ಕರಾವಳಿ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 28. ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ) ಕಡಬ ತಾಲೂಕು ಸಮಿತಿ ದ.ಕ ಹಾಗೂ ಸರಸ್ವತೀ ವಿದ್ಯಾಲಯದ ಸಾಹಿತ್ಯ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಸಾಹಿತ್ಯ ಪರಂಪರೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 27ರಂದು ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ವಿಶೇಷ ಉಪನ್ಯಾಸಕರಾಗಿ ಶ್ರೀ ಗಣರಾಜ ಕುಂಬ್ಳೆ, ಪ್ರಾಚಾರ್ಯರು ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯ ರಾಮಕುಂಜ ಆಗಮಿಸಿ ಪ್ರಾಚೀನ […]

ಕಡಬ ಸರಸ್ವತಿ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ

“ದಲಿತ ಸಾಹಿತ್ಯ ಅರ್ಧಶತಮಾನ’” ಶಿಬಿರ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು, ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ.   ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್‍ ಸೈಟ್ https://sahithyaacademy.karnataka.gov.in

“ದಲಿತ ಸಾಹಿತ್ಯ ಅರ್ಧಶತಮಾನ’” ಶಿಬಿರ: ಅರ್ಜಿ ಆಹ್ವಾನ Read More »

ಕರಾವಳಿ

ರಸ್ತೆ ನಾಮಕರಣ: ಆಕ್ಷೇಪಣೆ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 28. ಉಳ್ಳಾಲ ತಾಲೂಕಿನ ಸೋಮೇಶ್ವರದಿಂದ ಬಟಪಾಡಿ ರಸ್ತೆಗೆ “ಅಮೃತ ಸೋಮೇಶ್ವರ ರಸ್ತೆ” ಎಂದು ನಾಮಕರಣ ಮಾಡಲು ನಿರ್ಣಯಿಸಲಾಗಿದೆ. ಆದುದರಿಂದ ಈ ಪ್ರಕಟಣೆ ಪ್ರಕಟಿಸಿದ 30 ದಿನಗಳೊಳಗೆ ಈ ಬಗ್ಗೆ ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆ ನೀಡಬಹುದು ಎಂದು ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ರಸ್ತೆ ನಾಮಕರಣ: ಆಕ್ಷೇಪಣೆ ಆಹ್ವಾನ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜೂ. 28. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನಗೊಂಡಿರುವ ಮಂಗಳೂರು ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆ ಗ್ರೇಡ್ 2 ತಹಶೀಲ್ದಾರ್ ರಫೀಕ್ ಚೌಧರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ತಾಲೂಕು ಕಚೇರಿಯಲ್ಲಿ ನಡೆಯಿತು. ವಿಕಲಚೇತನರ ವಿಶೇಷ ಗುರುತಿನ ಚೀಟಿ ನೊಂದಣಿಗೆ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಅವರು ಸೂಚಿಸಿದರು. ಮಹಿಳೆಯರ ಮತ್ತು ಮಕ್ಕಳ ಮಾರಾಟ ಸಾಗಾಟ, ವರದಕ್ಷಿಣೆ, ಬಾಲ್ಯವಿವಾಹ,

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ Read More »

ಕರಾವಳಿ

ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಜೂ. 28. ವೃತ್ತಿಪರ ಕೋರ್ಸ್‍ ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆ.ಇ.ಎ.) ಮುಖಾಂತರ 2025-26ನೇ ಸಾಲಿನ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆಗೆ ಕುರಿತಂತೆ ಅರಿವು ಮೂಡಿಸುವ ಸಂಬಂಧ ವಿದ್ಯಾರ್ಥಿಗಳಿಗೆ ಯು.ಜಿ.ಸಿ.ಇ.ಟಿ. ಕೌನ್ಸೆಲಿಂಗ್ ಕುರಿತು ತಿಳುವಳಿಕೆ ನೀಡಲು ಜೂನ್ 28ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್(ಕೆ.ಪಿ.ಟಿ)ನಲ್ಲಿ ಯು.ಜಿ.ಸಿ.ಇ.ಟಿ 2025 – ಸೀಟು ಹಂಚಿಕೆ ಮಂಥನ ಕಾರ್ಯಾಗಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ.) ರವರ ಸಹಕಾರದೊಂದಿಗೆ ಆಯೋಜಿಸಲಾಗಿದೆ.

ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ Read More »

ಕರಾವಳಿ

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯುಟಿಕೆ ಭೇಟಿ

(ನ್ಯೂಸ್ ಕಡಬ) newskadaba.com ಜೂ. 28. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ  ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು.   ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯುಟಿಕೆ ಭೇಟಿ Read More »

ಕರಾವಳಿ

ಕೆಂಪೇಗೌಡರ ಚಿಂತನೆಗಳನ್ನು ಯುವ ಜನತೆ ಅನುಸರಿಸಲು ಕರೆ

(ನ್ಯೂಸ್ ಕಡಬ) newskadaba.com ಜೂ. 28. ನಾಡಪ್ರಭು ಕೆಂಪೇಗೌಡರ ಅಂದಿನ ದೂರದೃಷ್ಟಿಯ ಆಡಳಿತವು ಆಧುನಿಕ ಬೆಂಗಳೂರನ್ನು ವಿಶ್ವಮಾನ್ಯಕ್ಕೆ ತಲುಪಿಸಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ. ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಸಹಕಾರದೊಂದಿಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆಂಪೇಗೌಡರ ಯೋಚನಾಬದ್ಧ ಆಡಳಿತದಿಂದಾಗಿ ಬೆಂಗಳೂರಿನಲ್ಲಿ ನೂರಾರು ಕೆರೆಗಳು ನಿರ್ಮಾಣಗೊಂಡು,

ಕೆಂಪೇಗೌಡರ ಚಿಂತನೆಗಳನ್ನು ಯುವ ಜನತೆ ಅನುಸರಿಸಲು ಕರೆ Read More »

ಕರಾವಳಿ

ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 28. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿದ ಪ್ರಕರಣದ ಸಂತ್ರಸ್ತೆ ಶುಕ್ರವಾರದಂದು ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿರುವ ಕುರಿತು ವರದಿಯಾಗಿದೆ. ವರದಿಯ ಪ್ರಕಾರ, ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಎಂಬಾತ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಜೂ.25ರಂದು ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ

ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಎಲ್ಲೆಡೆಯೂ ಮಳೆ, ಪ್ರವಾಹ, ಪ್ರಕೃತಿ ವಿಕೋಪ, ಅಪಘಾತ, ಯುದ್ಧ ಇಂತಹ ಅನಾಹುತಗಳ ಬಗ್ಗೆಯೇ ಕೇಳಲ್ಪಡುತ್ತಿರುವ ಇಂತಹ ಸಂದರ್ಭದಲ್ಲಿ ನಗರದಿಂದ ದೂರವಾದ ಕಡಲತಡಿಯ ಪ್ರಶಾಂತವಾದ ವಾತಾವರಣದಲ್ಲಿ ಸಾಹಿತಿಗಳು ಸೇರಿಕೊಂಡು ಎಲ್ಲವನ್ನೂ ಮರೆತು ಒಟ್ಟಾಗಿ ಕುಳಿತು ಒಂದಿಷ್ಟು ಕವಿತೆ, ಸಂಗೀತ, ಹರಟೆಗಳನ್ನು ಮಾಡುವುದರಿಂದ ಮನಸ್ಸು ಪ್ರಫುಲ್ಲಿತವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ರೇವಣಕರರು ಅಭಿಪ್ರಾಯಪಟ್ಟರು. ಅವರು ಚೂಂತಾರು ಸರೋಜಿನಿ ಭಟ್

ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ವಿಟ್ಲದಲ್ಲಿ ತಂಬಾಕು ವಿರೋಧಿ ದಿನಾಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಕಲ್ಪವೃಕ್ಷ ಜ್ಞಾನ ವಿಕಾಸಕೇಂದ್ರದಲ್ಲಿ ತಂಬಾಕು ವಿರೋಧಿ ದಿನಾಚರಣೆ ಹಾಗೂ ಯೂಟ್ಯೂಬ್ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಕಾರಂತರವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸಮುದಾಯ ಅರೋಗ್ಯ ಇಲಾಖೆಯ ರಂಜಿತಾ ಭಾಗವಹಿಸಿದ್ದರು. ಈ ಸಂದರ್ಭ ಅಳಿಕೆ ವಲಯಾಧ್ಯಕ್ಷರು ರಾಜೇಂದ್ರ ರೈ, ಮುಳಿಯ ಒಕ್ಕೂಟ ಅಧ್ಯಕ್ಷರರಾದ ಉದಯ, ಕೇಂದ್ರದ ಅಧ್ಯಕ್ಷರಾದ ಶಾಲಿನಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ವಿಟ್ಲದಲ್ಲಿ ತಂಬಾಕು ವಿರೋಧಿ ದಿನಾಚರಣೆ Read More »

ಕರಾವಳಿ
Scroll to Top