾಡಿ ಅವರು ವಿಟ್ಲ ಠಾಣೆಗೆ, ರಮೇಶ್ ಲಂಭಾಣಿ ಅವರು ಸುಳ್ಯ ಠಾಣೆಗೆ, ಕಾನ್‌ಸ್ಟೇಬಲ್‌ಗಳಾದ ಹರೀಶ್ ಅವರು ಪುತ್ತೂರು ಟ್ರಾಫಿಕ್ ಠಾಣೆಗೆ, ವಿಠಲ್ ಜೋಗಣ್ಣನವರ್ ವಿಟ್ಲ ಠಾಣೆಗೆ, ಸೋಮಯ್ಯ ಹಿರೇಮಠ ಅವರು ಸುಳ್ಯ […]

ಕಡಬ: ಇಬ್ಬರು ಹೆಡ್ ಕಾನ್ಸ್ಟೇಬಲ್ ಹಾಗೂ ನಾಲ್ವರು ಕಾನ್ಸ್ಟೇಬಲ್ ಗಳ ವರ್ಗಾವಣೆ Read More »

ಕರಾವಳಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.12. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದ್ದು, ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ

ರಹೀಂ ಕೊಳತ್ತಮಜಲು ಮನೆಗೆ ಸ್ಪೀಕರ್ ಯುಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskafaba.com ಬಂಟ್ವಾಳ, ಜೂ. 11. ಇತ್ತೀಚೆಗೆ ಹತ್ಯೆಗೀಡಾದ ಕೊಳತ್ತಮಜಲು ಅಬ್ದುಲ್ ರಹೀಂ ಮನೆಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭ ರಹೀಂ ಸಹೋದರ ಮಾತನಾಡಿ, ನನ್ನ ತಮ್ಮ ಅಮಾಯಕ, ನಾವು ಊರಿನಲ್ಲಿ ಹಿಂದೂ ಮುಸ್ಲಿಮ್ ಅಣ್ಣ ತಮ್ಮ ರೀತಿಯಲ್ಲಿ ಇದ್ದೇವೆ. ನನ್ನ ತಮ್ಮನನ್ನು ವಿನಾ ಕಾರಣ ಹತ್ಯೆ ಮಾಡಿದ್ದಾರೆ. ನಮಗೆ ನ್ಯಾಯ ಸಿಗಬೇಕು, ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಈ ಪ್ರಕರಣದಲ್ಲಿ 7, 8

ರಹೀಂ ಕೊಳತ್ತಮಜಲು ಮನೆಗೆ ಸ್ಪೀಕರ್ ಯುಟಿ ಖಾದರ್ ಭೇಟಿ Read More »

ಕರಾವಳಿ

ಪಾಣೆಮಂಗಳೂರು ಹಳೇ ಸೇತುವೆಯಲ್ಲಿ ಸಂಚಾರ ನಿರ್ಬಂಧ ತಹಶೀಲ್ದಾರ್ ಆದೇಶ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 11. ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಎಂದು ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ವರದಿಯ ಪ್ರಕಾರ, ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದಲ್ಲಿರುವ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಳೆಯ ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು, ಸೇತುವೆಯಲ್ಲಿ ಈ ಹಿಂದೆ ಬಿರುಕು ಬಂದ ಹಿನ್ನೆಲೆ ಸೇತುವೆಯ ಮೇಲೆ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಕಬ್ಬಿಣದ ಕಮಾನು ಅಳವಡಿಸಿ ಬಂದ್ ಮಾಡಲಾಗಿತ್ತು. ಪ್ರಸ್ತುತ ಕಬ್ಬಿಣದ ಕಮಾನನ್ನು ಹಾನಿಗೊಳಿಸಿ ಘನವಾಹನಗಳು ಸಂಚರಿಸುತ್ತಿರುವುದು

ಪಾಣೆಮಂಗಳೂರು ಹಳೇ ಸೇತುವೆಯಲ್ಲಿ ಸಂಚಾರ ನಿರ್ಬಂಧ ತಹಶೀಲ್ದಾರ್ ಆದೇಶ Read More »

ಕರಾವಳಿ

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ ವಿಟ್ಲ ಪಿಎಸ್ಐ ಸಸ್ಪೆಂಡ್

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 11. ಜುಗಾರಿ ಅಡ್ಡೆಗೆ ದಾಳಿ ನಡೆಸಿದ ವಿಚಾರದಲ್ಲಿ ಹಣ ಬೇಡಿಕೆ ಒಡ್ಡಿದ ಆರೋಪದಡಿ ವಿಟ್ಲ ಎಸೈ ಕೌಶಿಕ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ವರದಿಯ ಪ್ರಕಾರ ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಸ್ಥಳಕ್ಕೆ ವಿಟ್ಲ ಪಿಎಸ್ಐ ಕೌಶಿಕ್ ರವರು ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದೇ ಇದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಪತ್ತೆಯಾಗಿತ್ತು.

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ ವಿಟ್ಲ ಪಿಎಸ್ಐ ಸಸ್ಪೆಂಡ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕರ್ತವ್ಯಕ್ಕೆ ಅಡ್ಡಿ- ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 11. ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ‌ ಶಾಸಕ ಮೊಯ್ದೀನ್ ಬಾವಾ ಮತ್ತು ಅವರ ಸಹಚರರ ವಿರುದ್ದ ಪ್ರಕರಣ ದಾಖಲಾದ ಕುರಿತು ವರದಿಯಾಗಿದೆ. ಮಾಜಿ ಶಾಸಕ ಮೊಯಿದ್ದೀನ್ ಬಾವಾರವರು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತಾಗಿ ಎನ್ಎಂಪಿಎ ಕಛೇರಿಯ ಡೆಪ್ಯೂಟಿ ಚೇರ್ ಪರ್ಸನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು

ಕರ್ತವ್ಯಕ್ಕೆ ಅಡ್ಡಿ- ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ದ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಅನ್ನಭಾಗ್ಯದ ಅಕ್ಕಿ ದಾಸ್ತಾನು ಪತ್ತೆ- 56 ಕ್ವಿಂಟಾಲ್ ಅಕ್ಕಿ ಸಹಿತ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಸರಕಾರದ ಉಚಿತ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಆರೋಪದಡಿ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಹಿರಿಯಡ್ಕದ ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿ ನಡೆದಿದೆ. ಬಂಧಿತನನ್ನು ವಾಸುದೇವ ಪ್ರಭು ಎಂದು ಗುರುತಿಸಲಾಗಿದೆ. ಆರೋಪಿಯು ತನಗೆ ಸೇರಿದ ಜನರಲ್ ಸ್ಟೋರ್ ಒಂದರಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಆಹಾರ

ಅನ್ನಭಾಗ್ಯದ ಅಕ್ಕಿ ದಾಸ್ತಾನು ಪತ್ತೆ- 56 ಕ್ವಿಂಟಾಲ್ ಅಕ್ಕಿ ಸಹಿತ ಆರೋಪಿ ವಶಕ್ಕೆ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಕಬಡ್ಡಿ ತಂಡಕ್ಕೆ ಕಡಬದ ಝಮೀರ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಕರ್ನಾಟಕ ಕಬಡ್ಡಿ ತಂಡಕ್ಕೆ ಕಡಬ ತಾಲೂಕಿನ ಕೊಯಿಲದ ನಿವಾಸಿ ಝಮೀರ್ ಆಯ್ಕೆಯಾಗಿದ್ದು, 2 ದಿನಗಳ ಹಿಂದೆ ಆಂಧ್ರಪ್ರದೇಶದ ಮಚಲೀಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೀಚ್ ಕಬಡ್ಡಿಯಲ್ಲಿ ಆಟವಾಡಿ ಉತ್ತಮ ಪ್ರದರ್ಶನ ತೋರಿದ್ದಾರೆ. ಝಮೀರ್ ಅವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ದ್ವಿತೀಯ ವರ್ಷದ ಬಿ.ಎ. ತರಗತಿ ವಿದ್ಯಾರ್ಥಿಯಾಗಿರುತ್ತಾರೆ. ಝಮೀರ್ ತನ್ನ ಪ್ರಾಥಮಿಕ ಶಿಕ್ಷಣವನ್ನು ಆತೂರು ಬದ್ರಿಯಾ ಸ್ಕೂಲ್ ನಲ್ಲಿ ಮುಗಿಸಿ, ಪ್ರೌಢ ಶಿಕ್ಷಣವನ್ನು ಕಡಬದ ಸೈಂಟ್ ಜೋಕಿಮ್ ಪ್ರೌಢ ಶಾಲೆಯಲ್ಲಿ,

ಕರ್ನಾಟಕ ಕಬಡ್ಡಿ ತಂಡಕ್ಕೆ ಕಡಬದ ಝಮೀರ್ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳದ ರೈಲ್ವೆ ಹಳಿ ಸಮೀಪ ಅಣ್ಣನನ್ನು ತಮ್ಮನೇ ಮೈಮೇಲೆ ಡೀಸೆಲ್ ಮಿಶ್ರಿತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹನುಮಪ್ಪ (42) ಎಂಬವರು ಆಸ್ಪತ್ರೆಯಲ್ಲಿ ಸೋಮವಾರದಂದು ಕೊನೆಯುಸಿರೆಳೆದಿದ್ದಾರೆ. ವರದಿಗಳ ಪ್ರಕಾರ, ಆರೋಪಿ ನಿಂಗಪ್ಪ (21) ತನ್ನ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಆರಂಭದಲ್ಲಿ ಕೊಲೆ ಯತ್ನ ಪ್ರಕರಣ ಎಂದು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ

ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ- ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ ಘಟನೆ ನಡೆದಿದೆ. ದಾಳಿ ವೇಳೆ ಕೃತ್ಯದಲ್ಲಿ ತೊಡಗಿದ್ದ 8 ಮಂದಿ ಪರಾರಿಯಾಗಿದ್ದು, 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ 3,560

ಕಡಬ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ- ಮೂವರು ವಶಕ್ಕೆ Read More »

ಕರಾವಳಿ
Scroll to Top