ಕರಾವಳಿ

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ ಬಂದು ರಜತ ಪರ್ವದಲ್ಲಿರುವ ಕುಂದಾಪುರ ತಾಲೂಕು ತೆಕ್ಕಟ್ಟೆ ಕೊಮೆಯ ಯಶಸ್ವೀ ಕಲಾವೃಂದ ಸಂಸ್ಥೆ, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ. ಯಕ್ಷಗಾನ ಕಲಾರಂಗ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000 ರೂ. ಹೆಚ್ಚಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ನ.17ರ ರವಿವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ […]

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ

ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಬಿಪಿಎಲ್‌  ಹಾಗೂ ಅಂತ್ಯೋದಯ ಅನ್ನದ ಪಡಿತರ ಕಾರ್ಡುದಾರರಿಗೆ ನೇರ ನಗದು ಪಾವತಿ ಬದಲು ಆಹಾರ ಕಿಟ್‌ ಪೂರೈಸಲು ಸರಕಾರ ಗಂಭೀರ ಚಿಂತನೆ ನಡೆಸಿದ್ದು, ಅ. 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು‌, ‘ಅನ್ನ ಸುವಿಧಾ’ ಯೋಜನೆಯಡಿ 80 ವರ್ಷ ಮೇಲ್ಪಟ್ಟವರಿಗೆ ಮನೆಗೇ ಅಕ್ಕಿ ತಲುಪಿಸಲಾಗುತ್ತಿದೆ ಎಂದು

ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್ Read More »

ಕರಾವಳಿ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಅ. 22. ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. ಈ ಅವಧಿಯಲ್ಲಿ  ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ Read More »

ಕರಾವಳಿ

ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ

(ನ್ಯೂಸ್ ಕಡಬ) newskadaba.com ಅ. 22. ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರ ತನಕ ಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್‍ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದ್ದಾರೆ. ಅವರು ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಲಹೆ

ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ Read More »

ಕರಾವಳಿ

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ- ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

(ನ್ಯೂಸ್ ಕಡಬ) newskadaba.com ಅ. 22. ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೇ ಓವರ್‌ ಬ್ರಿಡ್ಜ್ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ- ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ Read More »

ಕರಾವಳಿ

ಮರ್ಧಾಳ: ಶುಭಾರಂಭದ ಪ್ರಯುಕ್ತ ‘ಎಲೈಟ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್’ನಲ್ಲಿ 3 ದಿನಗಳ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಅ. 22. ಇತ್ತೀಚೆಗೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಶುಭಾರಂಭಗೊಂಡಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ಇಂದಿನಿಂದ (ಅ.22) ಗುರುವಾರದವರೆಗೆ ಮೂರು ದಿನಗಳ ವಿಶೇಷ ಆಫರ್ ನಡೆಯಲಿದೆ. ಫುಲ್ ಚಿಕನ್ ಮಂದಿ, 2 ltr. ಹನಾ ಸಾಫ್ಟ್ ಡ್ರಿಂಕ್, ಮಯೋನಿಸ್ ಮತ್ತು ಟೊಮೆಟೋ ಚಟ್ನಿ ಕೇವಲ 666 ರೂ., 1/2 ಚಿಕನ್ ಮಂದಿ, 600ml ಹನಾ ಸಾಫ್ಟ್

ಮರ್ಧಾಳ: ಶುಭಾರಂಭದ ಪ್ರಯುಕ್ತ ‘ಎಲೈಟ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್’ನಲ್ಲಿ 3 ದಿನಗಳ ವಿಶೇಷ ಆಫರ್ Read More »

ಕರಾವಳಿ

ಅಡುಗೆ ಕೋಣೆಯೊಳಗೆ ನುಗ್ಗಿದ ಚಿರತೆ- ಸೆರೆಹಿಡಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಅ. 21. ಮನೆಯೊಂದರ ಅಡುಗೆ ಕೋಣೆಯೊಳಗೆ ಏಕಾಏಕಿ ಚಿರತೆಯೊಂದು ನುಗ್ಗಿದ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದ್ದು, ಈ ವೇಳೆ ನಾಯಿ ಬೊಗಳಲು ಆರಂಭಿಸಿದೆ. ಮನೆಮಂದಿ ಕಂಗಾಲಾಗಿದ್ದಾರೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಬಾಗಿಲಿಗೆ ಬೋನ್ ಅಳವಡಿಸಿ ಸುಮಾರು

ಅಡುಗೆ ಕೋಣೆಯೊಳಗೆ ನುಗ್ಗಿದ ಚಿರತೆ- ಸೆರೆಹಿಡಿದ ಅರಣ್ಯ ಇಲಾಖೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಧಾನಪರಿಷತ್ ಚುನಾವಣೆ- ಯುಟಿ ಖಾದರ್, ಬ್ರಿಜೇಶ್ ಚೌಟ, ಭರತ್ ಶೆಟ್ಟಿ ಮತದಾನ

(ನ್ಯೂಸ್ ಕಡಬ) newskadaba.com ಅ. 21. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ಎಂಎಲ್‌ಸಿ ಸ್ಥಾನಕ್ಕೆ ಸ್ಪೀಕರ್ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಮತದಾನ ಮಾಡಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಅವರು ಉಳ್ಳಾಲ ನಗರಸಭೆಯಲ್ಲಿ ಮತದಾನ ಮಾಡಿದ್ದಾರೆ. ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಸಂಸದ ಬ್ರಿಜೇಶ್, ಶಾಸಕ ಭರತ್ ಶೆಟ್ಟಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಮತ ಚಲಾಯಿಸಿದ್ದಾರೆ. ಇನ್ನು ವಿಧಾನ ಪರಿಷತ್

ವಿಧಾನಪರಿಷತ್ ಚುನಾವಣೆ- ಯುಟಿ ಖಾದರ್, ಬ್ರಿಜೇಶ್ ಚೌಟ, ಭರತ್ ಶೆಟ್ಟಿ ಮತದಾನ Read More »

ಕರಾವಳಿ, ಕರ್ನಾಟಕ
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಅ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗ-ನಗದು ಕದ್ದೊಯ್ದ ಘಟನೆ ಸುಬ್ರಹ್ಮಣ್ಯ ವ್ಯಾಪ್ತಿಯ ಬಳ್ಪ ಗ್ರಾಮದಲ್ಲಿ ನಡೆದಿದೆ. ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆಗೆ ಹೋಗಿದ್ದರು. ರವಿವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ಹೋಗಿ ನೋಡಿದಾಗ

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ. 21. ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ವಿಷಯಕ್ಕೆ ಸಂಬಂಧಿಸಿ ವಾಟ್ಸ್‌ ಆ್ಯಪ್‌ ನಲ್ಲಿ ಮೆಸೇಜ್ ಮಾಡಿದ್ದಕ್ಕಾಗಿ ಮೆಡಿಕಲ್ ಮಾಲೀಕನಿಗೆ ತಂಡವೊಂದು ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ದೇರಳಕಟ್ಟೆಯಲ್ಲಿ ರವಿವಾರ ನಡೆದಿರುವುದು ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದವರನ್ನು ದೇರಳಕಟ್ಟೆಯ ಮೆಡಿಕಲ್ ಶಾಪ್‌ ಮಾಲಕ ಅಬ್ದುಲ್ ಜಲೀಲ್ ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಯುವಕನೊಬ್ಬ ಇತ್ತೀಚೆಗೆ ಮಂಗಳೂರಿನ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೈದಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ಅಬ್ದುಲ್ ಜಲೀಲ್ ವಾಟ್ಸ್‌ ಆ್ಯಪ್ ಮೂಲಕ ವೈಯಕ್ತಿಕವಾಗಿ

ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top