ಕರಾವಳಿ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್

(ನ್ಯೂಸ್ ಕಡಬ) newskadaba.com ಸೆ. 25. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ  ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ -ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ […]

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್ Read More »

ಕರಾವಳಿ, ಕರ್ನಾಟಕ

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

 (ನ್ಯೂಸ್ ಕಡಬ) newskadaba.com ಮಂಗಳೂರು(ಸೆ.25): ಕರಾವಳಿಯ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. 2019ರ ಮೇ 11ರಂದು ಮಂಗಳೂರು ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ಶ್ರೀಮತಿ ಶೆಟ್ಟಿ ಕೊಲೆ ನಡೆದಿತ್ತು. ಮನೆಗೆ ಬಂದು ಚಿಟ್ ಫಂಡ್ ಹಣ ಕೇಳಿದ್ದ ಮಹಿಳೆಯನ್ನು ಜೋನ್ ಸ್ಯಾಮ್ಸನ್ ದೊಣ್ಣೆಯಿಂದ ಹೊಡೆದು ಕೊಂದಿದ್ದ. ಬಳಿಕ ಶ್ರೀಮತಿ ಶೆಟ್ಟಿ ಅವರನ್ನು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿದೆಡೆ ಎಸೆಯಲಾಗಿತ್ತು.

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಸೆ. 25. ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ.ಚೌಟ ಅವರು, ಹೈಕೋರ್ಟ್ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ Read More »

ಕರಾವಳಿ
Death, deadbody, Waterfall

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 25. ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ನಾಗೇಂದ್ರ (13) ಹಾಗೂ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದೆ. ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ದುಡಿದು ಪರಿಸರದ ಜನರ ಪ್ರೀತಿಗೆ ಪಾತ್ರರಾಗಿ ಇತ್ತೀಚೆಗೆ ನಿಧನರಾದ ಕಡಬ ಅಂಗಣ ಸುಂದರ ಗೌಡ ಅವರಿಗೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಮಹಿಳಾ ವೇದಿಕೆ ವತಿಯಿಂದ ನುಡಿನಮನ ಸಲ್ಲಿಕೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು. ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ

ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ Read More »

ಕರಾವಳಿ

ಕುಂದಾಪುರ: ಬುಲ್ ಟ್ರಾಲ್ ಮೀನುಗಾರಿಕೆ ವಿರೋಧಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಂದಾಪುರ(ಸೆ.25): ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ. ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ. ಬುಲ್‌ಟ್ರಾಲ್‌ ಲೈಟ್‌ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೈಂದೂರು ವಲಯ ನಾಡದೋಣಿ ಮೀನುಗಾರರ

ಕುಂದಾಪುರ: ಬುಲ್ ಟ್ರಾಲ್ ಮೀನುಗಾರಿಕೆ ವಿರೋಧಿಸಿ ಪ್ರತಿಭಟನೆ Read More »

ಕರಾವಳಿ

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ ಕ್ಯಾ. ಚೌಟ ಅವರು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ

ಮುಹಮ್ಮದ್ ರಿಫಾಯ್ ಕಾಟಿಪಳ್ಳರವರಿಗೆ ‘ಶಿಕ್ಷಾ ರತ್ನ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಇಂಗ್ಲಿಷ್ ಸ್ಕೂಲ್ ನೆಟ್‌ವರ್ಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮುಹಮ್ಮದ್ ರಿಫಾಯ್ ಕಾಟಿಪಳ್ಳ ಅವರಿಗೆ ಲಕ್ನೋದ ಸಿಟಿ ಮಾಂಟೆಸ್ಸರಿ ಸ್ಕೂಲ್ (ಸಿಎಂಎಸ್)ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಶಿಕ್ಷಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕೇರಳ, ಕರ್ನಾಟಕ, ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ಪರಿವರ್ತನಾಶೀಲ ಶಿಕ್ಷಣ ಮತ್ತು ವಿದ್ಯಾರ್ಥಿ ನಾಯಕತ್ವವನ್ನು ಸಶಕ್ತಗೊಳಿಸುವಲ್ಲಿ ರಿಫಾಯ್ ಅವರ ದಣಿವರಿಯದ ಪ್ರಯತ್ನಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.  

ಮುಹಮ್ಮದ್ ರಿಫಾಯ್ ಕಾಟಿಪಳ್ಳರವರಿಗೆ ‘ಶಿಕ್ಷಾ ರತ್ನ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಸೆ. 25. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರನ್ನು ಚಲಾಯಿಸುತ್ತಿದ್ದಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ವೇಗವಾಗಿ ಕಾರಿನ ಮುಂಭಾಗಕ್ಕೆ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಕಾರಿನ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 26ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ. ಕ. ಜಿಲ್ಲೆ, ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 26ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಘಟಿಸಲಾದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ,

ಸೆಪ್ಟೆಂಬರ್ 26ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ
Scroll to Top