ಕರಾವಳಿ

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಂಡಕ್ಟರ್ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಜು.10: ಮಂಗಳೂರು-ವಿಟ್ಲ ಮಾರ್ಗದ ಖಾಸಗಿ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ಉಪ್ಪಿನಂಗಡಿಯ ಕರ್ವೇಲು ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಜುಲೈ 9 ರಂದು ಸಂಜೆ ಸುಮಾರು 5:00 ಗಂಟೆಗೆ ಬಸ್ಸಿನಲ್ಲಿ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸಿ, ಅಶ್ಲೀಲ ಸನ್ನೆಗಳನ್ನು ಮಾಡಿದ್ದಲ್ಲದೆ, ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಮಂಗಳೂರು […]

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಂಡಕ್ಟರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ: ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್!

(ನ್ಯೂಸ್‌ ಕಡಬ) newskadaba.com,  ಜು.10: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.ಸಾರ್ವಜನಿಕರು ಹಾಗೂ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ: ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲದ ಕನ್ಯಾನ ಗ್ರಾಮದಲ್ಲಿ ದುರ್ಘಟನೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com,  ಜು.10 ವಿಟ್ಲ: ಕುಟುಂಬದಿಂದ ದೂರವಾಗಿ ಮನನೊಂದಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕನ್ಯಾನ ಗ್ರಾಮದ ಕೊಣಲೆ ಮಳವೆಲಿನಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಈಶ್ವರ ನಾಯ್ಕ (51) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ವಿಟ್ಲ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

ವಿಟ್ಲದ ಕನ್ಯಾನ ಗ್ರಾಮದಲ್ಲಿ ದುರ್ಘಟನೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ನೇಣು ಬಿಗಿಯುವಾಗ ತುಂಡಾದ ಹಗ್ಗ ನೆಲದಲ್ಲಿದ್ದ ಗಾಜಿನ ಚೂರಿಗೆ ಬಿದ್ದು ಯುವಕನ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಜು.10 ಕಡಬ: ತಾಲೂಕಿನ ನೆಲ್ಯಾಡಿ ಗ್ರಾಮದ ಹೊಸಮನೆ ನಿವಾಸಿ ಸೋಮಶೇಖರ್ ಹೆಚ್‌. (27) ಎಂಬುವರು ತಮ್ಮ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಜುಲೈ 9ರ ಮುಂಜಾನೆ ಅವರು ಕೋಣೆಯಲ್ಲಿ ನೇಣು ಬಿಗಿಯಲು ಯತ್ನಿಸಿದಾಗ ಬೈರಾಸು (ಹಗ್ಗ) ತುಂಡಾಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ನೆಲದ ಮೇಲಿದ್ದ ಒಡೆದ ಗಾಜಿನ ಚೂರುಗಳು ಚುಚ್ಚಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬಂದ ತಕ್ಷಣ ಸ್ಥಳೀಯರ ನೆರವಿನಿಂದ ಮೃತದೇಹವನ್ನು

ನೆಲ್ಯಾಡಿ: ನೇಣು ಬಿಗಿಯುವಾಗ ತುಂಡಾದ ಹಗ್ಗ ನೆಲದಲ್ಲಿದ್ದ ಗಾಜಿನ ಚೂರಿಗೆ ಬಿದ್ದು ಯುವಕನ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

(ನ್ಯೂಸ್‌ ಕಡಬ) newskadaba.com,  ಜು.10 : ದಾರುಸ್ಸಲಾಂ ಸೆಂಟರ್‌ನ 10ನೇ ವಾರ್ಷಿಕೋತ್ಸವ ಹಾಗೂ ಪ್ರಥಮ ಸನದುದಾನ ಕಾರ್ಯ ಕ್ರಮವು ಬೆಳ್ತಂಗಡಿ ಶಂಸುಲ್ ಉಲಮಾ ನಗರದಲ್ಲಿ 2026 ಡಿ.17ರಿಂದ 20 ರವರೆಗೆ “ದಿಶೆ ತೋರಿದ ದಶ ವರ್ಷಗಳು” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿದೆ. ಅದರ ಸ್ವಾಗತ ಸಮಿತಿಯ ರಚನಾ ಸಭೆಯು ದಿನಾಂಕ 3 ಜುಲೈ 2026 ರಂದು ಮಿತ್ತಬೈಲ್‌ನ ಮುಹಿಯ್ಯುದ್ದೀನ್ ಕಮ್ಯುನಿಟಿ ಹಾಲ್‌ನಲ್ಲಿ ನಡೆಯಿತು. ದಾರುಸ್ಸಲಾಂ ಸೆಂಟರ್ ಅಧ್ಯಕ್ಷ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಳ್ ಸಭೆಯ ನೇತೃತ್ವ ವಹಿಸಿದ್ದರು.

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೇಸ್ಟ್‌ ಟು ಎನರ್ಜಿ: ಮಂಗಳೂರಿನ ಕೆಮ್ರಾಲ್‌ನಲ್ಲಿ ಕಸದಿಂದ ಸಿದ್ಧವಾಗಲಿದೆ ಕೈಗಾರಿಕಾ ಇಂಧನ

(ನ್ಯೂಸ್‌ ಕಡಬ) newskadaba.com,  ಜು.10 : ಕರ್ನಾಟಕದಲ್ಲೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯು ಮಂಗಳೂರಿನ ಸಮೀಪದ ಕೆಮ್ರಾಲ್‌ನಲ್ಲಿ ಮರುಬಳಕೆ ಮಾಡಲು ಸಾಧ್ಯವಾಗದ ಒಣ ತ್ಯಾಜ್ಯವನ್ನು ಇಂಧನ ಪೆಲ್ಲೆಟ್‌ಗಳಾಗಿ ಪರಿವರ್ತಿಸುವ ಘಟಕವನ್ನು ಸ್ಥಾಪಿಸಿದೆ. ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸುಮಾರು ₹50 ಲಕ್ಷ ವೆಚ್ಚದಲ್ಲಿ ಪುಲ್ವರೈಸರ್ ಮತ್ತು ಪೆಲ್ಲೆಟೈಸರ್ ಯಂತ್ರೋಪಕರಣಗಳನ್ನು ಅಳವಡಿಸಿ ಈ ಘಟಕ ಸಿದ್ಧಪಡಿಸಲಾಗಿದೆ.ಈ ಹಿಂದೆ ಕಸವನ್ನು ಬೆಳಗಾವಿ, ಕಲಬುರಗಿಯ ಸಿಮೆಂಟ್ ಕಾರ್ಖಾನೆಗಳಿಗೆ ಸಾಗಿಸಲು ಪ್ರತಿ ಲಾರಿಗೆ ₹48,000 ವೆಚ್ಚವಾಗುತ್ತಿತ್ತು. ಈಗ ಈ ಸಾಗಣೆ

ವೇಸ್ಟ್‌ ಟು ಎನರ್ಜಿ: ಮಂಗಳೂರಿನ ಕೆಮ್ರಾಲ್‌ನಲ್ಲಿ ಕಸದಿಂದ ಸಿದ್ಧವಾಗಲಿದೆ ಕೈಗಾರಿಕಾ ಇಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಸಿಯೂಟ ಯೋಜನೆ: ಮೊಟ್ಟೆ ದರ ಪರಿಷ್ಕರಣೆಗೆ ಶಿಕ್ಷಕರ ಸಂಘದ ಸಿಇಓಗೆ ಮನವಿ

(ನ್ಯೂಸ್‌ ಕಡಬ) newskadaba.com,  ಜು.10 : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ‘ಅಕ್ಷರ ದಾಸೋಹ’ ಯೋಜನೆಯಡಿ ನೀಡಲಾಗುವ ಮೊಟ್ಟೆ ಮತ್ತು ಬಾಳೆಹಣ್ಣಿನ ದರವನ್ನು ಪರಿಷ್ಕರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ 7.50 ರೂ.ನಿಂದ 8 ರೂ.ಗೆ ಏರಿಕೆಯಾಗಿದೆ. ಆದರೆ ಸರ್ಕಾರ ನೀಡುತ್ತಿರುವ ಅನುದಾನ ಕಡಿಮೆಯಿರುವುದರಿಂದ, ಪ್ರತಿ ವಿದ್ಯಾರ್ಥಿಗೆ ದಿನಕ್ಕೆ 2 ರಿಂದ 3 ರೂ.ಗಳಷ್ಟು ಹೆಚ್ಚುವರಿ ವೆಚ್ಚವನ್ನು ಮುಖ್ಯ

ಬಿಸಿಯೂಟ ಯೋಜನೆ: ಮೊಟ್ಟೆ ದರ ಪರಿಷ್ಕರಣೆಗೆ ಶಿಕ್ಷಕರ ಸಂಘದ ಸಿಇಓಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ಸಿಸಿಟಿವಿ ಕಡ್ಡಾಯ: ಭದ್ರತೆ ಬಲಪಡಿಸಲು ಸರ್ಕಾರ ಮಹತ್ವದ ಆದೇಶ

(ನ್ಯೂಸ್‌ ಕಡಬ) newskadaba.com,  ಜು.10 :ರಾಜ್ಯದ ಮುಜರಾಯಿ ದೇವಸ್ಥಾನಗಳ ಭದ್ರತೆಯನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಎ, ಬಿ, ಮತ್ತು ಸಿ ವರ್ಗದ ಎಲ್ಲಾ ಪ್ರಮುಖ ದೇವಸ್ಥಾನಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳ ಪ್ರವೇಶ ದ್ವಾರ, ಗರ್ಭಗುಡಿ ಆವರಣ, ಕಾಣಿಕೆ ಹುಂಡಿ ಇರುವ ಸ್ಥಳ ಹಾಗೂ ಪ್ರಸಾದ ವಿತರಣಾ ಕೇಂದ್ರಗಳಲ್ಲಿ ಅತ್ಯಾಧುನಿಕ ಸಿಸಿಟಿವಿಗಳನ್ನು ಅಳವಡಿಸಲಾಗುವುದು.ಭಕ್ತರಿಗೆ ವಿತರಿಸುವ ಪ್ರಸಾದದ ಸುರಕ್ಷತೆಗಾಗಿ ವಿತರಣಾ ಕೇಂದ್ರಗಳಲ್ಲಿ ಅಗತ್ಯ ಭದ್ರತಾ ಸಿಬ್ಬಂದಿ ನಿಯೋಜನೆ.

ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ಸಿಸಿಟಿವಿ ಕಡ್ಡಾಯ: ಭದ್ರತೆ ಬಲಪಡಿಸಲು ಸರ್ಕಾರ ಮಹತ್ವದ ಆದೇಶ Read More »

ಕರಾವಳಿ

ಮಂಗಳೂರು: ಜುಲೈ 14 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ; ವಿವಿಧ ಹುದ್ದೆಗಳಿಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಜು.10 ಮಂಗಳೂರು: ನಗರದ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 14 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:30 ರವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್ (ಮಂಗಳೂರು), ಗೋಲ್ಡನ್ ವಿಂಗ್ಸ್ ಲಿಫ್ಟ್ ಮತ್ತು ಎಲಿವೇಟರ್ಸ್ ಪ್ರೈವೇಟ್ ಲಿಮಿಟೆಡ್ (ಮಂಗಳೂರು) ಹಾಗೂ ಸಂಭವ್ ಪೌಂಡೇಶನ್ (ಬೆಂಗಳೂರು) ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಈ ಸಂದರ್ಶನ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: ಅಸಿಸ್ಟಂಟ್ ಮ್ಯಾನೇಜರ್, ಹೆಚ್.ಆರ್.,

ಮಂಗಳೂರು: ಜುಲೈ 14 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ; ವಿವಿಧ ಹುದ್ದೆಗಳಿಗೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಂಗೆಯಲ್ಲಿ ತಪ್ಪಿದ ಭೀಕರ ದುರಂತ: ರಸ್ತೆ ಬದಿಯ ಕಂದಕಕ್ಕೆ ಉರುಳಿದ ಶಾಲಾ ಬಸ್

(ನ್ಯೂಸ್‌ ಕಡಬ) newskadaba.com,  ಜು.10 : ಉಡುಪಿ ಜಿಲ್ಲೆಯ ಮಣಿಪಾಲ್ ಸಮೀಪದ ಕೊಡಂಗೆ ಪ್ರದೇಶದಲ್ಲಿ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ.ಅಪಘಾತದಲ್ಲಿ ಓರ್ವ ವಿದ್ಯಾರ್ಥಿಯ ತಲೆಗೆ ತೀವ್ರ ಪೆಟ್ಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇನ್ನುಳಿದ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಸ್ ಉರುಳುವ ಸಮಯದಲ್ಲಿ ರಸ್ತೆಯ ಮತ್ತೊಂದು ಬದಿಯಲ್ಲಿ ನಿಂತಿದ್ದ ಕೆಲವು ಶಾಲಾ ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿ ತಕ್ಷಣವೇ

ಕೊಡಂಗೆಯಲ್ಲಿ ತಪ್ಪಿದ ಭೀಕರ ದುರಂತ: ರಸ್ತೆ ಬದಿಯ ಕಂದಕಕ್ಕೆ ಉರುಳಿದ ಶಾಲಾ ಬಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top