ಕರಾವಳಿ

ಕುಸಿತಗೊಂಡ ಕೊಂತೂರು ಸರಕಾರಿ ಶಾಲೆಗೆ ಎಸ್‌ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆಯ ನಿಯೋಗ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ. 29. ತಾಲೂಕಿನ ಕುಂತೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ನಿಯೋಗವು ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಲ್ಲಿನ ಶಾಲಾಭಿವೃಧ್ದಿ ಸಮಿತಿ ಹಾಗೂ ಮುಖ್ಯಗುರುಗಳ ಜೊತೆ ಸಮಾಲೋಚನೆ ನಡೆಸಿ, ಘಟನೆ ನಡೆದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಎಸ್‌ಎಂ ಮಾತನಾಡಿ, ಶಾಲಾ ಕಟ್ಟಡ ಕುಸಿತದಿಂದ ಪೋಷಕರಲ್ಲಿ ಸರಕಾರಿ ಶಾಲೆಯ […]

ಕುಸಿತಗೊಂಡ ಕೊಂತೂರು ಸರಕಾರಿ ಶಾಲೆಗೆ ಎಸ್‌ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆಯ ನಿಯೋಗ ಭೇಟಿ Read More »

ಕರಾವಳಿ, ಕರ್ನಾಟಕ

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಇಂದು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ಕಾಸರಗೋಡು ಜಿಲ್ಲೆ ಮಂಜೇಶ್ವರ ಬಡಾಜೆ ಪೋಸ್ಟ್ ಪುಚ್ಚಿತ್‌ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೇ ಸಲಾಂ(30) ಮತ್ತು ಸೂರಜ್ ರೈ ಯಾನೇ ಅಂಕಿ(26) ಎಂದು ಗುರುತಿಸಲಾಗಿದೆ. ಎಂಡಿಎಂಎ ಮಾದಕ ವಸ್ತುವನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಆಗಮಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮಂಗಳೂರು ಸಿಸಿಬಿ

ಎಂಡಿಎಂಎ ಮಾದಕ ವಸ್ತು ಮಾರಾಟ..!  ಇಬ್ಬರು ಆರೋಪಿಗಳ ಅರೆಸ್ಟ್..!  Read More »

ಕರಾವಳಿ, ಕ್ರೈಮ್ ನ್ಯೂಸ್

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ ಕಡಬ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಇಲ್ಲಿನ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸೈಂಟ್ ಜೋಕಿಮ್ಸ್ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಕಡಬ ಇದರ ಜಂಟಿ ಸಹಯೋಗದಲ್ಲಿ ನಡೆಯಿತು. ಕಡಬ ಭೂಮಿಕಾ ಕನ್ಸಲ್ಟೆನ್ಸಿ ಇದರ ಉದ್ಯಮಿಗಳಾದ ಶ್ರೀ ಸತೀಶ್ ನಾಯ್ಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯ ಆಶಯದಂತೆ ಸೋಲು ಗೆಲುವುಗಳನ್ನು

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ ಕಡಬ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ Read More »

ಕರಾವಳಿ, ಕರ್ನಾಟಕ

ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 28. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಬಂಟ್ವಾಳ ತಾಲೂಕು ಬೋಳಂತೂರು ನಾರಾಯಣ ಕೋಡಿಯ ಭರತ್ ಯಾನೆ ಯಕ್ಷಿತ್ (24) ಮತ್ತು ಕೊಳ್ನಾಡು ಗ್ರಾಮದ ಪರ್ತಿಪ್ಪಾಡಿಯ ದಿನೇಶ್ ಕುಡ್ತಮುಗೇರು (20) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್‌ ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ- ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ

ಕಡಬ: ಶಾಲಾ ಗೋಡೆ ಬಿದ್ದು 4 ವಿದ್ಯಾರ್ಥಿಗಳಿಗೆ ಗಾಯ- ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ. 28. ತಾಲೂಕಿನ ಪೆರಾಬೆ ಸಮೀಪದ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಕುಸಿದುಬಿದ್ದ ಪರಿಣಾಮ ಗಾಯಗೊಂಡು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ವಿದ್ಯಾರ್ಥಿಗಳನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಹಾಗೂ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಪಾಲಕರು ಮತ್ತು ಮಕ್ಕಳಿಗೆ ಧೈರ್ಯ ತುಂಬಿದರು‌. ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಕಡಬ: ಶಾಲಾ ಗೋಡೆ ಬಿದ್ದು 4 ವಿದ್ಯಾರ್ಥಿಗಳಿಗೆ ಗಾಯ- ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಭೇಟಿ Read More »

ಕರಾವಳಿ

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತ್ರಿವೆಂಡಮ್‌ ನ ಆರೊನ್ ರೋಜರ್ ಲೀನ್(17) ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 28. ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ, ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಕುಂದಾಪುರದಲ್ಲಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ 188 ಕಾಲೇಜುಗಳಲ್ಲಿ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು, ವಿಶ್ವವಿದ್ಯಾನಿಲಯವು ಇಂದು ಸಮಸ್ಯೆಗಳ ಗೂಡಾಗಿದೆ. ಈಗಾಗಲೇ ರಾಜ್ಯದೆಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ. ಪದವಿ ವಿದ್ಯಾರ್ಥಿಗಳಿಗೂ

ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ Read More »

ಕರಾವಳಿ

ಟ್ರಾಫಿಕ್ ಪೊಲೀಸರಿಂದ ನಿತ್ಯ ಕಿರುಕುಳ ಆರೋಪ- ಕಬಕ ಗ್ರಾಮಸ್ಥರಿಂದ ಶಾಸಕರಿಗೆ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 28. ಪುತ್ತೂರು ಟ್ರಾಫಿಕ್ ಪೊಲೀಸರಿಂದ ಸಾರ್ವಜನಿಕರಿಗೆ ನಿತ್ಯ ಕಿರುಕುಳ ಉಂಟಾಗುತ್ತಿದ್ದು ಇದರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯ ಮುಂದಾಳು ಮೋಹನ್ ಗುರ್ಜಿನಡ್ಕ ನೇತೃತ್ವದಲ್ಲಿ ಕಬಕದ ಸಾರ್ವಜನಿಕರ ನಿಯೋಗವೊಂದು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದೆ. ಪ್ರತೀ ದಿನ ಬೆಳಿಗ್ಗೆ 8.30ರ ವೇಳೆಗೆ ಕಬಕಕ್ಕೆ ಬರುವ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆಯ ಕಾರಣವಿಟ್ಟು ಬೈಕ್ ಸವಾರರಿಗೆ ತೊಂದರೆ ನೀಡುತ್ತಿದ್ದಾರೆ. ಪೋಷಕರು ಬೆಳಗ್ಗೆ ಶಾಲಾ ಮಕ್ಕಳನ್ನು ಬಸ್ಸಿಗೆ ಬಿಡಲು

ಟ್ರಾಫಿಕ್ ಪೊಲೀಸರಿಂದ ನಿತ್ಯ ಕಿರುಕುಳ ಆರೋಪ- ಕಬಕ ಗ್ರಾಮಸ್ಥರಿಂದ ಶಾಸಕರಿಗೆ ದೂರು Read More »

ಕರಾವಳಿ, ಕರ್ನಾಟಕ
Theft, crime, Robbery

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ನಗರದ ಸೂಟರ್‌ ಪೇಟೆಯ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ. 23ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯ ಎದುರಿನ ಬಾಗಿಲನ್ನು ತೆರೆದು ಲಾಕರ್‌ನಲ್ಲಿದ್ದ 25 ಗ್ರಾಂ ಚಿನ್ನಾಭರಣ, 47,000 ರೂ. ನಗದು ಸಹಿತ ಅಂದಾಜು 1.47 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ

ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28. ಯಕ್ಷಗಾನದ ವೇಷಭೂಷಣ ತೊಟ್ಟು, ಬಿಕ್ಷಾಟನೆಗೈದು ಯಕ್ಷಗಾನ ಕಲೆಗೆ ಅಪಚಾರವೆಸಗಲಾಗುತ್ತಿದ್ದು, ಈ ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದೆ. ವಿಶ್ವವ್ಯಾಪಿ ಕಲೆಯಾಗಿ ಪ್ರಚಲಿತದಲ್ಲಿರುವ ಯಕ್ಷಗಾನ ಕಲೆಗೆ ಅದರದ್ದೇ ಆದ ಘನತೆ, ಗಾಂಭೀರ್ಯತೆ ಇದ್ದು, ಕರಾವಳಿ ಜಿಲ್ಲೆಯ ಶ್ರೇಷ್ಠ ಕಲೆಯಾಗಿದೆ. ಶ್ರೀಕೃಷ್ಣ ಜನ್ಮಾಷ್ಠಮಿ, ಶ್ರೀ ಗಣೇಶೋತ್ಸವ ಹಾಗೂ ನವರಾತ್ರಿಯ

ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ Read More »

ಕರಾವಳಿ
Scroll to Top