ಕರಾವಳಿ

ಅರಂತೋಡು: ಸ್ವಚ್ಚತಾ ಅಭಿಯಾನ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 26. ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನವು ಅರಂತೋಡು ಪೇಟೆಯಲ್ಲಿ ನಡೆಯಿತು.   ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು- ತೊಡಿಕಾನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅರಂತೋಡು ಪರಿಸರದ ನಾಗರಿಕ ಬಂಧುಗಳು ಹಾಗೂ ಸ್ವಚ್ಛತಾ ಘಟಕದ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.

ಅರಂತೋಡು: ಸ್ವಚ್ಚತಾ ಅಭಿಯಾನ Read More »

ಕರಾವಳಿ

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ,ಆ. 24. ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು.‌ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ.ಎಂ.ಎ ಸುಳ್ಯ, ಉಪಾಧ್ಯಕ್ಷರಾಗಿ ಉನೈಸ್ ಪೆರಾಜೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸುಬ್ರಹ್ಮಣ್ಯ, ಮೀಡಿಯಾ ಕಾರ್ಯದರ್ಶಿ ರಫಿಕ್ ಬಾಳೆಮಕ್ಕಿ, ಸದಸ್ಯರುಗಳಾಗಿ ಕೇಶವ ಬೆಳ್ಳಾರೆ, ಹಮೀದ್

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ Read More »

ಕರಾವಳಿ
Theft, crime, Robbery

ಸರ್ವೆ: ಮನೆಯ ಕಿಟಕಿ ಮುರಿದು ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ. ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರು ತನ್ನ ಸೊಸೆ ಜೊತೆ ಮೊಮ್ಮಗನನ್ನು ಔಷಧಿಗೆಂದು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದವರು, ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮರುದಿನ ಮನೆಗೆ ಮರಳಿಬಂದಾಗ ಮನೆಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲನ್ನು ಮುರಿಯಲೆತ್ನಿಸಿದ ಕಳ್ಳರಿಗೆ ಅದು ಅಸಾಧ್ಯವಾದಾಗ ಕಿಟಕಿಯ ಸರಳನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯ ಕೋಣೆಯಲ್ಲಿದ್ದ

ಸರ್ವೆ: ಮನೆಯ ಕಿಟಕಿ ಮುರಿದು ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಅಡ್ಡೂರು ಸೇತುವೆ ಪರಿಶೀಲನೆ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 24.  ಅಡ್ಡೂರು ಸೇತುವೆ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿದ್ದಾರೆ. ಸೇತುವೆ ಶಿಥಿಲಗೊಂಡ ಹಿನ್ನಲೆಯಲ್ಲಿ ಸೇತುವೆ ಮೂಲಕ ಘನವಾಹನಗಳಿಗೆ ಸಂಚಾರಕ್ಕೆ ನಿಷೇಧವನ್ನು ಜಿಲ್ಲಾಧಿಕಾರಿ ಅದೇಶ ನೀಡಿದ್ದರು. ಆದರೆ ಇದರಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು ಬಸ್ ಸಂಚಾರ ಮಾಡಲು ಅವಕಾಶ ನೀಡುವಂತೆ ಇಲ್ಲಿನ ಸ್ಥಳೀಯರು ಬೇಡಿಕೆಯನ್ನಿಟ್ಟಿದ್ದರು. ಜನರ ಬೇಡಿಕೆಯನ್ನು ಆಲಿಸಿದ ಜಿಲ್ಲಾಧಿಕಾರಿ ಅವರು ಆ.26 ಕ್ಕೆ ಸೇತುವೆಯ ಸಾಮರ್ಥ್ಯವನ್ನು ಪರಿಶೀಲನೆ ನಡೆಸಲು ಪರಿಣತರ ತಂಡ ಆಗಮಿಸಲಿದೆ. ಅವರು

ಅಡ್ಡೂರು ಸೇತುವೆ ಪರಿಶೀಲನೆ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ Read More »

ಕರಾವಳಿ

ರಸ್ತೆ ಅಪಘಾತ- ಒಂದೇ ಕುಟುಂಬದ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 24. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತಾಲೂಕಿನ ಕಿರೆಸೂರು ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್, ಮೊಹ್ಮದ್ ಮುಸ್ತಫಾ, ಶೋಹೆಬ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಜಾಪರಸಾಬ್ ಓಮ್ನಿ ಕಾರಿನಲ್ಲಿ ಕುಟುಂಬದವರ ಜೊತೆ ಔಷಧಿ ತರಲೆಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಳಗಾ ಗ್ರಾಮದಲ್ಲಿನ ಸೇಂಟ್ ಮೇರಿ

ರಸ್ತೆ ಅಪಘಾತ- ಒಂದೇ ಕುಟುಂಬದ ಮೂವರು ಮೃತ್ಯು..! Read More »

ಕರಾವಳಿ

ನೂತನ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ಮೂಲದ ಡಿ .ಶಿಲ್ಪಾ ನೇಮಕ

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 24. ಕಾಸರಗೋಡು ಜಿಲ್ಲಾ ನೂತನ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ಮೂಲದ ಡಿ .ಶಿಲ್ಪಾ ಅಧಿಕಾರ ವಹಿಸಿಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಪಿ . ಬಿಜೋಯ್ ರವರನ್ನು ತಿರುವನಂತಪುರಕ್ಕೆ ವರ್ಗಾಹಿಸಲಾಗಿದ್ದು , ಇವರ ಬದಲಿಗೆ ಶಿಲ್ಪಾ ರವರನ್ನು ನೇಮಿಸಲಾಗಿದೆ. ಶಿಲ್ಪಾ ಎರಡನೇ ಬಾರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಬೆಂಗಳೂರು ನಿವಾಸಿಯಾಗಿರುವ ಶಿಲ್ಪಾ 2020 ರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ದಕ್ಷ ಸೇವೆ ನೀಡಿದ್ದು, ಬಳಿಕ 2021 ರಲ್ಲಿ ವರ್ಗಾವಣೆಗೊಳಿಸಲಾಗಿತ್ತು ಎನ್ನಲಾಗಿದೆ.  

ನೂತನ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ಮೂಲದ ಡಿ .ಶಿಲ್ಪಾ ನೇಮಕ Read More »

ಕರಾವಳಿ

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 24. ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಬಂಧಿತರನ್ನು ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ಕಾರ್ಡೋಸಾ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್, ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿಯ ರೀಲ್ಸ್ ಹುಚ್ಚಾಟದಿಂದ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..!

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 24.  ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಕತ್ತಿಯಿಂದ ಕೊಚ್ಚಿ ಕೊಂದಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 30 ವರ್ಷದ ಕಿರಣ್ ಉಪಾಧ್ಯನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಂದು ಬೆಳಗ್ಗೆ

ಪತ್ನಿಯ ರೀಲ್ಸ್ ಹುಚ್ಚಾಟದಿಂದ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕೆರೆಗೆ ಬಿದ್ದು ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 24. ತೋಟಕ್ಕೆ ತೆಂಗಿನಕಾಯಿ ಹೆಕ್ಕಲು ಹೋಗಿದ್ದ ಕೃಷಿಕರೊಬ್ಬರು ಕೆರೆಗೆ ಜಾರಿ ಬಿದ್ದು ಮೃತಪಟ್ಟ ಘಟನೆ ಮಡಪ್ಪಾಡಿ ಗ್ರಾಮದಲ್ಲಿ ನಡೆದಿದೆ.   ಮೃತಪಟ್ಟವರನ್ನು ಮಡಪ್ಪಾಡಿ ಗ್ರಾಮದ ವಿಶ್ವನಾಥ ಗೋಳ್ಯಾಡಿ (60) ಎಂದು ಗುರುತಿಸಲಾಗಿದೆ. ತೆಂಗಿನಕಾಯಿ ಹೆಕ್ಕಲೆಂದು ತೋಟಕ್ಕೆ ಹೋಗಿದ್ದ ವಿಶ್ವನಾಥರವರು ಮಧ್ಯಾಹ್ನದವರೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದಾಗ ತೆಂಗಿನಕಾಯಿ ತರಲೆಂದು ತೆಗೆದುಕೊಂಡು ಹೋಗಿದ್ದ ಕೈಗಾಡಿ ಕೆರೆಯ ಬಳಿ ಪತ್ತೆಯಾಗಿದೆ. ಪಕ್ಕದ ಕೆರೆಯಲ್ಲಿ ನೋಡಿದಾಗ ವಿಶ್ವನಾಥರ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ. ಸ್ಥಳೀಯರು

ಸುಳ್ಯ: ಕೆರೆಗೆ ಬಿದ್ದು ಕೃಷಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸೊತ್ತುಗಳಿಗೆ ಹಾನಿ ಮಾಡಿದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ಗುರುವಾರದಂದು ತಡರಾತ್ರಿ ನಡೆದಿದೆ.   ದೊಡ್ಡಡ್ಕ ನಿವಾಸಿ ಸಂಕಪ್ಪ ಪೂಜಾರಿ ಎಂಬವರಿಗೆ ಸೇರಿದ ಅಂಗಡಿಗೆ ಬೆಂಕಿ ಹಚ್ಚಿ ಹಾನಿಗೊಳಿಸಲಾಗಿದೆ. ಸಂಕಪ್ಪ ಪೂಜಾರಿ ಅವರು ಸಣ್ಣ ಗೂಡಂಗಡಿ ಮತ್ತು ಟೀ ಸ್ಟಾಲ್ ಜೊತೆಯಾಗಿ ನಡೆಸುತ್ತಿದ್ದರು. ಪ್ರತಿದಿನ ಸಂಜೆಯ ತನಕ ವ್ಯಾಪಾರ ನಡೆಸುತ್ತಿದ್ದ ಅವರು ಬಳಿಕ ಅಂಗಡಿ ಬಂದ್ ಮಾಡಿ ಮನೆಗೆ

ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ- ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ
Scroll to Top