ಕರಾವಳಿ

ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖೆಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದೆ. ಈ ಲೋಕ ಅದಾಲತ್ ನಲ್ಲಿ ಎಲ್ಲಾ ರೀತಿಯ ರಾಜಿ ಆಗಬಲ್ಲ MACT ಪ್ರಕರಣಗಳು, ಕಾರ್ಮಿಕ ವಿವಾದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು ಮುಂತಾದ ಪ್ರಕರಣಗಳನ್ನು ಅದಾಲತ್ ಮುಂದಿಟ್ಟು ಶೀಘ್ರವಾಗಿ ಇತ್ಯರ್ಥ ಪಡಿಸಲು ಕ್ರಮ ವಹಿಸಬಹುದಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳು ತಮ್ಮ ಕಚೇರಿಗೆ ಸಂಬಂಧಿಸಿದ ಪ್ರಕರಣಗಳ ಬಗ್ಗೆ ಪರಿಶೀಲಿಸಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖೆಗಳಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅನಂತಾಡಿ ಗ್ರಾಮಕ್ಕೆ ಭೇಟಿ         ಪಕ್ಷದ ಪದಾಧಿಕಾರಿಗಳಿಂದ ಅದ್ಧೂರಿ ಸ್ವಾಗತ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 19.  ಮಂಗಳೂರು ಸಂಸದರಾಗಿ ಚುನಾಯಿತರಾದ ಬಳಿಕ ಮೊದಲ ಬಾರಿಗೆ ಅನಂತಾಡಿ ಗ್ರಾಮಕ್ಕೆ ಆಗಮಿಸಿದ ಸಂಸದ ಕ್ಯಾ.ಬ್ರಿಜೇಶ್‌ ಚೌಟ ರವರ ಸ್ವಾಗತ ಕಾರ್ಯಕ್ರಮವು ಅನಂತಾಡಿ ಗ್ರಾಮದ ಗೋಳಿಕಟ್ಟೆ ಸರ್ಕಲ್‌ ನಲ್ಲಿ ನಡೆಯಿತು. ಪಕ್ಷದ ಪದಾಧಿಕಾರಿಗಳು ಪಕ್ಷದ ಶಾಲು ಹಾಗೂ ಹಾರ ಹಾಕುವ ಮೂಲಕ ಸ್ವಾಗತಿಸಿದರು, ಮಹಿಳೆಯರು ಆರತಿ ಬೆಳಗಿ ತಿಲಕವನ್ನಿಟ್ಟು ಬರಮಾಡಿಕೊಂಡರು.    

ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅನಂತಾಡಿ ಗ್ರಾಮಕ್ಕೆ ಭೇಟಿ         ಪಕ್ಷದ ಪದಾಧಿಕಾರಿಗಳಿಂದ ಅದ್ಧೂರಿ ಸ್ವಾಗತ Read More »

ಕರಾವಳಿ

ಪಾಲಿಕೆ ವ್ಯಾಪ್ತಿಯಲ್ಲಿ ನೋಂದಣಿಯಾದ ಪರಿಶಿಷ್ಟ ಜಾತಿ/ ಪಂಗಡದ ಸಂಘಟನೆಗಳ ವಿವರ ನೀಡಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ/ಪಂಗಡದ ಅಹವಾಲುಗಳನ್ನು ತಿಳಿದುಕೊಳ್ಳಲು ಮುಖಂಡರುಗಳ ಕುಂದು ಕೊರತೆ ಸಭೆಯನ್ನು ಮೂರು ತಿಂಗಳಿಗೊಮ್ಮೆ ಆಯೋಜಿಸಲಾಗುತ್ತದೆ. ಸದರಿ ಸಭೆಗೆ ಕರೆಯೋಲೆ ನೀಡಲು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ನೋಂದಣಿಯಾದ ಪರಿಶಿಷ್ಟ ಜಾತಿ/ ಪಂಗಡದ ಸಂಘಟನೆಗಳ ನೋಂದಣಿ ಪ್ರತಿಯೊಂದಿಗೆ ಸಂಘದ ವಿಳಾಸವನ್ನು ನಗರ, ಬಡತನ ನಿರ್ಮೂಲನಾ ಕೋಶಕ್ಕೆ ಸಲ್ಲಿಸುವಂತೆ ಮಂಗಳೂರು ಮಹಾನಗರಪಾಲಿಕೆಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ನೋಂದಣಿಯಾದ ಪರಿಶಿಷ್ಟ ಜಾತಿ/ ಪಂಗಡದ ಸಂಘಟನೆಗಳ ವಿವರ ನೀಡಲು ಸೂಚನೆ Read More »

ಕರಾವಳಿ, ಕರ್ನಾಟಕ

ಆ. 20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯು ಆ. 20 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಘನ ಉಪಸ್ಥಿತರಿರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿರುವರು. ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿರುವರು

ಆ. 20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ Read More »

ಕರಾವಳಿ

ಆ. 23ರಂದು ಮಂಜನಾಡಿ ಗ್ರಾಮ ಪಂಚಾಯತ್ – ಜಮಾಬಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಮಂಜನಾಡಿ ಗ್ರಾಮ ಪಂಚಾಯತ್‍ನ ಜಮಾಬಂದಿ ಕಾರ್ಯಕ್ರಮ ಆ. 23ರ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಮಂಜನಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಮಾಬಂದಿ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೆ. ಜಯರಾಂ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಆ. 23ರಂದು ಮಂಜನಾಡಿ ಗ್ರಾಮ ಪಂಚಾಯತ್ – ಜಮಾಬಂದಿ Read More »

ಕರಾವಳಿ, ಕರ್ನಾಟಕ

ಮಾಜಿ ಮುಖ್ಯಮಂತ್ರಿ ‘ಆನೆಗುಡ್ಡೆ ಶ್ರೀ ವಿನಾಯಕ ದೇವಾಸ್ಥಾನ’ಕ್ಕೆ ಆಗಮನ

(ನ್ಯೂಸ್ ಕಡಬ) newskadaba.c0m ಕೋಟ, ಆ. 19.  ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಕುಟುಂಬ ಸಮೇತ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ದೇವರ ಪ್ರಸಾದ ನೀಡಿ ಅವರನ್ನು ಗೌರವಿಸಿ ಸನ್ಮಾನಿಸಿದರು. ವಿಶ್ರಾಂತ ಆಡಳಿತ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿಗಳಾದ ಕೆ. ನಿರಂಜನ ಉಪಾಧ್ಯಾಯ, ಕೆ.ಪದ್ಮನಾಭ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ.ಕೃಷ್ಣಾನಂದ ಉಪಾಧ್ಯಾಯ ಮತ್ತು ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ಅರ್ಚಕ

ಮಾಜಿ ಮುಖ್ಯಮಂತ್ರಿ ‘ಆನೆಗುಡ್ಡೆ ಶ್ರೀ ವಿನಾಯಕ ದೇವಾಸ್ಥಾನ’ಕ್ಕೆ ಆಗಮನ Read More »

ಕರಾವಳಿ

ಅತಿಥಿ ಉಪನ್ಯಾಸಕರ ಆಯ್ಕೆ- ಆನ್ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ, ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿವಿಧ ವಿಷಯಗಳಿಗೆ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರುವ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಜಿ ಸಲ್ಲಿಸಬಹುದು. ಅರ್ಹರು ತಮ್ಮ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ

ಅತಿಥಿ ಉಪನ್ಯಾಸಕರ ಆಯ್ಕೆ- ಆನ್ಲೈನ್ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪ್ರಾಕೃತಿಕ ವಿಕೋಪ- ಕಂದಾಯ ಸಚಿವರಿಂದ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು  ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ  ಅಧ್ಯಕ್ಷತೆಯಲ್ಲಿ  ವಿಡಿಯೋ ಕಾನ್ಫೆರೆನ್ಸ್  ಸಭೆಯ ನಡೆಯಿತು.  ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈಗಾಗಲೇ   ಭಾರಿ ಮಳೆಯಿಂದ  ಹಲವಾರು ಹಾನಿಗಳು  ಉಂಟಾಗಿದ್ದು ಜಿಲ್ಲಾ ಮಟ್ಟದಲ್ಲಿ  ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದರು.  ಗ್ರಾಮ ಪಂಚಾಯತ್ ಮಟ್ಟದಲ್ಲಿ  ಟಾಸ್ಕ್ ಫೋರ್ಸ್ ಕಮಿಟಿಯನ್ನು ಸ್ಥಾಪಿಸಬೇಕು. ಶಿಥಿಲ ಅವಸ್ಥೆಯಲ್ಲಿರುವಂತಹ ಶಾಲೆಗಳು ಅಂಗನವಾಡಿಗಳನ್ನು ಗುರುತಿಸಿ ಕೂಡಲೇ ಸ್ಥಳಾಂತರಿಸಬೇಕು ಹಾಗೂ

ಪ್ರಾಕೃತಿಕ ವಿಕೋಪ- ಕಂದಾಯ ಸಚಿವರಿಂದ ಸಭೆ Read More »

ಕರಾವಳಿ, ಕರ್ನಾಟಕ

*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ          

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 19.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು, ಬಿದ್ದಿರುವ ಮಣ್ಣು ತೆರವು ಕಾರ್ಯ ಭರದಿಂದ ಸಾಗಿದೆ. ಗುಡ್ಡ ಕುಸಿದಿದ್ದ ಜಾಗದಲ್ಲಿ ಮತ್ತೆ ಮಣ್ಣು ಕುಸಿದಿದ್ದು. ಇದೇ ಕಾರಣಕ್ಕೆ ರೈಲು ಸಂಚಾರವನ್ನು ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ನಾಲ್ಕು ಐದು ಹಿಟಾಚಿ ಯಂತ್ರಗಳನ್ನು ಕಾಮಗಾರಿಗೆ ಬಳಸಲಾಗಿದೆ. ಮತ್ತಷ್ಟು ಮಣ್ಣು ಕುಸಿಯದಂತೆ ತಡೆಯಲು ಬೆಟ್ಟದ ಮೇಲಿನಿಂದ ಕೂಡ ಮಣ್ಣು ತೆರವುಗೊಳಿಸಲಾಗುತ್ತಿದೆ.  

*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ           Read More »

ಕರಾವಳಿ

ಮರ ಉಳಿಸಿ, ಬೆಳೆಸಿ, ಪೋಷಿಸಿ- ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಭಾರಿ ಗಾಳಿ ಮಳೆಗೆ ಧಾರಾಶಾಹಿಯಾದ ಮರವನ್ನು ಮತ್ತೆ ಅದೇ ಸ್ಥಾನದಲ್ಲಿ ಮರುಸ್ಥಾಪಿಸಲು ಮುತುವರ್ಜಿ ತೋರಿಸುವ ಮೂಲಕ ದ.ಕ.ಜಿಲ್ಲಾ ಹೋಂಗಾರ್ಡ್ಸ್‌ ಕಮಾಂಡೆಂಟ್‌ ಅವರು ಮಾದರಿ ವೃಕ್ಷಪ್ರೇಮ ತೋರಿಸಿಕೊಟ್ಟಿದ್ದಾರೆ.   ನಗರದ ಬಾಳೆಬೈಲ್‌ನ ಗ್ರೀನ್‌ ಎಕರೇಸ್‌ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಭಾರಿ ಗಾಳಿ ಮಳೆಗೆ ಮಂದಾರ ಹಾಗೂ ದೇವದಾರು ಮರ ಧಾರಾಶಾಹಿಯಾಗಿತ್ತು. ರಸ್ತೆಬದಿ ಬಿದ್ದ ಮರವನ್ನು ಸಾಮಾನ್ಯವಾಗಿ ಕಡಿದು ತೆರವುಗೊಳಿಸಿದರೆ, ಹೋಂಗಾರ್ಡ್ಸ್‌ ಕಮಾಂಡೆಂಟ್‌ ಡಾ.ಮುರಲೀಮೋಹನ ಚೂಂತಾರು ಅವರು ಅದೇ

ಮರ ಉಳಿಸಿ, ಬೆಳೆಸಿ, ಪೋಷಿಸಿ- ಡಾ.ಚೂಂತಾರು Read More »

ಕರಾವಳಿ, ಕರ್ನಾಟಕ
Scroll to Top