ಕರಾವಳಿ

ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯದ ನಿಶ್ವಿತ್.ಪಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 14. ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜೈಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ರಾಮಮೂರ್ತಿ ನಗರ ಬೆಂಗಳೂರು ಇಲ್ಲಿ ನಡೆದ ಪ್ರಾಂತೀಯ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬದ 10ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್.ಪಿ. (ಕಿಶೋರ ವರ್ಗದ -75 ಕೆಜಿ ) ವಿಭಾಗದಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಬಾಲವರ್ಗ ಬಾಲಕಿಯರ-30 ಕೆಜಿ ವಿಭಾಗ ಕರಾಟೆ ಸ್ಪರ್ಧೆಯಲ್ಲಿ […]

ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯದ ನಿಶ್ವಿತ್.ಪಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಜಪ್ಪಿನಮೊಗರಿನಲ್ಲಿ ವಿಭಿನ್ನ ಪರಿಕಲ್ಪನೆಯ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ದೇಶದೆಲ್ಲೆಡೆ ಸಾರ್ಥಕಗೊಳಿಸುವಂತೆ ಪ್ರಧಾನಿ ಮೋದಿ ಅವರು ಈಗಾಗಲೇ ಕರೆ ನೀಡಿದ್ದು, ಅದರಂತೆ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯ ಎಲ್ಲ ಪಿಎಂ ಆವಾಸ್ ಫಲಾನುಭವಿಗಳ ಯೋಜನೆಯ ಮನೆಗಳ ಮೇಲೂ ತ್ರಿವರ್ಣ ಧ್ವಜ ಹಾರಾಡಿಸುವ ವಿನೂತನ ಪ್ರಯತ್ನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಂದಾಗಿದ್ದಾರೆ. ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ಶ್ರೀಮತಿ ವಿನಯಾ ಶ್ರೀನಿವಾಸ್ ಅವರ ಮನೆ ಮೇಲೆ ಮಂಗಳವಾರ ಬೆಳಗ್ಗೆ ಹರ್ ಘರ್ ಅಭಿಯಾನದಡಿ ತ್ರಿವರ್ಣ ಧ್ವಜ ಹಾರಾಡಿಸುವ ಮೂಲಕ ಈ ವಿನೂತನ ದೇಶಪ್ರೇಮ ಮೊಳಗಿಸುವ ಪ್ರಯತ್ನಕ್ಕೆ ಕ್ಯಾ. ಚೌಟ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕ್ಷೇತ್ರದಲ್ಲಿರುವ ಎಲ್ಲ ಪಿಎಂ ಆವಾಸ್ ಗೃಹ ಫಲಾನುಭವಿಗಳನ್ನು ಭೇಟಿಯಾಗಿ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಾಡಿಸುವ ಮೂಲಕ ಈ ಬಾರಿಯ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಯಶಸ್ವಿಗೊಳಿಸುವುದಕ್ಕೆ ನಮ್ಮ ಜನಪ್ರತಿನಿಧಿಗಳು ಮುಂದಾಗುವಂತೆ ಕರೆ ನೀಡಿದ್ದಾರೆ. ಹರ್ ಘರ್ ಅಭಿಯಾನದ ಪ್ರಯುಕ್ತ ನಮ್ಮ ಎಲ್ಲ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಜನಪ್ರತಿನಿಧಿಗಳು, ಮಹಾನಗರ ಪಾಲಿಕೆ ಸದಸ್ಯರು ಪಿಎಂ ಆವಾಜ್ ಯೋಜನೆ ಫಲಾನುಭವಿಗಳ ಮನೆಗಳಿಗೆ ಭೇಟಿ ಕೊಟ್ಟು ಹೆಚ್ಚಿನ ಸಂಖ್ಯೆಯ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಡಿಸುವಂತೆ ಪ್ರೇರಣೆ, ಉತ್ತೇಜನ ನೀಡಬೇಕು. ಆ ಮೂಲಕ ಅವರೊಂದಿಗೆ ಪ್ರಧಾನಿ ಮೋದಿ ಅವರ ವಿಷನ್ ಹಂಚಿಕೊಳ್ಳುವಂತೆ ಸಂಸದರು ಮನವಿ ಮಾಡಿದ್ದಾರೆ. “ಪ್ರತಿಯೊಂದು ಪಿಎಂ ಅವಾಜ್ ಮನೆಯೂ ನಮ್ಮ ದೇಶದ ಬಡವರು, ಮಹಿಳೆಯರು ಮತ್ತು ಯುವಕರ ಬಗ್ಗೆ ನಮ್ಮ ಪ್ರಧಾನಿಯವರ ಕಾಳಜಿಯ ಸಂಕೇತವಾಗಿದೆ. ಹೀಗಿರುವಾಗ ಅಂತಹ ಮನೆಗಳ ಮೇಲೆ ನಮ್ಮ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅವರನ್ನು ರಾಷ್ಟ್ರೀಯತೆಯ ದಾರದಿಂದ ಒಗ್ಗೂಡಿಸುವ ಪ್ರಯತ್ನವಾಗಿದೆ” ಎಂದು ಅವರು ವಿವರಿಸಿದ್ದಾರೆ. ತ್ರಿವರ್ಣ ದ್ವಜದ ಬಗ್ಗೆ ಹಾಗೂ ತಮ್ಮ ಸೇನಾ ಅನುಭವದ ಬಗ್ಗೆ ಮಾತನಾಡುತ್ತಾ, “ನಮ್ಮ ದೇಶದ ಸೈನಿಕರ ಪಾಲಿಗೆ ತ್ರಿವರ್ಣ ದ್ವಜ ಎನ್ನುವುದು ಅವರ ಪಾಲಿನ ಉಸಿರು. ದೇಶದ ಪ್ರತೀಕವಾದ ಧ್ವಜಕ್ಕಾಗಿಯೇ ಬದುಕುತ್ತಾನೆ ಮತ್ತು ಸಾಯುತ್ತಾನೆ. ಪ್ರತಿ ಸೈನಿಕನೂ ದೇಶಕ್ಕಾಗಿ ವೀರಮರಣವನ್ನಪ್ಪಿ ಧ್ವಜದಲ್ಲಿ ಸುತ್ತಿ ಮನೆಗೆ ಹಿಂದಿರುಗುವ ಕನಸು ಕಾಣುತ್ತಾನೆ. ಬದುಕಿರುವ ಪ್ರತಿ ಕ್ಷಣವೂ ತಿರಂಗವನ್ನು ಇನ್ನಷ್ಟು ಎತ್ತರದಲ್ಲಿ ಹಾರಾಡಬೇಕೆನ್ನು ದೃಢಸಂಕಲ್ಪ ಹೊಂದಿರುತ್ತಾರೆ ” ಎಂದು ಹೇಳಿದ್ದಾರೆ . ಪ್ರಧಾನಿ ಮೋದಿ ಅವರ ಹರ್ ಘರ್ ತಿರಂಗಾ ಅಭಿಯಾನವು ದೇಶದ ಪ್ರತಿ ಮನೆಯ ಮಕ್ಕಳಲ್ಲಿ ರಾಷ್ಟ್ರೀಯತೆ ಜತೆಗೆ ದೇಶಭಕ್ತಿ ಬೆಳೆಸಲಿದೆ. ಸ್ವಾತಂತ್ರ್ಯ ದಿನಾಚರಣೆ ಎಂಬುದು ಕೇವಲ ಐತಿಹಾಸಿಕ ಆಚರಣೆಯಾಗಬಾರದು. ಉಳಿದ ಎಲ್ಲ ವಾರ್ಷಿಕ ಹಬ್ಬಗಳಂತೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಕೂಡ ದೇಶದೆಲ್ಲೆಡೆ ಔಚಿತ್ಯಪೂರ್ಣ ಹಬ್ಬದ ವಾತಾವರಣ ಉಂಟುಮಾಡಬೇಕು. ಇದನ್ನೇ ನಮ್ಮ ಮುಂದಿನ ತಲೆಮಾರು ಕೂಡ ಎದುರು ನೋಡುತ್ತಿದೆ. ಹೀಗಿರುವಾಗ, ಸ್ವಾಂತ್ರ್ಯ ದಿನಾಚರಣೆ ಯುವ ಸಮುದಾಯಕ್ಕೆ ಆಗಸ್ಟ್ 15 ಸ್ಫೂರ್ತಿ ಮತ್ತು ದೇಶಪ್ರೇಮ ಮೂಡಿಸುವ ಹಬ್ಬವಾಗಬೇಕೆಂದು ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಜಪ್ಪಿನಮೊಗರಿನಲ್ಲಿ ನಡೆದ ಪಿಎಂ ಆವಾಸ್ ಯೋಜನೆ ಫಲಾನುಭವಿಯ ಮನೆಯಲ್ಲಿ ನಡೆದ ಹರ್ ಘರ್ ತಿರಂಗಾ ಅಭಿಯಾನ ಚಾಲನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಜಪ್ಪಿನಮೊಗರಿನಲ್ಲಿ ವಿಭಿನ್ನ ಪರಿಕಲ್ಪನೆಯ ಅಭಿಯಾನಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಅಡಿಕೆ ಬೆಂಬಲ ಬೆಳೆ; ಸರಕಾರಕ್ಕೆ ಪ್ರಸ್ತಾವನೆ – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಈ ಕುರಿತು ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ರೈತ ಮುಖಂಡರೊಂದಿಗೆ ನಡೆದ ಚರ್ಚೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂದು ರೈತರಿಂದ ಒತ್ತಾಯ ಇದೆ. ಈ ಬಗ್ಗೆ ಪರಿಶೀಲಿಸಿ, ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದರು. ಬೆಳೆಗಳ

ಅಡಿಕೆ ಬೆಂಬಲ ಬೆಳೆ; ಸರಕಾರಕ್ಕೆ ಪ್ರಸ್ತಾವನೆ – ಜಿಲ್ಲಾಧಿಕಾರಿ Read More »

ಕರಾವಳಿ

ಸ್ವಾತಂತ್ರ್ಯ ದಿನಾಚರಣೆ- ಇಂದಿನಿಂದ ಜಿಲ್ಲ್ಲಾ ಉಸ್ತುವಾರಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಾದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 14 ರಿಂದ ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 14 ರಂದು ರಾತ್ರಿ 7.45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಚಿವರು, ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ನೆಹರು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ, 10.30ಕ್ಕೆ

ಸ್ವಾತಂತ್ರ್ಯ ದಿನಾಚರಣೆ- ಇಂದಿನಿಂದ ಜಿಲ್ಲ್ಲಾ ಉಸ್ತುವಾರಿ ಪ್ರವಾಸ Read More »

ಕರಾವಳಿ, ಕರ್ನಾಟಕ

ಪುತ್ತೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ನಿಷೇಧಿತ ಉತ್ಪನ್ನಗಳ ಜೊತೆಗೆ ಏಕ ಬಳಕೆಯ

ಪುತ್ತೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧ Read More »

ಕರಾವಳಿ, ಕರ್ನಾಟಕ

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. 2023-24ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯು ಆಗಸ್ಟ್ 17 ರಿಂದ 19ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. 2024ರ ಮಾರ್ಚ್ 19 ಮತ್ತು 20ರಂದು ಮಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ತಂಡ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಹಾಗೂ ಆಯ್ಕೆಯಾದ

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 14. ಟಾರ್ಗೆಟ್‌ ಇಲ್ಯಾಸ್‌ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್‌ ಎಂಬಾತನ ಹತ್ಯೆಗೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಇಲ್ಯಾಸ್‌ ಪತ್ನಿಯ ಸಹೋದರ ಮೊಹಮ್ಮದ್‌ ನೌಷಾದ್‌ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಅಲ್ಲದೇ ನೌಷದ್‌ ಗೆ ನಾಟೇಕಲ್‌ನ ನಿಯಾಝ್, ಬಜಾಲ್‌ ನ ತನ್ವೀರ್‌, ಪಡುಬಿದ್ರೆಯ ಇಕ್ಬಾಲ್‌ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಕೂಡಾ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಇನ್ನು ಈ ಕೊಲೆಯು ಟಾರ್ಗೆಟ್ ಇಲ್ಯಾಸ್‌ ಹತ್ಯೆಗೆ ಪ್ರತಿಕಾರವಾಗಿ

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

Business Software

Business software helps to automate business functions, save time and money, boost collaboration and boost productivity. Some of the most well-known examples are CRM (customer relationship management), ERP (enterprise resource planning) and HCM (human resources management). Some business software is more fundamental, and used for everyday tasks such as payroll, accounting and financial reporting. Certain

Business Software Read More »

ಕರಾವಳಿ

What is Data Communication?

Data communication is the transfer of data from one device to the next through an transmission medium. This could be accomplished through wired media such as twisted pair www.bigdataroom.net/how-to-recover-a-corrupt-word-or-zip-file wire or coaxial cable, or wireless media like optical fibers or radio waves. The data needs to be encoded, encrypted and transmitted by the device transmitting

What is Data Communication? Read More »

ಕರಾವಳಿ

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 13. ತರಗತಿಗೆ ನುಗ್ಗಿ ವಿದ್ಯಾರ್ಥಿಯೋರ್ವ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆ ಮೂಡಬಿದಿರೆಯ ಕಾಲೇಜಿನಲ್ಲಿ ನಡೆದಿದೆ.   ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿನಿ ಹಾಗೂ ಆರೋಪಿ ತುಮಕೂರು ಮೂಲದ ಮಂಜುನಾಥ್ ಜೊತೆಯಾಗಿ ಪಿಯುಸಿವರೆಗೆ ವಿದ್ಯಾಭ್ಯಾಸ ಪಡೆದಿದ್ದು ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಬಳಿಕ ಯುವಕ ಕಾಲೇಜು ತೊರೆದಿದ್ದು, ಹುಡುಗಿ ಕಾಲೇಜು ಸೇರ್ಪಡೆಯಾಗಿದ್ದಳು. ಆದರೆ, ಈ ವಿಚಾರ ಮನೆಯವರಿಗೆ ಗೊತ್ತಾಗಿ ವಿದ್ಯಾರ್ಥಿನಿಯ ಬಳಿಯಿದ್ದ ಮೊಬೈಲ್ ನ್ನು ವಾಪಸ್ ಪಡೆದಿದ್ದರು. ಇದರಿಂದ ಆರೋಪಿಗೆ ಆಕೆಯ ಜೊತೆ

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top