ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ವಿವಿಧ ಕಡೆ ಹಮ್ಮಿಕೊಳ್ಳಲಾಗಿದೆ.   ಫೆಬ್ರವರಿ 17ರ ಶನಿವಾರದಂದು ಪುತ್ತೂರು ತಾಲೂಕಿನ ಪಾಣಾಜೆ, 20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ 21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಆರೋಗ್ಯ […]

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ನಾಳೆ (ಫೆ. 17) ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 17ರ ಶನಿವಾರದಂದು ಮಂಗಳೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಿ, 2:15ಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 5:30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್‌ನ ಮುಖ್ಯ ಸಚೇತಕ

ನಾಳೆ (ಫೆ. 17) ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ Read More »

ಕರಾವಳಿ, ಕರ್ನಾಟಕ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 16. ಎರಡು ವಾರಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧಾರ್ಮಿಕ ವಿದ್ವಾಂಸ ಸೈಯದ್ ಸಾದಾತ್ ಅಲಿ ತಂಙಳ್ ಕರ್ವೇಲುರವರು ಶುಕ್ರವಾರದಂದು ಬೆಳ್ಳಂಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಫೆ. 05ರಂದು ಸಾದಾತ್ ಅಲಿ ತಂಙಳ್ ಸಂಚರಿಸುತ್ತಿದ್ದ ಆಟೋ ರಿಕ್ಷಾವು ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿತ್ತು. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸಾದಾತ್ ಅಲಿ ತಂಙಳ್ ರಿಗೆ ಗಂಭೀರ ಗಾಯಗಳಾಗಿತ್ತು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ – 128ಗ್ರಾಂ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು 128 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಬುದಾಭಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವನ ಹ್ಯಾಂಡ್ ಬ್ಯಾಗ್ ನ್ನು ಸ್ಕ್ಯಾನ್ ಮಾಡಿದಾಗ ಅಧಿಕಾರಿಗಳು ಅನುಮಾನಗೊಂಡಿದ್ದು, ಆತನನ್ನು ವಿಚಾರಿಸಿ, ತಪಾಸಣೆಗೆ ಒಳಪಡಿಸಿದಾಗ 8,06,400 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 128ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೊಬೈಲ್ ನ ಬ್ಯಾಕ್ ಕವರ್ ನಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ

ಮಂಗಳೂರು: ಅಕ್ರಮ ಚಿನ್ನ ಸಾಗಾಟ – 128ಗ್ರಾಂ ಚಿನ್ನ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 15. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮತ್ಯೆ ಮಾಡಿಕೊಡ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದನು ಎನ್ನಲಾಗಿದೆ. ಬುಧವಾರ ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದು, ಮರಳಿ ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 15. ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುರ ಎಂಬಲ್ಲಿ ನಡೆದಿದೆ. ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲಟ್‌ ಗಾಯಾಳುವನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 15. ಯುವಕನೋರ್ವ ರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಅಜ್ಜಾವರ ಗ್ರಾಮದ ಕಾಟಿಪಳ್ಳ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಅಜಿತ್‌ ಎಂಬಾತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಎನ್ನಲಾಗಿದೆ.

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಾಹನಗಳ ಬ್ಯಾಟರಿ ಕಳವು ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ರಿಯಾಝ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 3,90,000 ರೂ. ಮೌಲ್ಯದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನಗಳ ಬ್ಯಾಟರಿ ಕಳವು ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದ್ದು, ಇದರಿಂದ ತೆರವಾಗಿರುವ ಸ್ಥಾನಕ್ಕೆ ಕಲಬುರ್ಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಯ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕರಾಗಿ ವರ್ಗಾಯಿಯಿಸಿ ಸರಕಾರದ

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಶಾಲಾ ವಿವಾದ – ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ಇಲ್ಲಿನ ಕ್ರೈಸ್ತ ಶಿಕ್ಷಣ ಸಂಸ್ಥೆಯಲ್ಲಿ ನಡೆದಿರುವಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಶಾಲೆಯ ಶಿಕ್ಷಕಿ‌ಯೊಬ್ಬರು‌ ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಶಾಲಾ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ

ಮಂಗಳೂರು: ಶಾಲಾ ವಿವಾದ – ಶಾಸಕರು, ಕಾರ್ಪೊರೇಟರ್ ಸಹಿತ ಹಲವರ ವಿರುದ್ಧ ‌ಪ್ರಕರಣ ದಾಖಲು‌ Read More »

ಕರಾವಳಿ, ಕರ್ನಾಟಕ
Scroll to Top