ಕರಾವಳಿ

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಅನಿವಾಸಿ ಭಾರತೀಯರ ಜೀವನ ಭದ್ರತೆಯ ಜೊತೆಗೆ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲು ಹೊಸ ನಿಯಮ ರೂಪಿಸುವಂತೆ ಶಾಸಕ ಅಶೋಕ್‌ ಕುಮಾರ್‌ ರೈ ವಿಧಾನಸಭೆಯಲ್ಲಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.   ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಪಾಸ್‌ ಪೋರ್ಟ್ ಹೊಂದಿದ್ದು, 1.03 ಕೋಟಿ ಮಂದಿ ಉದ್ಯೋಗ ನಿಮಿತ್ತ ವಿವಿಧ ದೇಶಗಳಲ್ಲಿದ್ದಾರೆ. ಅವರು 60ರಿಂದ 70 ವಯಸ್ಸಿನಲ್ಲಿ ಸ್ವದೇಶಕ್ಕೆ ಮರಳುತ್ತಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು, ಇದಕ್ಕಾಗಿ ಸರಕಾರ […]

ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈ ಆಗ್ರಹ Read More »

ಕರಾವಳಿ, ಕರ್ನಾಟಕ

ವಜ್ರದ ಕರಿಮಣಿ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ ಹಾಗೂ ನಿರ್ವಾಹಕ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 23. ಬಸ್‌ನಲ್ಲಿ ಕಳೆದುಹೋಗಿದ್ದ ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯೊಂದನ್ನು ಅದರ ಮಾಲಕರಿಗೆ ಮರಳಿ ನೀಡುವ ಮೂಲಕ ಬಸ್ ಚಾಲಕ ಪುರಂದರ ಹಾಗೂ ನಿರ್ವಾಹಕ ಆಸಿಫ್ ಎಂಬವರು ಪ್ರಾಮಾಣಿಕತೆ ಮೆರೆದಿದ್ದಾರೆ. ಮಣಿಪಾಲದಿಂದ ಮಂಗಳೂರಿಗೆ ತೆರಳುವ ರೇಷ್ಮಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಸುಮಾರು ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯೊಂದು ಪತ್ತೆಯಾಗಿದ್ದು, ಅದನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ವಜ್ರದ ಕರಿಮಣಿ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ ಹಾಗೂ ನಿರ್ವಾಹಕ Read More »

ಕರಾವಳಿ, ಕರ್ನಾಟಕ

ಮಹಿಳೆಯರಿಬ್ಬರಿಂದ ಮಗು ಅಪಹರಣಕ್ಕೆ ಯತ್ನ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಫೆ. 23. ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ. ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಲ್ಲದೇ, ಮನೆಯೊಳಗೆ ಹೋಗಿ ಮಹಿಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು

ಮಹಿಳೆಯರಿಬ್ಬರಿಂದ ಮಗು ಅಪಹರಣಕ್ಕೆ ಯತ್ನ..! Read More »

ಕರಾವಳಿ, ಕರ್ನಾಟಕ

ಕರಾವಳಿ ಜಲಪ್ರದೇಶದಲ್ಲಿ ಚೀನಾ ಬೋಟ್ ಪತ್ತೆ- ಕಾವಲು ಪಡೆ ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮೂರು ದಿನಗಳ ಹಿಂದೆ ಹೊನ್ನಾವರದಿಂದ ಆಳಸಮುದ್ರದ ಮೀನುಗಾರಿಕೆಗೆಂದು ತೆರಳಿದ್ದ ರಾಜ್ಯದ ಬೋಟ್‌ನಲ್ಲಿದ್ದ ಮೀನುಗಾರರಿಗೆ ಸುಮಾರು 200 ನಾಟಿಕಲ್ ಮೈಲು ದೂರದಲ್ಲಿ ಬೇರೆ ದೇಶದ ಬೋಟ್‌ ಒಂದು ಕಂಡುಬಂದಿದ್ದು, ಮಾಹಿತಿ ತಿಳಿದ ಕರಾವಳಿ ಕಾವಲು ಪಡೆಯ ಪೊಲೀಸರು ಹಾಗೂ ಕೋಸ್ಟ್‌ ಗಾರ್ಡ್‌ ಅಲರ್ಟ್ ಆಗಿದ್ದಾರೆ. ಈ ಬಗ್ಗೆ ಕುಮಟಾ ಪೊಲೀಸರು, ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ನವರಿಗೆ ಮಾಹಿತಿ ನೀಡಿದ್ದರು. ಬೋಟ್ ಕುರಿತಾಗಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದಾಗ

ಕರಾವಳಿ ಜಲಪ್ರದೇಶದಲ್ಲಿ ಚೀನಾ ಬೋಟ್ ಪತ್ತೆ- ಕಾವಲು ಪಡೆ ಅಲರ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಫೇಸ್ ಬುಕ್‌ ನಲ್ಲಿ ಕಾಣಿಸಿಕೊಂಡ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿಯೋರ್ವರು 18.53 ಲಕ್ಷ ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ವಿಜಯ ಕುಮಾರ್ ಎಂಬವರು ಫೇಸ್‌ ಬುಕ್‌ ನಲ್ಲಿ ಸ್ಟಾಕ್ ಟ್ರೇಡಿಂಗ್ ಬಗೆಗಿನ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಮೂಲಕ ವಾಟ್ಸಾಪ್ ಗ್ರೂಪ್‌ನಲ್ಲಿ ಸೇರ್ಪಡೆಯಾಗಿದ್ದರು ಎಂದೆನ್ನಲಾಗಿದೆ. ಗ್ರೂಪ್‌ ನಲ್ಲಿ ಚೀಫ್ ಅಡ್ಮಿನ್ ಅಗಿದ್ದ ಅಮಿತ್ ಶಾ ಎಂಬಾತ ಪ್ರತಿ ದಿನ ಆನ್‌ ಲೈನ್ ವೀಡಿಯೋ ಕ್ಲಾಸ್ ಮೂಲಕ

ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಫೆ. 23. ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಿಂದ ವರದಿಯಾಗಿದೆ. ಬಂಧಿತನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಈತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ. ಮೌಲ್ಯದ 4 ಗೋಣಿ ಸುಲಿದ ಅಡಿಕೆ, ಸುಮಾರು 2 ಲಕ್ಷ ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ. 13ರಂದು ಮಿತ್ತಕೊಳಪಿಲದ

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ನಾಪತ್ತೆಯಾಗಿದ್ದ ಯುವಕನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್ ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಸೋಮವಾರದದು ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ ಪ್ರಯುಕ್ತ ಕಲಶಾಭಿಶೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದನು. ಬಳಿಕ ರಾತ್ರಿ ವೇಳೆ ಮನೆಯಿಂದ ಹೊರಹೋಗಿದ್ದ ಗೌತಮ್ ಮತ್ತೆ ವಾಪಸಾಗದ ಹಿನ್ನೆಲೆ ಮರುದಿನ ಮನೆಯವರು ಉಳ್ಳಾಲ

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಫೆಬ್ರವರಿ 26, 27 ಬೃಹತ್ ಉದ್ಯೋಗ ಮೇಳ; ವಿಕಲಚೇತನರ ನೋಂದಣಿಗೆ ವಿಶೇಷ ವೆಬ್ ಸೈಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿ, ಉದ್ದಿಮೆ, ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ. ಈ ಮೇಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲು ವೆಬ್ ಸೈಟ್ https://udyoga.skillconnet.kaushalkar.com ಮೂಲಕ ನೋಂದಾವಣಿ ಮಾಡಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 26, 27 ಬೃಹತ್ ಉದ್ಯೋಗ ಮೇಳ; ವಿಕಲಚೇತನರ ನೋಂದಣಿಗೆ ವಿಶೇಷ ವೆಬ್ ಸೈಟ್ Read More »

ಕರಾವಳಿ, ಕರ್ನಾಟಕ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ- ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ವೃತ್ತಿಪರ ಮತ್ತು ಸ್ನಾತಕೋತರ ಗುರುತಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಎಸ್‍.ಎಸ್‍.ಎಚ್‍.ಪಿ ಲಾಗಿನ್ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 29ರವರೆಗೆ ತಾಲೂಕು ಕಲ್ಯಾಣ ಅಧಿಕಾರಿಗಳ ಎಸ್.ಎಚ್.ಪಿ ಲಾಗಿನ್ ನಲ್ಲಿ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳಿಗೆ ತಾಲೂಕು ಹಂತದಲ್ಲಿ ವಿದ್ಯಾರ್ಥಿಗಳಿಂದ ದಾಖಲಾತಿಗಳನ್ನು ಪಡೆದು ಆನ್‍ ಲೈನ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ- ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ”- ಆದಾಯ ಪ್ರಮಾಣ ಪತ್ರ ಅಪ್ಲೋಡ್ ಮಾಡಲು ಫೆ. 29 ಕೊನೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ” ಕಾರ್ಯಕ್ರಮದಡಿ ಪ್ರಗತಿ ಸಾಧಿಸಲು ಅನುಕೂಲವಾಗುವಂತೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ಲಾಗಿನ್ ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನವಾಗಿದೆ. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ (ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳ “ರೈತ

ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ”- ಆದಾಯ ಪ್ರಮಾಣ ಪತ್ರ ಅಪ್ಲೋಡ್ ಮಾಡಲು ಫೆ. 29 ಕೊನೆಯ ದಿನ Read More »

ಕರಾವಳಿ
Scroll to Top