ಕರಾವಳಿ

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಸ್ತೆ ದಾಟುವಾಗ ಡಿಕ್ಕಿ ಹೊಡೆದು ಆಟೋ ರಿಕ್ಷಾದ ಕೆಳಗೆ ಬಿದ್ದ ತಾಯಿಯನ್ನು ರಕ್ಷಿಸಲು ಧಾವಿಸಿದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ವೈಭವಿ ಅವರ ತಾಯಿ ಚೇತನಾ ಅವರು ವೈಭವಿ ಅವರ ಟ್ಯೂಷನ್ ಸೆಂಟರ್ ಬಳಿ ರಸ್ತೆ ದಾಟುತ್ತಿದ್ದಾಗ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ. ವೈಭವಿ ಕೇಂದ್ರದಿಂದ ಹೊರಬರುತ್ತಿದ್ದಂತೆ ಅವರ ಎದುರೇ ಅಪಘಾತ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಓಡಿ ಆಟೋ ರಿಕ್ಷಾವನ್ನು ಎತ್ತಿ […]

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ Read More »

ಕರಾವಳಿ

ಕೊಯಿಲ-ರಾಮಕುಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 10. ಜಾತಿ ಸಂಘಟನೆಗಳ ಬಲವರ್ದನೆಯ ಪೈಪೋಟಿಯಿಂದಾಗಿ ಹಿಂದೂ ಸಮಾಜ ವಿಘಟನೆಯಾಗುತ್ತಿದೆ. ಜಾತ್ಯಾತೀತತೆಯ ಮೇಲೈಕೆ ಹೀಗೆ  ಮುಂದುವರಿದರೆ ಹಿಂದೂ ಸಮಾಜದ ಸಂಸ್ಕಾರ ಸಂಸ್ಕೃತಿಗಳು ಸರ್ವನಾಶವಾಗುತ್ತವೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಹಿಂದೂ ಕಲ್ಪನೆಯಡಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ದೈವನರ್ತಕ, ಸಿವಿಲ್ ಇಂಜಿನಿಯಾರ್ ಡಾ.ರವೀಶ್ ಪಡುಮಲೆ ಹೇಳಿದರು. ಅವರು ಕೊಯಿಲ-ರಾಮಕುಂಜ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಆತೂರು ಗಣೇಶ್ ನಗರದಲ್ಲಿ ಸೆ. 07 ಮತ್ತು ೦8ರಂದು ನಡೆದ  ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ನಡೆದ

ಕೊಯಿಲ-ರಾಮಕುಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ, ಕದಿರು ವಿನಿಯೋಗ, ತೆನೆ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 10. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಶನಿವಾರದಂದು ನಡೆಯಿತು. ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ದೇವಸ್ಥಾನದಲ್ಲಿ ಗಣಪತಿ ಹವನ ,ದೇವಸ್ಥಾನಕ್ಕೆ ತೆನೆ ತುಂಬಿಸುವುದು, ಭಕ್ತಾದಿಗಳಿಗೆ ತೆನೆ ವಿತರಣೆ ನಡೆಯಿತು. ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸೋಮವಾರ ಶುದ್ದಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ, ಕದಿರು ವಿನಿಯೋಗ, ತೆನೆ ವಿತರಣೆ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯ: ಸೆಪ್ಟೆಂಬರ್ 12ರಂದು ಶ್ರೀ ದೇವಳದಲ್ಲಿ ಹೊಸ್ತಾರೋಗಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 10. ನಾಗಾರಾಧನೆಯ ಪುಣ್ಯ ತಾಣವಾದ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ. 12ರಂದು ಹೊಸ್ತಾರೋಗಣೆ (ನವಾನ್ನ ಪ್ರಸಾದ) ನೆರವೇರಲಿದೆ. ಈ ನಿಮಿತ್ತ ಪ್ರಾತ:ಕಾಲ 5:15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7:30 ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿರುವುದು. ಬೆಳಗ್ಗೆ 8ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ. ದರುಶನದಲ್ಲಿ ವ್ಯತ್ಯಯ: ಈ ದಿನ ಬೆಳಗ್ಗೆ 10

ಕುಕ್ಕೇ ಸುಬ್ರಹ್ಮಣ್ಯ: ಸೆಪ್ಟೆಂಬರ್ 12ರಂದು ಶ್ರೀ ದೇವಳದಲ್ಲಿ ಹೊಸ್ತಾರೋಗಣೆ Read More »

ಕರಾವಳಿ

ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೆಡ್ ರಿಬ್ಬನ್ ಕ್ಲಬ್‍ಗಳು, ಡೆಕಾಥ್ಲಾನ್ ಭಾರತ್ ಮಾಲ್, ಸ್ಕೂಲ್ ಬುಕ್ ಕಂಪನಿ, ಲಯನ್ಸ್ ಕ್ಲಬ್ ಮಂಗಳೂರು, ಯಂಗ್ ಇಂಡಿಯಾ ಮಂಗಳೂರು, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇದರ

ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ Read More »

ಕರಾವಳಿ

ಅಸಂಘಟಿತ ಕಾರ್ಮಿಕರ ಸೌಲಭ್ಯ- ಹೆಸರು ನೋಂದಾಯಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. (ಹಮಾಲರು, ಚಿಂದಿ ಆಯುವವರು, ಮನೆಕೆಲಸದವರು, ಮೆಕಾನಿಕ್, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಫೋಟೋಗ್ರಾಫರ್, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/

ಅಸಂಘಟಿತ ಕಾರ್ಮಿಕರ ಸೌಲಭ್ಯ- ಹೆಸರು ನೋಂದಾಯಿಸಲು ಸೂಚನೆ Read More »

ಕರಾವಳಿ

ಸೆಪ್ಟೆಂಬರ್ 11ರಂದು ಅರಣ್ಯ ಹುತಾತ್ಮರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 11ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ನಗರದ ಪಡೀಲ್‍ನಲ್ಲಿರುವ ಮಂಗಳೂರು ವೃತ್ತ ಕಚೇರಿಯ ಪ್ರಾಂಗಣದಲ್ಲಿ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 11ರಂದು ಅರಣ್ಯ ಹುತಾತ್ಮರ ದಿನಾಚರಣೆ Read More »

ಕರಾವಳಿ

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ- ಕೃಷಿಗೆ ಹಾನಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 10.  ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ಜನರ ದೈನಂದಿನ ಬದುಕಿಗೆ ಅಡಚಣೆಯಾಗಿದೆ. ಅಲ್ಲದೆ ಕೃಷಿ ಫಸಲಿಗೆ ಅಪಾರ ಹಾನಿ ಸಂಭವಿಸುವ ಸಾಧ್ಯತೆಗಳಿದೆ ಎನ್ನಲಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಮೈಕೊರೆಯುವ ಚಳಿ ಇದೆ. ರಸ್ತೆಗಳ ಮೇಲೆ ಹರಿಯುತ್ತಿರುವ ನೀರು ಜನ ಮತ್ತು ವಾಹನಗಳ ಸಂಚಾರಕ್ಕೆ ತೊಡಕನ್ನುಂಟು ಮಾಡುತ್ತಿದೆ. ಹೊಂಡ ಗುಂಡಿಗಳಾಗಿರುವ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ- ಕೃಷಿಗೆ ಹಾನಿ Read More »

ಕರಾವಳಿ

ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ – ಅರ್ಜಿ ಸಲ್ಲಿಸಲು ರೋಗಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶೀಘ್ರದಲ್ಲಿ ಹೊಸ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ ಆರಂಭವಾಗುತ್ತಿರುವ ಹಿನ್ನೆಲೆ ಕೇಂದ್ರದ ವ್ಯಾಪ್ತಿಗೆ ಬರುವ ಡಯಾಲಿಸಿಸ್ ರೋಗಿಗಳು ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. 5 ಕಿ.ಮೀ. ವ್ಯಾಪ್ತಿಯಲ್ಲಿನ ಡಯಾಲಿಸಿಸ್ ರೋಗಿಗಳು (ಸ್ಥಳೀಯ), ಹಿರಿಯ ನಾಗರಿಕರು, ಮಹಿಳೆಯರು, ಕಡುಬಡವರು, ವಿಕಲಚೇತನರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ಮೇರೆಗೆ ಡಯಾಲಿಸಿಸ್ ರೋಗಿಗಳನ್ನು ಪರಿಗಣಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಆಡಳಿತ ವೈದ್ಯಾಧಿಕಾರಿ

ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ – ಅರ್ಜಿ ಸಲ್ಲಿಸಲು ರೋಗಿಗಳಿಗೆ ಸೂಚನೆ Read More »

ಕರಾವಳಿ

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                 

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೆ.9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು ಹಾಸನಿವಾಸಿ ಚಂದ್ರೇಗೌಡ (50) ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು,

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top