ಕರಾವಳಿ

ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಉಡುಪಿ ಸಂಸದರ ಅವಿರತ ಪ್ರಯತ್ನದಿಂದ ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ. ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ.ಕಳೆದ ಒಂದು ದಶಕದಿಂದ ಕುಂದಾಪುರ […]

ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ Read More »

ಕರಾವಳಿ

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಉಡುಪಿ, ಅ. 08. ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7 ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ. ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ -169ಎ ರಸ್ತೆಯ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಎಂಜಿಎಂ ಕಾಲೇಜು ಎದುರು ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಹಾದು ಹೋಗಿರುವ ಏಕಮುಖ

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಮಾರಿ ಸೆಲ್ಜಾ: ಹರಿಯಾಣದ ಸಿಎಂ ಸ್ಥಾನಕ್ಕೆನಾನು ಸ್ಪರ್ಧಿ

(ನ್ಯೂಸ್ ಕಡಬ)newskadaba.com, ಅ. 08.ಉಡುಪಿ:  ನಾನು ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿ ಎಂದು ಹರಿಯಾನದ ಸಿರ್ಸಾದ ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ತಿಳಿಸಿದ್ದಾರೆ. ಚುನಾವಣಾ ಮತ ಎಣಿಕೆ ನಡೆಯುತ್ತಿರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಸಿಎಂ ಸ್ಥಾನಕ್ಕೆ ನಾನೇ ಸ್ಪರ್ಧಿ. ಆದರೆ ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದೇನೆ ಎಂದಿದ್ದಾರೆ. ಬಿಜೆಪಿ ದುರಾಡಳಿತ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರುವುದು ನಿಶ್ಚಿತ ಎಂದು

ಕುಮಾರಿ ಸೆಲ್ಜಾ: ಹರಿಯಾಣದ ಸಿಎಂ ಸ್ಥಾನಕ್ಕೆನಾನು ಸ್ಪರ್ಧಿ Read More »

ಕರಾವಳಿ

​ಎ ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಎ ಕೆ ಅಹ್ಮದ್ ನಿಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 08. ಪ್ರತಿಷ್ಠಿತ ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರಾಗಿದ್ದರು. ಎ ಕೆ ಗ್ರೂಪ್ ಅನ್ನು ಪ್ರಾರಂಭಿಸಿ ಯಶಸ್ಸಿನ ಉತ್ತುಂಗಕ್ಕೆ ಒಯ್ದು ಪ್ರತಿಷ್ಠಿತ ಬ್ರ್ಯಾಂಡ್ ಆಗಿ ಪರಿವರ್ತಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.  

​ಎ ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಎ ಕೆ ಅಹ್ಮದ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಜ್ ಯಾತ್ರೆ-2025: ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 08. ಭಾರತೀಯ ಹಜ್ ಕಮಿಟಿ ಮೂಲಕ 2025ರಲ್ಲಿ ಹಜ್ ಯಾತ್ರೆ ಕೈಗೊಳ್ಳಲು ರಾಜ್ಯ ಹಜ್ ಸಮಿತಿ ಮೂಲಕ ಅರ್ಜಿ ಸಲ್ಲಿಸಿದವರ ಪೈಕಿ ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದೆ. ಆಯ್ಕೆಯಾದ ಎಲ್ಲಾ ಯಾತ್ರಿಕರು ಆರಂಭದಲ್ಲಿ ಮುಂಗಡ ಹಜ್ ಮೊತ್ತ ರೂ.1,28,000, ಮರುಪಾವತಿಸಲಾಗದ ಸಂಸ್ಕರಣಾ ಶುಲ್ಕ 300 ರೂ. ಮತ್ತು ಇತರ ವೆಚ್ಚಗಳಿಗೆ 2,000 ರೂ. ಸೇರಿದಂತೆ ಒಟ್ಟು 1,30,300 ರೂ.ಗಳನ್ನು 2024 ಅಕ್ಟೋಬರ್ 8 ರಿಂದ ಅ.21ರೊಳಗಾಗಿ ಪಾವತಿಸಬೇಕಾಗಿದೆ. 1,30,300 ರೂ.

ಹಜ್ ಯಾತ್ರೆ-2025: ಆಯ್ಕೆಯಾದ ಯಾತ್ರಿಕರ ತಾತ್ಕಾಲಿಕ ಪಟ್ಟಿ ಪ್ರಕಟ Read More »

ಕರಾವಳಿ

ಉಡುಪಿ: ತೈಲ ಸೋರಿಕೆಯಿಂದ ವಾಹನಗಳು ಸ್ಕಿಡ್

(ನ್ಯೂಸ್ ಕಡಬ)newskadaba.com, ಅ. 08.ಉಡುಪಿ:  ಅಪರಿಚಿತ ವಾಹನದಿಂದ ರಸ್ತೆಗೆ ತೈಲ ಸೋರಿಕೆಯಾಗಿ ಹಲವಾರು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಸವಾರರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಡುಪಿಯ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ತೈಲ ಸೋರಿಕೆಯಿಂದ ರಸ್ತೆ ಜಾರುತ್ತಿತ್ತು, ಪರಿಣಾಮ ಏಳೆಂಟು ದ್ವಿಚಕ್ರ ವಾಹನ ಸವಾರರು ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ರಸ್ತೆಯಿಂದ ತೈಲವನ್ನು ತೆರವುಗೊಳಿಸಲು ನೀರು ಸಿಂಪಡಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಅಗ್ನಿಶಾಮಕ ದಳದ ಪದ್ಮನಾಭ ಕಾಂಚನ್, ದಿವಾಕರ್ ಮತ್ತು

ಉಡುಪಿ: ತೈಲ ಸೋರಿಕೆಯಿಂದ ವಾಹನಗಳು ಸ್ಕಿಡ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಅಕ್ರಮ ಮರ ಸಾಗಾಟ ಆರೋಪ: 4 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 08. ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ದೂಪದ ಮರದಿಂದ ಸಂಗ್ರಹಿಸಲಾದ ಹಾಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಸೋಮವಾರ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಸಾಗಾಟ ನಡೆಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಬಾಯಬೆ ನಿವಾಸಿ ಉಮ್ಮರ್ ಫಾರೂಕ್ (44), ಪಾಟ್ರಕೋಡಿ ನಿವಾಸಿಗಳಾದ ಆಲಿ ಹೈದರ್ ಎಂ.ಕೆ(24), ಹಸೈನಾರ್(30) ಮತ್ತು ತಾಳಿಪಡ್ಪು ನಿವಾಸಿ ಉಮ್ಮರ್

ಅಕ್ರಮ ಮರ ಸಾಗಾಟ ಆರೋಪ: 4 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಮಳೆಗೆ 2 ಕಿ.ಮೀ. ಕೊಚ್ಚಿ ಹೋದ 91ರ ವೃದ್ಧೆ..!

(ನ್ಯೂಸ್ ಕಡಬ)newskadaba.com ಉಡುಪಿ, ಅ. 08. ಜಿಲ್ಲೆಯ ಹೆಬ್ರಿ ತಾಲೂಕು ಕಬ್ಬಿನಾಲೆ ವ್ಯಾಪ್ತಿಯ ಬಲ್ಲಾಡಿ ಗುಮ್ಮಗುಂಡಿ ತೋಡು ಹಾಗೂ ಕೆಲಕಿಲ ನದಿಯಲ್ಲಿ ಭಾನುವಾರ ಉಂಟಾದ ಭಾರಿ ಪ್ರವಾಹದಲ್ಲಿ ವೃದ್ದೆಯೊಬ್ಬಳು ಕೊಚ್ಚಿ ಹೋಗಿದ್ದು, ಆಕೆಯ ಮೃತದೇಹ ಸುಮಾರು ಎರಡು ಕಿ.ಮೀ. ದೂರದ ಬಲ್ಲಾಡಿಯ ಅರ್ಧನಾರೀಶ್ವರ ದೇವಸ್ಥಾನದ ಬಳಿ ಸೋಮವಾರ ಪತ್ತೆಯಾಗಿದೆ. ಮೃತರನ್ನು ಬಲ್ಲಾಡಿ ಬೆಂಡುಗುಡ್ಡೆಯ ಚಂದ್ರು ಗೌಡ್ತಿ (91) ಎಂದು ಗುರುತಿಸಲಾಗಿದೆ. ಬಲ್ಲಾಡಿ ಗುಡ್ಡ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ 2.30ಕ್ಕೆ ಗಾಳಿ, ಗುಡುಗು ಸಹಿತ ಭಾರಿ ಮಳೆ ಸುರಿದಿತ್ತು.

ಭಾರೀ ಮಳೆಗೆ 2 ಕಿ.ಮೀ. ಕೊಚ್ಚಿ ಹೋದ 91ರ ವೃದ್ಧೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅರಣ್ಯ ಇಲಾಖೆ ವತಿಯಿಂದ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

(ನ್ಯೂಸ್ ಕಡಬ)newskadaba.com ಕಡಬ, ಅ. 08. ಕರ್ನಾಟಕ ಅರಣ್ಯ ಇಲಾಖೆ ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘ ಮಂಗಳೂರು ವಿಭಾಗ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವನ್ಯಜೀವಿ ಸಪ್ತಹ ಪ್ರಯುಕ್ತ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಆಯ್ಕೆಯ ಸಲುವಾಗಿ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಸೈಂಟ್ ಜೋಕಿಮ್ ಸಭಾಭವನದಲ್ಲಿ ನಡೆಯಿತು. ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ವಲಯ ಶ್ರೀ ವಿಮಲ್ ಬಾಬು ಇವರು ಅಧ್ಯಕ್ಷತೆಯನ್ನು ವಹಿಸಿ ಪರಿಸರ ಸಂರಕ್ಷಣೆಯ ಮತ್ತು ವನ್ಯಜೀವಿಗಳ ಮಹತ್ವದ ಬಗ್ಗೆ

ಅರಣ್ಯ ಇಲಾಖೆ ವತಿಯಿಂದ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ Read More »

ಕರಾವಳಿ

“ಶ್ರೀ ಟೆಕ್ನಾಲಜೀಸ್‌” ಪ್ರಸ್ತುತಪಡಿಸುತ್ತಿದೆ 4ನೇ ವರ್ಷದ ಲಕ್ಕೀ ಸ್ಕೀಮ್; ಕೇವಲ 1 ಸಾವಿರ ಪಾವತಿಸಿ ಸ್ಕೂಟರ್, ಚಿನ್ನ ಮತ್ತು ಫರ್ನಿಚರ್ ನಿಮ್ಮದಾಗಿಸಿ

(ನ್ಯೂಸ್ ಕಡಬ)newskadaba.com ಅ. 09. ಸುಳ್ಯದ ಶ್ರೀ ಟೆಕ್ನಾಲಜಿ ಸೋಲಾರ್ ಆಟೋಮೇಷನ್ ತಂಡದ ನಾಲ್ಕನೇ ವರ್ಷದ ಯಶಸ್ವಿ ಲಕ್ಕಿ ಸ್ಕೀಂ ಗ್ರಾಂಡ್ ಆಗಿ ತಯಾರು ಮಾಡ್ತಿದೆ. ಬಹುಶಃ ಬೇರೆಲ್ಲೂ ಇಂತಹ ಒಂದು ಸುವರ್ಣಾವಕಾಶ ನೀವೆಲ್ಲೂ ಕೇಳಿರಲು ಅಸಾಧ್ಯ. ಇದರ ಇನ್ನೊಂದು ವಿಶೇಷತೆ ಏನೆಂದರೆ ಬಂಪರ್ ಬಹುಮಾನಗಳ ಜೊತೆಗೆ ಪ್ರತೀ ತಿಂಗಳು 5 ಜನರಿಗೆ ಸ್ಪೆಷಲ್ ಗಿಫ್ಟ್ ನ್ನು ಕೂಡಾ ಪಡೆದುಕೊಳ್ಳಬಹುದು. ಇಷ್ಟು ಮಾತ್ರ ಅಲ್ಲದೇ ನಿಮ್ಗೆ ಏನಾದ್ರೂ ಲಕ್ಕಿ ಬಂಪರ್ ವಿನ್ ಆದ್ರೆ ಮುಂದೆ ಹಣ ಕಟ್ಟಬೇಕೆಂದಿಲ್ಲ.  

“ಶ್ರೀ ಟೆಕ್ನಾಲಜೀಸ್‌” ಪ್ರಸ್ತುತಪಡಿಸುತ್ತಿದೆ 4ನೇ ವರ್ಷದ ಲಕ್ಕೀ ಸ್ಕೀಮ್; ಕೇವಲ 1 ಸಾವಿರ ಪಾವತಿಸಿ ಸ್ಕೂಟರ್, ಚಿನ್ನ ಮತ್ತು ಫರ್ನಿಚರ್ ನಿಮ್ಮದಾಗಿಸಿ Read More »

ಕರಾವಳಿ
Scroll to Top