ಕರಾವಳಿ

ಮಾದಕ ವಸ್ತು ಜಾಲ: ದೆಹಲಿ-ಬೆಂಗಳೂರು-ಮಂಗಳೂರು ನಡುವೆ ಡ್ರಗ್ಸ್ ನಂಟು

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು-ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿ ಇಬ್ಬರು ವಿದೇಶಿ ಮಹಿಳೆಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಳೆದ ವರ್ಷದಲ್ಲಿ ದೆಹಲಿ ಮತ್ತು ಬೆಂಗಳೂರು ನಡುವೆ ೫೯ ಬಾರಿ ಪ್ರಯಾಣಿಸಿದ್ದಾರೆ. ಮಂಗಳೂರು ನಗರ ಪೊಲೀಸರು ಇತ್ತೀಚೆಗೆ ೭೫ ಕೋಟಿ ರೂ. ಮೌಲ್ಯದ ಮಾದಕವಸ್ತು ಜಾಲವನ್ನು ಪತ್ತೆಹಚ್ಚಿದ್ದು, ೩೭.೮೭ ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಇಬ್ಬರು ವಿದೇಶಿ ಪ್ರಜೆಗಳಾದ ಬಾಂಬಾ ಫ್ಯಾಂಟಾ ಮತ್ತು ಅಬಿಗೈಲ್ ಅಡೋನಿಸ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಮಾರ್ಚ್ 14ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ […]

ಮಾದಕ ವಸ್ತು ಜಾಲ: ದೆಹಲಿ-ಬೆಂಗಳೂರು-ಮಂಗಳೂರು ನಡುವೆ ಡ್ರಗ್ಸ್ ನಂಟು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಚಾಲಿತ ದಳ-ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು ಉಪವಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ತಡೆಯಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲಿತ ದಳವನ್ನು ರಚಿಸಿ ಆದೇಶ ನೀಡಿದ್ದಾರೆ. ಅನಧಿಕೃತ ಮರಳುಗಾರಿಕೆ ಮತ್ತು ಸಾಗಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಾಳಿಯಲ್ಲಿ ಕರ್ತವ್ಯ ಚಾಲಿತ ದಳವು ನಿರ್ವಹಿಸಲಿದ್ದಾರೆ. ಸರಕಾರದ ಆದೇಶವನ್ನು ಕಡೆಗಣಿಸಿ ರಾತ್ರಿ ವೇಳೆ ಅಕ್ರಮವಾಗಿ ಮರಳು ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಟ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಅಕ್ರಮ ಗಣಿಗಾರಿಕೆಯನ್ನು ತಡೆಯಲು ತಂಡ

ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಚಾಲಿತ ದಳ-ಮುಲ್ಲೈ ಮುಗಿಲನ್ Read More »

ಕರಾವಳಿ

‘ಕೊಂಕಣ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನ’- ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಸಚಿವರಿಗೆ ಮನವಿ ಸಲ್ಲಿಸಿದೆ. ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಕುರಿತು ಕ್ರಮ ಕೈಗೊಳ್ಳಲು ಸಂಬಂಧಿತರಿಗೆ ಸೂಚಿಸಿದ್ದಾಗಿ ಪ್ರಕಟಣೆ ತಿಳಿಸಿದೆ.

‘ಕೊಂಕಣ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನ’- ಕೋಟ ಶ್ರೀನಿವಾಸ ಪೂಜಾರಿ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: 75 ಕೋ.ರೂ. ಮೌಲ್ಯದ ಡ್ರಗ್ಸ್ ವಶ ಕೇಸ್

(ನ್ಯೂಸ್ ಕಡಬ) newskadaba.com ಮಾ. 18: ಬೆಂಗಳೂರು: ಬೆಂಗಳೂರಿನಲ್ಲಿ 75 ಕೋಟಿ ರೂ. ಮಾಲ್ಯದ ಎಂಡಿಎಂಎ ಡ್ರಗ್ಸ್ ಸಹಿತವಾಗಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಜೆಗಳನ್ನು ನಗರದ ನ್ಯಾಯಾಲಯವು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದಕ್ಷಿಣ ಆಫ್ರಿಕಾದ ಪ್ರಜೆಗಳಾದ ಬಂಬಾ ಫಾಂಟಾ ಆಲಿಯಾಸ್ ಅಡೊನಿಸ್ ಜಬುಲೈಲ್ (31) ಮತ್ತು ಒಲಿಜೊ ಇವನ್ಸ್ ಆಲಿಯಾಸ್ ಅಬಿಗೈಲ್ ಅಡೊನಿಸ್ (30) ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪೊಲೀಸರು ಈ ಇಬ್ಬರು ಆರೋಪಿಗಳನ್ನು ಮಾ.14ರಂದು ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಲಯದ

ಮಂಗಳೂರು: 75 ಕೋ.ರೂ. ಮೌಲ್ಯದ ಡ್ರಗ್ಸ್ ವಶ ಕೇಸ್ Read More »

ಕರಾವಳಿ

ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ

(ನ್ಯೂಸ್ ಕಡಬ) newskadaba.com ಮಾ. 15 : ಮಂಗಳೂರು: ತುಳು- ಕನ್ನಡ ವಿದ್ವಾಂಸ ಹಾಗೂ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಡಾ.ವಾಮನ ನಂದಾವರ (81) ಶನಿವಾರ ನಿಧನರಾದರು. ಕಳೆದ ಕೆಲ ವರ್ಷಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದ ಡಾ. ವಾಮನ ಅವರು ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ್ದಲ್ಲದೇ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ದಕ್ಷಿಣ ಕನ್ನಡ

ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 24×7 ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಾ. 15 : ಬೆಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ (ಮಂಗಳೂರು ಮತ್ತು ಉಡುಪಿ) 24×7 ನಿರಂತರ ವಿದ್ಯುತ್ ಪೂರೈಸುವಂತೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಕರ್ನಾಟಕದ ಇಂಧನ ಸಚಿವ ಕೆ.ಜಿ. ಜಾರ್ಜ್ ಅವರಿಗೆ ಒತ್ತಾಯಿಸಿದೆ. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥಾಪಕ ತೋನ್ಸೆ ಜಯಶ್ರೀಕೃಷ್ಣ ಶೆಟ್ಟಿ ಅವರು, ಉಡುಪಿಯ ಪಡುಬಿದ್ರಿಯಲ್ಲಿ 1300 ಮೆಗಾವ್ಯಾಟ್ ಉಷ್ಣ ವಿದ್ಯುತ್ ಸ್ಥಾವರವು 2010 ರಿಂದ ಕಾರ್ಯನಿರ್ವಹಿಸುತ್ತಿದೆ. ನಾಗಾರ್ಜುನ/ಅದಾನಿ ವಿದ್ಯುತ್ ಸ್ಥಾವರವು ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಶೇ.45 ರಷ್ಟು ವಿದ್ಯುತ್ ಪೂರೈಸುತ್ತದೆ. ಇದು ರಾಜ್ಯಕ್ಕೆ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 24×7 ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ Read More »

ಕರಾವಳಿ

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ: ಐವರ ಬಂಧನ

(ನ್ಯೂಸ್ ಕಡಬ) newskadaba.com ಮಾ. 15: ಮಂಗಳೂರು : ಅಕ್ರಮ ಪಿಸ್ತೂಲ್ ಮಾರಾಟ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಕರಾವಳಿಯಲ್ಲಿ ನಿಷೇಧಿತ  PFI ಸಂಘಟನೆ ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.  ಕೇರಳ ಮೂಲದ ಕ್ರಿಮಿನಲ್ ಗಳಾದ ಅಬ್ದುಲ್ ಲತೀಫ್, ನೌಫಲ್, ಮಹಮ್ಮದ್ ಅಸ್ಗರ್, ಮಹಮ್ಮದ್ ಸಾಲಿ ಬಂಧಿತರು. ಬಂಧಿತರಿಂದ ಮೂರು ಪಿಸ್ತೂಲ್ ಮತ್ತು ಆರು ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.  ಕೇರಳದಲ್ಲಿ ನಿಷೇಧಿತ PFI ಸಂಘಟನೆಯೊಂದಿಗೆ ಆರೋಪಿಗಳು ನೇರ ಸಂಬಂಧ ಹೊಂದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ: ಐವರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪ್ಲಾಸ್ಟಿಕ್ ಫ್ಲೆಕ್ಸ್ ಬ್ಯಾನರ್‌ಗಳ ವಿರುದ್ಧ ಎಂಸಿಸಿ ಸಮರ- ಮಾರ್ಚ್ 15 ರಿಂದ ಕಠಿಣ ಕ್ರಮ

(ನ್ಯೂಸ್ ಕಡಬ) newskadaba.com ಮಾ. 14: ನಗರದ ಸೌಂದರ್ಯವನ್ನು ಪುನಃಸ್ಥಾಪಿಸಲು ಮತ್ತು ಪರಿಸರ ಹಾನಿಯನ್ನು ತಡೆಯಲು, ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಪ್ಲಾಸ್ಟಿಕ್ ಫ್ಲೆಕ್ಸ್ ಬ್ಯಾನರ್‌ಗಳ ವಿರುದ್ಧ ಕಠಿಣ ಕ್ರಮವನ್ನು ತೀವ್ರಗೊಳಿಸಿದೆ. ಸಂಪೂರ್ಣ ನಿಷೇಧವನ್ನು ವಿಧಿಸಿದೆ ಮತ್ತು ಉಲ್ಲಂಘಿಸುವವರಿಗೆ ಕಠಿಣ ದಂಡದ ಎಚ್ಚರಿಕೆ ನೀಡಿದೆ. ಮಾರ್ಚ್ 15 ರಿಂದ ಜಾರಿಗೆ ಬರಲಿರುವ ಹೊಸ ಕ್ರಮಗಳಲ್ಲಿ ಭಾರಿ ದಂಡ ಮತ್ತು ಪುನರಾವರ್ತಿತ ಅಪರಾಧಿಗಳಿಗೆ ಸಂಭಾವ್ಯ ಪರವಾನಗಿ ರದ್ದತಿ ಸೇರಿವೆ. ಗುರುವಾರ ಎಂಸಿಸಿ ಕಂದಾಯ ಇಲಾಖೆ ನಡೆಸಿದ ಸಭೆಯಲ್ಲಿ, ಫ್ಲೆಕ್ಸ್ ಮತ್ತು ಬ್ಯಾನರ್ ಮುದ್ರಣಕಾರರಿಗೆ

ಮಂಗಳೂರು: ಪ್ಲಾಸ್ಟಿಕ್ ಫ್ಲೆಕ್ಸ್ ಬ್ಯಾನರ್‌ಗಳ ವಿರುದ್ಧ ಎಂಸಿಸಿ ಸಮರ- ಮಾರ್ಚ್ 15 ರಿಂದ ಕಠಿಣ ಕ್ರಮ Read More »

ಕರಾವಳಿ

ಮಂಗಳೂರು ಕೇರಳದ ಗ್ಯಾಂಗ್‌ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು

(ನ್ಯೂಸ್ ಕಡಬ) newskadaba.com ಮಾ. 14: ಮಂಗಳೂರು: ಕೇರಳದಿಂದ ಬಂದು ಮಂಗಳೂರಿನಲ್ಲಿ  ಭಾರಿ ದುಷ್ಕೃತ್ಯಕ್ಕೆ ಸಂಚು ಎಸಗಿದ್ದ ಒಂದು ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್‌ನಿಂದ ಪಿಸ್ತೂಲುಗಳು, ಗುಂಡು, ಗಾಂಜಾ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳ ಮೂಲದ ಐವರು ನಟೋರಿಯಸ್ ಅಪರಾಧಿಗಳನ್ನು ಬಂಧಿಸಲಾಗಿದೆ. ವಾಮಂಜೂರಿನಲ್ಲಿ ಮುಸ್ಲಿಂ ಧರ್ಮಗುರುವಿನ ಮೇಲಾದ ಮಿಸ್ ಫೈರ್ ಪ್ರಕರಣದ ತನಿಖೆ ಮಾಡುವ ವೇಳೆ ಇವರು ಸಿಕ್ಕಿಬಿದ್ದಿದ್ದಾರೆ. ಕಳೆದ ಜನವರಿಯಲ್ಲಿ ಮಂಗಳೂರು ಹೊರವಲಯದ ವಾಮಂಜೂರು ಎಂಬಲ್ಲಿ ಮುಸ್ಲಿಂ ಧರ್ಮಗುರು ಸಫ್ವಾನ್ ಎಂಬುವರ ಮೇಲೆ ಗುಂಡು ಹಾರಿಸಲಾಗಿತ್ತು. ಅಕ್ರಮ ಪಿಸ್ತೂಲ್​​ನಿಂದ ಅದ್ದು

ಮಂಗಳೂರು ಕೇರಳದ ಗ್ಯಾಂಗ್‌ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು Read More »

ಕರಾವಳಿ

ದಿಗಂತ್ ನಾಪತ್ತೆ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ- ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಾ. 13: ಮಂಗಳೂರು: ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆ ಪ್ರಕರಣ ಜಿಲ್ಲೆಯ ಪೊಲೀಸರ ಕಾರ್ಯಾಚರಣೆ ಮೂಲಕ ಸುಖಾಂತ್ಯ ಕಂಡಿದೆ. ಆದರೆ ನಾಪತ್ತೆ ಸಂದರ್ಭದಲ್ಲಿ ಯಾವುದೇ ಸುಳಿವಿಲ್ಲದಾಗ, ಸುಳ್ಳಿನ ಮೂಲಕ ಸಮಾಜದಲ್ಲಿ ದ್ವೇಷ ಹುಟ್ಟಿಸುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪಕ್ಷದ ಹಾಗೂ ಸಂಘಟನೆಗಳ ಪ್ರಮುಖರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.

ದಿಗಂತ್ ನಾಪತ್ತೆ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ- ರಮಾನಾಥ ರೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top