ಕರಾವಳಿ

Death, deadbody, Waterfall

ಉಡುಪಿ: ಮಲಗಿದ್ದಲ್ಲಿಯೇ ಮೆಸ್ಕಾಂ ಸಿಬ್ಬಂದಿ ಸಾವು

(ನ್ಯೂಸ್ ಕಡಬ) newskadaba.com , ಮೇ.17: ಉಡುಪಿ:  ಎಂ ಜಿ ಎಂ ಕಾಲೇಜ್ ಸನಿಹ ಇರುವ ಮೆಸ್ಕಾಂ ಸಿಬ್ಬಂದಿಗಳ ವಸತಿ ನಿಲಯದಲ್ಲಿ ವಾಸವಾಗಿದ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು ಮಲಗಿದ್ದಾಗಲೇ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ನಗರ ಠಾಣೆಯ ಪೋಲಿಸರು ತಕ್ಷಣ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ‌ ಮೆಸ್ಕಾಂ ಸಿಬ್ಬಂದಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರ ನೆರವು ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ ವಾಹನದಲ್ಲಿ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರಿಂದ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿತು. ಮೃತ ಮೆಸ್ಕಾಂ ಸಿಬ್ಬಂದಿಯನ್ನು ಟಿ. ಪಿ. ಸಿದ್ಧಲಿಂಗಯ್ಯ, […]

ಉಡುಪಿ: ಮಲಗಿದ್ದಲ್ಲಿಯೇ ಮೆಸ್ಕಾಂ ಸಿಬ್ಬಂದಿ ಸಾವು Read More »

ಕರಾವಳಿ, ಕರ್ನಾಟಕ

ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ

(ನ್ಯೂಸ್ ಕಡಬ) newskadaba.com , ಮೇ.17: ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯ ಬಳಿಕ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಇಂದು ಬಂಟ್ವಾಳದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಓರ್ವ ಯುವಕನಿಗೆ ಚೂರಿ‌ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ಬಳಿ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ಹಮೀದ್ ಎಂಬವರನ್ನು ಮಂಗಳೂರಿನ

ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com , ಮೇ.17: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಾನಂದ(55) ವಂಚನೆಗೊಳಗಾದ ವ್ಯಕ್ತಿ. ಜಯಾನಂದ ಎಂಬವರನ್ನು ಅಪರಿಚಿತರು ಮಾ.20ರಂದು ವಾಟ್ಸಾಪ್ ಗ್ರೂಪಿಗೆ ಸೇರಿಸಿದ್ದರು. ಆ ಗ್ರೂಪಿನಲ್ಲಿ ಖಾತೆ ತೆರೆದು ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಬಗ್ಗೆ ಸಂದೇಶ ಕಳುಹಿಸಲಾಗಿತ್ತು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು

(ನ್ಯೂಸ್ ಕಡಬ) newskadaba.com , ಮೇ.17: ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು

ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು Read More »

ಕರಾವಳಿ, ಕರ್ನಾಟಕ

ಪುತ್ತೂರು: ಕೋಮು ದ್ವೇಷ ಭಾಷಣ -ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com , ಮೇ.16: ಪುತ್ತೂರು ತಾಲೂಕಿನ ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನ್ ಭವನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಭಾಷಣ ಮಾಡಿದ ಆರೋಪದ ಮೇಲೆ ಬಲಪಂಥೀಯ ನಾಯಕ ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 15 ರ ಸಂಜೆ ಈ ಘಟನೆ ನಡೆದಿದೆ. ಆರೋಪಿಗಳು ಮಾಡಿದ ಭಾಷಣವು ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯವನ್ನು ಭಂಗಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ, ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ

ಪುತ್ತೂರು: ಕೋಮು ದ್ವೇಷ ಭಾಷಣ -ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿಯ ರಕ್ಷಣೆ

(ನ್ಯೂಸ್ ಕಡಬ) newskadaba.com , ಮೇ.16. ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ. ಹಡಗಿನಲ್ಲಿ 6 ಭಾರತೀಯ ಸಿಬ್ಬಂದಿ ಪ್ರಯಾಣಿಸುತ್ತಿದ್ದರು.

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮೇ 16 ರಂದು ಸಿಎಂ ಅವರಿಂದ ನೂತನ ಡಿಸಿ ಕಚೇರಿ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com , ಮೇ.15. ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ವನ್ನು ಮೇ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಉದ್ಘಾಟಿಸಲಿದ್ದು, ಇದರ ನಿರ್ಮಾಣಕ್ಕೆ 75 ಕೋಟಿ ರೂ. ವೆಚ್ಚವಾಗಿದೆ. ತುಳುನಾಡಿನ ಸಂಪ್ರದಾಯ ಮತ್ತು ಆಧುನಿಕ ತಾಂತ್ರಿಕ ಏಕೀಕರಣದ ಸ್ಪರ್ಶದೊಂದಿಗೆ ಭವ್ಯತೆಯಿಂದ ಕೂಡಿದ ಅತ್ಯಾಧುನಿಕ ಸೌಲಭ್ಯದೊಂದಿಗೆ ನಿರ್ಮಾಣಗೊಂಡಿದೆ. ಎಂಟು ವರ್ಷಗಳ ಹಿಂದೆ ಮುಖ್ಯಮಂತ್ರಿಗಳು ಹೊಸ ಡಿಸಿ ಕಚೇರಿಗೆ ಶಿಲಾನ್ಯಾಸ ನೆರವೇರಿಸಿದರು. ಇಂದು, ಇದು ಪಡೀಲ್‌ನಲ್ಲಿ ಮಂಗಳೂರಿಗೆ ಪ್ರವೇಶ ದ್ವಾರದಲ್ಲಿ ವಾಸ್ತುಶಿಲ್ಪದ ಮೂಲಕ ಅದ್ಭುತವಾಗಿ ಕಚೇರಿಯ ಸಂಕೀರ್ಣ ಎದ್ದು ನಿಂತಿದೆ.

ಮಂಗಳೂರು: ಮೇ 16 ರಂದು ಸಿಎಂ ಅವರಿಂದ ನೂತನ ಡಿಸಿ ಕಚೇರಿ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

ಕುಂದಾಪುರ: ಬಾವಿಗೆ ಹಾರಿ ಆತ್ಮಹತ್ಯೆ ಯತ್ನ: ರಕ್ಷಿಸಲು ತೆರಳಿದ್ದ ಮಗ ಮೃತ್ಯು, ತಾಯಿ ಗಂಭೀರ

(ನ್ಯೂಸ್ ಕಡಬ) newskadaba.com , ಮೇ.15. ಕುಂದಾಪುರ: ಸಾಲಬಾಧೆಯಿಂದ ತತ್ತರಿಸಿದ್ದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗ ಕೂಡಾ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಈ ಮಧ್ಯೆ ತಂದೆ-ಮಗ ಬಾವಿಗೆ ಹಾರಿದ್ದನ್ನು ಗಮನಿಸಿ ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಮಾಧವ ದೇವಾಡಿಗ (55), ಅವರ ಪುತ್ರ ಪ್ರಸಾದ್ ದೇವಾಡಿಗ (22) ಎಂದು ಗುರುತಿಸಲಾಗಿದೆ.

ಕುಂದಾಪುರ: ಬಾವಿಗೆ ಹಾರಿ ಆತ್ಮಹತ್ಯೆ ಯತ್ನ: ರಕ್ಷಿಸಲು ತೆರಳಿದ್ದ ಮಗ ಮೃತ್ಯು, ತಾಯಿ ಗಂಭೀರ Read More »

ಕರಾವಳಿ

ಮಂಗಳೂರು : ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com , ಮೇ.15. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ನಗರದಲ್ಲಿರುವ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಬಿಜೈಯಲ್ಲಿರುವ ಮಂಜುನಾಥ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ತನಿಖೆಯ ಭಾಗವಾಗಿ ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು

ಮಂಗಳೂರು : ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ

(ನ್ಯೂಸ್ ಕಡಬ) newskadaba.com , ಮೇ.15. ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ತಿಯಾಜ್ , ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಕ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ ರೂ.5000 ಮೌಲ್ಯದ 2.99 ಗ್ರಾಂ ತೂಕದ

ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ Read More »

ಕರಾವಳಿ
Scroll to Top