ಕರಾವಳಿ

ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 14 ಸುಳ್ಯ: ಸುಳ್ಯದ ತೊಡಿಕಾನ ಸರ್ವಿಸ್ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಗುರುಪ್ರಸಾದ್ ಕುಂಚಡ್ಕ ಎಂಬ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ವರದಿಯಾಗಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು Read More »

ಕರಾವಳಿ

ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 14 . ನದಿಗೆ ಇಳಿದಿದ್ದ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ.   ಮೃತ ಯುವಕನನ್ನು ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಮದು ಗುರುತಿಸಲಾಗಿದೆ. ಯುವಕ. ಈತ ಭಾನುವಾರದಂದು ಗೆಳೆಯರೊಂದಿಗೆ ಮೀನು ಹಿಡಿಯಲೆಂದು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ನಾಪತ್ತೆಯಾಗಿದ್ದ ಈತನನ್ನು ಸ್ಥಳೀಯರ ನೇತೃತ್ವದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಗ್ರಾಮ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಅ. 14. ಹೃದಯಘಾತದಿಂದಾಗಿ ಗ್ರಾಮ ಸಹಾಯಕರೋರ್ವರು ಮೃತಪಟ್ಟ ಘಟನೆ ರಾಮಕುಂಜ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟವರನ್ನು ರಾಮಕುಂಜ ಗ್ರಾಮದ ದೊಡ್ಡ ಉರ್ಕ ನಿವಾಸಿ, ರಾಮಕುಂಜ ಗ್ರಾಮ ಸಹಾಯಕ ಲಿಂಗಪ್ಪ ಗೌಡ ಎಂದು‌ ಗುರುತಿಸಲಾಗಿದೆ. ಇವರಿಗೆ ಐದು ದಿನದ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮನೆಗೆ ವಾಪಸಾಗಿದ್ದರು. ಆದರೆ ಅ.13ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ. ಲಿಂಗಪ್ಪ ಗೌಡ ಅವರು 30ಕ್ಕೂ ಹೆಚ್ಚು ವರ್ಷಗಳಿಂದ ರಾಮಕುಂಜ

ಹೃದಯಾಘಾತ- ಗ್ರಾಮ ಸಹಾಯಕ ನಿಧನ Read More »

ಕರಾವಳಿ

ಪೆಟ್ರೋಲ್ ಹಾಕಿಸಿ ಹಣ ಕೊಡದೇ ಪರಾರಿ- ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 14. ಪೆಟ್ರೋಲ್ ಹಾಕಿಸಿ ಹಣ ಕೊಡದೇ ಚಾಲಕ ಕಾರಿನೊಂದಿಗೆ ಪರಾರಿಯಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಅನು ಪೆಟ್ರೋಲ್ ಬಂಕ್‌ಗೆ ಕಾರಿನಲ್ಲಿ ಬಂದ ವ್ಯಕ್ತಿಯೋರ್ವ, 4253.88ರೂ. ಮೊತ್ತದ ಪೆಟ್ರೋಲ್ ಹಾಕಿಸಿಕೊಂಡು ಬಳಿಕ ಹಣ ನೀಡದೆ ಕಾರನ್ನು ಚಲಾಯಿಸಿಕೊಂಡು ಹೋಗಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆಟ್ರೋಲ್ ಹಾಕಿಸಿ ಹಣ ಕೊಡದೇ ಪರಾರಿ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆಗೆ ಗುಡ್ಡ ಕುಸಿತ- ರಸ್ತೆ ಸಂಚಾರ ಅಸ್ತವ್ಯಸ್ತ..!

(ನ್ಯೂಸ್ ಕಡಬ) newskadaba.com ಅ. 14. ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಭಾನುವಾರದಂದು ರಾತ್ರಿ ಸಂಭವಿಸಿದೆ. ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರಕ್ಕೆ ತೊಡಕಾಗುವ ರೀತಿಯಲ್ಲಿ ಮುಚ್ವಿ ಹೋಗಿದೆ. ಭಾನುವಾರದಂದು ರಾತ್ರಿ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಶ್ರೀಧರ ಪೂಜಾರಿ ಎಂಬವರ ಮನೆ ಸಮೀಪ ಗುಡ್ಡ ಕುಸಿದಿದ್ದು, ರಸ್ತೆಗೆ ಹಾಗೂ ಮನೆಯ ಹಿಂಭಾಗದಲ್ಲಿ ಮಣ್ಣು

ಭಾರೀ ಮಳೆಗೆ ಗುಡ್ಡ ಕುಸಿತ- ರಸ್ತೆ ಸಂಚಾರ ಅಸ್ತವ್ಯಸ್ತ..! Read More »

ಕರಾವಳಿ
Theft, crime, Robbery

ವೈನ್ ಶಾಪ್ ಬೀಗ ಮುರಿದು ನಗದು, ಮದ್ಯ ಕಳವು

(ನ್ಯೂಸ್ ಕಡಬ) newskadaba.com ಅ. 14. ವೈನ್ಸ್ ಶಾಪ್‌ ನ ಬೀಗ ಒಡೆದು ಒಳನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿಗಳನ್ನು ಕಳವುಗೈದ ಘಟನೆ ನಗರದ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ ಶಾಪ್ ನಲ್ಲಿ ನಡೆದಿದೆ. ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರು ಸಾವಿರ ರೂ. ಗಿಂತಲೂ ಅಧಿಕ ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ

ವೈನ್ ಶಾಪ್ ಬೀಗ ಮುರಿದು ನಗದು, ಮದ್ಯ ಕಳವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 14 ಬಂಟ್ವಾಳ: ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು –  ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.  ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ ಮೃತಪಟ್ಟ ಮಹಿಳೆಯಾಗಿದ್ದು. ಚಾಲಕ ರೂಪೇಶ್ ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು,

ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು Read More »

ಕರಾವಳಿ

ಕಾರು ಪಲ್ಟಿ: ಮಹಿಳೆ ಮೃತ್ಯು ಚಾಲಕ ಗಂಭೀರ ಗಾಯ

(ನ್ಯೂಸ್ ಕಡಬ) news kadaba.com ಅ. 14. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಎಂದು ಗುರುತಿಸಲಾಗಿದೆ. ಚಾಲಕ ರೂಪೇಶ್ (40) ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ

ಕಾರು ಪಲ್ಟಿ: ಮಹಿಳೆ ಮೃತ್ಯು ಚಾಲಕ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ. 14. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಆರೋಪಿ ಹಮೀದ್ ಯಾನೆ ಜಫಾರ್ ಹಮೀದ್ ಹಾನೆ ಕುಂಞಿಮೋನು ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ದ.ಕ. ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರು, ಧರ್ಮಸ್ಥಳ, ಪುಂಜಾಲಕಟ್ಟೆ, ಮಂಗಳೂರು ನಗರ, ಬಂದರು ಠಾಣೆ, ಹೊರ ಜಿಲ್ಲೆಗಳಾದ ಹಾಸನದ ಬೇಲೂರು, ಚಿಕ್ಕಮಗಳೂರು ಜಿಲ್ಲೆ, ಕೊಪ್ಪ, ಹರಿಹರಪುರ, ಚಿಕ್ಕಮಗಳೂರು, ಮೂಡಿಗೆರೆ, ಉಡುಪಿ ಜಿಲ್ಲೆ ಪಡುಬಿದ್ರಿ, ಮಡಿಕೇರಿ ಹಾಗೂ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ

(ನ್ಯೂಸ್ ಕಡಬ) newskadaba.com ಅ. 12. ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆ ಹಾಗೂ ಆಯುಧ ಪೂಜೆ ನೆರವೇರಿತು. ಸಂಸ್ಥೆಯ ಎಲ್ಲಾ ಶಾಲಾ ಬಸ್ ಸೇರಿದಂತೆ ಸಿಬ್ಬಂದಿ ವರ್ಗದವರ ವಾಹನಗಳಿಗೆ ಆಯುಧ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ.ಸಿ ನಾೈಕ್, ಆಡಳಿತ ಮಂಡಳಿ ಟ್ರಸ್ಟಿ ಶ್ರೀಮತಿ ಸಗುಣ ಸಿ. ನಾೈಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ Read More »

ಕರಾವಳಿ
Scroll to Top