ಕರಾವಳಿ

ಶಿಕ್ಷಕಿಯಿಂದ ದೇವರ ಅವಹೇಳನ ವಿಚಾರದಲ್ಲಿ ಪೋಷಕರಿಗೆ ಬೆದರಿಕೆ ಕರೆ ಪ್ರಕರಣ – ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಇಲ್ಲಿನ ಶಾಲಾ ಶಿಕ್ಷಕಿಯೋರ್ವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ವಿದ್ಯಾರ್ಥಿನಿ ಪೋಷಕರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಜೆರೋಸಾ ಶಾಲೆಯ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ಹಿನ್ನೆಲೆ ಪೋಷಕರಿಗೆ ವಿದೇಶಗಳಿಂದ ಬೆದರಿಕೆ ಕರೆ ಬರುತ್ತಿರುವುದಾಗಿ ಕವಿತಾ ಎಂಬವರು ನೀಡಿದ ದೂರಿನ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಕಂಕನಾಡಿ ಪೊಲೀಸರು ಎಫ್ […]

ಶಿಕ್ಷಕಿಯಿಂದ ದೇವರ ಅವಹೇಳನ ವಿಚಾರದಲ್ಲಿ ಪೋಷಕರಿಗೆ ಬೆದರಿಕೆ ಕರೆ ಪ್ರಕರಣ – ಎಫ್ಐಆರ್ ದಾಖಲು Read More »

ಕರಾವಳಿ, ಕರ್ನಾಟಕ

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ – ಸುಳ್ಯದಲ್ಲಿ ರಿಯಾಝ್ ಫರಂಗಿಪೇಟೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ, 21. ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು. ಕಳೆದ ಒಂದು ವರ್ಷಗಳಿಂದ ಸ್ಥಳೀಯ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವು ಬಲಿಷ್ಠವಾಗುತ್ತಿದೆ, ಹಲವಾರು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದು ಉತ್ತಮ

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ – ಸುಳ್ಯದಲ್ಲಿ ರಿಯಾಝ್ ಫರಂಗಿಪೇಟೆ Read More »

ಕರಾವಳಿ

ಅಕ್ರಮ‌ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 21. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲ ಬಟಪ್ಪಾಡಿಯಿಂದ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಟಿಪ್ಪರ್ ನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಟಿಪ್ಪರ್ ಚಾಲಕ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಕ್ರಮ‌ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೈಯಲ್ಲೇ ಸಿಡಿದ ಪಟಾಕಿ- ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 21. ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಕನಕಮಜಲಿನಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಗಬ್ಬಲಡ್ಕದ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಏಕಾಹ ಭಜನೆ ನಡೆಯುತ್ತಿದ್ದ ವೇಳೆ ಚಂದ್ರಶೇಖರ ಅವರು ಪಟಾಕಿಯನ್ನು ಸಿಡಿಸುವ ವೇಳೆ ಪಟಾಕಿ ಕೈಯಲ್ಲೇ ಸ್ಫೋಟಗೊಂಡ ಪರಿಣಾಮ ಕೈ ಬೆರಳುಗಳಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಅವರನ್ನು ಸ್ಥಳೀಯರು ಸೇರಿ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ

ಕೈಯಲ್ಲೇ ಸಿಡಿದ ಪಟಾಕಿ- ವ್ಯಕ್ತಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲ್ವೇ ಸೇತುವೆಯ ಸೇಫ್ ಗಾರ್ಡ್ ಗೆ ಕಂಟೇನರ್ ಲಾರಿ ಢಿಕ್ಕಿ!

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 21. ಕಂಟೇನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ರೈಲ್ವೇ ಬ್ರಿಡ್ಜ್ ನ ಸೇಫ್ ಗಾರ್ಡ್ ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ರೈಲ್ವೇ ಸೇತುವೆಗೆ ಘನ ವಾಹನಗಳು ತಾಗದಂತೆ ಮುಂಜಾಗರೂಕತಾ ದೃಷ್ಟಿಯಿಂದ  ಈ ಕಂಬವನ್ನು ಅಳವಡಿಸಲಾಗಿರುತ್ತದೆ. ಇದಕ್ಕೆ ಕಂಟೇನರ್ ಲಾರಿಯೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಕಾರದಿಂದ ಕಂಬವನ್ನು ತೆರವುಗೊಳಿಸಿ ವಾಹನ

ರೈಲ್ವೇ ಸೇತುವೆಯ ಸೇಫ್ ಗಾರ್ಡ್ ಗೆ ಕಂಟೇನರ್ ಲಾರಿ ಢಿಕ್ಕಿ! Read More »

ಕರಾವಳಿ

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಇಲ್ಲಿನ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆಯಲಾದ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ದರ್ಬೆ ಬೈಪಾಸ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ನೆಲ್ಲಿಕಟ್ಟೆ ಚಿಕ್ಕಪುತ್ತೂರು ನಿವಾಸಿ ದಿವಾಕರ ಮಡಿವಾಳ ಎಂದು ಗುರುತಿಸಲಾಗಿದೆ. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದಿವಾಕರ ಅವರು ಗಂಭೀರ ಗಾಯಗೊಂಡಿದ್ದರು. ಈ ಸಂದರ್ಭ ಅದೇ ದಾರಿಯಾಗಿ ಹೋಗುತ್ತಿದ್ದ ಅರುಣ್ ಕುಮಾರ್ ಪುತ್ತಿಲರವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಗೆ ಕಿರುಕುಳ – ಹೋಟೆಲ್ ಮಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 21. ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದೆ.   ಆರೋಪಿಯನ್ನು ಸಜೀಪ ನಡು ಗ್ರಾಮದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿರುವ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಗೆ ಕಿರುಕುಳ – ಹೋಟೆಲ್ ಮಾಲಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ, ಸುಳ್ಯ ತಾಲೂಕಿನ ವಿವಿಧೆಡೆ ಸಂವಿಧಾನ ಜಾಥಾ- ಅದ್ಧೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಮಂಡೆಕೋಲು ಗ್ರಾಮ  ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥವು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮಕ್ಕೆ ಮಂಗಳವಾರದಂದು ಆಗಮಿಸಿದೆ. ಗ್ರಾಮದ ಶಾಲೆಯ ವಿದ್ಯಾರ್ಥಿಗಳು, ಮಹಿಳಾ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಹಾಗೂ ಪೂರ್ಣಕುಂಭ ಸ್ವಾಗತದೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖಾಧಿಕಾರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ನೋಡೆಲ್ ಅಧಿಕಾರಿ, ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು,

ಕಡಬ, ಸುಳ್ಯ ತಾಲೂಕಿನ ವಿವಿಧೆಡೆ ಸಂವಿಧಾನ ಜಾಥಾ- ಅದ್ಧೂರಿ ಸ್ವಾಗತ Read More »

ಕರಾವಳಿ

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಾರ್ಚ್ 3ರಂದು ಪಲ್ಸ್ ಪೋಲಿಯೋ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಾರ್ಚ್ 3ರಂದು ಪಲ್ಸ್ ಪೊಲಿಯೋ ದಿನಾಚರಣೆಯನ್ನು ಆಚರಿಸುತ್ತಿದ್ದು,  ಹೆಚ್ಚಾಗಿ ನಗರ ಪ್ರದೇಶದಲ್ಲಿ ಯಾವೆಲ್ಲ ಪ್ರದೇಶದಲ್ಲಿ ಪೋಲಿಯೋ ಲಸಿಕೆಯನ್ನು ತೆಗೆದುಕೊಳ್ಳದೇ ಇರುವವರು ಇದ್ದಾರೆ ಎಂಬ ಬಗ್ಗೆ ಸಮೀಕ್ಷೆಯನ್ನು ನಡೆಸಿ,  ಎಲ್ಲರಿಗೂ ಲಸಿಕೆಯನ್ನು ನೀಡುವಂತಾಗಬೇಕು. ಎಲ್ಲಾ

ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ
Scroll to Top