ಕರಾವಳಿ

Death, deadbody, Waterfall

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಸೆ. 24. ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆಂದು ತೆರಳಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಗರದ ಕಂಕನಾಡಿಯ ಬೆಂದೂರುವೆಲ್ನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿರುವ ಕುರಿತು ವರದಿಯಾಗಿದೆ. ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲೆಂದು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದು, ಅರ್ಧ […]

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 24. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ ಅವರನ್ನು ಕಾರ್ಕಳ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಕರೆತಂದು ಸೋಮವಾರ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಕಾರ್ಕಳ ಡಿವೈಎಸ್ಪಿ ಅರವಿಂದ್‌ ಎನ್‌. ಕಲಗುಜ್ಜಿ ನೇತೃತ್ವದ ತಂಡ ಇವರಿಬ್ಬರನ್ನು ತೀವ್ರ ವಿಚಾರಣೆ ನಡೆಸಿತು.  

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಖಿಲ್ ಕುಮಾರಸ್ವಾಮಿ ಕುಕ್ಕೇಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 24. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದೂವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಈಗಾಗಲೇ ನಮ್ಮ

ನಿಖಿಲ್ ಕುಮಾರಸ್ವಾಮಿ ಕುಕ್ಕೇಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ Read More »

ಕರಾವಳಿ

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24.  ಮಂಗಳೂರು ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ರಾಜ್ಯಾಧ್ಯಕ್ಷರಾಗಿದ್ದಇವರು ಸಮಾಜದಲ್ಲಿ ನಡೆಯುವ ಅನ್ಯಾಯ, ಅಕ್ರಮದ ವಿರುದ್ಧ ಧ್ವನಿ ಎತ್ತಿದವರಾಗಿದ್ದರು. ಅದರಲ್ಲೂ ಪೊಲೀಸರ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಮಾಡುವಲ್ಲಿ‌ ಮುಂಚೂಣಿಯಲ್ಲಿದ್ದರು. ಯಾವುದೇ ಧಾರ್ಮಿಕ ಕ್ರಿಯೆ ನಡೆಸದೆ ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ನಾಳೆ ಹಸ್ತಾಂತರ ಮಾಡಲಾಗುವುದು ಎಂದು

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ Read More »

ಕರಾವಳಿ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ- ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಸೆ. 24. ಸ್ಕೂಟರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ನಡೆದಿದೆ. ಗಾಯಗೊಂಡ ಸವಾರನನ್ನು ಕಾಸರಗೋಡು ಮೂಲದ ಜುನೈದ್ ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ ಎಮ್ಮೆಮಾಡಿಗೆ ತೆರಳಿ ವಾಪಾಸು ಬರುತ್ತಿದ್ದ ಸ್ಕೂಟರ್ ಹಾಗೂ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನ ಸುಳ್ಯದ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 24. ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ನಾಜೀರ್ ರವರು ಕುಟುಂಬದೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಿ ಬಳಿಕ ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿ ಬಸ್ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದೆ.

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಳ್ಯ ಠಾಣೆಯ ಗೇಟಿನ ಬಳಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಕುರಿತು ವರದಿಯಾಗಿದೆ.

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಓಮ್ನಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಇಲ್ಲಿನ ಪರಿವಾರಕಾನ ಎಂಬಲ್ಲಿ ರಸ್ತೆ ಬದಿ ಕೆಟ್ಟು ನಿಂತಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಇದೀಗ ಅದರ ಗುರುತು ಪತ್ತೆಯಾಗಿದೆ. ಶವವಾಗಿ ಪತ್ತೆಯಾದವನನ್ನು ಮನೋಹರ್ ಎಂದು ಗುರುತಿಸಲಾಗಿದ್ದು ಈತ ಮದ್ಯ ವ್ಯಸನಿಯಾಗಿದ್ದ ಎಂದು ಹೇಳಲಾಗುತ್ತಿದೆ. ಸದ್ಯ ವ್ಯಕ್ತಿಯ ಸಾವಿಗೆ ಕಾರಣವೇನೆಂಬುದು ತಿಳಿಯದೇ ಇದ್ದು ಪೊಲೀಸ್ ಅಧಿಕಾರಿಗಳು ತನಿಖೆಯಿಂದಷ್ಟೇ ಹೊರಬರಬೇಕಿದೆ.

ಸುಳ್ಯ: ಓಮ್ನಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಮಗುವೊಂದನ್ನು ಚಿಕಿತ್ಸೆಗೆಂದು ಸುಳ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಆಂಬ್ಯುಲೆನ್ಸ್ ಅಪಘಾತಕ್ಕೀಡಾದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ. ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅನೈತಿಕ ಪೊಲೀಸ್ ಗಿರಿ ಪ್ರಕರಣ – ಬಂಧಿತ ಇಬ್ಬರಿಗೆ ನ್ಯಾಯಾಂಗ ಬಂಧನ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಇಲ್ಲಿನ ಪೈಚಾರಿನಿಂದ ಕರೆತಂದು ಸುಳ್ಯ ಬಸ್ಸು ನಿಲ್ದಾಣದ ಬಳಿಯಲ್ಲಿ ಮುಸ್ಲಿಂ ಯುವಕನ ಮೇಲೆ ನಡೆದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸರು ಇಬ್ಬರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಾದ ವರ್ಷಿತ್ ಹಾಗೂ ಮಿಥುನ್ ಎಂದು ತಿಳಿದುಬಂದಿದೆ. ಸದ್ಯ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದು ಬಂದಿದೆ.

ಅನೈತಿಕ ಪೊಲೀಸ್ ಗಿರಿ ಪ್ರಕರಣ – ಬಂಧಿತ ಇಬ್ಬರಿಗೆ ನ್ಯಾಯಾಂಗ ಬಂಧನ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top