ಕರಾವಳಿ

ವಿದ್ಯುತ್ ಅವಘಡ- ದಂಪತಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ. 16. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿದ ಪರಿಣಾಮ ದಂಪತಿಗಳಿಬ್ಬರು ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿ ವ್ಯಾಪ್ತಿಯ ಕಾಟೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಲತಾ ಹಾಗೂ ನಾಗರಾಜ್ ಎಂದು ಗುರುತಿಸಲಾಗಿದೆ. ರೈತರಾಗಿದ್ದ ದಂಪತಿ ಎಂದಿನಂತೆ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಾ ಪಕ್ಕದಲ್ಲೇ ಇದ್ದ ಟ್ರಾನ್ಸ್‌ಫಾರ್ಮರ್ ಬಳಿ ತೆರಳಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ವಿದ್ಯುತ್ ಅವಘಡ- ದಂಪತಿ ಮೃತ್ಯು..! Read More »

ಕರಾವಳಿ

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕಳೆದ ಒಂದು ವರ್ಷದಲ್ಲಿ ನಡೆದ ಸೈಬರ್ ವಂಚನೆ ಪ್ರಕರಣಗಳ ಪೈಕಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿಯೇ ವಂಚನೆಗೊಳಗಾದ ಸಂತ್ರಸ್ತರು ಸುಮಾರು 11 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದಾರೆ. ಇಂತಹ ವಂಚನೆಗಳ ಬಗ್ಗೆ ಜನ ಜಾಗೃತರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು. ಅವರು ಗುರುವಾರದಂದು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಅಪರಾಧವನ್ನು ತಡೆಯುವ ಕುರಿತ ಜಾಗೃತಿ ಜಾಥಾ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು.

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ Read More »

ಕರಾವಳಿ, ಕರ್ನಾಟಕ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 16. 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ ನಡೆಸಲಾಯಿತು.   2023-24ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ಗಣಕ ವಿಜ್ಞಾನ ವಿಭಾಗ 100 ಶೇಕಡಾ ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗ 99 ಶೇಕಡಾ ಮತ್ತು ಎಸ್ಸೆಸ್ಸೆಲ್ಸಿ 97 ಶೇಕಡಾ ಫಲಿತಾಂಶ ದಾಖಲಿಸಿದೆ.

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಪ್ರತಿಭಾ ಪುರಸ್ಕಾರದ ಗೌರವಾರ್ಪಣೆ Read More »

ಕರಾವಳಿ

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,  ಆ. 16. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಎಮದು ಗುರುತಿಸಲಾಗಿದೆ.  ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.  ಇಂದು (ಶುಕ್ರವಾರ) ಬೆಳಗ್ಗೆ ಶಾಲೆಗೆ ತೆರಳಿದ್ದಅವರಿಗೆ ಅನಾರೋಗ್ಯ ಕಾಡಿದ್ದ ಹಿನ್ನೆಲೆ, ಅಲ್ಲಿಂದ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ  ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

’ಟೀನ್ ಸೂಪರ್ ಗ್ಲೋಬ್’- ಪ್ರಶಸ್ತಿ  ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಲೋಕದಲ್ಲಿ ಜಯಗಳಿಸಿದ ಬಾಲಕ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16.  ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದು ಮಂಗಳೂರಿಗೆ ಮತ್ತೊಂದು ಗರಿಮೆ ತಂದ 13ರ ಹರೆಯ ಬಾಲಕ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಫ್ಯಾಷನ್ ಲೋಕದಲ್ಲಿ ನಡೆಯುವ ಸ್ಪರ್ಧೆ ಆಗಸ್ಟ್ 7ರಿಂದ 10ರವರೆಗೆ ಥೈಲ್ಯಾಂಡ್ ನಲ್ಲಿ ನಡೆದಿತ್ತು. ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಒಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ ಕ್ಯಾಲಿಕಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದಾರೆ. ವರುಣ್, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು

’ಟೀನ್ ಸೂಪರ್ ಗ್ಲೋಬ್’- ಪ್ರಶಸ್ತಿ  ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಲೋಕದಲ್ಲಿ ಜಯಗಳಿಸಿದ ಬಾಲಕ Read More »

ಕರಾವಳಿ

ಕೂಳೂರು ಸೇತುವೆ ದುಸ್ಥಿತಿ- ಘನ ವಾಹನಗಳ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕರಾವಳಿಯಲ್ಲಿನ ಹಲವು ಸೇತುವೆಗಳ ಮೇಲೆ ವಾಹನ ನಿರ್ಬಂಧದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಒಂದೊಂದೇ ಹಳೆಯ ಸೇತುವೆಗಳ ಮೇಲಿನ ವಾಹನ ಸಂಚಾರವನ್ನು ನಿರ್ಬಂಧಿಸುತ್ತಾ ಬರುತ್ತಿದೆ. ಇದೀಗ ಕೂಳೂರು ಹಳೆ ಸೇತುವೆ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸುವ ಹಿನ್ನೆಲೆ ಘನ ವಾಹನಗಳು ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ.   ಅಗಸ್ಟ್ 19, 20, 21ರಂದು ಮೂರು ದಿನ ಘನ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ

ಕೂಳೂರು ಸೇತುವೆ ದುಸ್ಥಿತಿ- ಘನ ವಾಹನಗಳ ಸಂಚಾರ ನಿಷೇಧ Read More »

ಕರಾವಳಿ, ಕರ್ನಾಟಕ

’ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ’ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ                                                 

(ನ್ಯೂಸ್ ಕಡಬ) newskadaba.c0m ಪಡುಬಿದ್ರಿ, ಆ. 16.  ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು‌ ಸರಿಯಲ್ಲ, ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದರು. ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ

’ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ’ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ                                                  Read More »

ಕರಾವಳಿ

ಮಂಗಳೂರು: ಕಮಾನು ಸೇತುವೆ ದುರಸ್ಥಿ ಕಾರ್ಯ        ವಾಹನಗಳ ಸಂಚಾರ ನಿರ್ಬಂಧ        

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16.  ಉಡುಪಿ – ಮಂಗಳೂರು ಸಂಪರ್ಕದ ಕೂಳೂರು ಹಳೆಯ ಕಮಾನು ಸೇತುವೆಯ ದುರಸ್ತಿ ಘನ ವಾಹನಗಳ ಸಂಚಾರವನ್ನು ಆ. 19, ರಿಂದ 21ರವರೆಗೆ, 3 ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧಿಸಿದೆ. ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಅಪರಾಹ್ನ 3ರಿಂದ ರಾತ್ರಿ 10 ಗಂಟೆಯವರೆಗೆ ಉಡುಪಿಯಿಂದ ಕೇರಳ ಕಡೆಗೆ ಸಾಗುವ ಘನ ವಾಹನಗಳು ಮೂಲ್ಕಿ- ಸುರತ್ಕಲ್‌- ಎಂಆರ್‌ಪಿಎಲ್‌, ಬಜ್ಪೆ, ಕೆಪಿಟಿ, ನಂತೂರು ಮಾರ್ಗವಾಗಿ

ಮಂಗಳೂರು: ಕಮಾನು ಸೇತುವೆ ದುರಸ್ಥಿ ಕಾರ್ಯ        ವಾಹನಗಳ ಸಂಚಾರ ನಿರ್ಬಂಧ         Read More »

ಕರಾವಳಿ

ರೆಂಜಿಲಾಡಿ: ಸ್ಯಾಂಥೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ರೆಂಜಿಲಾಡಿ, ಆ. 16. ಇಲ್ಲಿನ ಸ್ಯಾಂಥೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಧ್ವಜಾರೋಹಣವನ್ನು ಕಡಬ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷರು ಹಾಗೂ ಶಾಲಾ ಕೋಶಾಧಿಕಾರಿ ಶ್ರೀ.ಕೆ ಸಿ ಸೈಮನ್ ನೆರವೇರಿಸಿದರು. ಮುಂದಿನ ಭಾಗವಾಗಿ ಶಾಲಾ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ತುಳುನಾಡ ಮಾಜಿ ಸೈನಿಕರು, ಪೋಷಕರು ಹಾಗೂ ಊರವರ ಸಹಕಾರದೊಂದಿಗೆ ಆಕರ್ಷಕ ಶಿಸ್ತುಬದ್ಧ ಪಥಸಂಚಲನ ನಡೆಯಿತು. ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳ ಶಂಖದಳ ಪಥಸಂಚಲನಕ್ಕೆ ವಿಶೇಷ

ರೆಂಜಿಲಾಡಿ: ಸ್ಯಾಂಥೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ              ಪ್ರಯಾಣಿಕರ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 16.  ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಘಟನೆ ನಡೆದಿದೆ. ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದೇ ‌ಲಭ್ಯವಾಗಿಲ್ಲ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ              ಪ್ರಯಾಣಿಕರ ಸ್ಥಿತಿ ಗಂಭೀರ..! Read More »

ಕರಾವಳಿ
Scroll to Top