ಕರಾವಳಿ

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ನಾಗಮಂಗಲದ ಕೋಮುಗಲಬೆ ಖಂಡಿಸಿ ಬಿಸಿರೋಡ್‌ನಲ್ಲಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ  ಬೃಹತ್ ಪ್ರತಿಭಟನೆ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ – ಬಂಟ್ವಾಳ ತಾಲೂಕು ಇವರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ, ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ನರಸಿಂಹ ಮಾಣಿ ಮತ್ತು ವಕೀಲರಾದ ಪ್ರಸಾದ್ ಕುಮಾರ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ […]

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು 

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೇಜ್ರಿವಾಲ್ ಗೆ ಜಾಮೀನು ಮಂಜೂರುಗೊಳಿಸಿದ ಸುಪ್ರೀಂ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್,

ಕೇಜ್ರಿವಾಲ್ ಗೆ ಜಾಮೀನು ಮಂಜೂರುಗೊಳಿಸಿದ ಸುಪ್ರೀಂ..! Read More »

ಕರಾವಳಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ. 13.  ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಶಪಡಿಸಿಕೊಂಡ ಲಾರಿ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಅಕ್ರಮವಾಗಿ ಡಾಂಬರು ದಾಸ್ತಾನು ಪ್ರಕರಣದಲ್ಲಿ ವಶಪಡಿಸಿದ್ದ ಲಾರಿಯನ್ನು (ಏಐ-10 ಎಂಆ-148 ನೇ ನಂಬ್ರದ ಟಾಟಾ ಎಸ್‍ಎಫ್‍ಸಿ 407) ಸೆಪ್ಟೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಹರಾಜಿನಲ್ಲಿ ಸೊತ್ತನ್ನು ಪಡೆಯಲು ಇಚ್ಚಿಸುವವರು ಹರಾಜು ಸಮಯದ 1ಗಂಟೆ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಹರಾಜಿನಲ್ಲಿ ಭಾಗವಹಿಸಬೇಕು. ಹರಾಜು ಪ್ರಕ್ರಿಯೆಯನ್ನು ರದ್ದುಪಡಿಸುವ/ಮಾರ್ಪಡಿಸುವ ಸಂಪೂರ್ಣ ಅಧಿಕಾರವು ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಅವರದ್ದಾಗಿರುತ್ತದೆ. ಹರಾಜಿನಲ್ಲಿ ಭಾಗವಹಿಸುವವರು ಸೊತ್ತನ್ನು

ವಶಪಡಿಸಿಕೊಂಡ ಲಾರಿ ಬಹಿರಂಗ ಹರಾಜು Read More »

ಕರಾವಳಿ

ಸೆ.17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವು ಸೆಪ್ಟೆಂಬರ್ 17ರಂದು ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು

ಸೆ.17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮ Read More »

ಕರಾವಳಿ

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ಮಂಗಳೂರಿನ ಪಂಜಿಮೊಗರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವಾಣಿ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಭಿನಂದಿಸಿದೆ.

ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ Read More »

ಕರಾವಳಿ

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿಯಮಿತ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 24ರಂದು ಮಂಗಳವಾರ ಮಧ್ಯಾಹ್ನ 3ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 24ರಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ಮಹಾಸಭೆ Read More »

ಕರಾವಳಿ

ಉಡುಪಿ: ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13.  ಇಲ್ಲಿನ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.    

ಉಡುಪಿ: ಯುವಕ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಬಸ್ಸಿನ ಫುಟ್ ಬೋರ್ಡಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆಗೆಸೆಯಲ್ಪಟ್ಟ ಘಟನೆ ತೊಕ್ಕೊಟ್ಟು ಮೇಲ್ಸೆತುವೆ ಬಳಿ ನಡೆದಿದೆ. ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಸಿಟಿ ಬಸ್ಸೊಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದಾಗ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಚಾಲಕ ದಿಢೀರ್‌ ಬ್ರೇಕ್‌ ಹಾಕಿದ ಪರಿಣಾಮ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಬಸ್ ಫುಟ್ಬೋರ್ಡ್ ನಿಂದ ಬಿದ್ದ ವಿದ್ಯಾರ್ಥಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top