ಕರಾವಳಿ

ಯುವನಿಧಿ- ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಯುವನಿಧಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023ನೇ ಹಾಗೂ 2024ನೇ ಸಾಲಿನಲ್ಲಿ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳವರೆಗೆ (180 ದಿನ) ಉದ್ಯೋಗ ಸಿಗದ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರು ಈ ಯೋಜನೆಗಾಗಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು: ಅಭ್ಯರ್ಥಿಯು ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಯಾಗಿರಬೇಕು. ವಾಸವಿರುವ ವಿದ್ಯಾರ್ಥಿ ಎಂದರೆ ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾ/ಸ್ನಾತಕೋತ್ತರ […]

ಯುವನಿಧಿ- ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಎಸ್‍.ಎಸ್‍.ಎಲ್‍ಸಿ ಪ್ರೋತ್ಸಾಹ ಧನದ ಮೊತ್ತ ರೂ. 20,000/-. ಡಿಗ್ರಿ (ಬಿಎ, ಬಿಕಾಂ, ಬಿ ಎಸ್ಸಿ, ಬಿ.ಎಡ್. ಬಿ. ಬಿಪಿಎಡ್) – ರೂ. 25000/-. ಸ್ನಾತಕೋತ್ತರ ಕೋರ್ಸು ಗಳು (ಎಂ.ಎ, ಎಂಎಸ್ಸಿ, ಎಂಕಾಂ, ಎಂಬಿಎ, ಎಂಸಿಎ,

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆಪ್ಟೆಂಬರ್ 10 ರಂದು ನಗರದ ಲಾಲ್‍ ಬಾಗ್‍ನಲ್ಲಿರುವ ಮಂಗಳಾ ಸ್ಟೇಡಿಯಂ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ನಾಗರಿಕರ ವಯೋಮಿತಿ ಆಧಾರದ ಮೇಲೆ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾ ಸ್ಪರ್ಧೆ ಪ್ರಾರಂಭವಾಗಲಿದೆ. ಕ್ರೀಡಾ ಸ್ಪರ್ಧೆಗಳು :- ಮ್ಯೂಸಿಕಲ್ ಚೇರ್ ಪುರುಷರು/ಮಹಿಳೆಯರು 60 ರಿಂದ 70 ವರ್ಷ. ಬಿರುಸಿನ ನಡಿಗೆ ಪುರುಷರು/ಮಹಿಳೆಯರು 60 ರಿಂದ 69 ವರ್ಷ,

ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024- 25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ಸ್ನಾತಕೋತ್ತರ/ಡಿಪ್ಲೊಮಾ/ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಆಫ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣ WWW.mangaloreuniversity.ac.in ಮೂಲಕ ಪಡೆಯುವಂತೆ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024- 25ನೇ ಸಾಲಿಗೆ 1ನೇ ತರಗತಿಯಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP)ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷದ ಒಳಗಿರಬೇಕು. ಅರ್ಜಿಯನ್ನು SSP ಪೋರ್ಟಲ್ https://ssp.postmatric.karnataka.gov.in ನಲ್ಲಿ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆಯು ನಗರದ ಮೇರಿಹಿಲ್‍ ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಕುರಿತು, ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಬಗ್ಗೆ, ಕವಾಯತು ಹಾಜರಾತಿ ಪಟ್ಟಿಯನ್ನು 5ನೇ

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ, ಕರ್ನಾಟಕ

ರಾಷ್ಟ್ರಪತಿ ಪದಕ ಪುರಸ್ಕೃತ ಡಾ.ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 02. ರಾಷ್ಟ್ರಪತಿಗಳ ಪದಕ ಪುರಸ್ಕಾರ ಪಡೆದ ದ.ಕ ಜಿಲ್ಲಾ ಸಮಾದೇಷ್ಠರಾದ ಡಾ ಮುರಲೀ ಮೋಹನ್ ಚೂಂತಾರು ಅವರಿಗೆ ಉಳ್ಳಾಲ ಘಟಕದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಸುನಿಲ್ ಹಾಗೂ ಇತರ ಹಿರಿಯ ಗ್ರಹರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರಪತಿ ಪದಕ ಪುರಸ್ಕೃತ ಡಾ.ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಲವಿ ಗಂಜಿಮಠ ಆಪ್ಟೆಂ ಶೆತ್ ಪತ್ರಿಕೆಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಪ್ರಧಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02.  ಕೊಂಕಣಿ ಲೇಖಕಿ ಲವಿ ಗಂಜಿಮಠ ಅವರಿಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಹಾಗೂ ಬಜೆಧರ್ಮ ಕೇಂದ್ರದ ‘ಆಪ್ಟೆಂ ಶೆತ್’ ಎಂಬ ಪತ್ರಿಕೆಗೆ ‘ಧರ್ಮಕೇಂದ್ರದ ಅತ್ಯುತ್ತಮ ಪತ್ರಿಕೆ 2024’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮಂಗಳೂರು ಧರ್ಮಾಧ್ಯಕ್ಷರ ನಿವಾಸದ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ, ಮಂಗಳೂರು ಬಿಷಪ್ ಅ.ವಂ. ಡಾ.ಪೀಟರ್ ಪೌಲ್ ಸಲ್ಡಾನ್ಹಾ ಪ್ರಶಸ್ತಿ ಪ್ರದಾನ ಮಾಡಿದರು. ‘ರಾಕ್ಣೊ’ ವಾರಪತ್ರಿಕೆಯ ಸಂಪಾದಕ ವಂ. ರೂಪೇಶ್ ಮಾಡ್ತಾ ಪ್ರಶಸ್ತಿಯ ಕುರಿತು ವಿವರಣೆ ನೀಡಿದರು.

ಲವಿ ಗಂಜಿಮಠ ಆಪ್ಟೆಂ ಶೆತ್ ಪತ್ರಿಕೆಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಪ್ರಧಾನ Read More »

ಕರಾವಳಿ

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 01. ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು, ಶಿಕ್ಷಕಿ ಭಾನುಮತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡರು.

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ Read More »

ಕರಾವಳಿ, ಕರ್ನಾಟಕ

ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 31. ಟ್ರಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರು ಸಮೀಪದ ಮಾರ್ನಬೈಲು ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಗೊಂಡವರನ್ನು ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಾಮಾಜಿಕ ಕಾರ್ಯಕರ್ತ ಎಂ.ಹೆಚ್. ಮುಸ್ತಫಾ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಲ್ಕಾರ್ ನಿಂದ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್, ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಹೆಚ್ಚಿನ

ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ Read More »

ಕರಾವಳಿ
Scroll to Top