ಕರಾವಳಿ

ಬೈಕ್ ಸ್ಕಿಡ್ – ಸವಾರ ಮೃತ್ಯು, ಸಹಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 24. ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಎಂದು ಗುರುತಿಸಲಾಗಿದೆ. ಈತ ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಂದಿಗೆ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಸ್ಕಿಡ್ – ಸವಾರ ಮೃತ್ಯು, ಸಹಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಜ್ವಾನ್(34) ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ಪಡುಶೆಡ್ಡೆ ಗ್ರಾಮದ ಬೊಂದೇಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೇ ಟ್ರ್ಯಾಕ್ ನ ಅಂಡರ್ ಪಾಸ್ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಫೆ.26ಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದ ಸುಮಾರು 12 ಅಮೃತ ಭಾರತ ನಿಲ್ದಾಣಗಳಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 24. ಭಾರತೀಯ ರೈಲ್ವೇಯು ರಾಜ್ಯದಲ್ಲಿ ರೈಲಿನ ಮೂಲಸೌಕರ್ಯವನ್ನು ನವೀಕರಿಸುವ ಸಲುವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ದಾಖಲೆಯ 7,524 ಕೋಟಿ ರೂಪಾಯಿ ಹಣವನ್ನು ಬಿಡುಗಡೆಗೊಳಿಸಿದ್ದು ಈ ಹಿನ್ನೆಲೆಯಲ್ಲಿ ಫೆಬ್ರವರಿ 26, 2024 ರಂದು ಮಧ್ಯಾಹ್ನ 12:30 ಗಂಟೆಗೆ ಮಾನ್ಯ ಭಾರತದ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದಲ್ಲಿ ಸುಮಾರು 12 ಅಮೃತ ಭಾರತಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 26, 2024ರಂದು ಮಧ್ಯಾಹ್ನ

ಫೆ.26ಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದ ಸುಮಾರು 12 ಅಮೃತ ಭಾರತ ನಿಲ್ದಾಣಗಳಿಗೆ ಶಂಕುಸ್ಥಾಪನೆ Read More »

ಕರಾವಳಿ, ಕರ್ನಾಟಕ

ಸಿ.ಬಿ.ಎಸ್.ಇ. ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಮಾರ್ಚ್ 15ರಿಂದ ಏಪ್ರಿಲ್ 2ರವರೆಗೆ ಸಿ.ಬಿ.ಎಸ್.ಇ ಸೆಕೆಂಡರಿ ಅಂಡ್ ಸೀನಿಯರ್ ಸೆಕೆಂಡರಿ ಕ್ಲಾಸ್ 10 ಮತ್ತು 12ರ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಕಾನೂನುಬಾಹಿರ ಚಟುವಟಿಕೆ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸಲು ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ಪೊಲೀಸ್ ಉಪ ಆಯುಕ್ತ

ಸಿ.ಬಿ.ಎಸ್.ಇ. ಪರೀಕ್ಷೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ

ಕಡಬ ಭಜನಾ ಮಂಡಳಿಯ ಅಧ್ಯಕ್ಷ ಸೋಮಪ್ಪ ನಾಯ್ಕ್ ಅವರಿಗೆ ಒಡಿಯೂರಿನ ತುಳುನಾಡ ಜಾತ್ರೆಯಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಫೆ. 24. ಧಾರ್ಮಿಕ ಕ್ಷೇತ್ರ, ಸಂಘಟನೆ, ಸಹಕಾರ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಒಡಿಯೂರಿನಲ್ಲಿ ನಡೆದ ತುಳುನಾಡ ಜಾತ್ರೆ ಕಾರ್ಯಕ್ರಮದಲ್ಲಿ ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷ ಸೋಮಪ್ಪ ನಾಯ್ಕ್ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ. ಸುಮಾರು 40 ವರ್ಷಗಳಿಂದ ಭಜನಾ ಸೇವೆಯನ್ನು ನಡೆಸುವುದರ ಜತೆಗೆ ಧಾರ್ಮಿಕ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಸಲ್ಲಿಸಿದ್ದಾರೆ. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ, ಕಡಬ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಟ್ರಸ್ಟಿಯಾಗಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ ಧಾರ್ಮಿಕ

ಕಡಬ ಭಜನಾ ಮಂಡಳಿಯ ಅಧ್ಯಕ್ಷ ಸೋಮಪ್ಪ ನಾಯ್ಕ್ ಅವರಿಗೆ ಒಡಿಯೂರಿನ ತುಳುನಾಡ ಜಾತ್ರೆಯಲ್ಲಿ ಸನ್ಮಾನ Read More »

ಕರಾವಳಿ

ವೇಣೂರು ಮಸ್ತಕಾಭಿಷೇಕ- ವಾಹನ ಸಂಚಾರದಲ್ಲಿ ಬದಲಾವಣೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ವೇಣೂರು ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕದ ಮಹೋತ್ಸವ- 2024 ಆರಂಭಗೊಂಡಿರುವುದರಿಂದ ಅತ್ಯಂತ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿರುವ ಹಿನ್ನೆಲೆ ಫೆಬ್ರವರಿ 22 ರಿಂದ ಮಾರ್ಚ್ 1 ರವೆರೆಗ ಮೂಡಬಿದ್ರೆ ಕಡೆಯಿಂದ ಬಂದು ವೇಣೂರು ಮೇಲಿನ ಪೇಟೆಯ ಮುಖಾಂತರ ಬೆಳ್ತಂಗಡಿ ಸಂಪರ್ಕಿಸುವ ಲಘು ವಾಹನಗಳು ಪಡ್ಯಾರಬೆಟ್ಟು, ಹೊಕ್ಕಾಡಿಗೋಳಿ, ಕೂಡುರಸ್ತೆ, ಬಜಿರೆ, ಮುದ್ದಾಡಿ, ನೈನಾಡು ಮೂಲಕ ಗೋಳಿಯಂಗಡಿ ಆಗಿ ಬೆಳ್ತಂಗಡಿ ರಸ್ತೆಗೆ ಸಂಪರ್ಕಿಸಬೇಕು. ಬೆಳ್ತಂಗಡಿ ಕಡೆಯಿಂದ ಬಂದು ವೇಣೂರು ಪೇಟೆ

ವೇಣೂರು ಮಸ್ತಕಾಭಿಷೇಕ- ವಾಹನ ಸಂಚಾರದಲ್ಲಿ ಬದಲಾವಣೆ ಆದೇಶ Read More »

ಕರಾವಳಿ

ಫೆ. 28ರಂದು ಮೇಯರ್ ಪೋನ್-ಇನ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಸಾರ್ವಜನಿಕರೊಂದಿಗೆ ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು. ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301, 0824-2220318 ನಂಬರ್‍ ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.

ಫೆ. 28ರಂದು ಮೇಯರ್ ಪೋನ್-ಇನ್ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ಪಡೆದ ಜ್ಞಾನದಿಂದ ರಾಷ್ಟ್ರನಿರ್ಮಾಣ ಸಾಧ್ಯವಿಲ್ಲ -ಮಹಾನಗರಪಾಲಿಕೆ ಆಯುಕ್ತ ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಬೇಕಾದರೆ ಮೊದಲು ಸಂವಿಧಾನವನ್ನು ಅರಿತುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಿಂದ ಪಡೆದ ಜ್ಞಾನದಿಂದ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಹೇಳಿದ್ದಾರೆ. ಅವರು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಡೆದ ಸಂವಿಧಾನ ಜಾಥಾ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯಾದ್ಯಂತ ಸಂಚರಿಸಿ. ಸಂವಿಧಾನ ಮಹತ್ವವನ್ನು ಸಾರಿದೆ.

ಸಾಮಾಜಿಕ ಜಾಲತಾಣದಲ್ಲಿ ಪಡೆದ ಜ್ಞಾನದಿಂದ ರಾಷ್ಟ್ರನಿರ್ಮಾಣ ಸಾಧ್ಯವಿಲ್ಲ -ಮಹಾನಗರಪಾಲಿಕೆ ಆಯುಕ್ತ ಆನಂದ್ Read More »

ಕರಾವಳಿ, ಕರ್ನಾಟಕ

25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ

(ನ್ಯೂಸ್ ಕಡಬ) newskadaba.com ಬಂಟ್ವಾಳ ಫೆ. 23: ಬಂಟ್ವಾಳ ತಾಲೂಕಿನ ಬೋರಿಮಾ‌ರ್ ಮೂಲದ ಅನಿಲ್‌ ಜಾನ್ ಸಿಕ್ವೇರಾ ರವರು 2023 ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯಶಸ್ಸನ್ನು ಗಳಿಸಿದ್ದಾರೆ, ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನದಲ್ಲಿ 25 ನೇ ವಯಸ್ಸಿನಲ್ಲಿ ಉತ್ತೀರ್ಣರಾಗಿದ್ದಾರೆ. ಇದು ಅವರನ್ನು ಕಿರಿಯ ಸಿವಿಲ್ ನ್ಯಾಯಾಧೀಶರನ್ನಾಗಿ ಮಾಡಿದೆ.ಇವರ ತಂದೆ ಎವರೆಸ್ಟ್ ಸಿಕ್ವೇರಾ ಮತ್ತು ತಾಯಿ ಐವಿ ಸಿಕ್ಕ್ವೇರಾ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ವಾಸಿಸುತ್ತಿದ್ದು ಕೃಷಿಯನ್ನು ತಮ್ಮ ಜೀವನಕ್ಕೆ ಆಧಾರವಾಗಿ ಇದ್ದ ಇವರು ಇವರ

25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಡಾಕ್ಟರ್ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಭೂಪ..!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 23. ಅಪರಿಚಿತ ವ್ಯಕ್ತಿಯೋರ್ವ ತಾನು ಡಾಕ್ಟರ್ ಎಂಬುವುದಾಗಿ ನಂಬಿಸಿ ಮಹಿಳೆಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ದೂರಿನ ಪ್ರಕಾರ, ಸಂತ್ರಸ್ತ ಮಹಿಳೆ ಕಂಪೆನಿಯೊಂದರಲ್ಲಿ ಬಿಸಿನೆಟಸ್ ಪಾರ್ಟ್ನರ್ ಆಗಿ ಕೆಲಸ ಮಾಡಿಕೊಂಡಿದ್ದು, ಬಿಸಿನೆಸ್ ಮುಂದುವರೆಸುವ ಬಗ್ಗೆ ಇಂಟರ್ನೆಟ್ ಕನೆಕ್ಷನ್ ಮಾಡಿಕೊಂಡಿದ್ದರು. ಕಳೆದ ಜನವರಿ 24ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುವುದಾಗಿ ಪರಿಚಯ ಮಾಡಿಕೊಂಡು ವಾಟ್ಸಾಪ್ ಮೂಲಕ ಚಾಟ್ ಮಾಡಿದ್ದು, ನಂತರ ಆತನು ಲಂಡನ್ ನಿಂದ ಭಾರತಕ್ಕೆ ಬರುವುದಾಗಿ

ಡಾಕ್ಟರ್ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಭೂಪ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top