ಮಧ್ಯರಾತ್ರಿ ಕಾರ್ಯಾಚರಣೆ ವಿರುದ್ದ ದೂರು ಸಲ್ಲಿಕೆ – ಯುಜಿ ರಾಧಾ ಅವರಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ
(ನ್ಯೂಸ್ ಕಡಬ) newskadaba.com ಜೂ. 20. ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ, ಕಿರುಕುಳ ವಿರುದ್ಧ ಉಪ್ಪಿನಂಗಡಿ ಹಿರಿಯ ನಾಗರಿಕ ಯು.ಜಿ.ರಾಧಾ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡಿರುವ ಹೈಕೋರ್ಟ್, ಕಾನೂನಿನಿಂದ ಸ್ಥಾಪಿಸಲಾದ ಕಾರ್ಯವಿಧಾನದ ಹೊರತುಪಡಿಸಿ ಅರ್ಜಿದಾರರಿಗೆ ಯಾವುದೇ ತೊಂದರೆ ನೀಡದಂತೆ ನಿರ್ಬಂಧಿಸಿ ಮಧ್ಯಂತರ ಆದೇಶ ನೀಡಿದೆ. ಪೊಲೀಸರು ಮಧ್ಯರಾತ್ರಿಯಲ್ಲಿ ಮನೆಗೆ ಬಂದು ಆರೋಪಿ ರೀತಿಯಲ್ಲಿ ಫೋಟೋ ತೆಗೆಸಿ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆಂದು ಆರೋಪಿಸಿ ಯು.ಜಿ.ರಾಧಾ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿ, ಈ ಸಂಬಂಧ ಪ್ರತಿವಾದಿಗಳಿಗೆ […]









