ಕರಾವಳಿ

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ

(ನ್ಯೂಸ್ ಕಡಬ) newskadaba.com ಕಡಬ, ಅ. 29. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಿದ್ದರೆ ಜನರ ಸಹಕಾರ ಅತ್ಯಗತ್ಯ. ಲಂಚ ತೆಗೆದುಕೊಳ್ಳುವುದು ಮಾತ್ರವಲ್ಲ, ಕೊಡುವುದು ಕೂಡ ಅಪರಾಧ ಎಂದು ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಡಿವೈಎಸ್‌ಪಿ ಡಾ।ಗಾನಾ ಪಿ.ಕುಮಾರ್ ಹೇಳಿದರು. ಅವರು ಸೋಮವಾರದಂದು ಕಡಬ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಭ್ರಷ್ಟಾಚಾರ ವಿರುದ್ಧದ ಜಾಗೃತಿ ಅರಿವು ಸಪ್ತಾಹ-2024ರ ಅಂಗವಾಗಿ ನಡೆದ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. […]

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ Read More »

ಕರಾವಳಿ

ಬೈಕ್ ಅಪಘಾತ: ಓರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.29. ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ಬೈಕ್ ಅಪಘಾತ: ಓರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ದುರಂತ: 154 ಮಂದಿ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.29. ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ 154 ಮಂದಿ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ. ಹಾಗೂ 97 ಮಂದಿಯನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ

ಪಟಾಕಿ ದುರಂತ: 154 ಮಂದಿ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಸರಕಾರ ಮೈಸೂರು ರಾಜಮನೆತನಕ್ಕೆ ಕಿರುಕುಳ ನೀಡುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ

(ನ್ಯೂಸ್ ಕಡಬ)newskadaba.com, ಅ. 29 ಮೈಸೂರು: ಕಾಂಗ್ರೆಸ್ ಸರಕಾರ ಮೈಸೂರು ರಾಜಮನೆತನದೊಂದಿಗೆ ಹಗೆತನ ಸಾಧಿಸುತ್ತಿದ್ದು ರಾಜ್ಯದ ಅಭಿವೃದ್ಧಿಗೆ ಅತ್ಯಂತ ಕೊಡುಗೆ ನೀಡಿದ  ರಾಜಮನೆತನಕ್ಕೆ ಕಿರುಕುಳ ನೀಡುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ತಾಯಿ ಒಡೆಯರ್ ಮನೆತನದ ಆರಾಧ್ಯದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ದುಷ್ಕೃತ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು. ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿತ್ತು. ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಕುಟುಂಬ ಸಾಕಷ್ಟು ಕೆಲಸ ಮಾಡಿದೆ. ಅಂತಹ

ಕಾಂಗ್ರೆಸ್ ಸರಕಾರ ಮೈಸೂರು ರಾಜಮನೆತನಕ್ಕೆ ಕಿರುಕುಳ ನೀಡುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ Read More »

ಕರಾವಳಿ

ಮರ್ಧಾಳ: ಇಂದು (ಅ.29) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಅ.29. ಕಡಬ ತಾಲೂಕಿನ ಕೊಣಾಜೆ ದ್ವಿಮಾರ್ಗ ವಿದ್ಯುತ್ ಲೈನ್ ಕಾಮಗಾರಿ ಇರುವ ಹಿನ್ನೆಲೆಯಲ್ಲಿ ಕಡಬ ಹಳೆಸ್ಟೇಷನ್ ನಿಂದ ಮರ್ಧಾಳ ಪೇಟೆಯ ತನಕ ಇಂದು (ಅ.29) ಬೆಳಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಇರಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮರ್ಧಾಳ: ಇಂದು (ಅ.29) ವಿದ್ಯುತ್ ನಿಲುಗಡೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಅ.28. ಈಶ್ವರ ನಗರದ ನಗರಸಭೆ ಪಂಪ್ ಹೌಸ್ ಬಳಿ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಒಂದು ಕಾರು ಹಾಗೂ ಸಂಜೆ ವೇಳೆಗೆ ಮತ್ತೊಂದು ಕಾರು ಚರಂಡಿಗೆ ಬಿದ್ದ ಘಟನೆ ನಡೆದಿದೆ. ಬೆಳಗ್ಗೆ ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆಗೆ ಹಿರೇಬೆಟ್ಟುವಿನಲ್ಲಿ ‘ಎರಳ ಗ್ಯಾರಂಟಿ ಅತ್ತ’ ನಾಟಕ ಪ್ರದರ್ಶನಕ್ಕೆಂದು ಹೊರಟಿದ್ದ ತುಳು ರಂಗಭೂಮಿ ಹಾಗೂ ಸಿನಿಮಾ ಕಲಾವಿದರನ್ನು, ಸಹ ಕಲಾವಿದರೊಂದಿಗೆ ವಾಹನವೂ ಚರಂಡಿಗೆ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು Read More »

ಕರಾವಳಿ

ಚಿನ್ನದ ದರದಲ್ಲಿ ತುಸು ಇಳಿಕೆ

(ನ್ಯೂಸ್ ಕಡಬ)newskadaba.com, ಅ.28, ಬೆಂಗಳೂರು: ಒಂದೇ ಸಮನೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 45 ರೂ. ಮತ್ತು 49ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,315 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,980 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ: 22 ಕ್ಯಾರಟ್‌ನ 8 ಗ್ರಾಂ ಚಿನ್ನ

ಚಿನ್ನದ ದರದಲ್ಲಿ ತುಸು ಇಳಿಕೆ Read More »

ಕರಾವಳಿ

”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ

(ನ್ಯೂಸ್ ಕಡಬ)newskadaba.com, ಅ.28, ಮಂಗಳೂರು: ಜಾತಿ ವ್ಯವಸ್ಥೆಯನ್ನು ಅನಿಷ್ಠ ಎಂದಿರುವವರೇ ಅದನ್ನು ಪೋಷಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತ ಎಂದು ಹೇಳುವಾಗ ಜಾತಿ ಗಣತಿ ಅಗತ್ಯ ಏನಿದೆ? ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ

”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ Read More »

ಕರಾವಳಿ

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.28. ಶಿವಳ್ಳಿ ಸ್ಪಂದನ ಮಂಗಳೂರು ಎಂಬ ಸಂಸ್ಥೆಯ ಹೆಸರಿನಲ್ಲಿ ಸಂಸ್ಥೆಯ ಲೆಟರ್‌ಹೆಡ್ ಮತ್ತು ನಕಲಿ ಸೀಲು ಬಳಸಿ ವಂಚಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂಘದ ಕಾರ್ಯದರ್ಶಿ ಹೆಸರಿನಲ್ಲಿ ಆರೋಪಿ ಭಾಸ್ಕರ್ ಭಟ್ ಎಂಬಾತ ಲೆಟರ್‌ಹೆಡ್ ಮತ್ತು ಸೀಲ್‌ನ್ನು ನಕಲಿ ಮಾಡಿದ್ದು, ಸಂಘಕ್ಕೆ ಸಂಬಂಧಿಸಿದ ದಾಖಲೆಗಳನ್ನು ತನ್ನಲ್ಲಿ ಇರಿಸಿಕೊಂಡಿದ್ದಾನೆ ಎಂದು ಆರೋಪಿಸಿ ಕಾರ್ಯದರ್ಶಿ ಕೃಷ್ಣ ಭಟ್ ಎಂಬವರು ಶನಿವಾರ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.    

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

”ಮನ್ ಕಿ ಬಾತ್” ನಲ್ಲಿ ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿಮೋದಿ ಸಲಹೆ

(ನ್ಯೂಸ್ ಕಡಬ) newskadaba.com ಅ.28, ನವದೆಹಲಿ: ದೂರವಾಣಿ ಮೂಲಕ ಕರೆ ಮಾಡಿ ‘ನಿಮ್ಮನ್ನು ಡಿಜಿಟಲ್‌ ಅರೆಸ್ಟ್‌ ಮಾಡಲಾಗಿದೆ’ ಎಂದು ಹೆದರಿಸಿ ಬ್ಯಾಂಕ್‌ ಖಾತೆಯಲ್ಲಿರುವ ಹಣವನ್ನು ದೋಚುವ ದಂಧೆ ದೇಶಾದ್ಯಂತ ವ್ಯಾಪಿಸಿರುವಾಗಲೇ, ಅದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜನಸಾಮಾನ್ಯರು ಎಚ್ಚೆತ್ತುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಈ ರೀತಿಯ ದಂಧೆಗಳಿಂದ ಪಾರಾಗಲು ಪ್ರಧಾನಿಯವರು ದೇಶವಾಸಿಗಳಿಗೆ ಮೂರು ಸಲಹೆಗಳನ್ನು ನೀಡಿದ್ದಾರೆ. ಕೆಲ ತಿಂಗಳ ಹಿಂದೆ ಸೈಬರ್‌ ವಂಚಕರು ವಿಜಯಪುರ ಸಂತೋಷ್‌ ಪಾಟೀಲ್‌ಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು. ಆದರೆ ಅದನ್ನು ಅತ್ಯಂತ

”ಮನ್ ಕಿ ಬಾತ್” ನಲ್ಲಿ ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿಮೋದಿ ಸಲಹೆ Read More »

ಕರಾವಳಿ
Scroll to Top