ಕರಾವಳಿ

ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 09. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ಕುಂತೂರು ಪದವು ಸಂತಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನ.30ರಂದು ನಡೆಯಲಿರುವ ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬರಹಗಾರ, ಸಾಮಾಜಿಕ ಮುಂದಾಳು ಎನ್.ಕರುಣಾಕರ ಗೋಗಟೆ ಹೊಸಮಠ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ. ಹಳ್ಳಿ ಬದುಕಿನ ಚಿತ್ರಣ ನೀಡುವ ಕೃತಿ ‘ಒಂದು ಸೇತುವೆಯ […]

ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ Read More »

ಕರಾವಳಿ

ಇಂದು ನಾಳೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com, ಅ. ನವದೆಹಲಿ 09: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿ ಅ.10ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ

ಇಂದು ನಾಳೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್- ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ. 09. ಬೈಕ್ ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮೈಲಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪೊಯಿನಾಚಿಯ ಮಣಿಕಂಠ (24) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಮೈಲಾಟಿಯ ಪ್ರಜ್ವಲ್ (23) ಗಾಯಗೊಂಡಿದ್ದು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಕಲದ ಜ್ಯೂಸ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮಣಿಕಂಠ ತೆರಳುತ್ತಿದ್ದ ಸ್ಕೂಟರ್ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ.  

ಬೈಕ್- ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧಾನ ಪರಿಷತ್ ಚುನಾವಣೆ ಸಿದ್ಧತೆ- ವೀಕ್ಷಕರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗಳ ಸಿದ್ಧತೆಗಳನ್ನು ಚುನಾವಣಾ ಆಯೋಗದ ವೀಕ್ಷಕರಾದ ಪಂಕಜ್ ಕುಮಾರ್ ಪಾಂಡೆ ಅವರು ಪರಿಶೀಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು ಮತಗಟ್ಟೆಗಳ ಸಿದ್ಧತೆ, ಚುನಾವಣಾ ಸಿಬ್ಬಂದಿಗಳ ನೇಮಕ, ಮತ ಪತ್ರಗಳ ಮುದ್ರಣ, ಮತದಾರರ ಪಟ್ಟಿ ಹಾಗೂ ಇತರ ಚುನಾವಣೆ ಸಿದ್ಧತೆಗಳ ಮಾಹಿತಿ ಪಡೆದರು. ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳ ಬಗ್ಗೆ ಅವರು

ವಿಧಾನ ಪರಿಷತ್ ಚುನಾವಣೆ ಸಿದ್ಧತೆ- ವೀಕ್ಷಕರಿಂದ ಪರಿಶೀಲನೆ Read More »

ಕರಾವಳಿ

ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ. ಚೌಟ ಶ್ಲಾಘನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್‌ ಡ್ರಗ್ಸ್‌ ಪೆಡ್ಲರ್‌ ನನ್ನು ಬಂಧಿಸಿರುವುದರ ಹಿನ್ನೆಲೆ ಪ್ರತಿಕ್ರಿಯಿಸಿರುವ ಕ್ಯಾ.

ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ. ಚೌಟ ಶ್ಲಾಘನೆ Read More »

ಕರಾವಳಿ

ಪರಿಶಿಷ್ಟ ಜಾತಿ: ಯುವಜನರಿಗೆ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ ತರಬೇತಿ ಶಿಬಿರ – (20 ದಿನಗಳು), ಅಕ್ಟೋಬರ್ 7ರಿಂದ 26ರ ವರೆಗೆ ನಡೆಯಲಿದ್ದು, ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ.(ಪಾಸ್/ಫೇಲ್) 18 ರಿಂದ 40ವರ್ಷ ವಯಸ್ಸಾಗಿರಬೇಕು. ವಿಡಿಯೋಗ್ರಾಫಿ ತರಬೇತಿ ಶಿಬಿರ – (12 ದಿನಗಳು) ನವೆಂಬರ್ 15ರಿಂದ 26ರ

ಪರಿಶಿಷ್ಟ ಜಾತಿ: ಯುವಜನರಿಗೆ ತರಬೇತಿ ಶಿಬಿರ Read More »

ಕರಾವಳಿ

ಕುಮಾರಪರ್ವತ ಚಾರಣ ಕೈಗೊಂಡ ಮೊದಲ ತಂಡ

(ನ್ಯೂಸ್ ಕಡಬ)newskadaba.com, ಅ. 09.: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಚಾರಣಕ್ಕೆ ಇದೀಗ ಅರಣ್ಯ ಇಲಾಖೆಯ ಹೊಸ ಮಾರ್ಗ ಸೂಚಿಯೊಂದಿಗೆ ಅವಕಾಶ ನೀಡಲಾಗಿದೆ. ಚಾರಣಿಗರು ಆನ್‌ಲೈನ್‌ ಮೂಲಕ ಬುಕ್‌ ಮಾಡಿದ್ದು, ಮಂಗಳವಾರ ಚಾರಣ ಆರಂಭಿಸಿದ್ದಾರೆ. ಆನ್‌ಲೈನ್‌ ಮೂಲಕ ನೋಂದಾಯಿಸಿದ ಮೊದಲ ತಂಡ ನಿನ್ನೆ ಚಾರಣ ಕೈಗೊಂಡಿದೆ. ಹೊಸ ಮಾರ್ಗಸೂಚಿ ಜಾರಿಯಾದ ಬಳಿಕ ಚಾರಣಿಗರು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆ ಮೂಲಕ ಚಾರಣ ಕೈಗೊಂಡಿದ್ದಾರೆ. ಕಳೆದ ವರ್ಷದವರೆಗೆ ಕುಮಾರಪರ್ವತ ಚಾರಣ ಸುಲಭವಾಗಿತ್ತು. ಕೆಲ ಕಠಿಣ ನಿಯಮಗಳೊಂದಿಗೆ ನೇರವಾಗಿ ಚಾರಣ ಆರಂಭಿಸಬಹುದಿತ್ತು.

ಕುಮಾರಪರ್ವತ ಚಾರಣ ಕೈಗೊಂಡ ಮೊದಲ ತಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ. 09. 2024-25ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 11 ರವರೆಗೆ ಅವಧಿ ವಿಸ್ತರಿಸಲಾಗಿದೆ. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) shp.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ- ಅವಧಿ ವಿಸ್ತರಣೆ Read More »

ಕರಾವಳಿ

ಎನ್ಐಟಿಕೆ- ಎಸ್ಎ.ಐಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ. 09. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಸಮುದಾಯಕ್ಕೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಎಸ್‍ಎಇ ಇಂಡಿಯಾ (ಸೊಸೈಟಿ ಆಫ್ ಆಟೋಮೇಟಿವ್ ಎಂಜಿನಿಯರ್ಸ್ ಇಂಡಿಯಾ) ಕರಾವಳಿ ಕರ್ನಾಟಕ ವಿಭಾಗವನ್ನು ಉದ್ಘಾಟಿಸಲಾಯಿತು. ಈ ಹೊಸ ವಿಭಾಗವು ರಾಜ್ಯದ ಕರಾವಳಿ ಪ್ರದೇಶದಾದ್ಯಂತ ಆಟೋಮೋಟಿವ್ ಮತ್ತು ಏರೋಸ್ಪೇಸ್ ಕ್ಷೇತ್ರಗಳಲ್ಲಿ ನಾವೀನ್ಯತೆ, ಸಹಯೋಗ ಮತ್ತು ತಾಂತ್ರಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಸೈಇಂಡಿಯಾ ಕರಾವಳಿ ಕರ್ನಾಟಕ ವಿಭಾಗವನ್ನು ಸ್ಥಾಪಿಸುವುದು ಆಟೋಮೋಟಿವ್ ಮತ್ತು

ಎನ್ಐಟಿಕೆ- ಎಸ್ಎ.ಐಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ Read More »

ಕರಾವಳಿ
crime, arrest, suspected

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳನ್ನು (ಎ1) ಆಯೇಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಶೋಯೆಬ್ (ಎ5) ಮತ್ತು ಸಿರಾಜ್ ಎಂದು ಗುರುತಿಸಲಾಗಿದೆ. ಅಲಿ ನಾಪತ್ತೆಯಾದ ನಂತರ ರೆಹಮತ್ ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿದೆ. ಆಕೆಯನ್ನು ಬಂಟ್ವಾಳದ ಕಲ್ಲಡ್ಕ ಬಳಿ ಪೊಲೀಸರು ಬಂಧಿಸಿದ್ದಾರೆ.

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top