ಕರಾವಳಿ

ಸುಳ್ಯ: ಮೀಸಲು ಅರಣ್ಯದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; 30 ಮಂದಿ ವಶ, ಮುಚ್ಚಳಿಕೆ ಬರೆಸಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜ.02 ಸುಳ್ಯ: ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ವ್ಯಾಪ್ತಿಯ ಮೀಸಲು ಅರಣ್ಯದ ಭಾಗವಾದ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಅಕ್ರಮವಾಗಿ ನುಗ್ಗಿ ಹೊಸ ವರ್ಷ ಆಚರಣೆಗೆ ಸಿದ್ಧತೆ ನಡೆಸುತ್ತಿದ್ದ 30 ಯುವಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಮೂಲಗಳ ಪ್ರಕಾರ, ಮಂಗಳವಾರ ಸಂಜೆ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಯುವಕರು ತೆರಳುತ್ತಿದ್ದಂತೆ ಯುವಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶವಾಗಿದ್ದರು ಎಂದು ಹೇಳಲಾಗಿದೆ. ಸೂಕ್ಷ್ಮ ಮೀಸಲು ಅರಣ್ಯ ಪ್ರದೇಶಗಳಲ್ಲಿ […]

ಸುಳ್ಯ: ಮೀಸಲು ಅರಣ್ಯದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; 30 ಮಂದಿ ವಶ, ಮುಚ್ಚಳಿಕೆ ಬರೆಸಿ ಬಿಡುಗಡೆ Read More »

ಕರಾವಳಿ
crime, arrest, suspected

ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಜ.02 ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ದಾಂಧಲೆ ನಡೆಸಿ, ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಡಿ.29 ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಬಂಧಿತರು. ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿತ್ತು. ಈ

ಉಡುಪಿ ಶ್ರೀಕೃಷ್ಣ ಮಠದ ಆವರಣದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಪುಂಡಾಟ: 8 ಮಂದಿ ಬಂಧನ Read More »

ಕರಾವಳಿ

ಪ್ರಿಯಕರನಿಗೆ ಚೂರಿ ಇರಿದ ಪ್ರೇಯಸಿ, ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಜ.02 ಹಾಸನ: ಮದುವೆಯಾಗಲು ನಿರಾಕರಿಸಿದ ಪ್ರಿಯಕರನಿಗೆ ಪ್ರೇಯಸಿಯೊಬ್ಬಳು ಚೂರಿ ಇರಿದ ಘಟನೆ ಬಿ.ಎಂ. ರಸ್ತೆಯ ಖಾಸಗಿ ಹೋಟೆಲ್‌ ಗೇಟ್‌ನಲ್ಲಿ ಹೊಸ ವರ್ಷದ ಹಿಂದಿನ ದಿನದ ತಡರಾತ್ರಿ ನಡೆದಿದೆ. ಹಾಸನ ತಾಲೂಕಿನ ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ಗಾಯಗೊಂಡ ಯುವಕನಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಭವಾನಿ ಎಂಬ ಯುವತಿ ಮನುಕುಮಾರ್ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದಳು. ಈ ವೇಳೆ ಇಬ್ಬರಲ್ಲಿ ಪ್ರೀತಿ ಪ್ರೇಮ ಶುರುವಾಗಿದೆ. ಆದರೆ, ಕೆಲ ದಿನಗಳಿಂದ ಇಬ್ಬರೂ ಬೇರಾಗಿದ್ದರು. ಯಾವ ಕರೆ

ಪ್ರಿಯಕರನಿಗೆ ಚೂರಿ ಇರಿದ ಪ್ರೇಯಸಿ, ಸ್ಥಿತಿ ಗಂಭೀರ Read More »

ಕರಾವಳಿ

ಉಳ್ಳಾಲ: ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

(ನ್ಯೂಸ್ ಕಡಬ) newskadaba.com ಜ.01: ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ಸಮೀಪ ಡಿ. ೩೧ರ ತಡರಾತ್ರಿ ಸಂಭವಿಸಿದೆ. ನಾಟೆಕಲ್ ಪನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಮೃತ ಸ್ಕೂಟರ್ ಸವಾರ. ಅಝರ್ ಅವರು ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಮಂಗಳವಾರ ರಾತ್ರಿ ತಲಪಾಡಿಗೆ ಫುಡ್ ಡೆಲಿವರಿ ತಲುಪಿಸಿ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ವೇಳೆ ಅದೇ ದಾರಿಯಲ್ಲಿ

ಉಳ್ಳಾಲ: ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ

ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪದಲ್ಲಿ 49 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಜ.01: ಅಹಮದಾಬಾದ್: ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದಲ್ಲಿ ಅತ್ಯಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ವೃದ್ಧರೊಬ್ಬರಿಗೆ 49 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಮೂಡುಬೆಳ್ಳೆ ನಿವಾಸಿ ಫ್ರಾನ್ಸಿಸ್ ಕ್ಯಾಸ್ಟಲಿನೋ (72) ಆನ್‌ಲೈನ್ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ವಂಚನೆಗೊಳಗಾದ ವೃದ್ಧ.ವಂಚಕರು ಕ್ಯಾಸ್ಟೆಲಿನೊ ಅವರ ಮಗನ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು “ಸ್ಟಾಕ್ ಮಾರ್ಕೆಟ್ ನ್ಯಾವಿಗೇಶನ್” ಹೆಸರಿನ ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾರೆ. ಗುಂಪಿನ ಸದಸ್ಯರು ಷೇರು

ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪದಲ್ಲಿ 49 ಲಕ್ಷ ರೂ. ವಂಚನೆ Read More »

ಕರಾವಳಿ

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಮೃತ್ಯು

(ನ್ಯೂಸ್ ಕಡಬ) newskadaba.com ಜ.01: ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ, ಯುವ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ನಗರ ಹೊರವಲಯದ ಅರ್ಕುಳ ಜಂಕ್ಷನ್ ಬಳಿ ಡಿ. 31ರ ಸಂಜೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದ ಪ್ರವೀತ್ ಕುಮಾರ್ (22) ಮೃತರು. ಮೇಳದಲ್ಲಿ ಸ್ತ್ರೀವೇಷಧಾರಿಯಾಗಿದ್ದ ಪ್ರವೀತ್ ಅವರು ಡಿ. 31ರಂದು ಬಜಪೆ ಕಂದಾವರ ಬೈಲಿನಲ್ಲಿ ನಿಗದಿಯಾಗಿದ್ದ ಮೇಳದ ಯಕ್ಷಗಾನಕ್ಕೆ ತೆರಳುತ್ತಿದ್ದರು.

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಮೃತ್ಯು Read More »

ಕರಾವಳಿ

ಉಡುಪಿ : ಹೊಸ ವರ್ಷಕ್ಕೆ ಟ್ರಾಫಿಕ್ ದಟ್ಟಣೆ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು:  ನಗರದಲ್ಲಿ ಜನವರಿ 1ರ ವರೆಗೆ ವಾಹನ ಸಂಚಾರಕ್ಕೆ ಸಣ್ಣಪುಟ್ಟ ಹೊಂದಾಣಿಕೆಗಳಿದ್ದರೂ ಬಹುತೇಕ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಮುಂದುವರಿದಿದೆ. ಕಲ್ಸಂಕದಲ್ಲಿ ದೀರ್ಘಕಾಲದ ಟ್ರಾಫಿಕ್ ಸಮಸ್ಯೆ ಈಗ ನಗರದ ಇತರ ಭಾಗಗಳಿಗೆ ಸ್ಥಳಾಂತರಗೊಂಡಂತೆ ಕಂಡುಬರುತ್ತಿದೆ. ಹೊಸ ಸಂಚಾರ ವ್ಯವಸ್ಥೆ ಪ್ರಕಾರ, ಮಣಿಪಾಲದಿಂದ ಮಂಗಳೂರು ಮತ್ತು ಕಾಪು ಕಡೆಗೆ ಹೋಗುವ ವಾಹನಗಳನ್ನು ಶಾರದ ಕಲ್ಯಾಣ ಮಂಟಪ ರಸ್ತೆಯ ಮೂಲಕ ನಿರ್ದೇಶಿಸಲಾಗುತ್ತದೆ. ಗುಂಡಿಬೈಲ್ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಬಳಿ ತಿರುಗಿ ಕೃಷ್ಣಮಠ ಮತ್ತು ಉಡುಪಿ

ಉಡುಪಿ : ಹೊಸ ವರ್ಷಕ್ಕೆ ಟ್ರಾಫಿಕ್ ದಟ್ಟಣೆ Read More »

ಕರಾವಳಿ

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರಗೊಂಡ ಬಿಜೆಪಿ ಹೋರಾಟ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು:  ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮತ್ತಷ್ಟು ತೀವ್ರಗೊಳಿಸಿದೆ. ಬೆಂಗಳೂರಿನ ರೇಸ್‌ ಕೋರ್ಸ್ ರಸ್ತೆಯಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಭಿಯಾನ ನಡೆಸಿದರು. ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ ಹಾಗೂ ರವಿಕುಮಾರ್ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗುತ್ತಿಗೆದಾರ ಸಚಿವ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಹೊಣೆಗಾರರು ಎಂದು ಘೋಷಣೆ ಕೂಗಿದರು. ಕೈಲಿದ್ದ

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರಗೊಂಡ ಬಿಜೆಪಿ ಹೋರಾಟ Read More »

ಕರಾವಳಿ

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಡಿ.31: ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಮೃತರನ್ನು ಕಾರವಾರ ತಾಲ್ಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ (34), ಸಂಶಿಯ ಗೌರೀಶ ( 25), ಖರ್ವಾದ ರಮೇಶ (22) ಎಂದು ಗುರುತಿಸಲಾಗಿದೆ. ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದರು ಎನ್ನಲಾಗಿದ್ದು, ಬೈಕ್ ಮತ್ತು ಬಸ್

ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು Read More »

ಕರಾವಳಿ

ಬಂಟ್ವಾಳ: ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಡಿ.31: ಬಿ.ಸಿ. ರಸ್ತೆಯ ಸ್ಪರ್ಶ ಕಲಾಸಂಪದದಲ್ಲಿ ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ಆಯೋಜಿಸಿದ್ದ ನೃತ್ಯಧಾರಾ ಕಾರ್ಯಕ್ರಮದಲ್ಲಿ, ಯಕ್ಷಗಾನದ ಹಾಸ್ಯ ಕಲಾವಿದ ರಸಿಕರತ್ನ ನಿಧನರಾದ ನಯನ್ ಕುಮಾರ್ ಅವರ ಸ್ಮರಣಾರ್ಥ ಹಿರಿಯ ಕವಿ ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಂಟ್ವಾಳ: ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ Read More »

ಕರಾವಳಿ
Scroll to Top