ಕರಾವಳಿ

ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 08. ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ಇದರ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ ಮಾಡಲಾಗಿದೆ. ಕುಂದಾಪುರ ತಾಲೂಕು ಉಡುಪಿ ಜಿಲ್ಲೆ ಇವರನ್ನು ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯಿದಿನ್ ಕುಟ್ಟಿ ಅವರು ಮುಂದಿನ ಅದೇಶದವರೆಗೆ ನೇಮಕ ಮಾಡಿ ಆದೇಶಿಸಲಾಗಿದೆ.  

ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ Read More »

ಕರಾವಳಿ

ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ. 08. ನಾಲ್ಕು ದಿನಗಳ ಹಿಂದೆ ತಾನು ಓಡಿಸುತ್ತಿದ್ದ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನಲೆಯಲ್ಲಿ ಮನನೊಂದು ಚಾಲಕ ವಾಸಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ ( 55) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣ ರಸ್ತೆಯ ಬಾಡಿಗೆ ಕ್ವಾಟರ್ಸ್ ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಸಾಲ ಪಡೆದು ಆಟೋರಿಕ್ಷಾ ಖರೀದಿಸಿದ್ದು , ಬಿಟ್ಟುಕೊಡುವಂತೆ ಹಲವು ಬಾರಿ

ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

(ನ್ಯೂಸ್ ಕಡಬ)newskadaba.com,ಬಂಟ್ವಾಳ ಅ. 08. ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ವಸ್ತು ಸಹಿತ ಅರಣ್ಯ ಇಲಾಖೆ ಅಧಿಕಾರಿಗಳು ಚಂದಳಿಕೆಯಲ್ಲಿ ಬಂಧಿಸಿದ್ದಾರೆ. ಕೆದಿಲ ನಿವಾಸಿಗಳಾದ ಅಲಿ ಹೈದರ್, ಉಮ್ಮರ್ ಫಾರೂಕ್, ಮಹಮ್ಮದ್ ಹಸೈನಾರ್, ಉಮ್ಮರ್ ಫಾರೂಕ್ ಬಂಧಿತರು. ನಾಲ್ವರು ಆರೋಪಿಗಳು ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಕೃತ್ಯ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ 11 ಕೆ.ಜಿ. ಹಾಲುಮಡ್ಡಿ, ಮೇಣ ತೆಗೆಯಲು

ಬಂಟ್ವಾಳ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ನಗರದ ಸಿಸಿಬಿ ಪೊಲೀಸರು ಬೃಹತ್‌ ಡ್ರಗ್‌ ಜಾಲವೊಂದನ್ನು ಪತ್ತೆ ಮಾಡಿದ್ದಾರೆ. ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ. ಸುಮಾರು 6 ಕೆ.ಜಿ‌ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ಸೈಬೀರಿಯನ್ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ ಅಲಿ ಎಂಬಾತನನ್ನು ಬಂಧಿಸಲಾಗಿತ್ತು.

ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ Read More »

ಕರಾವಳಿ

ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ

(ನ್ಯೂಸ್ ಕಡಬ)newskadaba.com  ಸುಳ್ಯ, ಅ. 07. ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲವು ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ತಮಿಳುನಾಡಿನ ಕೋಳಿ ಕರಣ್ ಎಂಬಾತ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಅ. 5ರಂದು ಪೊಲೀಸರು ಬಂಧಿಸಿ ಸುಳ್ಯದ ಕೋರ್ಟ್ ಗೆ

ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಸೇತುವೆಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು- ಯುವಕರ ಸಾಹಸಕ್ಕೆ ಸ್ಥಳೀಯರ ಪ್ರಶಂಸೆ

(ನ್ಯೂಸ್ ಕಡಬ)newskadaba.com ಅ. 07. ಸೇತುವೆಯಿಂದ ಕೆಳಗೆ ಬಿದ್ದು, ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯೋರ್ವರನ್ನು ಮೇಲಕೆತ್ತಿ ರಕ್ಷಿಸಿದ ಘಟನೆ ಅ.6ರಂದು ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಉಮ್ಮರ್ ರವರು ರಕ್ಷಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ. ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಹೆಚ್ ಹಾಗೂ ಸುರೇಶ್ ಸಿಎಚ್ ರಕ್ಷಣೆ ಮಾಡಿದ ಯುವಕರು.ಅ.6ರಂದು ಮಧ್ಯಾಹ್ನದ ಬಳಿಕ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿರುವ ಹಿನ್ನೆಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿತ್ತು. ವಿಟ್ಲದ  ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಾಯಂಕಾಲದ ವೇಳೆ ಉಮ್ಮರ್

ವಿಟ್ಲ: ಸೇತುವೆಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು- ಯುವಕರ ಸಾಹಸಕ್ಕೆ ಸ್ಥಳೀಯರ ಪ್ರಶಂಸೆ Read More »

ಕರಾವಳಿ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ

(ನ್ಯೂಸ್ ಕಡಬ)newskadaba.com ಅ. 07. ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ  ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು. ತೂಗು ಸೇತುವೆಯ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶರತ್ ತೊಡಿಕ್ಕಾನ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ ಬಿ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ Read More »

ಕರಾವಳಿ

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 07. ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ಯುವಕ ಕಾಣೆಯಾಗಿರುವುದಾಗಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನೆಹರು ನಗರದ ಗಣೇಶ್ ಬಾಗ್ ನ ಲಕ್ಷ್ಮೀ ಪ್ರಸಾದ್ ಕಂಪೌಂಡ್ ನಿವಾಸಿ ದಿ.ಕೇಶವ ಮೂರ್ತಿ ಎಂಬುವರ ಪುತ್ರ 20 ವರ್ಷ ಪ್ರಾಯದ ಮನೋಜ್ ಕೆ. ಕಾಣೆಯಾದ ಯುವಕನಾಗಿದ್ದಾನೆ. ಪುತ್ತೂರಿನ ಸಂತ ಫಲೋಮಿನಾ ಕಾಲೇಜಿನಲ್ಲಿ 2ನೆ ವರ್ಷದ ಬಿಎಸ್ಸಿ ಪದವಿಗೆ ಕಲಿಯುತ್ತಿದ್ದ ಮನೋಜ್ ಅ.5ರಂದು ಬೆಳಿಗ್ಗೆ ಸ್ನೇಹಿತನ ಮನೆಗೆ ಹೋಗಿ

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಸೈಬರ್ ವಂಚಕರಿಂದ ಎಚ್ಚರ ವಹಿಸಿ- ಪಿಎಸೈ ಹರೀಶ್ ಆರ್

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 07. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರು, ವೃತ್ತಿಪರರೇ ಹೆಚ್ಚಾಗಿ ವಂಚನೆಗೆ ಒಳಗಾಗುತ್ತಿದ್ದು ಸೈಬರ್ ಅಥವಾ ಆನ್ ಲೈನ್ ನಲ್ಲಿ ವ್ಯವಹರಿಸುವಾಗ ಹೆಚ್ಚು ಎಚ್ಚರದಿಂದ ಇರಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಹರೀಶ್ ಆರ್ ಅವರು ಸಲಹೆ ನೀಡಿದರು. ಅವರು ಭಾನುವಾರ ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಚರ್ಚ್ ಇದರ ಕಥೊಲಿಕ್ ಸಭಾ ಘಟಕ, ಮಾಧ್ಯಮ ಆಯೋಗ ಜಂಟಿಯಾಗಿ ಆಯೋಜಿಸಿದ್ದ ಸೈಬರ್ ಕ್ರೈ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ವಂಚನೆಗೆ ಒಳಗಾಗಿರುವುದು

ಸೈಬರ್ ವಂಚಕರಿಂದ ಎಚ್ಚರ ವಹಿಸಿ- ಪಿಎಸೈ ಹರೀಶ್ ಆರ್ Read More »

ಕರಾವಳಿ

ಚಿನ್ನದ ದರದಲ್ಲಿ ತುಸು ಇಳಿಕೆ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಕೆಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿಇಂದು ತುಸು ಇಳಿಕೆ ಕಂಡುಬಂದಿದೆ. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪವೇ ಸ್ವಲ್ಪ ಇಳಿಕೆಯಾಗಿದೆ. ಸೋಮವಾರ ರಾಜ್ಯ ರಾಜಧಾನಿ ರಾಜ್ಯ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,119 ರೂ. ಮತ್ತು

ಚಿನ್ನದ ದರದಲ್ಲಿ ತುಸು ಇಳಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top